Saturday, March 28

Author: info@rajasdigital.com

‘ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ’

‘ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ’

Others
ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ.ಡಾ. ಬಿ.ಆರ್. ಅಂಬೇಡ್ಕರ್ ಫಿಸಿಯೋಥೆರಪಿ ಕಾಲೇಜಿನಲ್ಲಿ ಶುಕ್ರವಾರ ಹೊಸ ಫಿಸಿಯೋಥೆರಪಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ, ಡಾ. ಪಾಟೀಲ್, ಕೌಶಲ್ಯಪೂರ್ಣ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವೃತ್ತಿಪರರಿಗೆ ಅಂತಾರಾಷ್ಟ್ರೀಯ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದೇಶಿ ಭಾಷಾ ಒತ್ತಿ ಹೇಳಿದರು.“ತರಬೇತಿ ಪಡೆದ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಜರ್ಮನಿ, ಇಟಲಿ, ಜಪಾನ್ ಮತ್ತು ಯುಎಇ ಆಸ್ಪತ್ರೆಗಳಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಈ ದೇಶದವರು ನಮ್ಮನ್ನು ಸಂಪರ್ಕಿಸಿದ್ದಾರೆ. ಈ ಆಸ್ಪತ್ರೆಗಳಿಗೆ ಅವರ ಸ್ಥಳೀಯ ಭಾಷೆ ತಿಳಿದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ ಮತ...
ಬೆಲೆ ಏರಿಕೆ ಸಮರ; ಬಿಜೆಪಿಯಿಂದ ಹೋರಾಟ

ಬೆಲೆ ಏರಿಕೆ ಸಮರ; ಬಿಜೆಪಿಯಿಂದ ಹೋರಾಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಾಲು ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ.ಈ ಕುರಿತು ಮಾಹಿತಿ ಒದಗಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಯುಗಾದಿ ಹಬ್ಬದ ಕಳೆದ ನಂತರ ಇದರ ದಿನಾಂಕ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.ಈವರೆಗೆ ಹೆಚ್ಚು ಮಾಡಿದ 9 ರೂ. ನಲ್ಲಿ ಲಾಭವನ್ನು ರೈತರಿಗೆ ನೀಡಿಲ್ಲ. ಪ್ರೋತ್ಸಾಹಧನವನ್ನು ಇನ್ನೂ ಬಾಕಿ ಉಳಿಸಿಕೊಳ್ಳಲಾಗಿದೆ. ಈಗ ಹೆಚ್ಚು ಮಾಡಿದ ದರದಲ್ಲಿ ಎಷ್ಟು ಸರ್ಕಾರಕ್ಕೆ ಹೋಗಲಿದೆ ಎಂಬುದು ಗೊತ್ತಿಲ್ಲ. ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಪ್ರೋತ್ಸಾಹಧನ ಹೆಚ್ಚಳ ಕುರಿತು ಘೋಷಣೆ ಮಾಡಿತ್ತು. ಅದನ್ನು ಇನ್ನೂ ಜಾರಿ ಮಾಡಿಲ್ಲ ಎಂದರು.ಬಿಜೆಪಿ ಅವಧಿಯಲ್ಲಿ ಮಾರ್ಗಸೂಚಿ ದರ ಇಳಿಸಲಾಗಿತ್ತು. ಬಸ್‌ ಟಿಕೆಟ್‌ ದರ, ನೀರಿನ ದರ ಏರಿಸಿರಲಿಲ್ಲ. ಹಿಂದಿನ ಯಾವುದೇ ಮುಖ್ಯಮಂತ್ರಿ ಮಾಡದಷ್ಟು ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ. ಅಂದರೆ 65% ನಷ್ಟು ಸಾಲವನ್ನು ಇವರೊಬ್ಬರೇ ಮಾಡಿದ್ದಾರೆ ಎಂದರು.ಬಿಜೆಪಿಯಲ್ಲಿ ನಾವೆಲ್ಲರೂ ಒಂದಾಗಿ ಹೋಗಬೇಕು ಎಂಬ ಅಭಿಪ್ರಾಯ ನನ್ನದು. ಪಕ್ಷದ ಹಿರಿಯರು ಕೈಗೊಂಡ ತೀರ್ಮ...
ಹಾಲಿನ ದರ ಏರಿಕೆ ಬದಲು ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದು ಮಾಡಿದ್ದರೆ 150 ಕೋಟಿ ರೂ ಉಳಿಸಬಹುದು

ಹಾಲಿನ ದರ ಏರಿಕೆ ಬದಲು ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದು ಮಾಡಿದ್ದರೆ 150 ಕೋಟಿ ರೂ ಉಳಿಸಬಹುದು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು,: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್‌ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್‌ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್‌ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು. ಆದರೆ ಬಜೆಟ್‌ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ. ಬಜೆಟ್‌ ನಂತರ ಎಲ್ಲಾ ಮಾಧ್ಯಮಗಳಲ್ಲಿ ಶಹಭಾಸ್‌ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ. ಮೋಸ ಮಾಡುವುದರಲ್ಲಿ ಸಿದ್ದರಾಮಯ್ಯ ನಂ.1 ಆಗಿದ್ದಾರೆ. ಧೈರ್ಯ ಇದ್ದಿದ್ದರೆ ತೆರಿಗೆ ಹೆಚ್ಚಳ ಕುರಿತು ಬಜೆಟ್‌ನಲ್ಲೇ ಘೋಷಿಸಬೇಕಿತ್ತು ಎಂದರು.ಇಡೀ ಆರ್ಥಿಕತೆ ವಿದ್ಯುತ್‌ ಹಾಗೂ ಪೆಟ್ರೋಲ್‌ ಮೇಲೆ ಅವಲಂಬಿತವಾಗಿದೆ. ಇದರ ದರ ಏರಿಕೆಯಾದರೆ ಎಲ್ಲ ವಸ್ತುಗಳ ದರ ಹೆಚ್ಚಾಗುತ...
ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ರನ್ಯಾ ಜಾಮೀನು ಅರ್ಜಿ ವಜಾ..

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ರನ್ಯಾ ಜಾಮೀನು ಅರ್ಜಿ ವಜಾ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನಕ್ಕೊಳಗಾಗಿರುವ ಚಿತ್ರ ನಟಿ ರನ್ಯಾ ರಾವ್‌ ಅವರ ಜಾಮೀನು ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಜಾಮೀನು ಮಂಜೂರು ಮಾಡಲು ಸೆಷನ್ಸ್ ಕೋರ್ಟ್ ನಿರಾಕರಿಸಿದೆ. ಈ ಕುರಿತಂತೆ ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ 64ನೇ ಸಿಸಿಹೆಚ್​​ ಕೋರ್ಟ್​ ಗುರುವಾರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಪ್ರಕಟಿಸಿದೆ....
ಪ್ಯಾರಾ ಮೆಡಿಕಲ್ ಕಾಲೇಜುಗಳಿಗೆ ಶಾಕ್.. ಕಳಪೆ ಮೂಲಸೌಕರ್ಯ ಹೊಂದಿರುವ ಪ್ಯಾರಾ ಮೆಡಿಕಲ್ ಸಂಸ್ಥೆ ಮುಚ್ಚಲು ಸರ್ಕಾರದ ಆದೇಶ

ಪ್ಯಾರಾ ಮೆಡಿಕಲ್ ಕಾಲೇಜುಗಳಿಗೆ ಶಾಕ್.. ಕಳಪೆ ಮೂಲಸೌಕರ್ಯ ಹೊಂದಿರುವ ಪ್ಯಾರಾ ಮೆಡಿಕಲ್ ಸಂಸ್ಥೆ ಮುಚ್ಚಲು ಸರ್ಕಾರದ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ.ಮೂಲಸೌಕರ್ಯ ಮತ್ತು ಬೋಧನಾ ಮಾನದಂಡಗಳನ್ನು ಪೂರೈಸಲು ವಿಫಲವಾದ ಸಂಸ್ಥೆಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಗುರುವಾರ ವಿಕಾಸಸೌಧದಲ್ಲಿ ನಡೆದ ರಾಜ್ಯ ಪ್ಯಾರಾ-ಮೆಡಿಕಲ್ ಮಂಡಳಿಯ ಪರಿಶೀಲನಾ ಸಭೆಯಲ್ಲಿ ಸಚಿವರು, ಹಲವಾರು ಖಾಸಗಿ ಕಾಲೇಜುಗಳಲ್ಲಿನ ನ್ಯೂನತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಅಸಮರ್ಪಕ ಸೌಲಭ್ಯಗಳೊಂದಿಗೆ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಿವೆ. ಒಂದು ಸಂಸ್ಥೆಯು ನೂರಾರು ವಿದ್ಯಾರ್ಥಿಗಳಿಗೆ ಒಂದೇ ಸೂಕ್ಷ್ಮದರ್ಶಕವನ್ನು ನೀಡುತ್ತಿದೆ ಹಾಗೂ ಇನ್ನೊಂದು ಸರಿಯಾದ ಬೆಳಕಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ವರದಿ ನೀಡ...
ನಂದಿನಿ ಹಾಲಿನ ಬೆಲೆ ಏರಿಕೆಗೆ ಸಂಪುಟದಿಂದ ಗ್ರೀನ್ ಸಿಗ್ನಲ್

ನಂದಿನಿ ಹಾಲಿನ ಬೆಲೆ ಏರಿಕೆಗೆ ಸಂಪುಟದಿಂದ ಗ್ರೀನ್ ಸಿಗ್ನಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಂದಿನಿ ಹಾಲಿನ ಬೆಲೆ ಏರಿಕೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪ್ರತೀ ಲೀಟರ್ ಹಾಲಿನ ದರ 4 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಗಳಿವೆ.ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ದರ ಹೆಚ್ಚಿಸಬೇಕೆಂಬ ಹಾಲು ಒಕ್ಕೂಟಗಳ ಮನವಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿದ್ದು, ದರ ಏರಿಕೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ಏರಿಕೆ ಮಾಡಿದಂತಾಗಿದೆ....
ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಾ ಬಂದವರು ಬಿಜೆಪಿಯವರು: ಹಳೆಯ ಸನ್ನಿವೇಶಗಳನ್ನು ಮುನ್ನೆಲೆಗೆ ತಂದ ರಮೇಶ್ ಬಾಬು..

ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಾ ಬಂದವರು ಬಿಜೆಪಿಯವರು: ಹಳೆಯ ಸನ್ನಿವೇಶಗಳನ್ನು ಮುನ್ನೆಲೆಗೆ ತಂದ ರಮೇಶ್ ಬಾಬು..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆಗಾಗ್ಗೆ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರತ್ತ ಬೆರಳು ತೋರಿಸುವ ಮುನ್ನ ತಮ್ಮನ್ನು ತಾವೇ ನೋಡಿಕೊಳ್ಳಲಿ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಧ್ಯಗಳಿಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಬಾಬು, ಅನಾದಿ ಕಾಲದಿಂದಲೂ ಬಿಜೆಪಿ-ಆರೆಸ್ಸೆಸ್ ನಾಯಕರು ಸಂವಿಧಾನ ಬದಲಾವಣೆ ಬಾಗೆ ಹೇಳಿಕೊಂಡಿರುವ ಸನ್ನಿವೇಶಗಳ ಬಗ್ಗೆ ಗಮನಸೆಳೆದರು. ಸಂಘ ಪರಿವಾರದ ಮೂಲಭೂತ ಸಿದ್ಧಾಂತಗಳಿಗೆ ಅನುಗುಣವಾಗಿ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸುವ ಹಿಡನ್ ಅಜೆಂಡ ಹೊಂದಿರುವ ಬಿಜೆಪಿ, ಸಮಯಕ್ಕೆ ಅನುಗುಣವಾಗಿ ತನ್ನ ಬಣ್ಣ ಬದಲಾಯಿಸಿಕೊಂಡು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದೆ. ಜನಸಂಘದ ಕಾಲದಿಂದಲೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಆಯಾ ಸಂದರ್ಭದಲ್ಲಿ ಸಂಘ ಪರಿವಾರದ ವೇದಿಕೆಗಳಲ್ಲಿ, ನಾಯಕರ ಹೇಳಿಕೆಗಳಲ್ಲಿ ನಿರಂತರವಾಗಿ ನಮ್ಮ ದೇಶದ ಸಂವಿಧಾನವನ್ನು ಮನುಸ್ಮೃತಿಗೆ ಅನುಗುಣವಾಗಿ ಮೂಲಭೂತವಾದಕ್ಕೆ ಪೂರಕವಾಗಿ ಬದಲಾವಣೆ ಮಾಡುವ ಹೇ...
ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಮತ್ತೊಬ್ಬ ಆಭರಣ ಉದ್ಯಮಿ ಬಂಧನ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಮತ್ತೊಬ್ಬ ಆಭರಣ ಉದ್ಯಮಿ ಬಂಧನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಳ್ಳಾರಿ ಮೂಲದ ಚಿನ್ನ ವ್ಯಾಪಾರಿಯನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ.ಗೋಲ್ಡ್ ಸ್ಮಗ್ಲಿಂಗ್ ದಂಧೆ ಬೇಧಿಸುತ್ತಿರುವ ಡಿಆರ್‌ಐ ಅಧಿಕಾರಿಗಳು ಬಂಧಿತ ಆರೋಪಿ ತರುಣ್ ನೀಡಿದ ಸುಳಿವನ್ನಾಧರಿಸಿ ಬಳ್ಳಾರಿ ಮೂಲದ ಚಿನ್ನದ ವ್ಯಾಪಾರೀ ಸಾಹಿಲ್ ಜೈನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ....
ಯತ್ನಾಳ್ ಉಚ್ಚಾಟನೆ: ‘ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ’

ಯತ್ನಾಳ್ ಉಚ್ಚಾಟನೆ: ‘ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ’

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವ ಪಕ್ಷದ ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರನ್ನು ಬುಧವಾರ ಬಿಜೆಪಿ ಹೈಕಮಾಂಡ್ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಆ ಸುದ್ದಿ ಹರಡುತ್ತಿದ್ದಂತೆಯೇ ವಿಜಯೇಂದ್ರ ಬೆಂಬಲಿಗರು ಹಲವೆಡೆ ಸಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಈ ಬೆಳವಣಿಗೆ ಬಗ್ಗೆ ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಬಿ.ವೈ.ವಿಜಯೇಂದ್ರ, 'ಭಾರತೀಯ ಜನತಾ ಪಾರ್ಟಿ ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ, ಅಶಿಸ್ತಿನ ವಿರುದ್ಧ ಇಂದು ಪಕ್ಷದ ವರಿಷ್ಠರು ಕೈಗೊಂಡಿರುವ ನಿರ್ಧಾರವನ್ನು ಸಂಭ್ರಮಿಸಬಾರದೆಂದು ವಿನಂತಿಸುತ್ತೇನೆ' ಎಂದಿದ್ದಾರೆ.'ಸಂಸ್ಕಾರವಂತ ಹಾಗೂ ಶಿಸ್ತುಬದ್ಧ ಸಂಘಟನೆಯ ವ್ಯವಸ್ಥೆಯಲ್ಲಿರುವ...
ಯತ್ನಾಳ್‌ ಉಚ್ಛಾಟನೆಯ ಪ್ರತಿಧ್ವನಿ; ಬಿಜೆಪಿ ತೊರೆಯಲು ಪಂಚಮಸಾಲಿ ನಾಯಕರಿಗೆ ಸ್ವಾಮೀಜಿ ಕರೆ

ಯತ್ನಾಳ್‌ ಉಚ್ಛಾಟನೆಯ ಪ್ರತಿಧ್ವನಿ; ಬಿಜೆಪಿ ತೊರೆಯಲು ಪಂಚಮಸಾಲಿ ನಾಯಕರಿಗೆ ಸ್ವಾಮೀಜಿ ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಧಾರವಾಡ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಹೈಕಮಾಂಡ್ ನಿರ್ಧಾರದ ವಿರುದ್ಧ ಪಂಚಮಸಾಲಿ ಸಮಾಜ ಸಿಡಿದೆದ್ದಿದೆ. ಯತ್ನಾಳ್ ಅವರ ಉಚ್ಚಾಟನೆ ಖಂಡಿಸಿ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿರುವ ಶ್ರೀಗಳು, ಯತ್ನಾಳ್ ಉಚ್ಛಾಟನೆಗೆ ಬಿ.ಎಸ್‌.ಯಡಿಯೂರಪ್ಪ ಮತ್ತವರ ಕುಟುಂಬವೇ ಕಾರಣ ಎಂದು ದೂರಿದರು.ಯತ್ನಾಳ್‌ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್‌ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದು ತಮ್ಮ ಸಮೈದಾಯದ ಶಾಸಕನ ಬೆನ್ನಿಗೆ ನಿಂತಿರುವ ಶ್ರೀಗಳು, ಯತ್ನಾಳ್ ಉಚ್ಛಾಟನೆ ಆದೇಶವನ್ನು ಹೈಕಮಾಂಡ್ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪಂಚಮಸಾಲಿಗಳು ಬಿಜೆಪಿಯಿಂದ ಹೊರ ಬರಬೇಕು ಎಂದು ಕರೆ ನೀಡಿದರು.ಇದೇ ವ...