Sunday, May 24

ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

ಐಪಿಎಲ್ 2026ರ 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡವು ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. ತಂಡದ ಪರ ಜೋಶ್ ಇಂಗ್ಲಿಸ್ (Josh Inglis) 72 ರನ್ ಸಿಡಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಪಂಜಾಬ್ ಪರ ಮಾರ್ಕೊ ಜಾನ್ಸೆನ್ (Marco Jansen) ಹಾಗೂ ಯುಜ್ವೇಂದ್ರ ಚಾಹಲ್ (Yuzvendra Chahal) ತಲಾ ಎರಡು ವಿಕೆಟ್ ಪಡೆದು ಮಿಂಚಿದರು.

197 ರನ್ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪರ ನಾಯಕ ಶ್ರೇಯಸ್ ಐಯ್ಯರ್ (Shreyas Iyer) ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 51 ಎಸೆತಗಳಲ್ಲಿ ಶತಕ ಸಿಡಿಸಿದ ಅಯ್ಯರ್ ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು.

ಅಯ್ಯರ್ ಅವರ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ನೆರವಿನಿಂದ ಪಂಜಾಬ್ ತಂಡವು ಕೇವಲ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಏಕಪಕ್ಷೀಯ ಜಯ ಸಾಧಿಸಿತು.

ಇದರೊಂದಿಗೆ ಪಂಜಾಬ್ ಕಿಂಗ್ಸ್ ಪ್ಲೇಆಫ್‌ ರೇಸ್‌ನಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡರೆ, ಲಕ್ನೋ ಸೂಪರ್ ಜೈಂಟ್ಸ್ ತನ್ನ ಕೊನೆಯ ಲೀಗ್ ಪಂದ್ಯದಲ್ಲೂ ಸೋಲು ಕಂಡಿತು.