Wednesday, January 28

ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ

ಬೆಂಗಳೂರು: ಖ್ಯಾತ ನಟ ಹರೀಶ್ ರಾಯ್ ವಿಧಿವಶರಾಗಿದ್ದಾರೆ.

ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಹರೀಶ್ ರಾಯ್ ಹಲವು ದಶಕಗಳಿಂದ ಸಿನಿಮಾ ಲೋಕದಲ್ಲಿ ಸೇವೆ ಸಲ್ಲಿಸುತ್ತಿದ್ದರು.

55 ವರ್ಷ ವಯಸ್ಸಿನ ಅವರು ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ.

ಪತ್ನಿ ಆರತಿ ಹಾಗೂ ಮಗ ರೋಷನ್ ಸಹಿತ ಅನೇಕ ಬಂಧುಗಳನ್ನು ಅವರು ಆಗಲಿದ್ದಾರೆ. ಹರೀಶ್ ರಾಯ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.