Wednesday, August 5

Author: info@rajasdigital.com

ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಣೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರ್ದೇಶನದ ಮೇರೆಗೆ ಡಿಜಿ & ಐಜಿಪಿ ಎಂ.ಎ. ಸಲೀಂ ಅವರು ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ಅಕ್ರಮ ಮರಳು ದಂಧೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿಯಷ್ಟೇ ಅಲ್ಲ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಗಂಭೀರ ಸವಾಲು ಎಂದು ಗೃಹ ಸಚಿವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಸುತ್ತೋಲೆಯ ಪ್ರಕಾರ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆಗಳು ಅಕ್ರಮ ಗಣಿಗಾರಿಕೆ ನಡೆಯುವ ಪ್ರದೇಶಗಳನ್ನು ಗುರುತಿಸಿ ನಿರಂತರ ನಿಗಾ ವಹಿಸಬೇಕು. ಅಕ್ರಮ ಸಾಗಣೆ, ಸಂಗ್ರಹಣೆ ತಡೆದು ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವ ಹೊಣೆಗಾರಿಕೆ ಸಂಬಂಧಿತ ಪೊಲೀಸ್ ಅಧಿಕಾರಿಗಳದ್ದಾಗಿರುತ್ತದೆ.ರಾಜ್ಯಾಂತರ ಗಡಿಗಳಲ್ಲಿ ನಡೆಯುವ ಅಕ್ರಮ ಮರಳು ಸಾಗ...
ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಯುವಜನರಲ್ಲಿ ಪರಿಸರ ಸಂರಕ್ಷಣೆ ಮತ್ತು ಅರಣ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ "ಜಂಗಲ್ ಜರ್ನಿ 2026" ಎಂಬ ಒಂದು ದಿನದ ವಿಶೇಷ ಕಾರ್ಯಕ್ರಮವನ್ನು ಭಾರತೀಯ ಕ್ಯಾಥೋಲಿಕ ಯುವ ಸಂಚಲನ (ICYM) ಸಂತ ಜಾನ್ ಪೌಲ್ ICYM ವಲಯ, ಕರ್ನಾಟಕ ಅರಣ್ಯ ಇಲಾಖೆ, ವನ ಚಾರಿಟಬಲ್ ಟ್ರಸ್ಟ್, CASK ಸೆಂಟಿನರಿ ಟ್ರಸ್ಟ್ ಹಾಗೂ MIJARC ಸಹಯೋಗದಲ್ಲಿ ಕಾಂತಾವರ ಅರಣ್ಯ ಪ್ರದೇಶದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಕುಂದಾಪುರ ವಲಯದ ಮಾರ್ಗದರ್ಶನದಲ್ಲಿ ಅರಣ್ಯ ಬೀಟ್ ಅಧಿಕಾರಿ ಚಂದ್ರಶೇಖರ್ ಅವರು ಅರಣ್ಯ ಸಂರಕ್ಷಣೆಯಲ್ಲಿ ಯುವಜನರ ಪಾತ್ರ ಮತ್ತು ಪರಿಸರ ರಕ್ಷಣೆಯ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.ಕಾಂತಾವರ ಫಾರೆಸ್ಟ್ ಬೇಸ್ ಕ್ಯಾಂಪ್‌ನಲ್ಲಿ ಅರುಣ್ ಅವರು ಅರಣ್ಯದ ಮಹತ್ವ, ಪ್ರಸ್ತುತ ಅರಣ್ಯಗಳ ಸ್ಥಿತಿ ಹಾಗೂ ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿಯ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಒಟ್ಟು 67 ಯುವಜನರು ಭಾಗವಹಿಸಿ ಅರಣ್ಯ ಸಂರಕ್ಷಣೆ ಕುರಿತ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ವಂ. ರಿಚರ್ಡ್ ಡಿ'ಸೋಜಾ (ICYM ವಲಯ ನಿರ...
ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 1ರಂದು ಮೈಸೂರಿಗೆ ಭೇಟಿ ನೀಡಿ, ₹45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕವು, ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಸ್ಥಳದಲ್ಲಿ ನಿರ್ಮಾಣಗೊಂಡಿದ್ದು, ಯುವಜನ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬಳಿಕ ಆಶ್ರಮದ ಸಭಾಂಗಣದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಸುಮಾರು 6 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ವಿಶೇಷ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜೀ ಮಹಾರಾಜ್ ತಿಳಿಸಿದ್...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿವೆ. ಕರಾವಳಿ ಜಿಲ್ಲೆಗಳಿಗೆ ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜುಲೈ 28ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣ...
ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಇನ್ನೂ ಯಾವುದೇ ಅಧಿಕೃತ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ. ಬೆಂಗಳೂರು ದಕ್ಷಿಣ ಮತ್ತು ತುಮಕೂರು ಭಾಗಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ ಕೇಂದ್ರದ ಈ ಹೇಳಿಕೆ ಮಹತ್ವ ಪಡೆದಿದೆ. ಲೋಕಸಭೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ಲಿಖಿತ ಉತ್ತರ ನೀಡಿದರು. ರಾಜ್ಯ ಸರ್ಕಾರದ ಮನವಿಯಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಬೆಂಗಳೂರಿನ ಸುತ್ತಮುತ್ತ ಗುರುತಿಸಲಾದ ಮೂರು ಪ್ರಸ್ತಾವಿತ ಸ್ಥಳಗಳಲ್ಲಿ ಪೂರ್ವ-ಸಾಧ್ಯತಾ ಅಧ್ಯಯನ ನಡೆಸಿ, ಅದರ ವರದಿಯನ್ನು ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನೀತಿಯಡಿ ಅಗತ್ಯವಿರುವ ಅಧಿಕೃತ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಇದುವರೆಗೆ ಕೇಂದ್ರಕ್ಕೆ ಸಲ್ಲಿಸಿಲ್ಲ ಎಂದು ಸಚಿವಾಲಯ ತಿಳಿಸಿದೆ.ರಾಜ್ಯ ಸರ...
ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

ಆಧ್ಯಾತ್ಮ, ಪ್ರಮುಖ ಸುದ್ದಿ
ಹನೂರು: ಮಲೆ ಮಹದೇಶ್ವರ ಕ್ಷೇತ್ರವನ್ನು ಸ್ವಚ್ಛ, ಸುಂದರ ಹಾಗೂ ಪ್ಲಾಸ್ಟಿಕ್ ಮುಕ್ತ ಧಾರ್ಮಿಕ ಕ್ಷೇತ್ರವನ್ನಾಗಿ ರೂಪಿಸುವುದು ಪ್ರಾಧಿಕಾರದ ಪ್ರಮುಖ ಆದ್ಯತೆಯಾಗಿದ್ದು, ಭಕ್ತರು, ಸ್ಥಳೀಯ ಸಂಘಟನೆಗಳು ಹಾಗೂ ವ್ಯಾಪಾರಸ್ಥರ ಸಹಭಾಗಿತ್ವದೊಂದಿಗೆ ಪ್ಲಾಸ್ಟಿಕ್ ಬಳಕೆಯನ್ನು ಹಂತಹಂತವಾಗಿ ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿ ಪುರುಷೋತ್ತಮ್ ತಿಳಿಸಿದರು.ಪರಿಸರ ವಾರಿಯರ್ಸ್ ಗ್ರೂಪ್ ಮೈಸೂರು ಹಾಗೂ ಭಾರತೀಯ ಕಿಸಾನ್ ಸಂಘ, ಚಾಮರಾಜನಗರ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆ ಧಾರ್ಮಿಕ ಕ್ಷೇತ್ರಗಳಲ್ಲೂ ಅತ್ಯಂತ ಮಹತ್ವದ್ದಾಗಿದ್ದು, ಪರಿಸರ ವಾರಿಯರ್ಸ್ ಮತ್ತು ಭಾರತೀಯ ಕಿಸಾನ್ ಸಂಘದ ಮುಖಂಡರು ನೀಡಿರುವ ಸಲಹೆಗಳು ಉಪಯುಕ್ತವಾಗಿವೆ. ಭಕ್ತರು, ವ್ಯಾಪಾರಸ್ಥರು ಹಾಗೂ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಲೆ ಮಹದೇಶ್ವರ ಕ್ಷೇತ್ರವನ್ನು ರಾಜ್ಯಕ್ಕೇ ಮಾದರಿಯಾಗುವ ಪ್ಲಾಸ್ಟಿಕ್ ಮುಕ್ತ ಕ್ಷೇತ್ರವನ...
‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಮೇಕೆದಾಟು ಯೋಜನೆ ಜಾರಿಗೊಳಿಸಲು ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ಪ್ರತ್ಯೇಕ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಈ ಮಾಹಿತಿ ನೀಡಿದ್ದಾರೆ. 2018ರ ಕಾವೇರಿ ನೀರು ವಿವಾದ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ, ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ಯೋಜನೆ ಕೈಗೊಳ್ಳಲು ಕರ್ನಾಟಕವು ಕೆಳಹರಿವಿನ ರಾಜ್ಯಗಳ ಅನುಮತಿ ಪಡೆಯಬೇಕು ಎಂಬ ಉಲ್ಲೇಖ ಇಲ್ಲ ಎಂದು ಸಚಿವಾಲಯ ತಿಳಿಸಿದೆ. 2007ರ ಕಾವೇರಿ ನೀರು ವಿವಾದ ನ್ಯಾಯಾಧಿಕರಣದ ಆದೇಶದ ಪ್ರಕಾರ, ನ್ಯಾಯಾಧಿಕರಣದ ತೀರ್ಪಿಗೆ ಧಕ್ಕೆಯಾಗದಂತೆ ತಮ್ಮ ಗಡಿಭಾಗದೊಳಗಿನ ನೀರಿನ ಬಳಕೆ ಹಾಗೂ ಸೌಲಭ್ಯಗಳನ್ನು ನಿಯಂತ್ರಿಸುವ ಹಕ್ಕು ಸಂಬಂಧಿತ ರಾಜ್ಯಗಳಿಗೆ ಇದೆ ಎಂದು ಸ್ಪಷ್ಟಪಡಿಸಲಾಗಿದೆ.ಇದೇ ವೇಳೆ, ಕರ್ನಾಟಕ ಸರ್ಕಾರವು 2019ರಲ್ಲಿ ಸಲ್ಲಿಸಿದ್ದ ಮೇಕೆದಾಟು ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಸಮಗ್ರ ಯೋಜನಾ ವರದಿ (...
ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

ದೇಶ, ಪ್ರಮುಖ ಸುದ್ದಿ
ಅಗರ್ತಲ: ತ್ರಿಪುರಾ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅನುರಾಗ್ ಅವರ ನಿಗೂಢ ಸಾವಿನ ತನಿಖೆಯನ್ನು ರಾಜ್ಯ ಪೊಲೀಸರು ತೀವ್ರಗೊಳಿಸಿದ್ದು, ಪ್ರಕರಣದ ತನಿಖೆಗಾಗಿ ರಚಿಸಿದ್ದ ವಿಶೇಷ ತಂಡವನ್ನು ಮೂರು ಸದಸ್ಯರಿಂದ 10 ಸದಸ್ಯರಿಗೆ ವಿಸ್ತರಿಸಲಾಗಿದೆ. 1994ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಅನುರಾಗ್ ಅವರ ಮೃತದೇಹ ಜುಲೈ 20ರಂದು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಅವರ ಅಧಿಕೃತ ಕೊಠಡಿಗೆ ಹೊಂದಿಕೊಂಡ ಶೌಚಾಲಯದಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜುಲೈ 24ರಂದು ಪಶ್ಚಿಮ ತ್ರಿಪುರಾ ಎಸ್‌ಪಿ ನಮಿತ್ ಪಾಠಕ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು.ಈಗ ಎಸ್‌ಐಟಿಯನ್ನು ಪುನರ್‌ರಚಿಸಿ, ಸೈಬರ್ ಅಪರಾಧ ಘಟಕ, ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ಹಿರಿಯ ತನಿಖಾಧಿಕಾರಿಗಳನ್ನು ಒಳಗೊಂಡ 10 ಸದಸ್ಯರ ತಂಡವನ್ನಾಗಿ ವಿಸ್ತರಿಸಲಾಗಿದೆ. ತನಿಖೆಯ ಪ್ರಗತಿ ಪರಿಶೀಲನೆಗಾಗಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸಭೆ ನಡೆಸಿ, ದೈನಂದಿನ ಪ್ರಗತಿ ವರದಿಯನ್ನು ಎಸ್‌ಪಿಗೆ ಸಲ್ಲಿಸುವಂತೆ ಆದೇಶಿಸಲಾಗಿದೆ. ಇದೇ ವೇಳೆ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸುದೀಪ್ ರಾಯ...
‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ. ರವಿ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ನೈತಿಕತೆ, ಸತ್ಯ ಮತ್ತು ಬದ್ಧತೆಯ ವಿಚಾರದಲ್ಲಿ ಬಿಜೆಪಿ ನಾಯಕರನ್ನು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಸಿ.ಟಿ ರವಿ ಸೇರಿದಂತೆ ಬಿಜೆಪಿಗರ ಎದೆ ಸೀಳಿದರೆ ನಾಲ್ಕಕ್ಷರಗಳೂ ಸಿಗುವುದಿಲ್ಲ, ಜೊತೆಗೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ, ಆತ್ಮಸಾಕ್ಷಿಗಳೂ ಕಾಣುವುದಿಲ್ಲ ಎಂದಿದ್ದಾರೆ. "ತಮ್ಮ ದ್ವೇಷದ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಒಂದು ಸುಳ್ಳಿಗೆ ಮತ್ತೊಂದು ಸುಳ್ಳನ್ನು ಪೋಣಿಸುವ ಸಿ.ಟಿ. ರವಿ ಅವರಂತಹವರು ರಾಜಕೀಯ ವ್ಯವಸ್ಥೆಗೆ ಅಂಟಿರುವ ಕಳಂಕ" ಎಂದು ಆರೋಪಿಸಿದ್ದಾರೆ. "ಸಿ.ಟಿ. ರವಿ ಸೇರಿದಂತೆ ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ. ಕಳೆದ ಮೂರು ವರ್ಷಗಳಲ್ಲಿ ದೊಡ್ಡ ಮಟ್ಟದ ಕೋಮು ಕಲಹ ಸೃಷ್ಟಿಸಲು ಸಾಧ್ಯವಾಗದ ಕಾರಣ ಬಿಜೆಪಿ ಅಸಹನೀಯವಾಗಿ ವರ್ತಿಸುತ್ತಿದೆ" ಎಂದು ಅವರು ಟೀಕಿಸಿದ್ದಾರೆ.ನೀಟ್ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಧರ್ಮವನ್ನು ಎಳೆದು...
ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

ದೇಶ, ಪ್ರಮುಖ ಸುದ್ದಿ
ಅಮೃತಸರ: ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ತಡರಾತ್ರಿ ಪೆಟ್ರೋಲ್ ಬಾಂಬ್ ಎಸೆದು ದಾಳಿ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ರಾಜಕೀಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದರೂ, ಭದ್ರತಾ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪೊಲೀಸರು ಘಟನಾ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ವಶಪಡಿಸಿಕೊಂಡಿದ್ದಾರೆ.ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ದಾಳಿ ನಡೆಸಿದವರನ್ನು ಗುರುತಿಸಲು ಹಾಗೂ ದಾಳಿಯ ಹಿಂದಿನ ಉದ್ದೇಶ ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಕುರಿತು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಬಿಜೆಪಿ ಕಚೇರಿ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿ...