Saturday, March 28

Author: info@rajasdigital.com

ರಾಮ್ ಚರಣ್ ಹೊಸ ಸಿನಿಮಾ ‘ಪೆಡ್ಡಿ’ ಟೈಟಲ್ ರಿವೀಲ್

ರಾಮ್ ಚರಣ್ ಹೊಸ ಸಿನಿಮಾ ‘ಪೆಡ್ಡಿ’ ಟೈಟಲ್ ರಿವೀಲ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ನಟ ರಾಮ್ ಚರಣ್ ಅವರ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಈವರೆಗೂ ‘RC16’ ಎನ್ನುವ ತಾತ್ಕಾಲಿಕ ಹೆಸರನ್ನು ಇಡಲಾಗಿತ್ತು. ಇದೀಗ (ಮಾರ್ಚ್​ 27) ರಾಮ್ ಚರಣ್ ಅವರ ಜನ್ಮದಿನದಂದು ಈ ಸಿನಿಮಾದ ಟೈಟಲ್ ಬಿಡುಗಡೆ ಮಾಡಲಾಗಿದೆ. ಚಿತ್ರಕ್ಕೆ ‘ಪೆಡ್ಡಿ’ ಎನ್ನುವ ಟೈಟಲ್ ಬಿಡುಗಡೆಯಾಗಿದೆ. ಈ ಸಿನಿಮಾವನ್ನು ಬುಚಿ ಬಾಬು ಸನಾ ನಿರ್ದೇಶಿಸಲಿದ್ದಾರೆ.https://www.youtube.com/watch?v=a8PaoH-Wbyg 
“ಲಗಾಮಿಲ್ಲದ ಕುದುರೆ ಆಗಿದ್ದೀರಿ- ಹೊಸ ಪಕ್ಷ ಕಟ್ಟಿ”: ಯತ್ನಾಳ್’ಗೆ ಬೆಂಬಲಿಗರ ಆಗ್ರಹ

“ಲಗಾಮಿಲ್ಲದ ಕುದುರೆ ಆಗಿದ್ದೀರಿ- ಹೊಸ ಪಕ್ಷ ಕಟ್ಟಿ”: ಯತ್ನಾಳ್’ಗೆ ಬೆಂಬಲಿಗರ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಟಾವೋ ಎನ್ನುತ್ತಾ ಬಿಜೆಪಿ ಪಾಳಯದಲ್ಲಿ ನಿರಂತರ ಸಂಚಲನ ಸೃಷ್ಟಿಸುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಇದೀಗ ಬಿಜೆಪಿಯಿಂದ ಹೊರಗೆ ಉಳಿಯುವಂತಾಗಿದೆ. ಯತ್ನಾಳ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಹೈಕಮಾಂಡ್ ಆರು ವರ್ಷ ಕಾಲ ಉಚ್ಚಾಟನೆ ಮಾಡಿದೆ. ಬಿಜೆಪಿ ಹೈಕಮಾಂಡಿನ ಈ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.ಸ್ವಲ್ಪ ಮಾತಿನ ಮೇಲೆ ಹಿಡಿತ ತಂದು ಕೊಳ್ಳಿ. ನಿಮ್ಮದೇ ಪಕ್ಷ ಕಟ್ಟುವ ಪ್ರಯತ್ನ ಮಾಡಿ. — Vibha (@wonnendaf) March 26, 2025ಪ್ರಬಲ ಪಂಚಮಸಾಲಿ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಶಾಸಕ ಯತ್ನಾಳ್ ಅವರು, ಆ ಸಮುದಾಯವನ್ನು ಬಿಜೆಪಿಯ ವೋಟ್ ಬ್ಯಾಂಕ್ ಆಗಿ ಹಿಡಿದಿಟ್ಟುಕೊಳ್ಳುವಲ್ಲೂ ಯಶಸ್ವಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆದ್ದಿರುವುದು ಯತ್ನಾಳ್ ಪ್ರಭಾವದಿಂದಲೇ ಎಂದು ಪಂಚಮಸಾಲಿ ಮೀಸಲಾತಿ ಹೋರಾಟದ ಮುಖಂಡರು ಹೇಳಿಕೊಂಡಿದ್ದಾರೆ. ಬಿಜೆಪಿ ವರಿಷ್ಠರ ನಿರ್ಧಾರದ ಬಗ್ಗೆ ...
“ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ”: ವರಿಷ್ಠರ ನಿರ್ಧಾರಕ್ಕೆ ಯತ್ನಾಳ್ ಬೇಸರ

“ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ”: ವರಿಷ್ಠರ ನಿರ್ಧಾರಕ್ಕೆ ಯತ್ನಾಳ್ ಬೇಸರ

Others
ಬೆಂಗಳೂರು: ತಮ್ಮನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಹೈಕಮಾಂಡ್ ನಿರ್ಧಾರದ ಬಗ್ಗೆ ಶಾಸಕ ಯತ್ನಾಳ್ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. 'ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ' ಎಂದವರು ಹೇಳಿದ್ದಾರೆ.'ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ' ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'Calling a Spade, a Spade' ಎಂಬುದಕ್ಕೆ ಪಕ್ಷವು ನನಗೆ ಬಹುಮಾನ ನೀಡಿದೆ ಎಂದವರು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. 'ಸತ್ಯವಂತರಿಗಿದು ಕಾಲವಲ್ಲ ದುಷ್ಟಜನರಿಗೆ ಸುಭಿಕ್ಷಕಾಲ || ಉಪಕಾರ ಮಾಡಿದರೆ ಅಪಕರಿಸುವ ಕಾಲ ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡಲು ನಿರ್ಮೂಲವಾಗುವ ಕಾಲ ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ ಸತ್ಯವಂತರಿಗಿದು ಕಾಲವಲ್ಲ'   ಎಂದು ಯತ್ನಾಳ್ ಹೇಳಿಕೊಂಡಿದ್ದಾರೆ. 'ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾ...
ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ರವಾನಿಸಿದ ಸಂದೇಶ

ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ರವಾನಿಸಿದ ಸಂದೇಶ

Focus, Update, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೀಡಿರುವ ಪ್ರತಿಕ್ರಿಯೆ ಗಮನಸೆಳೆದಿದೆ. ಪಕ್ಷದ ಕಾರ್ಯಕರ್ತರಿಗೆ ಅವರು ರವಾನಿಸಿರುವ ಸಂದೇಶ ಕೂಡಾ ಕುತೂಹಲದ ಕೇಂದ್ರಬಿಂದುವಾಗಿದೆ.ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ ಎಂದು ವಿಜಯೇಂದ್ರ ಪ್ರತಿಪಾದಿಸಿದ್ದಾರೆ.ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಶಿಸ್ತುಕ್ರಮವು ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ...
BJPಯಿಂದ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ

BJPಯಿಂದ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಎಂದೇ ಗುರುತಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಹೈಕಮಾಂಡ್ ಉಚ್ಛಾಟನೆ ಮಾಡಿದೆ.ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ವಿರುದ್ಧ ಹೈಕಮಾಂಡ್ ಕೈಗೊಂಡಿರುವ ಈ ಕ್ರಮ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.ಬಸನಗೌಡ ಪಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ಶಿಸ್ತು ಸಮಿತಿ ಹೇಳಿದೆ....
ಹನಿಟ್ರ್ಯಾಪ್‌ ಗುಮ್ಮ; ರಾಜಣ್ಣ ದೂರು ಕಾನೂನು ಘಟಕಕ್ಕೆ ವರ್ಗಾವಣೆ

ಹನಿಟ್ರ್ಯಾಪ್‌ ಗುಮ್ಮ; ರಾಜಣ್ಣ ದೂರು ಕಾನೂನು ಘಟಕಕ್ಕೆ ವರ್ಗಾವಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಗೋಕರ್ಣ: ಸಚಿವ ರಾಜಣ್ಣ ಸಲ್ಲಿಸಿರುವ 'ಹನಿಟ್ರ್ಯಾಪ್' ದೂರನ್ನ ಪರಿಶೀಲನೆಗಾಗಿ ಕಾನೂನು ತಂಡಕ್ಕೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ್ ತಿಳಿಸಿದ್ದಾರೆ.ಕರಾವಳಿ ಪ್ರವಾಸದ ನಡುವೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜಣ್ಣ ಅವರ ಮನವಿ ಬಗ್ಗೆ ಪ್ರತಿಕ್ರಿಯಿಸಿದರು. ತಮ್ಮನ್ನು ಹನಿಟ್ರ್ಯಾಪ್‌ಗೆ ಮಾಡಲು ನಡೆದಿರುವ ಪ್ರಯತ್ನ ಬಗ್ಗೆ ತನಿಖೆಗೆ ಕೋರಿ ಸಚಿವ ರಾಜಣ್ಣ ಸಲ್ಲಿಸಿರುವ ಮನವಿಯನ್ನು ಕಾನೂನು ಚೌಕಟ್ಟಿನೊಳಗೆ ವಿವೇಚನೆಯಿಂದ ಪರಿಶೀಲಿಸಲಾಗುತ್ತದೆ. ಅನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು....
ಗ್ರೇಟರ್ ಬೆಂಗಳೂರು: ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲರು ನಕಾರ

ಗ್ರೇಟರ್ ಬೆಂಗಳೂರು: ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲರು ನಕಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ವಿಚಾರದಲ್ಲೂ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಈ ಸಂಬಂಧದ ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದಾರೆ.ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗಿತ್ತು. ಆದರೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಈ ಮಸೂದೆಯನ್ನು ಕೆಲವು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಕಾನೂನು ಸಚಿವ ಹೆಚ್‌.ಕೆ.ಪಾಟೀಲ್, ರಾಜ್ಯಪಾಲರು ಕೋರಿರುವಂತೆ ಸ್ಪಷ್ಟನೆಗಳೊಂದಿಗೆ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗುವುದು' ಎಂದು ತಿಳಿಸಿದ್ದಾರೆ....
₹900ರ ಸ್ಮಾರ್ಟ್ ಮೀಟರ್‌ಗಳಿಗೆ ₹8510 ಫಿಕ್ಸ್; ಮತ್ತೊಂದು ಭಾರೀ ಭ್ರಷ್ಟಾಚಾರ ಬಯಲು

₹900ರ ಸ್ಮಾರ್ಟ್ ಮೀಟರ್‌ಗಳಿಗೆ ₹8510 ಫಿಕ್ಸ್; ಮತ್ತೊಂದು ಭಾರೀ ಭ್ರಷ್ಟಾಚಾರ ಬಯಲು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸ್ಮಾರ್ಟ್ ಮೀಟರ್‌ ಹೆಸರಲ್ಲಿ ರಾಜ್ಯದ ಜನರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಬೇರೆ ರಾಜ್ಯಗಳಲ್ಲಿ ಕೇವಲ ₹900ಕ್ಕೆ ಸಿಗುವ ಸ್ಮಾರ್ಟ್ ಮೀಟರ್‌ಗಳಿಗೆ ರಾಜ್ಯದಲ್ಲಿ ₹8510 ಫಿಕ್ಸ್ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್‌ ಟೆಂಡರ್‌ನಲ್ಲಿ ಸುಮಾರು ರೂ. 15,568 ಕೋಟಿ ಬೃಹತ್ ಮೊತ್ತದ ಅವ್ಯವಹಾರ ನಡೆದಿದೆ. ಸೆಂಟ್ರಲ್ ಎಲೆಕ್ಟ್ರಿಸಿಟಿ ಅಥಾರಿಟಿ ನಿಯಮಾವಳಿ ಪ್ರಕಾರವೂ ಸ್ಮಾರ್ಟ್ ಮೀಟರ್ ಕಡ್ಡಾಯವಲ್ಲ. ಕೆಇಆರ್‌ಸಿ ನಿಯಮಾವಳಿಗಳಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ಎಂದು ಎಲ್ಲೂ ಹೇಳಿಲ್ಲ. ಆದರೂ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನತೆಯ ಮೇಲೆ ಸ್ಮಾರ್ಟ್ ಮೀಟರ್ ಹೊರೆ ಏರಿಸಿದೆ ಎಂದು ಪ್ರತಿಪಕ್ಷ ಬಿಜೆಪಿ ದೂರಿದೆ.ಕೆಟಿಪಿಪಿ ಕಾಯ್ದೆ ಪ್ರಕಾರ ಬಿಡ್ ಪಡೆಯುವ ಕಂಪನಿ ವ್ಯವಹಾರ ರೂ.1,920 ಕೋಟಿ ಇರಬೇಕು. ಆದರೆ, ಟೆಂಡರ್‌ನಲ್ಲಿ ಕೇವಲ ರೂ.107 ಕೋಟಿ ನಮೂದಿಸಲಾಗಿದೆ. ಕಪ್ಪುಪಟ್ಟಿಯಲ್ಲಿರುವ ಬಿಸಿಐಟಿಎಸ್ ಕಂಪನಿಯನ್ನು ಈ ಟೆಂಡ‌ರ್ ನಲ್ಲಿ ನಿಯಮಬಾಹಿರವಾಗಿ ಪರಿಗಣಿಸಿದ್ದಾರೆ. ಈ...
ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು ಎಂದವರು ತಿಳಿಸಿದ್ದಾರೆ. ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ.ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು.ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ… pic.twitter.com/EMoxcPj2se— Karnataka Congress (@INCKarnataka) March 26, 2025ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರವಾಗಿದೆ ಎಂದವರು ಸರ್ಕಾರದ ನಡೆಯನ್ನು ಸಮರ್...
ಬಡವರ ಅನ್ನಕ್ಕೆ ಕನ್ನ: ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ

ಬಡವರ ಅನ್ನಕ್ಕೆ ಕನ್ನ: ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹುಬ್ಬಳ್ಳಿ: ಬಡವರ ಅನ್ನಕ್ಕೆ ಕನ್ನ ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಹುಬ್ಬಳ್ಳಿಯಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಅಡ್ಡೆಗೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದಾರೆ.ಹಳೇ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ಸುಮಾರು 500 ಕ್ವಿಂಟಾಲ್​ ಅಕ್ಕಿ ಜಪ್ತಿ ಮಾಡಿದ್ದಾರೆ. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ, ಟಾಟಾ ಏಸ್ ವಾಹನದಲ್ಲಿ ಲೋಡ್​ ಮಾಡುತ್ತಿದ್ದ ವೇಳೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಅದಾಗಲೇ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ....