Wednesday, August 5

Author: info@rajasdigital.com

ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ವಿರೋಧ ಪಕ್ಷಗಳನ್ನು ಬೆದರಿಸಿ ಹಿಡಿತಕ್ಕೆ ತರುವ ಪ್ರಯತ್ನವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಕಿಡಿಕಾರಿದರು. ಸಿ.ಟಿ. ರವಿ ಅವರು ಯಾವುದೇ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಆದರೂ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಪೊಲೀಸರು ಮುಟ್ಟಿ ನೋಡಲಿ ಎಂದು ಅಶೋಕ್ ಸವಾಲು ಹಾಕಿದರು.ಸದ್ಯದಲ್ಲೇ ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಪರವಾಗಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಲಾಗುವುದು ಎಂದು ಅವರು ತಿಳಿಸಿದರು. ವಿಧಾನಸೌಧದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ, ಬಿಜೆಪಿ ನಾಯಕರ ವಿರುದ್ಧ ಮಾತ್ರ ಸುಳ್ಳು ಪ್ರಕ...
ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಸರ್ಕಾರ ಇನ್ನೂ ಅಧಿಕೃತವಾಗಿ ಬರ ಘೋಷಣೆ ಮಾಡಿಲ್ಲ. ಹೀಗಿರುವಾಗ ಬರ ಅಧ್ಯಯನಕ್ಕೆ ಕೇಂದ್ರ ಸರ್ಕಾರದ ತಂಡ ಹೇಗೆ ಬರಲು ಸಾಧ್ಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರೂ ಎಷ್ಟು ಪರಿಹಾರ ಘೋಷಿಸಿದ್ದಾರೆ ಎಂದು ಪ್ರಶ್ನಿಸಿದರು. ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಕೇವಲ ಕಾಟಾಚಾರಕ್ಕೆ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ದೆಹಲಿಗೆ ತೆರಳುತ್ತಿದ್ದಾರೆ ಎಂದು ಟೀಕಿಸಿದರು. ತಾವು ಈಗಾಗಲೇ ಮಂಡ್ಯ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಮುಂದಿನ ವಾರ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ಭೇಟಿ ನೀಡುವುದಾಗಿ ಅಶೋಕ್ ತಿಳಿಸಿದರು.ಬರ ಘೋಷಣೆ ಮಾಡಿದರೆ ಮೊದಲ ಹಂತದ ಪರಿಹಾರವನ್ನು ರಾಜ್ಯ ಸರ್ಕಾರವೇ ಬಿಡುಗಡೆ ಮಾಡಬೇಕಾಗುತ್ತದೆ. ಆದರೆ ಅದನ್ನು ಮಾಡದೆ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಲಾಗುತ್ತಿದೆ. ರಾಜ್ಯ ಸರ್ಕಾರವೇ ಬರದ ...
ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಪಶುವೈದ್ಯಕೀಯ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿಯಲ್ಲಿ ಸುಮಾರು ₹800 ಕೋಟಿ ಮೊತ್ತದ ಡೀಲ್ ನಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳು ಹುದ್ದೆ ಪಡೆಯಲು ವಿಫಲವಾಗಿದ್ದು, ಹಣ ನೀಡಿ ಅಕ್ರಮವಾಗಿ ಹುದ್ದೆ ಪಡೆದಿರುವ ಆರೋಪಗಳಿವೆ ಎಂದು ಹೇಳಿದರು.ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶ್ರೇಯಾಂಕ ಪಡೆದ ವಿದ್ಯಾರ್ಥಿಗಳು ಕೆಪಿಎಸ್‌ಸಿ ಪರೀಕ್ಷೆಯಲ್ಲಿ 350ಕ್ಕೂ ಹೆಚ್ಚು ಅಂಕ ಗಳಿಸಲು ಸಾಧ್ಯವಾಗಿಲ್ಲ. ಆದರೆ ವಿಶ್ವವಿದ್ಯಾಲಯದಲ್ಲಿ ಸಾಧಾರಣ ಅಂಕ ಪಡೆದ ಕೆಲ ಅಭ್ಯರ್ಥಿಗಳು ಕೆಪಿಎಸ್‌ಸಿ ಪರೀಕ್ಷೆಯಲ್ಲಿ 400ಕ್ಕೂ ಹೆಚ್ಚು ಅಂಕ ಗಳಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇದರಿಂದ ಹುದ್ದೆಗಳ ಮಾರಾಟ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು. ಈ ಪ್ರಕರಣದಲ್ಲಿ ಇಲಾಖಾ ಮಟ್ಟದ ತನಿಖೆ ನಡೆಸುವುದರಿಂದ ಪ್ರಯೋಜನವ...
ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

ದೇಶ, ಪ್ರಮುಖ ಸುದ್ದಿ
ಸಮಾಲ್ಖಾ (ಹರಿಯಾಣ): ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಹಾಗೂ ಪ್ರತಿನಿಧಿ ಮಂಡಲದ ಪ್ರಥಮ ಅರ್ಧವಾರ್ಷಿಕ ಬೈಠಕ್ ಭಾನುವಾರ ಹರಿಯಾಣದ ಸಮಾಲ್ಖಾದಲ್ಲಿ ಸಮಾರೋಪಗೊಂಡಿತು. ಜುಲೈ 24ರಿಂದ ನಡೆದ ಮೂರು ದಿನಗಳ ಸಭೆಯಲ್ಲಿ ಸಮಿತಿಯ ಪ್ರಮುಖ ಸಂಚಾಲಕಿ ಮಾ. ಶಾಂತಾಕುಮಾರಿ, ಅಖಿಲ ಭಾರತ ಪ್ರಮುಖ ಕಾರ್ಯವಾಹಿಕಾ ಮಾ. ಸೀತಾ ಗಾಯತ್ರಿ ಸೇರಿದಂತೆ 40 ಪ್ರಾಂತಗಳಿಂದ 488 ಪ್ರತಿನಿಧಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಫೆಬ್ರವರಿ 2026ರಿಂದ ಇದುವರೆಗೆ ನಡೆದ ಸಂಘಟನಾ ಚಟುವಟಿಕೆಗಳ ಪರಿಶೀಲನೆ ನಡೆಸಲಾಯಿತು. ಕಳೆದ ಆರು ತಿಂಗಳಲ್ಲಿ ಸಂಘಟನೆಯ ಕಾರ್ಯವ್ಯಾಪ್ತಿ ವಿಸ್ತರಿಸಿದ್ದು, ಪ್ರಸ್ತುತ 852 ಜಿಲ್ಲೆಗಳಲ್ಲಿ 4,886 ಶಾಖೆಗಳು, 1,173 ಮಿಲನಗಳು ಹಾಗೂ 1,332 ಸೇವಾ ಕಾರ್ಯಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಲಾಯಿತು. ಸಮಿತಿಯ ಸ್ಥಾಪನೆಯ 90 ವರ್ಷಗಳ ಹಿನ್ನೆಲೆಯಲ್ಲಿ ಕಾರ್ಯವಿಸ್ತರಣೆ, ಸಾಮಾಜಿಕ ಪರಿಸ್ಥಿತಿ, ಮಹಿಳೆಯರು ಹಾಗೂ ಯುವಜನರು ಎದುರಿಸುತ್ತಿರುವ ಸವಾಲುಗಳು ಮತ್ತು ಅವುಗಳ ಪರಿಹಾರಗಳ ಕುರಿತು ಚರ್ಚೆ ನಡೆಯಿತು.ಕೊನೆಯ ದಿನ ಜನಸಂಖ್ಯಾ ಅಸಮತೋಲನದ ಕಾರಣಗಳು ಮತ್ತು ಪರಿಣಾಮಗಳ ಕುರ...
ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿರುವ ವಾರ್ಷಿಕ ಆದಾಯದ ಮಿತಿಯನ್ನು ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಪಡಿತರ ಕಾರ್ಡ್‌ಗಳ ಪರಿಶೀಲನೆ ನಡೆಯುತ್ತಿದ್ದು, ಯಾವುದೇ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅನರ್ಹ ಕಾರ್ಡ್‌ಗಳನ್ನು ಮಾತ್ರ ಎಪಿಎಲ್‌ಗೆ ವರ್ಗಾಯಿಸಲಾಗುವುದು ಎಂದರು. ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ 4.42 ಕೋಟಿ ಫಲಾನುಭವಿಗಳಿಗೆ 10 ಕೆಜಿ ಪಡಿತರ ವಿತರಿಸಲಾಗುತ್ತಿದೆ ಎಂದು ತಿಳಿಸಿದ ಸಚಿವರು, ಕಾಳಸಂತೆಯನ್ನು ತಡೆಯಲು ಗೋದಾಮುಗಳಲ್ಲಿ ಸಿಸಿಟಿವಿ ಹಾಗೂ ಪಡಿತರ ಸಾಗಣೆ ವಾಹನಗಳಲ್ಲಿ ಜಿಪಿಎಸ್ ವ್ಯವಸ್ಥೆ ಅಳವಡಿಸಲಾಗಿದೆ ಎಂದರು. ಅಕ್ರಮ ತಡೆಗಾಗಿ 1,497 ಎಫ್‌ಐಆರ್‌ ದಾಖಲಿಸಿ, ಸುಮಾರು ₹50 ಕೋಟಿ ಮೌಲ್ಯದ ಪಡಿತರ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.ಎಂಎಸ್‌ಪಿ ಯೋಜನೆಯಡಿ 5.60 ಲ...
‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ
ಮಂಡ್ಯ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜಕೀಯದಿಂದ ನಿವೃತ್ತಿ ಪಡೆಯುವ ನಿರ್ಧಾರವನ್ನು ಬಹಿರಂಗಪಡಿಸಿದರು. ಆದರೆ, ಬೆಂಬಲಿಗರು "ಇನ್ನೂ 10 ವರ್ಷ ರಾಜಕೀಯದಲ್ಲಿ ಇರಬೇಕು" ಎಂದು ಒತ್ತಾಯಿಸಿದರು. ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸುದೀರ್ಘವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವುದರಿಂದ ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ. "ನನಗೆ ಈಗ 79 ವರ್ಷ. ಸರ್ಕಾರದ ಅವಧಿ ಮುಗಿಯುವ ವೇಳೆಗೆ 81-82 ವರ್ಷ ವಯಸ್ಸಾಗಿರುತ್ತದೆ. ಹಿಂದಿನಂತೆ ಆರೋಗ್ಯ ಮತ್ತು ಉತ್ಸಾಹ ಇರುವುದಿಲ್ಲ. 2028ರ ವೇಳೆಗೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳಲಿದ್ದು, ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಸಮಯ ಬಂದಿದೆ" ಎಂದು ಅವರು ಹೇಳಿದ್ದಾರೆ.1978ರಲ್ಲಿ ತಾಲೂಕು ಮಂಡಳಿ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದ ಸಿದ್...
ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

ಪ್ರಮುಖ ಸುದ್ದಿ, ಸಿನಿಮಾ
ಚೆನ್ನೈ: ನಿರ್ದೇಶಕ ವೆಂಕಿ ಅಟ್ಲೂರಿ ಅವರ ಬಹುನಿರೀಕ್ಷಿತ ಆಕ್ಷನ್-ಫ್ಯಾಮಿಲಿ ಎಂಟರ್‌ಟೈನರ್ 'ವಿಶ್ವನಾಥ್ & ಸನ್ಸ್' ಚಿತ್ರದ 'ದಿ ವೆಡ್ಡಿಂಗ್ ಸಾಂಗ್' ಬಿಡುಗಡೆಯಾಗಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಮದುವೆ ಸಂಭ್ರಮವನ್ನು ಬಿಂಬಿಸುವ ಈ ಹಾಡಿನಲ್ಲಿ ನಟ ಸೂರ್ಯ ಮತ್ತು ಮಮಿತಾ ಬೈಜು ಅವರ ನೃತ್ಯ ಪ್ರಮುಖ ಆಕರ್ಷಣೆಯಾಗಿದೆ. ವಿಶೇಷವೆಂದರೆ, ಈ ಹಾಡಿಗೆ ಸೂರ್ಯ ಅವರೇ ಧ್ವನಿ ನೀಡಿದ್ದು, ಹಾಡಿಗೆ ಮತ್ತಷ್ಟು ವಿಶೇಷತೆ ತಂದಿದ್ದಾರೆ.ರಾಷ್ಟ್ರೀಯ ಪ್ರಶಸ್ತಿ ವಿಜೇತ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸಿದ್ದು, ಕೆನ್ ಕರುಣಾಸ್ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಸೂರ್ಯ ಹಾಡಿರುವ ಬಗ್ಗೆ ಜೂನ್ ತಿಂಗಳಲ್ಲೇ ಜಿ.ವಿ. ಪ್ರಕಾಶ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಬ್ಲಾಕ್‌ಬಸ್ಟರ್ ನಿರ್ದೇಶಕ ವೆಂಕಿ ಅಟ್ಲೂರಿ ನಿರ್ದೇಶಿಸಿರುವ ಈ ಚಿತ್ರವನ್ನು ಸೂರ್ಯದೇವರ ನಾಗ ವಂಶಿ ಮತ್ತು ಸಾಯಿ ಸೌಜನ್ಯ ನಿರ್ಮಿಸಿದ್ದಾರೆ. ಭಾವನೆ, ಹಾಸ್ಯ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ ಇದಾಗಿದೆ. https://youtu.be/rfza9kCybEs?si=yRnY1iAsh9wePmOd ಚಿತ್ರದ ಟೀಸರ್ ...
ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

ಪ್ರಮುಖ ಸುದ್ದಿ, ಸಿನಿಮಾ
ಚೆನ್ನೈ: ನಿರ್ದೇಶಕ ಶಹದ್ ಅವರ ಬಹುನಿರೀಕ್ಷಿತ ಮಲಯಾಳಂ ತನಿಖಾ ಥ್ರಿಲ್ಲರ್ 'ಪ್ರಧಮ ದೃಷ್ಟಿಯ ಕುಟ್ಟಕ್ಕರ್' ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. 11 ಐಕಾನ್ಸ್ ಫಿಲ್ಮ್ ಪ್ರೊಡಕ್ಷನ್ಸ್ ಸಂಸ್ಥೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟರ್ ಹಂಚಿಕೊಂಡಿದ್ದು, "ಎಫ್‌ಐಆರ್ ದಾಖಲಾಗಿದೆ, ಶೀಘ್ರದಲ್ಲೇ ಚಾರ್ಜ್‌ಶೀಟ್ ಬರಲಿದೆ" ಎಂಬ ಟ್ಯಾಗ್‌ಲೈನ್ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ. ಮೋಷನ್ ಪೋಸ್ಟರ್‌ನಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಗಂಭೀರ ಭಾವದಲ್ಲಿ ಕಾಣಿಸಿಕೊಂಡಿದ್ದು, ನಟಿ ಪಾರ್ವತಿ ತಿರುವೋತ್ತು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಮೂಲಗಳ ಪ್ರಕಾರ, ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ ಪೊಲೀಸ್ ಅಧಿಕಾರಿಯ ಪತ್ನಿಯಾಗಿ ಬಳಿಕ ಪೊಲೀಸ್ ಇಲಾಖೆಗೆ ಸೇರುವ ಮಹಿಳೆಯ ಪಾತ್ರವನ್ನು ಅವರು ನಿರ್ವಹಿಸಿದ್ದಾರೆ.ಚಿತ್ರದಲ್ಲಿ ಮ್ಯಾಥ್ಯೂ ಥಾಮಸ್, ಉನ್ನಿಮಯ ಪ್ರಸಾದ್, ವಿಜಯ ರಾಘವನ್, ಸಿದ್ಧಾರ್ಥ್ ಭರತನ್ ಮತ್ತು ಅಜೀಸ್ ನೆಡುಮಂಗಡ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 'ಪ್ರಕಾಶನ್ ಪರಕ್ಕಟ್ಟೆ' ಖ್ಯಾತಿಯ ಶಹದ್ ನಿರ್ದೇಶಿಸಿರುವ ಈ ಚಿತ್ರದ ಕಥೆಯನ್ನು ಪಿ.ಎಸ್. ಸುಬ್ರಮಣಿಯ...
ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕಾವೇರಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಕುರಿತು ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ನೇತೃತ್ವದ ನಿಯೋಗ ಆಗಸ್ಟ್ 3ರಂದು ಕರ್ನಾಟಕಕ್ಕೆ ಆಗಮಿಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದಶಕಗಳಿಂದ ಮುಂದುವರಿದಿರುವ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಘರ್ಷದ ಬದಲು ಸಂವಾದವೇ ಶಾಶ್ವತ ಪರಿಹಾರ ನೀಡಬಲ್ಲದು ಎಂದು ಅಭಿಪ್ರಾಯಪಟ್ಟಿದ್ದಾರೆ. ಮಳೆಯ ಕೊರತೆ ಇರುವ ವರ್ಷಗಳಲ್ಲಿ ಜಲಾಶಯಗಳಲ್ಲಿನ ನೈಜ ನೀರಿನ ಸಂಗ್ರಹವನ್ನು ಆಧರಿಸಿ ವೈಜ್ಞಾನಿಕ ಹಾಗೂ ನ್ಯಾಯಸಮ್ಮತ 'ಡಿಸ್ಟ್ರೆಸ್ ಶೇರಿಂಗ್' (Distress Sharing Formula) ಸೂತ್ರವನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಜೊತೆಗೆ, ಬೆಂಗಳೂರು ಸೇರಿದಂತೆ ಕರ್ನಾಟಕದ ನಗರಗಳ ಹಾಗೂ ತಮಿಳುನಾಡಿನ ಕಾವೇರಿ ಅಚ್ಚುಕಟ್ಟು ಪ್ರದೇಶದ ಕುಡಿಯುವ ನೀರಿನ ಅಗತ್ಯವನ್ನು ರಾಜಕೀಯದಿಂದ ...
ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ದೇಶದ ವಿದ್ಯಾರ್ಥಿಗಳ ಮತ್ತು ಯುವ ಜನಾಂಗದ ಐತಿಹಾಸಿಕ ಪ್ರತಿಭಟನೆಯ ನಂತರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಶಿಕ್ಷಣ ಸಚಿವರ ರಾಜಿನಾಮೆಯನ್ನು ರಾಜಕೀಯ ಕಾರಣಗಳಿಗೆ ಹೋಲಿಕೆ ಮಾಡಲು ಹೋಗಿ ಕರ್ನಾಟಕ ಬಿಜೆಪಿ ಬಾಲ ಭವನದ ಅಧ್ಯಕ್ಷ ವಿಜಯೇಂದ್ರ ಅವರು ತಮ್ಮ ವ್ಯಕ್ತಿತ್ವಕ್ಕೆ ತಾವೇ ಮಸಿ ಬಳಿದುಕೊಂಡಿರುತ್ತಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ವಿಜಯೇಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು, ರಾಜಕೀಯ ಹೇಳಿಕೆ ನೀಡುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ಗೃಹ ಸಚಿವರಾದ ಪ್ರಿಯಾಂಕ ಖರ್ಗೆ ರವರ ಹೆಸರುಗಳನ್ನು ಬಳಸಿಕೊಂಡು ಟೀಕೆ ಮಾಡುವ ನೆಪದಲ್ಲಿ ತಾವೇ ಬೆತ್ತಲಾಗಿರುತ್ತಾರೆ ಎಂದು ವಿಜಯೇಂದ್ರ ಬಗ್ಗೆ ಲೇವಡಿ ಮಾಡಿದ್ದಾರೆ.ದೇಶದ 11 ವರ್ಷಗಳ ಕೇಂದ್ರ ಬಿಜೆಪಿ ಸರ್ಕಾರದ ನೀತಿಗೆಟ್ಟ ಆಡಳಿತದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮಂಕಾಗುವುದರ ಜೊತೆಗೆ, ನೂರಾರು ವಿದ್ಯಾರ್ಥಿಗಳು ತಮ್ಮ ಪ...