ಕೋಲಾರ: ಬೆಂಗಳೂರಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಲಾರ ಸಮೀಪದ ಸಹಕಾರ ನಗರದ ಬಳಿ ಶುಕ್ರವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ.
ಮೃತಪಟ್ಟ ಮೂವರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳಾಗಿದ್ದು, ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ಎಂದು ಗುರುತಿಸಲಾಗಿದೆ. ಸಾಯಿಗಗನ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಯಿಗಗನ್ ಸೋದರಿಯ ಮದುವೆ ಆಮಂತ್ರಣ ಹಂಚಲು ಸ್ನೇಹಿತರು ಕಾರಿನಲ್ಲಿ ಹೊರಟಿದ್ದಾಗ ಈ ಅಪಘಾತ ಸಂಭವಿಸಿದೆ.
ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.