Saturday, December 6

ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಕಾರು ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸಾವು

ಗದಗ: ಗದಗ್ ಸಮೀಪ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ಈ ವಿದ್ಯಾರ್ಥಿಗಳು ಕಾರಿನಲ್ಲಿ ತೆರಳುತ್ತಿದ್ದರೆನ್ನಲಾಗಿದೆ. ಕಾರು ಅಪಘಾತದಲ್ಲಿ ಮತ್ತಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಗದಗ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.