ಹಿಂದೂ ದೇವರಿಗೆ ಅಪಮಾನ; ಮಂಗಳೂರಿನ ಪೊಲೀಸರಿಂದ ಎಫ್​ಐಆರ್

ಮಂಗಳೂರು: ಹಿಂದೂ ದೇವರ ಚಿತ್ರಗಳನ್ನು ಅಶ್ಲೀಲವಾಗಿ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಮಾನಿಸಿರುವ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಎಐ ಆಧಾರಿತ ಹಿಂದೂ ದೇವರ ಚಿತ್ರಗಳನ್ನು ಅಶ್ಲೀಲವಾಗಿ ರಚಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.

ಹಿಂದೂ ದೇವರನ್ನು ಸ್ತ್ರೀಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವಂತೆ ರಚಿಸಿ ಅವುಗಳನ್ನು “Fact Vid” ಎಂಬ ಹೆಸರಿನ ಫೇಸ್‌ಬುಕ್​ ಪೇಜ್​ನಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.