Sunday, December 7

‘ಆಪರೇಷನ್ ಸಿಂಧೂರ್‌’ ಬಗ್ಗೆ ಪೋಸ್ಟ್; ಹಲವರ ಬಂಧನ

ನವದೆಹಲಿ: ಆಪರೇಷನ್ ಸಿಂಧೂರ್‌ಗೆ ಸಂಬಂಧಿಸಿದಂತೆ ದೇಶವಿರೋಧಿ ಪೋಸ್ಟ್ ಹಾಕಿರುವ ಆರೋಪದಲ್ಲಿ ಹಲವಾರು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಉತ್ತರ ಪ್ರದೇಶವೊಂದರಲ್ಲೇ 40 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಷ್ಟೇ ಅಲ್ಲ 25 ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಹೇಳಿಕೆ ಮತ್ತು ಜನರನ್ನು ತಪ್ಪುದಾರಿಗೆಳೆಯುವ ಪೋಸ್ಟ್‌ಗಳನ್ನು ಮಾಡಿದ್ದ ಆರೋಪದಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೇಲೆ ದಿನದ 24 ಗಂಟೆಯೂ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.