
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಫಾರ್ಮ್ ಸಲ್ಲಿಕೆಯನ್ನು ಈಗ ಆನ್‌ಲೈನ್‌ನಲ್ಲೇ ಸುಲಭವಾಗಿ ಪೂರ್ಣಗೊಳಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಮತದಾರರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ http://voters.eci.gov.in ವೆಬ್‌ಸೈಟ್‌ಗೆ ಭೇಟಿ ನೀಡಿ, ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗಬೇಕು. ಬಳಿಕ ‘Fill Enumeration Form’ ಆಯ್ಕೆಯನ್ನು ಕ್ಲಿಕ್ ಮಾಡಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ಆಧಾರ್ ಇ-ಸೈನ್ ಮೂಲಕ ಫಾರ್ಮ್ ಸಲ್ಲಿಸಬಹುದು.

ಈ ಸಂಪೂರ್ಣ ಪ್ರಕ್ರಿಯೆಯನ್ನು ಕೆಲವೇ ನಿಮಿಷಗಳಲ್ಲಿ ಪೂರ್ಣಗೊಳಿಸಬಹುದಾಗಿದೆ. ಫಾರ್ಮ್ ಭರ್ತಿಗೆ ಸಂಬಂಧಿಸಿದ ಯಾವುದೇ ಗೊಂದಲಗಳಿದ್ದರೆ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮಾರ್ಗದರ್ಶಿ ವಿಡಿಯೊವನ್ನು ವೀಕ್ಷಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಮತ್ತು ಮಾಹಿತಿಯನ್ನು ನವೀಕರಿಸಿಕೊಳ್ಳಲು ನಾಗರಿಕರು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಕರೆ ನೀಡಲಾಗಿದೆ.
