
ಬೆಂಗಳೂರು: ‘ತಮ್ಮ ಕುತಂತ್ರ ಬುದ್ದಿಯಿಂದಲೇ ದೇವೇಗೌಡರು ಪ್ರಧಾನಿ ಹುದ್ದೆ ಕಳೆದುಕೊಂಡಿದ್ದು’ ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಫೋನ್ ಕದ್ದಾಲಿಕೆಯಂತಹ ಗೂಢಚರ್ಯೆಯ ಪಾಠವನ್ನು ಅವರ ಪೂಜ್ಯ ತಂದೆಯವರೇ ಹೇಳಿಕೊಟ್ಟಿರಬಹುದು ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬೇಹುಗಾರಿಕೆ ಕುರಿತ ಹೆಚ್ಡಿಕೆ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ತನ್ನನ್ನು ಪ್ರಧಾನಿ ಮಾಡಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಸೀತಾರಾಂ ಕೇಸರಿಯವರ ವಿರುದ್ಧವೇ ಗೂಢಚರ್ಯೆ ಮಾಡಿದ್ದ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತನ್ನ ಬೆಂಬಲವನ್ನು ಹಿಂದೆಗೆದುಕೊಂಡಿರುವುದು ಇತಿಹಾಸದ ಪುಟಗಳಲ್ಲಿದೆ. ಈ ಅಪನಂಬಿಕೆ ಮತ್ತು ಸಣ್ಣತನಗಳಿಂದಾಗಿ ಕನ್ನಡಿಗರೊಬ್ಬರು ಇನ್ನಷ್ಟು ಕಾಲ ಪ್ರಧಾನಿಯಾಗುವ ಅವಕಾಶ ತಪ್ಪಿಹೋಯಿತು ಎನ್ನುವುದು ವಿಷಾದನೀಯ ವಾಸ್ತವ ಎಂದಿದ್ದಾರೆ.
