Wednesday, January 28

ತ್ರಿಶೂರ್ ರೈಲು ನಿಲ್ದಾಣ ಬಳಿ ಭಾರೀ ಅಗ್ನಿ ಅವಘಡ: 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ

ತ್ರಿಶೂರ್: ತಮಿಳುನಾಡಿನ ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಿಲ್ದಾಣದ ಸಮೀಪದ ನಿಗದಿತ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ.

ಪ್ಲಾಟ್‌ಫಾರ್ಮ್ ಬಳಿಯಿರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಸ್ಥಳದಲ್ಲಿ ಬೆಳಗ್ಗೆ ಸುಮಾರು 6.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಪ್ರತಿದಿನ ನೂರಾರು ಮೋಟಾರ್‌ಸೈಕಲ್‌ಗಳು ಮತ್ತು ಸ್ಕೂಟರ್‌ಗಳು ನಿಲ್ಲಿಸುವ ಈ ಪ್ರದೇಶದಲ್ಲಿ ಬೆಂಕಿ ವೇಗವಾಗಿ ವ್ಯಾಪಿಸಿ ಭಾರೀ ಹಾನಿ ಉಂಟಾಗಿದೆ.

ಪಾರ್ಕಿಂಗ್ ಪ್ರದೇಶದಲ್ಲಿದ್ದ ವಾಹನಗಳಲ್ಲಿ ಇಂಧನ ಇರುವುದರಿಂದ ಬೆಂಕಿ ತ್ವರಿತವಾಗಿ ಹರಡಿದ್ದು, ಕೆಲವೇ ನಿಮಿಷಗಳಲ್ಲಿ ದೊಡ್ಡ ಪ್ರಮಾಣದ ವಾಹನಗಳು ಹೊತ್ತಿ ಉರಿದಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಹಲವಾರು ದಳಗಳನ್ನು ನಿಯೋಜಿಸಿ ಸುಮಾರು ಅರ್ಧ ಗಂಟೆಗಳ ಶ್ರಮದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.