ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು
ಬೆಂಗಳೂರು: ಕಾಂಗ್ರೆಸ್ನ ಭ್ರಷ್ಟಾಚಾರದಿಂದಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪಿಎಸ್ಐ ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇನ್ನು ಸಿಎಂ ಸ್ಥಾನದಲ್ಲಿ ಉಳಿಯಲು ಯಾವುದೇ ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬಿಜೆಪಿ-ಜೆಡಿಎಸ್ ಕೈಗೊಂಡಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಶೋಕ್, ಬಿಜೆಪಿಯನ್ನು ಜನರು ವಿಧಾನಸಭೆಗೆ ಕಳುಹಿಸಿರುವುದೇ ಭ್ರಷ್ಟಾಚಾರವನ್ನು ಮಟ್ಟ ಹಾಕಲು. ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ 14 ಸೈಟು ಕೊಳ್ಳೆ ಹೊಡೆದ ನಂತರ ಅವರ ಬೆಂಬಲಿಗರು 300 ಸೈಟು ದೋಚಿದ್ದಾರೆ. ಅವರ ಪಕ್ಷದವರೇ 3-4 ಸಾವಿರ ಕೋಟಿ ರೂ. ಲೂಟಿಯಾಗಿದೆ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ದಲಿತರ ಜಮೀನಿನ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ರಾಜ್ಯಪಾಲರಿಗೆ ನೋಟಿಸ್ ಕೊಡಲು ಅಧಿಕಾರವಿದೆಯಾ ಎಂದು ಇವರು ಪ್ರಶ್ನೆ ಮಾಡುತ್ತಾರೆ. ಬಿ.ಎಸ...