Thursday, January 29

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ಧಾರವಾಡ: ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಬೆಂಗಳೂರಿನ ವೇಣುಗೋಪಾಲ್ (63), ಮದನ್ (61) ಹಾಗೂ ಮೈಸೂರಿನ ಸುರೇಶ್ (60) ಎಂದು ಗುರುತಿಸಲಾಗಿದೆ. ಇವರು ಮುಂಡರಗಿಯಿಂದ ಹುಬ್ಬಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸುದ್ದಿತಿಳಿದು ಸ್ಥಳಕ್ಕೆ ಧಾವಿಸಿದವ ಅಣ್ಣಿಗೇರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.