Saturday, August 8

Author: info@rajasdigital.com

ಆ.24ರೊಳಗೆ ಡಿಸಿಸಿಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ ಪೂರ್ಣ: ಕೆ.ಸಿ. ವೇಣುಗೋಪಾಲ್

ಆ.24ರೊಳಗೆ ಡಿಸಿಸಿಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ ಪೂರ್ಣ: ಕೆ.ಸಿ. ವೇಣುಗೋಪಾಲ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ನ ಸಂಘಟನೆ ಬಲಪಡಿಸುವ ಉದ್ದೇಶದಿಂದ ದೇಶಾದ್ಯಂತ ನಡೆಯುತ್ತಿರುವ 'ಸಂಘಟನ್ ಸೃಜನ್' ಅಭಿಯಾನದ ಅಂಗವಾಗಿ ಕರ್ನಾಟಕದಲ್ಲಿ ಆಗಸ್ಟ್ 24ರೊಳಗೆ ಜಿಲ್ಲಾ ಕಾಂಗ್ರೆಸ್ (ಡಿಸಿಸಿ) ಅಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಇಂದಿರಾ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಬೆಳಗಾವಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಪಕ್ಷವನ್ನು ಬೂತ್ ಮಟ್ಟದಿಂದ ಪಿಸಿಸಿ ಮಟ್ಟದವರೆಗೆ ಬಲಪಡಿಸುವ ಉದ್ದೇಶದಿಂದ ಈ ಅಭಿಯಾನ ನಡೆಸಲಾಗುತ್ತಿದೆ ಎಂದರು. ದೇಶದ 1,054 ಜಿಲ್ಲೆಗಳ ಪೈಕಿ 762 ಜಿಲ್ಲೆಗಳಲ್ಲಿ ಈಗಾಗಲೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ ಪೂರ್ಣಗೊಂಡಿದೆ. ಜಿಲ್ಲಾಧ್ಯಕ್ಷರ ನೇಮಕದ ಬಳಿಕ ಡಿಸಿಸಿ, ಬ್ಲಾಕ್, ಮಂಡಲ ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿಸಿದರು.ಕರ್ನಾಟಕದ 40 ಜಿಲ್ಲೆಗಳಿಗೆ ಕಾಂಗ್ರೆಸ್‌ನ ಹಿರಿಯ ನಾಯಕರು, ಸಂಸದರು, ಮಾಜಿ ಸಚಿವರು ಹಾಗೂ ಶಾಸಕರನ್ನು ವೀಕ್ಷಕರನ್ನಾಗಿ...
ನೀಟ್ ವಿವಾದ: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಬಗ್ಗೆ ತನಿಖೆಗೆ ಕೆ.ಸಿ. ವೇಣುಗೋಪಾಲ್ ಆಗ್ರಹ

ನೀಟ್ ವಿವಾದ: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಬಗ್ಗೆ ತನಿಖೆಗೆ ಕೆ.ಸಿ. ವೇಣುಗೋಪಾಲ್ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆಗ್ರಹಿಸಿದ್ದಾರೆ. ಇಂದಿರಾ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಪ್ರತಿಭಟನೆಗಳ ಸಂದರ್ಭದಲ್ಲಿ ಮೃತಪಟ್ಟ ನೀಟ್ ಅಭ್ಯರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. "ಇದು ಕಾಂಗ್ರೆಸ್‌ನ ಬೇಡಿಕೆಯಷ್ಟೇ ಅಲ್ಲ, ದೇಶದ ವಿದ್ಯಾರ್ಥಿಗಳು ಮತ್ತು ಸಂತ್ರಸ್ತ ಕುಟುಂಬಗಳ ಧ್ವನಿಯಾಗಿದೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಒಕ್ಕೊರಲಿನ ಆಗ್ರಹವಾಗಿದೆ" ಎಂದು ಹೇಳಿದರು.ಈ ವೇಳೆ ಕಾಂಗ್ರೆಸ್‌ನ 'ಸಂಘಟನ್ ಸೃಜನ್' ಅಭಿಯಾನದ ಕುರಿತು ಮಾಹಿತಿ ನೀಡಿದ ವೇಣುಗೋಪಾಲ್, ದೇಶದಾದ್ಯಂತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಕರ್ನಾಟಕದಲ್ಲಿ ...
‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವವರಿಗೆ ನೀಟ್ ಹೋರಾಟದಲ್ಲಿ ಹೆಣ್ಣುಮಕ್ಕಳ ಬಟ್ಟೆ ಹರಿದ ಘಟನೆ ಕಾಣಲಿಲ್ಲವೇ? ಪದ್ಮರಾಜ್ ಪ್ರಶ್ನೆ

‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವವರಿಗೆ ನೀಟ್ ಹೋರಾಟದಲ್ಲಿ ಹೆಣ್ಣುಮಕ್ಕಳ ಬಟ್ಟೆ ಹರಿದ ಘಟನೆ ಕಾಣಲಿಲ್ಲವೇ? ಪದ್ಮರಾಜ್ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ
​ಮಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಪರಿಣಾಮವಾಗಿ ಇಂದು ದೇಶಾದ್ಯಂತ ವಿದ್ಯಾರ್ಥಿಗಳು ರಸ್ತೆಗಿಳಿಯುವಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ತೀವ್ರವಾಗಿ ಕಿಡಿಕಾರಿದ್ದಾರೆ. ​ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಜತೆ ನಡೆದುಕೊಂಡ ರೀತಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದರು. ಪ್ರಶ್ನೆ ಪತ್ರಿಕೆ ಸೋರಿಕೆಯ ನೈತಿಕ ಹೊಣೆಯನ್ನು ಶಿಕ್ಷಣ ಸಚಿವರೇ ಹೊರಬೇಕಿದೆ ಎಂದ ಪದ್ಮರಾಜ್, ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯವನ್ನು ಜಗತ್ತೇ ನೋಡಿದೆ. ಸ್ವಾತಂತ್ರ್ಯ ಸಂಗ್ರಾಮದ ಕಾಲದ ಅಮೃತಸರ ಹತ್ಯಾಕಾಂಡವನ್ನು ನೆನಪಿಸುವ ರೀತಿಯಲ್ಲಿ ಬಿಜೆಪಿ ಗೂಂಡಾಗಳನ್ನು ಬಳಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆಕ್ರೋಶ ವ್...
ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ; ರಾಷ್ಟ್ರಪತಿಯಿಂದ ಅಂಗೀಕಾರ

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ; ರಾಷ್ಟ್ರಪತಿಯಿಂದ ಅಂಗೀಕಾರ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ. ರಾಷ್ಟ್ರಪತಿ ಭವನ ಹೊರಡಿಸಿದ ಪ್ರಕಟಣೆಯಲ್ಲಿ, ಸಂವಿಧಾನದ 75ನೇ ವಿಧಿ ಅನ್ವಯ ರವನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಲಾಗಿದೆ.ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಮೊಮ್ಮಗನಾದ ಬಿಟ್ಟು, 2024ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಳಿಕ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಅವರು, ನಂತರ ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡು ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ರಾಜ್ಯಸಭಾ ಅವಧಿ ಜೂನ್ 21ರಂದು ಅಂತ್ಯಗೊಂಡಿದ್ದು, ಸಂವಿಧಾನದ ನಿಯಮದಂತೆ ಆರು ತಿಂಗಳವರೆಗೆ ಸಚಿವರಾಗಿ ಮುಂದುವರಿದಿದ್ದರು. ಬಿಜೆಪಿ ಮೂಲಗಳ ಪ್ರಕಾರ, ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆ ಮೇಲೆ...
ನೀಟ್ ವಿವಾದ: ಎನ್‌ಟಿಎ 47 ಅಧಿಕಾರಿಗಳ ವಜಾ; ಪೇಪರ್ ಲೀಕ್ ತಡೆ ಮಸೂದೆಗೆ ಸಂಪುಟ ಅನುಮೋದನೆ

ನೀಟ್ ವಿವಾದ: ಎನ್‌ಟಿಎ 47 ಅಧಿಕಾರಿಗಳ ವಜಾ; ಪೇಪರ್ ಲೀಕ್ ತಡೆ ಮಸೂದೆಗೆ ಸಂಪುಟ ಅನುಮೋದನೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ನೀಟ್-ಯುಜಿ ಪರೀಕ್ಷೆ ಅಕ್ರಮ ಆರೋಪಗಳ ನಡುವೆಯೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಎನ್‌ಟಿಎಯ ಕಾರ್ಯವೈಖರಿಯನ್ನು ಸಂಪೂರ್ಣವಾಗಿ ಸುಧಾರಿಸುವ ಪ್ರಕ್ರಿಯೆಯ ಭಾಗವಾಗಿ ಇನ್ನೂ ಕೆಲವು ಅಧಿಕಾರಿಗಳ ವಿರುದ್ಧವೂ ಶಿಸ್ತುಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಬಳಿಕ ಎನ್‌ಟಿಎ ತೀವ್ರ ಟೀಕೆಗೆ ಗುರಿಯಾಗಿದ್ದು, ಸಂಸ್ಥೆಯ ಪುನರ್‌ರಚನೆಗೆ ಆಗ್ರಹಗಳು ಕೇಳಿಬಂದಿದ್ದವು. ಆದರೆ, ಎನ್‌ಟಿಎಯನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.ಇದೇ ವೇಳೆ, ನೀಟ್ ಪರೀಕ್ಷೆ ಅಕ್ರಮವನ್ನು ವಿರೋಧಿಸಿ ದೆಹಲಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಸೇರಿದಂತೆ ಕೆಲವು ಸಂಘಟನೆಗಳು ಪ್ರತಿಭಟನೆ ಮುಂದುವರಿಸಿವೆ. ಇನ್ನೊಂದೆಡೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕಠಿಣ ಶಿಕ್ಷೆಗೆ ಅವಕಾಶ ಕ...
ನೀಟ್ Vs ಕೆಪಿಎಸ್ಸ್ಸಿ; ಕರ್ನಾಟಕದಲ್ಲಿ ‘ಹುದ್ದೆಗಳು ಮಾರಾಟಕ್ಕಿವೆ’ ಎಂದ ಅಶೋಕ್ ಗೆ ಹಿಂದಿನ ಸರ್ಕಾರದ PSI ಹಗರಣ ನೆನಪಿಸಿದ ಕಾಂಗ್ರೆಸ್

ನೀಟ್ Vs ಕೆಪಿಎಸ್ಸ್ಸಿ; ಕರ್ನಾಟಕದಲ್ಲಿ ‘ಹುದ್ದೆಗಳು ಮಾರಾಟಕ್ಕಿವೆ’ ಎಂದ ಅಶೋಕ್ ಗೆ ಹಿಂದಿನ ಸರ್ಕಾರದ PSI ಹಗರಣ ನೆನಪಿಸಿದ ಕಾಂಗ್ರೆಸ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ, ಕರ್ನಾಟಕದಲ್ಲಿ ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಆರೋಪವನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ವಿಚಾರ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಟ್ವೀಟ್ ಸಮರಕ್ಕೆ ಕಾರಣವಾಗಿದೆ. ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು, ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ವಿದ್ಯಾರ್ಥಿಗಳ ಪರ ಧ್ವನಿ ಎತ್ತುತ್ತಿದ್ದರೂ, ಕರ್ನಾಟಕದಲ್ಲಿ ಕೆಪಿಎಸ್‌ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರದ ಗಂಭೀರ ಆರೋಪಗಳ ಬಗ್ಗೆ ಮೌನವಾಗಿದ್ದಾರೆ ಎಂದು ಟೀಕಿಸಿದ್ದಾರೆ. ಪಶುವೈದ್ಯಕೀಯ ಅಧಿಕಾರಿಗಳ ನೇಮಕಾತಿಯಲ್ಲಿ ಹಣದ ವ್ಯವಹಾರ ನಡೆದಿದೆ ಎಂಬ ಆರೋಪದ ಕುರಿತು ಪಾರದರ್ಶಕ ಹಾಗೂ ಕಾಲಮಿತಿಯ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.CASH FOR JOBS! Has Congress Turned Government Recruitment into an Auction? Crocodile Tears in Delhi, Silence Over Karnataka's KPSC Sc...
ಸಂಸತ್ತಿನಲ್ಲಿ ನೀಟ್ ಕೋಲಾಹಲ; ಸಂಸತ್ ನಲ್ಲಿ ‘ಇಂಡಿಯಾ’ ಕೋಲಾಹಲ

ಸಂಸತ್ತಿನಲ್ಲಿ ನೀಟ್ ಕೋಲಾಹಲ; ಸಂಸತ್ ನಲ್ಲಿ ‘ಇಂಡಿಯಾ’ ಕೋಲಾಹಲ

ದೇಶ, ಪ್ರಮುಖ ಸುದ್ದಿ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಶುಕ್ರವಾರವೂ ಸಂಸತ್ ಆವರಣದಲ್ಲಿ ಪ್ರತಿಭಟನೆ ಮುಂದುವರಿಸಿವೆ. ಇಂಡಿಯಾ ಒಕ್ಕೂಟ ಹಾಗೂ ಕಾಂಗ್ರೆಸ್ ಸಂಸದರು ಸಂಸತ್ ಭವನದ ಮಕರ ದ್ವಾರದಲ್ಲಿ ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ, ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದ್ದು, ದೇಶಾದ್ಯಂತ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಕರೆ ನೀಡಿದೆ. ವಿದ್ಯಾರ್ಥಿಗಳು ಮೆಟ್ರೋ ಹಾಗೂ ಬಸ್ ನಿಲ್ದಾಣಗಳಿಂದ ಜಂತರ್ ಮಂತರ್‌ಗೆ ತೆರಳಿದ ದೃಶ್ಯಗಳು ಕಂಡುಬಂದವು.ಪ್ರತಿಪಕ್ಷಗಳ ನಿರಂತರ ಗದ್ದಲದಿಂದ ಸಂಸತ್ ಮುಂಗಾರು ಅಧಿವೇಶನದ ಐದನೇ ದಿನವೂ ಲೋಕಸಭೆಯಲ್ಲಿ ಯಾವುದೇ ಮಹತ್ವದ ಕಲಾಪ ನಡೆಯದೆ ಸದನವನ್ನು ಸೋಮವಾರದವರೆಗೆ ಮುಂದೂಡಲಾಯಿತು. ರಾಜ್ಯಸಭೆಯಲ್ಲೂ ಗದ್ದಲದ ವಾತಾವರಣ ಮುಂದುವರಿಯಿತು. ಪ್ರತಿಭಟನೆಗೂ ಮುನ್ನ ಕಾಂಗ್ರೆಸ್ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಪುನರುಚ್ಚರಿಸಿತು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ವಿದ್ಯಾರ...
ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

ಪ್ರಮುಖ ಸುದ್ದಿ, ಸಿನಿಮಾ
ಚೆನ್ನೈ: ಭಾರೀ ನಿರೀಕ್ಷೆ ಮೂಡಿಸಿದ್ದ ತಮಿಳು ಚಿತ್ರ ‘ಜನ ನಾಯಗನ್’ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಆರಂಭ ಪಡೆಯಲು ವಿಫಲವಾಗಿದೆ. ಮೊದಲ ದಿನವೇ 100 ಕೋಟಿ ರೂ.ಗೂ ಹೆಚ್ಚು ಗಳಿಕೆ ಮಾಡಲಿದೆ ಎಂಬ ಅಂದಾಜು ಇದ್ದರೂ, ಚಿತ್ರವು ವಿಶ್ವದಾದ್ಯಂತ 78.27 ಕೋಟಿ ರೂ. ಗ್ರಾಸ್ ಕಲೆಕ್ಷನ್ ಗಳಿಸಿದೆ. ಗುರುವಾರ ದೇಶಾದ್ಯಂತ 13,067 ಪ್ರದರ್ಶನ ಕಂಡ ಚಿತ್ರವು ಶೇ. 41.6ರಷ್ಟು ಥಿಯೇಟರ್ ಆಕ್ಯುಪೆನ್ಸಿ ದಾಖಲಿಸಿದೆ. ಭಾರತದಲ್ಲಿ 41 ಕೋಟಿ ರೂ. ನೆಟ್ ಕಲೆಕ್ಷನ್ ಗಳಿಸಿದ್ದು, ಇದರಲ್ಲಿ 36.50 ಕೋಟಿ ರೂ. ತಮಿಳು ಆವೃತ್ತಿಯಿಂದಲೇ ಬಂದಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿತ್ರದ ಒಟ್ಟು 48.27 ಕೋಟಿ ರೂ. ಗ್ರಾಸ್ ಗಳಿಕೆಯಾಗಿದೆ. ವಿದೇಶಿ ಮಾರುಕಟ್ಟೆಯಲ್ಲಿ ಚಿತ್ರವು 30 ಕೋಟಿ ರೂ. ಗ್ರಾಸ್ ಗಳಿಕೆ ಮಾಡಿದ್ದು, ದೇಶೀಯ ಹಾಗೂ ಸಾಗರೋತ್ತರ ಮಾರುಕಟ್ಟೆ ಸೇರಿ ಒಟ್ಟು 78.27 ಕೋಟಿ ರೂ. ಸಂಗ್ರಹಿಸಿದೆ.ಚಿತ್ರದ ಮೊದಲ ದಿನದ ಗಳಿಕೆಗೆ ಪೈರಸಿ ದೊಡ್ಡ ಹೊಡೆತ ನೀಡಿದೆ ಎನ್ನಲಾಗುತ್ತಿದೆ. ಬಿಡುಗಡೆಯ ಮುನ್ನವೇ ಚಿತ್ರದ ಪೈರಸಿ ಆವೃತ್ತಿ ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವುದು ಚಿತ್ರತಂಡದ ಆತಂಕಕ್ಕೆ ಕಾರಣವಾಗಿದೆ. ಇದರ...
ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

ಪ್ರಮುಖ ಸುದ್ದಿ, ವಿದೇಶ
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಅಮೆರಿಕ ಸೇನೆ ಸತತ 13ನೇ ರಾತ್ರಿ ಇರಾನ್‌ನ ಸೇನಾ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. CENTCOM ಪ್ರಕಾರ, ಇರಾನ್‌ನ ಸೇನಾ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳು, ಡ್ರೋನ್ ಸಂಗ್ರಹ ಕೇಂದ್ರಗಳು, ಸಂವಹನ ಜಾಲಗಳು, ಕರಾವಳಿ ನಿಗಾ ವ್ಯವಸ್ಥೆಗಳು ಹಾಗೂ ಸಮುದ್ರ ಕಾರ್ಯಾಚರಣೆ ಸಾಮರ್ಥ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಐಆರ್‌ಜಿಸಿ (IRGC) ವಾಣಿಜ್ಯ ಹಡಗುಗಳಿಗೆ ಒಡ್ಡುತ್ತಿರುವ ಬೆದರಿಕೆಯನ್ನು ತಗ್ಗಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಮೆರಿಕ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ಐಆರ್‌ಜಿಸಿ, ಹಾರ್ಮುಜ್ ಜಲಸಂಧಿಯ ಮೇಲಿನ ನಿಯಂತ್ರಣ ತಮ್ಮದೇ ಆಗಿದ್ದು, ಇರಾನ್‌ನೊಂದಿಗೆ ಸಮನ್ವಯವಿಲ್ಲದೆ ಸುರಕ್ಷಿತ ಸಂಚಾರ ಸಾಧ್ಯವಿಲ್ಲ ಎಂದು ಪುನರುಚ್ಚರಿಸಿದೆ.ದಾಳಿಯ ಬಳಿಕ ಕ್ವೆಶ್ಮ್ ದ್ವೀಪ, ಅಹ್ವಾಝ್, ಅಂಡಿಮೆಶ್ಕ್, ಒಮಿದಿಯೆಹ್ ಹಾಗೂ ಬಂದರ್ ಅಬ್ಬಾಸ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸ್ಫೋಟಗಳು ಸಂಭವಿಸಿರುವುದಾಗಿ ವರದಿಯಾಗಿದೆ. ...
ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ; ಹಲವೆಡೆ ಶಾಲೆಗಳಿಗೆ ರಜೆ

ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ; ಹಲವೆಡೆ ಶಾಲೆಗಳಿಗೆ ರಜೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭಾರೀ ಮಳೆಯ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಶುಕ್ರವಾರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ.ಜುಲೈ 25ರಂದು ಕೂಡ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚ...