Friday, May 15

Author: info@rajasdigital.com

ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ಮೈಸೂರು ದಸರಾ ಉದ್ಘಾಟನೆ

ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ಮೈಸೂರು ದಸರಾ ಉದ್ಘಾಟನೆ

ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನುಈ ಬಾರಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ.ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ತಿಳಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ದಸರಾ ಉದ್ಘಾಟಕರ ಆಯ್ಕೆಯನ್ನು ನನ್ನ ತೀರ್ಮಾನಕ್ಕೆ ಬಿಡಲಾಗಿತ್ತು. ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಆಯ್ಕೆ ಮಾಡಿದ್ದೇನೆ ಎಂದು ತಿಳಿಸಿದರು.ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಗೆ ದಸರಾ ಉದ್ಘಾಟನೆಯ ಆಹ್ವಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು....
KSRTCಗೆ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ಗೋಲ್ಡನ್ ಸ್ಟಾರ್ ಪ್ರಶಸ್ತಿ-2024

KSRTCಗೆ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ಗೋಲ್ಡನ್ ಸ್ಟಾರ್ ಪ್ರಶಸ್ತಿ-2024

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: KSRTCಗೆ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ಗೋಲ್ಡನ್ ಸ್ಟಾರ್ ಪ್ರಶಸ್ತಿ-2024 ಲಭಿಸಿದೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ನಿಗಮದ ಪ್ರತಿಷ್ಠಿತ ಬ್ಯ್ರಾಂಡಿಂಗ್ ಉಪಕ್ರಮಗಳಿಗಾಗಿ ಗೋಲ್ಡನ್ ಸ್ಟಾರ್ ಪ್ರಶಸ್ತಿ ಲಭಿಸಿದೆ. ಗುರುವಾರ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೊಫೆಸರ್ ಡಾ. ರಾಮಪ್ರಸಾದ್ ಬ್ಯಾನರ್ಜಿಯವರು, EIILM, ಕೊಲ್ಕತ್ತ. ಸಂಜಯ್ ರಾಮದಾಸ್ ಕಾಮತ್, ಹಿರಿಯ ಉಪಾಧ್ಯಕ್ಷರು ಮತ್ತು ಬಿಸಿನೆಸ್ ಮುಖ್ಯಸ್ಥರು, SASIA ರವರು, ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಿದರು.ಸೋಮಶೇಖರ್, ಕಾರ್ಯನಿರ್ವಾಹಕ ಅಭಿಯಂತರರು, ನರಸಿಂಹ ವರ್ಮ.ವಿ, ಕಾನೂನು ಅಧಿಕಾರಿ, ಸತೀಶ್ ಕುಮಾರ್.ಎನ್, ವಿಭಾಗೀಯ ಸಂಚಾರ ಅಧಿಕಾರಿ ಮತ್ತು ಚಂದ್ರೇಗೌಡ ಎ.ಜಿ, ಭದ್ರತಾ ಮತ್ತು ಜಾಗೃತಾಧಿಕಾರಿ, ಕೆ.ಎಸ್.ಆರ್.ಟಿ.ಸಿ ರವರುಗಳು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು....
ಅಂದು ಸುದ್ದಿ ನಿರೂಪಕ ಈಗ ಬೆಳ್ಳಿತೆರೆಯ ಹೀರೋ ರಾಘವ ಸೂರ್ಯ; ‘ರಮ್ಮಿ ಆಟ’ ಚಿತ್ರದ ಸುತ್ತ

ಅಂದು ಸುದ್ದಿ ನಿರೂಪಕ ಈಗ ಬೆಳ್ಳಿತೆರೆಯ ಹೀರೋ ರಾಘವ ಸೂರ್ಯ; ‘ರಮ್ಮಿ ಆಟ’ ಚಿತ್ರದ ಸುತ್ತ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
📝 ಈಶ್ವರ್ ಸಿರಿಗೇರಿಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಮ್ಮಿ ಆಟ / ರಮ್ಮಿ ಗೇಮ್ ಮನುಕುಲದ ಅವನತಿ ಎಂಬ ಅಪವಾದವಿದೆ, ತಮ್ಮ ಜೀವವನ್ನೇ ಆಹುತಿ ಮಾಡಿಕೊಳ್ಳುತ್ತಿರುವ ಪ್ರಸ್ತುತ ಯುವ ಸಮೂಹದ ಬಗ್ಗೆ ಸೃಜನಶೀಲ ಕಥೆಯನ್ನುಟ್ಟುಕೊಂಡು, ಆನ್‌ಲೈನ್ ರಮ್ಮಿ ಆಡುವುದರಿಂದ ಏನೆಲ್ಲ ಸಮಸ್ಯೆಗಳಾಗುತ್ತವೆ. ಜನ ಸಮೂಹವು ಯಾವೆಲ್ಲಾ ರೀತಿ ಮೋಸ ಹೋಗುತ್ತಾರೆ. ಹಾಗೆಯೇ ಆನ್‌ಲೈನ್‌ ರಮ್ಮಿ ಗೇಮ್‌ ಕುರಿತು ಜನರಿಗೆ ಎಚ್ಚರಿಕೆ ನೀಡುವಂತಹ ಸಿನಿಮಾವೊಂದು ಕನ್ನಡ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದೆ. ಸೆಪ್ಟೆಂಬರ್ 20ರಿಂದಲೇ 'ರಮ್ಮಿ ಆಟ" ಈ ಸಿನಿಮಾ ಮೂಲಕ ಕನ್ನಡ ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿದ್ದ ರಾಘವ ಸೂರ್ಯ ಸಿನಿಮಾದಲ್ಲಿ ಹೀರೋ ಆಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ್ದು ವಿಶೇಷ. ಈ ಆಟದಿಂದ ಏನೆಲ್ಲ‌ ಪರಿಣಾಮಗಳಾಗುತ್ತವೆ ಎಂಬ ಕಥೆಯನ್ಬು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ.ಸುದ್ದಿ ಸಂಸ್ಥೆಯಲ್ಲಿ ನಿರೂಪಕರಾಗಿದ್ದಾಗಲೇ ರಾಘವ ಸೂರ್ಯ ಅವರು ಈ ಚಿತ್ರದ ಆಫರ್ ಸ್ವೀಕರಿಸಿ, ಕಿರುತೆರೆಯಿಂದ ಬಿಗ್ ಸ್ಕ್ರೀನ್‌ಗೆ ಜಿಗಿದಿದ್ದಾರೆ. ಕನ್ನಡ ಮಾಧ್ಯಮ ಕ್ಷೇತ್ರದಲ್ಲಿನ ತಮ್ಮದೇ ಆದ ಛಾಪು ಮೂಡಿಸಿದ ಖ್...
ಕೋಟಾ ಪೂಜಾರಿ ಸ್ಥಾನಕ್ಕೆ ಉಪಚುನಾವಣೆ ; ಅ.21ರಂದು ಮತದಾನ

ಕೋಟಾ ಪೂಜಾರಿ ಸ್ಥಾನಕ್ಕೆ ಉಪಚುನಾವಣೆ ; ಅ.21ರಂದು ಮತದಾನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿನಿಧಿಸುತ್ತಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್‌ 21ರಂದು ಮತದಾನ ನಡೆಯಲಿದ್ದು, ಅ.24ರಂದು ಮತ ಎಣಿಕೆ ನಡೆಯಲಿದೆ.ಕೋಟಾ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಅವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ಈ ಉಪಚುನಾವಣೆ ನಡೆಯಲಿದೆ.ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವ ಭಾರತೀಯ ಚುನಾವಣಾ ಆಯೋಗವು, ಅಕ್ಟೋಬರ್‌ 21ರಂದು ಮತದಾನ ನಡೆಯಲಿದೆ ಎಂದು ತಿಳಿಸಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 3 ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಬೆಳಗ್ಗೆ 8ರಿಂದ  ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ....
ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದ ಕೋಮುಗಲಭೆ ವಿಚಾರದಲ್ಲಿ ಸರಿಯಾಗಿ ತನಿಖೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದೆ. ಜನರು ಹೇಳಿದ್ದನ್ನು ಕೇಳಿಯೇ ಹಾಗೆ ಟ್ವೀಟ್‌ ಮಾಡಿದ್ದೆ. ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದು ಸಚಿವರೇ ಹೇಳಿದ್ದರು. ಬಳಿಕ ಅದು ನಿಜ ಎಂದು ಸಾಬೀತಾಯಿತು. ಹಾಗಾದರೆ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ ಎಂದು ಪ್ರಶ್ನೆ ಮಾಡಿದರು.ವಿರೋಧ ಪಕ್ಷದ ನಾಯಕನಾಗಿ ತನಿಖೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದೇನೆ. ಸರ್ಕಾರದಿಂದ ನನ್ನ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ವಿರೋಧ ಪಕ್ಷವನ್ನು ಬಗ್ಗುಬಡಿಯಬೇಕೆಂದು ಸರ್ಕಾರ ನಿರ್ಧಾರ ಮಾಡಿದೆ. ಪಾಕ್‌ ಜಿಂದಾಬಾದ್‌ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ಸಚಿವರು ರಾಜೀನಾಮೆ ನೀಡಬೇಕಿತ್ತು. ಹಾಗಾದರೆ ವಿರೋಧ ಪಕ್ಷವಾಗಿ ನಾವ...
ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಲಿತರು, ಮಹಿಳೆಯರು, ಒಕ್ಕಲಿಗರ ಬಗ್ಗೆ ಕೀಳು ಮಟ್ಟದ ಅವಹೇಳನಕಾರಿಯಾಗಿ ಮಾತನಾಡಿರುವ, ಲಂಚಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಮುಂಭಾಗ ಪ್ರತಿಭಟನ ನಡೆಯಿತು.ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ತಿನ ಮುಖ್ಯಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಉಪಾಧ್ಯಕ್ಷ ಎಂ ನಾರಾಯಣ ಸ್ವಾಮಿ, ಆರ್.ವಿ ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಸೇರಿದಂತೆ ಕಾರ್ಯಾಕರ್ತರು ಭಾಗವಹಿಸಿದರು....
ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಹೈದರಾಬಾದ್: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಯುವತಿಯ ದೂರಿನ ಆಧಾರದಲ್ಲಿ ಜಾನಿ ಮಾಸ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಅರೋಪ ಬಗ್ಗೆ ದೂರು ದಾಖಲಾಗಿತ್ತು. ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧದ ಈ ಆರೋಪ ದಕ್ಷಿಣ ಭಾರತದ ಚಿತ್ರೋದ್ಯಮಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿಯಾಗಿತ್ತು. ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ದಾಖಲಾಗಿದೆ.ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಜಾನಿ ಮಾಸ್ಟರ್ ಅವರನ್ನು ಹೈದರಾಬಾದ್‌ನ ಪೊಲೀಸರು ನಾಲ್ಕು ತಂಡಗಳಲ್ಲಿ ಹುಡಿಲುಕಾಟ ನಡೆಸುತ್ತಿದ್ದರು.ಈ ನಡುವೆ, ಜಾನಿ ಮಾಸ್ಟರ್ ಅವರನ್ನು ಗೋವಾದಲ್ಲಿ ಪತ್ತೆ ಮಾಡಿದ ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ....

ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ದುಃಖ ವ್ಯಕ್ತಪಡಿಸಿದ್ದಾರೆ.ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ ಎಂದು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ ಎಂದಿದ್ದಾರೆ.ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ....
ಬೊಮ್ಮಾಯಿ ಸರ್ಕಾರದ ವಿರುದ್ದದ ‘ಪೇಸಿಎಂ’ ಅಭಿಯಾನಕ್ಕೆ ಕಾರಣರಾಗಿದ್ದ ಕೆಂಪಣ್ಣ ವಿಧಿವಶ

ಬೊಮ್ಮಾಯಿ ಸರ್ಕಾರದ ವಿರುದ್ದದ ‘ಪೇಸಿಎಂ’ ಅಭಿಯಾನಕ್ಕೆ ಕಾರಣರಾಗಿದ್ದ ಕೆಂಪಣ್ಣ ವಿಧಿವಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿಧಿವಶರಾಗಿದ್ದಾರೆ. ಬೆಂಗಳೂರಿನ ಹೊಸಕೋಟೆಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ಹೃದಯಾಘಾತಕ್ಕೊಳಗಾಗಿ ಕೊನೆಯಿಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.ಕಳೆದ ವಿಧಾನಸಭೆಯ ಅವಧಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು. ಈ ಆರೋಪವನ್ನೇ ಮುಂದಿಟ್ಟು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷ ‘ಪೇ ಸಿಎಂ’ ಅಭಿಯಾನ ನಡೆಸಿತ್ತು.ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣನವರು ಇತ್ತೀಚೆಗಷ್ಟೇ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ವಾಪಸ್ಸಾಗಿದ್ದರು. ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತಕ್ಕೊಳಗಾದ ಅವರು ಕೊನೆಯುಸಿರೆಳೆದರು ಎಂದು ಸಂಬಂಧಿಕರು ಹೇಳಿದ್ದಾರೆ....
ಒಡಿಶಾದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಕಟೀಲ್ ಕಮಾಲ್

ಒಡಿಶಾದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಕಟೀಲ್ ಕಮಾಲ್

ದೇಶ-ವಿದೇಶ, ಪ್ರಮುಖ ಸುದ್ದಿ
ಭುವನೇಶ್ವರ: ಮಾಜಿ ಸಂಸದ ನಳಿನ್ ಕುಮಾರ್ ಇದೀಗ ಒಡಿಶಾದಲ್ಲಿ ಕಮಾಲ್ ಪ್ರದರ್ಶಿಸುತ್ತಿದ್ದಾರೆ. ಒಡಿಶಾ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡಿರುವ ಕರ್ನಾಟಕ ಬಿಜೆಪಿ ಮಾಜಿ ಅಧ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲ್ ಕಳೆದ ಕೆಲವು ದಿನಗಳಿಂದ ಅವಿರತ ಪ್ರವಾಸ ಕೈಗೊಂಡಿದ್ದಾರೆ.ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಭಾಗಿಯಾಗಿ ಸ್ಥಳೀಯ ಮುಖಂಡರ ಸೈನ್ಯ ಕಟ್ಟಿರುವ ಕಟೀಲ್, ಭಾರೀ ಸಂಖ್ಯೆಯಲ್ಲಿ ಯುವಕರನ್ನು ಸೆಳೆಯುತ್ತಿದ್ದಾರೆ.ಒಡಿಶಾದ ಸಾಂಪ್ರದಾಯಿಕ ಸಭೆಗಳಲ್ಲಿ ಭಾಗಿಯಾಗಿ, ಮೋದಿ ಸರ್ಕಾರದ ಸಾಧನೆಗಳನ್ನು ಅನಾವರಣ ಮಾಡುವ ಮೂಲಕ ಕುತೂಹಲದ ಕೇಂದ್ರಬಿಂದುವಾಗಿದ್ದಾರೆ. ಭುವನೇಶ್ವರ, ಕಟಕ್, ನೌಪಾಡಾ ಜಿಲ್ಲೆಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷದ ನಿರೀಕ್ಷೆಯನ್ನು ಮೀರಿ ಯಶಸ್ವಿಯಾಗಿ ಸಾಗಿದೆ. ಮೋದಿ ಅವರೇ ಆದರ್ಶ ನಾಯಕ:  ಈ ಅಭಿಯಾನದ ನಡುವೆ ಮಾತನಾಡಿರುವ ನಳಿನ್ ಕುಮಾರ್ ಕಟೀಲ್, ಕೇಂದ್ರದಲ್ಲಿರುವ ನರೇಂದ್ರ ಮೋದಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ದೇಶದ ಪ್ರಗತಿಗೆ ಪೂರಕವಾದ ಕಾರ್ಯಕ್ರಮ ರೂಪಿಸಿದೆ. ಒಡಿಶಾ ರಾಜ್ಯದ ಅಭಿವೃದ್ಧಿಗೂ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದರು.ಮುಂಬರುವ ವಿವಿಧ ರ...