
ಮುಂಬೈ: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟಿ ಶ್ರೀಲೀಲಾ ಅವರ ಮೊದಲ ಬಾಲಿವುಡ್ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ನಾಯಕನಾಗಿ ನಟಿಸಿರುವ ಈ ಚಿತ್ರವು 2027ರ ಏಪ್ರಿಲ್ 30ರಂದು ತೆರೆಗೆ ಬರಲಿದೆ.
ನಿರ್ದೇಶಕ ಅನುರಾಗ್ ಬಸು ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ರೊಮ್ಯಾಂಟಿಕ್ ಮ್ಯೂಸಿಕಲ್ ಚಿತ್ರದಲ್ಲಿ ಕಾರ್ತಿಕ್ ಆರ್ಯನ್ ಮತ್ತು ಶ್ರೀಲೀಲಾ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸಂಗೀತ ನಿರ್ದೇಶಕ ಪ್ರೀತಮ್ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.

ಟಿ-ಸೀರೀಸ್ ಬ್ಯಾನರ್ ಅಡಿಯಲ್ಲಿ ಭೂಷಣ್ ಕುಮಾರ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಚಿತ್ರತಂಡ ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ, ಅಭಿಮಾನಿಗಳು ಈ ಸಿನಿಮಾವನ್ನು ‘ಆಶಿಖಿ 3’ ಎಂದು ಕರೆಯುತ್ತಿದ್ದು, ಚಿತ್ರದ ಕುರಿತು ಕುತೂಹಲ ಹೆಚ್ಚಾಗಿದೆ.
