Wednesday, January 28

ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ನಿಧನ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ಮಂಗಳವಾರ ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಮಧ್ಯಾಹ್ನ 3.30ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.