Thursday, January 29

ಅಮಿತ್ ಶಾ ಬೆಂಗಳೂರು ಪ್ರವೇಶ; ರಾಜ್ಯ ಬಿಜೆಪಿ ನಾಯಕರಿಂದ ಆತ್ಮೀಯ ಸ್ವಾಗತ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಗುರುವಾರ ರಾತ್ರಿ ಆಗಮಿಸಿದ ಅವರನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಸಿಟಿ ರವಿ, ಸಂಸದ ಡಾ. ಮಂಜುನಾಥ್ ಮತ್ತಿತರ ಬಿಜೆಪಿ ನಾಯಕರು ಹೂ ಗುಚ್ಚ ನೀಡಿ ಸ್ವಾಗತಿಸಿದರು.

ಶುಕ್ರವಾರ ನೆಲಮಂಗಲ ಸಮೀಪ ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.