Wednesday, January 28

ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

ಬೆಂಗಳೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಒಂದು ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ, ಅವರ ಸಂಪುಟದಲ್ಲಿ ನಾನು ಮಂತ್ರಿಯಾಗುವುದಿಲ್ಲ. ನನಗೆ ಸಚಿವ ಸ್ಥಾನ ಬೇಡ. ಇನ್ನೊಬ್ಬರಿಗೆ ಅವಕಾಶ ಕೊಡಲಿ,” ಎಂದು ಸ್ಪಷ್ಟಪಡಿಸಿದರು.

ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ರಾಜಣ್ಣ, ನಾಯಕತ್ವ ಬದಲಾವಣೆ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿದರು. “ಡಿಕೆ ಶಿವಕುಮಾರ್ ಸಿಎಂ ಆಗ್ತಾರೆಂದು ನಾನು ಹೇಳಿಲ್ಲ,” ಎಂದೂ ಸ್ಪಷ್ಟನೆ ನೀಡಿದರು.

ಇದಲ್ಲದೆ, “ಹಿಂದೆ ಪರಮೇಶ್ವರ್ ಕೂಡ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು,” ಎಂದು ನೀಡಿದ ಹೇಳಿಕೆ ಕೂಡ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.