Monday, May 25

ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

ಮುಂಬೈ: ಐಪಿಎಲ್ 2026ರ 69ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (Rajasthan Royals) ತಂಡವು ಮುಂಬೈ ಇಂಡಿಯನ್ಸ್ (Mumbai Indians) ವಿರುದ್ಧ 30 ರನ್‌ಗಳ ಭರ್ಜರಿ ಗೆಲುವು ಸಾಧಿಸಿ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ವಾಂಖೆಡೆ ಸ್ಟೇಡಿಯಂನಲ್ಲಿ(Wankhede Stadium) ನಡೆದ ರೋಚಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 205 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

206 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ತತ್ತರಿಸಿತು. ಮುಂಬೈ ಬ್ಯಾಟ್ಸ್‌ಮನ್‌ಗಳು ನಿರಂತರವಾಗಿ ವಿಕೆಟ್ ಕಳೆದುಕೊಂಡ ಪರಿಣಾಮ, 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್‌ಗಳಿಗೆ ಸೀಮಿತವಾಯಿತು.

ಈ ಮಹತ್ವದ ಪಂದ್ಯದಲ್ಲಿ ಗೆಲುವು ರಾಜಸ್ಥಾನಕ್ಕೆ ಅನಿವಾರ್ಯವಾಗಿತ್ತು. ನಿರ್ಣಾಯಕ ಪಂದ್ಯದಲ್ಲಿ 30 ರನ್‌ಗಳ ಜಯ ಸಾಧಿಸಿದ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರ ನಾಲ್ಕರಲ್ಲಿನ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.