Sunday, September 20

Author: info@rajasdigital.com

ಆರೆಸ್ಸೆಸ್ ಶಕ್ತಿಕೇಂದ್ರದಲ್ಲಿ ಹೀಗಿತ್ತು ಸ್ವಾತಂತ್ರ್ಯೋತ್ಸವ ಕೈಂಕರ್ಯ

ಆರೆಸ್ಸೆಸ್ ಶಕ್ತಿಕೇಂದ್ರದಲ್ಲಿ ಹೀಗಿತ್ತು ಸ್ವಾತಂತ್ರ್ಯೋತ್ಸವ ಕೈಂಕರ್ಯ

ದೇಶ, ಪ್ರಮುಖ ಸುದ್ದಿ
ನಾಗ್ಪುರ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ರಾಷ್ಟ್ರಭಕ್ತಿಯ ಹಬ್ಬವಾಗಿ ಆಚರಿಸಲಾಗುತ್ತಿದೆ. RSS ಪಾಳಯದಲ್ಲೂ ಸ್ವಾತಂತ್ರ್ಯೋತ್ಸವ ಸಡಗರ ಕಡುಬಂದಿದೆ.ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಯಲ್ಲಿ ನೆರವೇರಿದ ಈ ರಾಷ್ಟ್ರಹಬ್ಬದ ಕೈಂಕರ್ಯವು ನಾಡಿನ ಗಮನೆಳೆಯಿತು. ಸಂಘದ ಶಕ್ತಿಕೇಂದ್ರದಲ್ಲಿನ ಕಾರ್ಯಕ್ರಮಕ್ಕೆ ಸರಸಂಘಚಾಲಕ್ ಡಾ.ಮೋಹನ್ ಭಾಗವತ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.78वें स्वतंत्रता दिवस के अवसर पर राष्ट्रीय स्वयंसेवक संघ के पूजनीय सरसंघचालक डॉ. मोहन भागवत जी ने आज संघ कार्यालय, महाल (नागपुर) में ध्वजारोहण किया। pic.twitter.com/aXO2vJU0ke — RSS (@RSSorg) August 15, 2024 ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಧಾನ ಕಚೇರಿ ಆವರಣದಲ್ಲಿ ಸಮಾಗಮವಾದ ಸಂಘದ ವಿವಿಧ ಕ್ಷೇತ್ರಗಳ ಪ್ರಮುಖರು, ಕಾರ್ಯಕರ್ತರು ಈ ವಿಶೇಷ ಸ್ವಾತಂತ್ರ್ಯ ದಿನಾಚರಣೆಯ ಸನ್ನಿವೇಶವನ್ನು ಸಾಕ್ಷೀಕರಿಸಿದರು....
VIDEO: ಭಾರತಾಂಬೆಯಾಗಿ ಗಮನಸೆಳೆದ ಕಟೀಲೇಶ್ವರಿ; ತ್ರಿವರ್ಣ ವಸ್ತ್ರಾಲಂಕಾರದಿಂದ ಭಕ್ತರ ಗಮನಸೆಳೆದ ಕಟೀಲು ಕ್ಷೇತ್ರದ ದೇವಿ

VIDEO: ಭಾರತಾಂಬೆಯಾಗಿ ಗಮನಸೆಳೆದ ಕಟೀಲೇಶ್ವರಿ; ತ್ರಿವರ್ಣ ವಸ್ತ್ರಾಲಂಕಾರದಿಂದ ಭಕ್ತರ ಗಮನಸೆಳೆದ ಕಟೀಲು ಕ್ಷೇತ್ರದ ದೇವಿ

ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವಿಶೇಷ
ಮಂಗಳೂರು: ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮ ಆವರಿಸಿದೆ. ನಾಡಿಲೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿಸುತ್ತಿದ್ದು, ಕಟೀಲು ಕ್ಷೇತ್ರದಲ್ಲಿ ನೆಲೆಸಿರುವ ಜಗನ್ಮಾತೆ ಕೂಡಾ ಇಂದು ಭಾರತಾಂಬೆ ಸ್ವರೂಪಿಣಿಯಾಗಿ ಗಮನಸೆಳೆದಿದ್ದಾಳೆ.https://youtu.be/DmTtTvOepMg?si=OqLdwg-tIeZMHTt5ಜಗದಾಂಬೆ ಶ್ರೀ ಕಟೀಲೇಶ್ವರಿಯು ಸ್ವಾತಂತ್ರ್ಯ ದಿನವಾದ ಇಂದು ಭಾರತಾಂಭೆಯಾಗಿ ಗಮನಸೆಳೆದದ್ದು ವಿಶೇಷ. ಕಳೆದ ವರ್ಷದಂತೆಯೇ ಈ ವರ್ಷವೂ ಸ್ವಾತಂತ್ರ್ಯೋತ್ಸವ ದಿನದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ವಿಗ್ರಹಕ್ಕೆ ರಾಷ್ಟ್ರಧ್ವಜವನ್ನು ಹೋಲುವ ಬಣ್ಣದ ವಸ್ತ್ರಾಲಂಕಾರ ಮಾಡಲಾಗಿದೆ. ಈ ಅಲಂಕಾರ ಭಕ್ತರ ಕುತೂಹಲದ ಕೇಂದ್ರಬಿಂದುವಾಗಿದೆ.ಕರಾವಳಿಯ ಪುಣ್ಯಕ್ಷೇತ್ರ ಕಟೀಲಿನಲ್ಲಿ ದೇಶಭಕ್ತಿಯ ಮಹಾ ಹಬ್ಬವನ್ನು ಆಚರಿಸಲಾಯಿತು. ಹಿಂದೂ ಧಾರ್ಮಿಕ ಹಬ್ಬಗಳಂದು ವಿಶೇಷ ಕೈಂಕರ್ಯಗಳಿಂದ ಭಕ್ತರನ್ನು ಕೈಬೀಸಿ ಕರೆಯುವ ಈ ಕ್ಷೇತ್ರದಲ್ಲಿ ಸ್ವಾತಂತ್ರ್ಯ ದಿನವಾದ ಇಂದು ಈ ರೀತಿಯ ಆಕರ್ಷಣೆ ಭಕ್ತ ಸಮೂಹದ ಮೆಚ್ಚುಗೆಗೂ ಪಾತ್ರವಾಗಿದೆ....
ಬೆಂಗಳೂರು: ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಬೆಂಗಳೂರು: ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ.ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.ಧ್ವಜಾರೋಹಣ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿ, ಗೌರವ ವಂದನೆ ಸ್ವೀಕರಿಸಿದರು....
ವಿಕಸಿತ್ ಭಾರತ: 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದ ಮೋದಿ

ವಿಕಸಿತ್ ಭಾರತ: 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದ ಮೋದಿ

ದೇಶ, ಪ್ರಮುಖ ಸುದ್ದಿ
ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ.ಇದೇ ವೇಳೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜರೋಹಣ ಮಾಡಿದರು.ಈ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡದ ಪ್ರಧಾನಿ ಮೋದಿ, ‘2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿಯಾಗಿದೆ ಎಂದರು. ವಿಕಸಿತ ಭಾರತ ಮೂಲಕ ದೇಶದ 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.ರಾಷ್ಟ್ರದ ನಿರ್ಮಾಣಕ್ಕಾಗಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ಅವರಿಗೆ ಹೃದಯಪೂರ್ವಕ ನಮನ ಎಂದ ಅವರು, ಭಾರತದ ಸ್ವಾತಂತ್ರ್ಯ ಸೇನಾನಿಗಳಿಗೂ, ರಾಷ್ಟ್ರದ ರಕ್ಷಣೆಗೆ ಯೋಗದಾನ ನೀಡಿದವರಿಗೂ ನನ್ನ ನಮನಗಳು ಎಂದು ಹೇಳಿದರು.ನೈಸರ್ಗಿಕ ವಿಕೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ, ಅನೇಕ ಜನರು ಇದರಿಂದ ತಮ್ಮ ಕುಟುಂಬಗಳನ್ನು, ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಅವರ ಪರವಾಗಿ ...
ಸ್ವಾತಂತ್ರ್ಯೋತ್ಸವ ಸಂಭ್ರಮ.. ಎಲ್ಲೆಲ್ಲೂ ದೇಶಪ್ರೇಮದ ಮಹಾಹಬ್ಬದ ಸಂಭ್ರಮ

ಸ್ವಾತಂತ್ರ್ಯೋತ್ಸವ ಸಂಭ್ರಮ.. ಎಲ್ಲೆಲ್ಲೂ ದೇಶಪ್ರೇಮದ ಮಹಾಹಬ್ಬದ ಸಂಭ್ರಮ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ.ಮನೆಮನೆಗಳಲ್ಲೂ ತಿಂರಂಗ ಧ್ವಜ ಹಾರಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮುನ್ನುಡಿ ಬರೆದಿರುವ ಹರ್ ಘರ್ ತಿರಂಗ ಅಭಿಯಾನಕ್ಕೂ ಭಾರೀ ಬೆಂಬಲ ವ್ಯಕ್ತವಾಗಿದೆ.ಇದೇ ವೇಳೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜರೋಹಣ ಮಾಡಿದರು.ಶಾಲೆಗಳಲ್ಲಿ, ಸಂಘಸಂಸ್ಥೆಗಳಲ್ಲೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳು ಗಮನಸೆಳೆದವು....
ಕೊಲೆ ಪ್ರಕರಣ; ನಟ ದರ್ಶನ್ ಗ್ಯಾಂಗ್‌ಗೆ ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಕೊಲೆ ಪ್ರಕರಣ; ನಟ ದರ್ಶನ್ ಗ್ಯಾಂಗ್‌ಗೆ ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್, ಗೆಳತಿ ಪವಿತ್ರಾ ಗೌಡ ಸಹಿತ ಎಲ್ಲಾ ಆರೋಪಿಗಳಿಗೆ ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಬುಧವಾರ ಈ ಆದೇಶ ನೀಡಿದೆ.ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಬುಧವಾರ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾದಿಶರು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ ಆದೇಶಿಸಿದರು....
ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಜ್ಯದ19 ಪೊಲೀಸರಿಗೆ ಕೇಂದ್ರ ಸರ್ಕಾರ ರಾಷ್ಟ್ರಪತಿಗಳ ಪದಕ ಘೋಷಿಸಿದೆ. ಗಣನೀಯ ಸೇವೆಯನ್ನು ಪರಿಗಣಿಸಿ ಪ್ರತೀ ವರ್ಷ ಸ್ವಾತಂತ್ರ್ಯ ದಿನದಂದು ರಾಷ್ಟ್ರಪತಿ ಪದಕಗಳನ್ನು ಕೇಂದ್ರ ಗೃಹ ಇಲಾಖೆ ಪ್ರಕಟಿಸುತ್ತದೆ. ಅದರಂತೆ ಈ ಬಾರಿ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ಈ ಪದಕ ಪ್ರಕಟವಾಗಿದೆ. ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ.ಎಂ.ಚಂದ್ರಶೇಖರ್, ಆಂತರಿಕಾ ಭದ್ರತಾ ವಿಭಾಗದ ಎಡಿಜಿಪಿ.ಶ್ಲಾಘನೀಯ ಸೇವಾ ಪದಕ ಪುರಸ್ಕೃತರು:ಶ್ರೀನಾಥ್ ಎಂ ಜೋಷಿ, ಎಸ್‌ಪಿ ಲೋಕಾಯುಕ್ತ ಸಿ.ಕೆ ಬಾಬಾ, ಎಸ್‌ಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ರಾಮಗೊಂಡ ಬಿ ಬಸರಗಿ, ಎಎಸ್‌ಪಿ, ಬಳ್ಳಾರಿ ಜಿಲ್ಲೆ ಎಂ.ಡಿ. ಶರತ್​, ಎಸ್‌ಪಿ, ಸಿಐಡಿ, ಬೆಂಗಳೂರು ವಿ.ಸಿ. ಗೋಪಾಲರೆಡ್ಡಿ, ಡಿಸಿಪಿ, ಸಿಆರ್​, ಪಶ್ಚಿಮ, ಬೆಂಗಳೂರು ನಗರ ಗಿರಿ ಕೆ.ಸಿ, ಡಿವೈಎಸ್‌ಪಿ, ಚನ್ನಪಟ್ಟಣ ಉಪ-ವಿಭಾಗ, ರಾಮನಗರ ಜಿಲ್ಲೆ ಮುರಳೀಧರ್ ಪಿ, ಡಿವೈಎಸ್‌ಪಿ, ಚಿಂತಾಮಣಿ ಉಪ-ವಿಭಾಗ, ಚಿಕ್ಕಬಳ್ಳಾಪುರ ಜಿಲ್ಲೆ ಬಸವೇಶ್ವರ, ಅಸಿಸ್ಟೆಂಟ್ ಡೈರೆಕ್ಟರ್, ರಾಜ್ಯ ಗುಪ್ತವಾರ್ತೆ, ಕಲ...
ಕಾಂಗ್ರೆಸ್‌ನ ಕಮೀಷನ್ ಆಸೆಗಾಗಿ ಜನೌಷಧಿ ಕೇಂದ್ರಗಳು ಬಲಿ? ರಾಜ್ಯ ಸರ್ಕಾರದ ನಡೆಗೆ ಪ್ರತಿಪಕ್ಷ ಆಕ್ರೋಶ

ಕಾಂಗ್ರೆಸ್‌ನ ಕಮೀಷನ್ ಆಸೆಗಾಗಿ ಜನೌಷಧಿ ಕೇಂದ್ರಗಳು ಬಲಿ? ರಾಜ್ಯ ಸರ್ಕಾರದ ನಡೆಗೆ ಪ್ರತಿಪಕ್ಷ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು:ಕಮೀಷನ್ ಆಸೆಗಾಗಿ ರಾಜ್ಯದಲ್ಲಿ ಜನೌಷಧಿ ಕೇಂದ್ರಗಳು ಬಲಿಯಾಗುತ್ತಿವೆಯೇ? ರಾಜ್ಯ ಸರ್ಕಾರದ ನಡೆ ಬಗ್ಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಅನುಮಾನ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಜನ ಔಷಧಿ ಯೋಜನೆ ಕೇಂದ್ರ ಸರ್ಕಾರದ್ದು. ಇದರಿಂದ ಅತಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವರಿಗೆ ಲಾಬಿಗಳು ತಲೆ ಸವರಿದೆ. ಆದ್ದರಿಂದ ಇಂತಹ ಕೆಲಸ ಮಾಡಲು ಹೊರಟಿದ್ದಾರೆ. ಇವರಿಗೆ ಕಮಿಶನ್‌ ಸಿಗಲಿದೆ ಎಂಬ ಕಾರಣಕ್ಕೆ ಜನರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿಯ ಭಿನ್ನಮತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಬೆಳವಣಿಗೆಯನ್ನು ಕೇಂದ್ರದ ನಾಯಕರ ಗಮನಕ್ಕೆ ತರುತ್ತೇನೆ. ಈಗಾಗಲೇ ಕೇಂದ್ರದ ನಾಯಕರು ಇದನ್ನು ಗಮನಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಜಕೀಯ ಪಕ್ಷವಲ್ಲ. ಆದ್ದರಿಂದ ರಾಜಕೀಯದ ಸಭೆ ಮಾಡುವ ಪದ್ಧತಿ ಸಂಘದಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.ಬಳ್ಳಾರಿ ಪಾದಯಾತ್ರೆಗೆ ಕೇಂದ್ರದ ನಾಯಕರು ಒಪ್ಪಿಗೆ ನೀಡಿದರೆ ನಾವು ಕೂಡ ಅದರಲ್ಲಿ ಭಾಗವಹಿಸುತ್ತ...
ಸಂಪನ್ಮೂಲ ಕೊರತೆಯಿಂದ ‘ಗ್ಯಾರಂಟಿ’ಗಳಿಗೆ ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ?

ಸಂಪನ್ಮೂಲ ಕೊರತೆಯಿಂದ ‘ಗ್ಯಾರಂಟಿ’ಗಳಿಗೆ ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿ ಎಂದರು.ಬೆಂಗಳೂರಿಗೆ ನಿಗದಿಯಾದ ಅನುದಾನಗಳನ್ನು ಈ ಹಿಂದೆಯೂ ವಾಪಸ್‌ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರ...
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ; ಕೈ ವನಿತೆಯರ ಪಾಳಯದಲ್ಲಿ ರಣೋತ್ಸಾಹ.‌.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ; ಕೈ ವನಿತೆಯರ ಪಾಳಯದಲ್ಲಿ ರಣೋತ್ಸಾಹ.‌.

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇಮಕವಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಈ ಕುರಿತಂತೆ ಘೋಷಣೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ವನಿತೆಯರ ಬಳಗದಲ್ಲಿ ರಣೋತ್ಸಾಹ ಕಂಡುಬಂದಿದೆ.ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಕ್ಕೆ ನಾಯಕಿಯರಿಂದ ಭಾರೀ ಲಾಭಿ ನಡೆದಿತ್ತಿತ್ತು. ಸ್ಥಾನದಲ್ಲಿ ಮುಂದುವರಿಯಲು ಪುಷ್ಪ ಅಮರನಾಥ್ ಅವರು ಪ್ರಯತ್ನ ನಡೆಸಿದ್ದರೆ, ಮತ್ತೊಂದೆಡೆ ಕವಿತಾ ರೆಡ್ಡಿ ಕೂಡಾ ದೆಹಲಿಯಲ್ಲಿ ಕಸರತ್ತು ನಡೆಸಿದ್ದರು. ಆದರೆ ಹೈಕಮಾಂಡ್ ಸೌಮ್ಯ ರೆಡ್ಡಿ ಅವರನ್ನು ನೇಮಕ ಮಾಡಿ ಅಚ್ಚರಿಯ ನಿರ್ಧಾರ ಪ್ರಕಟಿಸಿದೆ.ಬೆಂಗಳೂರಿನ ಆರ್‌ವಿ‌ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಸೌಮ್ಯ ರೆಡ್ಡಿ, ENVIRONMENT TECHNOLOGY ಯಲ್ಲಿ NEW YORK INSTITUTE OF TECHNOLOGYಯಿಂದ ಸ್ನಾತಕೋತ್ತರ ಪದವಿ ವ್ಯಾಸಾಂಗ ಮಾಡಿದ್ದಾರೆ.ರಾಜ್ಯ ರಾಜಕಾರಣದಲ್ಲಿ ಸೋಲಿಲ್ಲದ ಸರದಾರ ಎಂದೇ ಗುರುತಾಗಿರುವ ಸಚಿವ ರಾಮಲಿಂಗ ರೆಡ್ಡಿ ಅವರ ಪುತ್ತಿಯಾಗಿರುವ ಸೌಮ್ಯ ರೆಡ್ಡಿ, ತಾವು ಕೂಡಾ ತಂದೆಯ ಹಾದಿಯಲ್ಲೇ ಜನಸೇವೆಯಲ್ಲಿ ತೊಡಗಿದ್ದಾ...