Saturday, December 6

ಕಬಡ್ಡಿ ವಿಶ್ವಕಪ್​​ಗೆದ್ದ ಭಾರತ ವನಿತೆಯರು; ಪ್ರಧಾನಿ ಅಭಿನಂದನೆ

ಢಾಕಾ: ಬಾಂಗ್ಲಾದೇಶದ ಢಾಕಾದಲ್ಲಿ ಸೋಮವಾರ ನಡೆದ 2025ರ ಮಹಿಳಾ ಕಬಡ್ಡಿ ವಿಶ್ವಕಪ್​​ ಟೂರ್ನಿಯಲ್ಲಿ ಭಾರತ ತಂಡ ಜಯಭೇರಿ ಭಾರಿಸಿದೆ. ಭಾರತದ ವನಿತೆಯರು ಚಾಂಪಿಯನ್​ ಆಗಿ ಹೊರಹೊಮ್ಮಿದ್ದಾರೆ.

ಸೆಮಿಫೈನಲ್‌ನಲ್ಲಿ ಇರಾನ್ ತಂಡವನ್ನು 33–21 ಅಂತರದಿಂದ ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿದ್ದ ಭಾರತ ತಂಡ ರಣರೋಚಕ ಫೈನಲ್ ಹಣಾಹಣಿಯಲ್ಲಿ ಚೀನಾದ ತೈಪೆ ತಂಡವನ್ನು 35-28 ಅಂಕಗಳ ಅಂತರದಲ್ಲಿ ಸೋಲಿಸಿಡೇ. ಈ ಮೂಲಕ ಭರ್ಜರಿ ಗೆಲುವು ಸಾಧಿಸಿದ ಭಾರತದ ವನಿತೆಯರು ಸತತ ಎರಡನೇ ಬಾರಿಗೆ ವಿಶ್ವಕಪ್​​ ಮುಡಿಗೇರಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ ಅಭಿನಂದನೆ.

ಮಹಿಳಾ ಕಬಡ್ಡಿ ವಿಶ್ವಕಪ್​​ ಟೂರ್ನಿಯಲ್ಲಿ ಗೆದ್ದು ಬೀಗಿರುವ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ‘2025ರ ಕಬಡ್ಡಿ ವಿಶ್ವಕಪ್​​​ ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಭಾರತೀಯ ಮಹಿಳಾ ಕಬಡ್ಡಿ ತಂಡ ಮಾಡಿದೆ. ಈ ಗೆಲುವು ಅಸಂಖ್ಯಾತ ಯುವಕರಿಗೆ ಸ್ಫೂರ್ತಿ’ ಎಂದು ಪ್ರಧಾನಿ ಬಣ್ಣಿಸಿದ್ದಾರೆ.