Saturday, September 26

‘ಆಪರೇಷನ್ ಸಿಂಧೂರ’ಕ್ಕೆ ಜೈಕಾರ: ದೇಶಾದ್ಯಂತ ವಿಜಯೋತ್ಸವ

ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ.

ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ’ ಎಂದು ಹೆಸರಿಸಲಾಗಿದ್ದು, ಸೇನಾ ಶಕ್ತಿ ಪ್ರದರ್ಶನಕ್ಕೆ ದೇಶಾದ್ಯಂತ ಅಭಿನಂದನೆ ವ್ಯಕ್ತವಾಗಿದೆ. ಹಲವೆಡೆ ವಿಜಯೋತ್ಸವ ಆಚರಿಸಲಾಗುತ್ತಿದೆ.

ಭಾರತವು ಪಾಕಿಸ್ತಾನದ ಮೇಲೆ ಯುದ್ಧ ಸರಿದರೆ ಸ್ವಾಗತಿಸುತ್ತೇವೆ ಎನ್ನುತ್ತಿರುವ ದೇಶದ ಜನ, ಇದೀಗ ನಡೆದಿರುವ ‘ಆಪರೇಷನ್ ಸಿಂಧೂರ್’ ಬೆಂಬಲಿಸಿ ವಿಜಯೋತ್ಸವ ಆಚರಿಸುತ್ತಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸುತ್ತಿರುವ ಜನತೆ, ಭಾರತ ಮಾತೆಗೆ ಜೈಕಾರ ಹಾಕುತ್ತಿದ್ದಾರೆ.