Monday, March 30

Author: info@rajasdigital.com

ಬರೋಬ್ಬರಿ 400 ಜನರನ್ನು ಹನಿಟ್ರ್ಯಾಪ್‌? ಸಚಿವರ ಸ್ಫೋಟಕ ಹೇಳಿಕೆ

ಬರೋಬ್ಬರಿ 400 ಜನರನ್ನು ಹನಿಟ್ರ್ಯಾಪ್‌? ಸಚಿವರ ಸ್ಫೋಟಕ ಹೇಳಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕನಿಷ್ಠ 400 ಜನರನ್ನು ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.ಹನಿಟ್ರ್ಯಾಪ್ ಕೋಲಾಹಲ ಕುರಿತಂತೆ ಆರಂಭದಿಂದಲೂ ಆಕ್ರೋಶ ಹೊರಹಾಕುತ್ತಿದ್ದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ. ಎಲ್ಲಾ ಪಕ್ಷಗಳ ನಾಯಕರನ್ನು ಇದರಲ್ಲಿ ಸಿಲುಕಿಸಲಾಗಿದೆ ಎಂದು ಗಮನಸೆಳೆದಿದ್ದಾರೆ.ಹನಿಟ್ರ್ಯಾಪ್ ಮಾಡಿ ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕಿರುವ ನಿದರ್ಶನಗಳು ಈ ಹಿಂದೆಯೂ ನಡೆದಿವೆ.ಕಳೆದ 20 ವರ್ಷಗಳಿಂದಲೂ ಹನಿಟ್ರ್ಯಾಪ್ ಆಗಿವೆ. ಈ ಕೃತ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಅವರೌ ಪ್ರತಿಪಾದಿಸಿದ್ದಾರೆ....
ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ವಿಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಸಭೆಯಲ್ಲಿ ನಮ್ಮ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ, ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ… https://t.co/uWGNuoxoTE— Vijayendra Yediyurappa (@BYVijayendra) March 21, 2025 ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತ ಮಾನ್ಯ… ರವರು ಅದನ್ನು ಕಸಿಯುವ ಪಕ್ಷಪಾತಿ ನಿಲುವು ತಳೆದದ್ದು ಕಾಂಗ್ರೆಸ್ನ ತುಘಲಕ್ ಸರ್ಕಾರದ ತಾಳಕ್ಕ...
ಮೈಸೂರು ಪೊಲೀಸ್ ಮೇಲೆ ದಾಳಿ; ದರೋಡೆ ಆರೋಪಿಗೆ ಗುಂಡೇಟು

ಮೈಸೂರು ಪೊಲೀಸ್ ಮೇಲೆ ದಾಳಿ; ದರೋಡೆ ಆರೋಪಿಗೆ ಗುಂಡೇಟು

Focus, ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿದ ದರೋಡೆ ಆರೋಪಿಯ ಮೇಲೆ ಗುಂಡಿನ ದಾಳಿ ನಡೆದಿದೆ. ದರೋಡೆ ಪ್ರಕರಣದ ಆರೋಪಿ ಕೇರಳ ಮೂಲದ ಆರೋಪಿ ಆದರ್ಶ್ ಎಂಬಾತ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ತಾನು ಗಾಯಗೊಂಡರೂ ಕರ್ತವ್ಯಪ್ರಜ್ಞೆ ಮೆರೆದಿರುವ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.ಮಹಜರ್ ವೇಳೆ ಶುಕ್ರವಾರ ರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಆ ವೇಳೆ ಪೊಲೀಸರು ಗುಂಡು ಹಾರಿಸಿದ್ದು, ಗಾಯಾಳು ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಬಳಿ ಆರೋಪಿ ನಡೆಸಿದ ಈ ದಾಳಿಯಲ್ಲಿ ಸಬ್ ಇನ್ಸ್​​ಪೆಕ್ಟರ್ ಪ್ರಕಾಶ್ ಹಾಗೂ ಸಿಬ್ಬಂದಿ ಹರೀಶ್ ಗಾಯಗೊಂಡಿದ್ದು, ಅವರನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಹನಿಟ್ರ್ಯಾಪ್ ಕೋಲಾಹಲ: ‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’ ಎಂದು ಬಿಜೆಪಿ ನಾಯಕರಿಗೆ ಪ್ರಿಯಾಂಕ್ ತರಾಟೆ

ಹನಿಟ್ರ್ಯಾಪ್ ಕೋಲಾಹಲ: ‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’ ಎಂದು ಬಿಜೆಪಿ ನಾಯಕರಿಗೆ ಪ್ರಿಯಾಂಕ್ ತರಾಟೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಹನಿಟ್ರ್ಯಾಪ್ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಾಗ್ಯುದ್ಧವೇ ನಡೆದಿದೆ.ಈ ನಡುವೆ ಹನಿಟ್ರ್ಯಾಪ್ ಕುರಿತಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೇಗ್ವೆದುಕೊಂಡಿರುವ ಬಿಜೆಪಿ ನಾಯಕರು ವಿಧಾನ ಸಭೆ ಹಾಗೂ ವಿಧಾನ ಪರಿಷತ್ತುಗಳಲ್ಲಿ ಗದ್ದಲ ಎಬ್ಬಿಸಿವೆ. ಹನಿಟ್ರ್ಯಾಪ್ ಪ್ರಕರಣ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.ಬಿಜೆಪಿ ಆಡಳಿತಾವಧಿಯಲ್ಲಿ 17 ಶಾಸಕರು ನ್ಯಾಯಾಲಯದಿಂದ ಸ್ಟೇ ತಂದಿದ್ದರು. ಇದರ ಬಗ್ಗೆ ಅಂದು ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ. ಹಾಗಿದ್ದರೆ ಇಂದು ಈ ವಿಷಯದಲ್ಲಿ ಚರ್ಚೆಯ ಅವಶ್ಯಕತೆ ಇದೆಯೇ? ಬಿಜೆಪಿಯವರಿಗೆ ಅಂದು ಇಲ್ಲದ ನೈತಿಕತೆಯ ಪ್ರಶ್ನೆ ಇಂದು ಹೇಗೆ ಹುಟ್ಟಿಕೊಂಡಿತು? - @PriyankKharge pic.twitter.com/H4QfxdojoM — Karnataka Congress (@INCKarnataka) March 21, 2025ಬಿಜೆಪಿಯವರ ನಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ. ಹ...
ಹನಿಟ್ರ್ಯಾಪ್‌ ಪ್ರಕರಣ ಬಗ್ಗೆ ಗೃಹ ಸಚಿವರಿಂದ ಸದನದ ಒಳಗೊಂದು ಹೊರಗೊಂದು ಹೇಳಿಕೆ?

ಹನಿಟ್ರ್ಯಾಪ್‌ ಪ್ರಕರಣ ಬಗ್ಗೆ ಗೃಹ ಸಚಿವರಿಂದ ಸದನದ ಒಳಗೊಂದು ಹೊರಗೊಂದು ಹೇಳಿಕೆ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹನಿಟ್ರ್ಯಾಪ್ ಆರೋಪ ಕುರಿತಂತೆ ಪ್ರತಿಕ್ರಿಯಿಸಿದರು. ಹನಿಟ್ರ್ಯಾಪ್‌ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟಿಸಲಿದೆ ಎಂದು ತಿಳಿಸಿದರು. ಹನಿಟ್ರ್ಯಾಪ್‌ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು. ಹನಿಟ್ರ್ಯಾಪ್‌ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ… pic.twitter.com/AIeVECRVjV— BJP Karnat...
ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿ ಶಾಸಕರ ಅಮಾನತು: ಬಿಜೆಪಿ ಆಕ್ರೋಶ

ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿ ಶಾಸಕರ ಅಮಾನತು: ಬಿಜೆಪಿ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದ್ದು, ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಪರಿಶಿಷ್ಟ ಸಮುದಾಯದ ಹಿರಿಯ ಸಚಿವರೊಬ್ಬರು ನನಗೆ ರಕ್ಷಣೆ ಕೊಡಿ ಎಂದು ಸದನದಲ್ಲಿ ಮನವಿ ಮಾಡಿದರೂ ನಿರ್ಲಕ್ಷ್ಯ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ, ಯಾರ ಒತ್ತಡದಲ್ಲಿದೆ? ಯಾರ ಒತ್ತಡಕ್ಕೆ ಮಣಿದು ತನಿಖೆಗೆ ಆದೇಶ ಮಾಡಲು ಮೀನಾಮೇಷ ಎಣಿಸುತ್ತಿದೆ? ಎಂದು ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್'ನಲ್ಲಿ ಪ್ರಶ್ನೆ ಮಾಡಿದ್ದಾರೆ.ರಾಜ್ಯದ ಒಬ್ಬ ಹಿರಿಯ ಶಾಸಕರು, ಹಾಲಿ ಸಚಿವರಿಗೇ ರಕ್ಷಣೆ ಇಲ್ಲದಮೇಲೆ, ಇನ್ನು ನಾಡಿನ ಜನಸಾಮಾನ್ಯರ ಕಥೆ ಏನು? ಇದನ್ನು ಪ್ರಶ್ನೆ ಮಾಡುವುದು ವಿಪಕ್ಷಗಳ ಕರ್ತವ್ಯ ಅಲ್ಲವೇ? ಸರ್ಕಾರವನ್ನು ಪ್...
‘ಹನಿಟ್ರ್ಯಾಪ್ ಸರ್ಕಾರ’ ಎಂದ ಪ್ರತಿಪಕ್ಷ: 18 ಶಾಸಕರ ಅಮಾನತು

‘ಹನಿಟ್ರ್ಯಾಪ್ ಸರ್ಕಾರ’ ಎಂದ ಪ್ರತಿಪಕ್ಷ: 18 ಶಾಸಕರ ಅಮಾನತು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿಧಾಸಭೆಯ ಕಲಾಪಗಳಲ್ಲಿ ಹನಿಟ್ರ್ಯಾಪ್ ಸಡ್ಡು ಪ್ರತಿಧ್ವನಿಸಿದ್ದು, ಗದ್ದಲ ಕೋಲಾಹಲ ಎಬ್ಬಿಸಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭಾಧ್ಯಕ್ಷರು ಅಮಾನತು ಮಾಡಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಆರೋಪ ಅಸಂಬಂಧ ಈ ಬಿಜೆಪಿ ಶಾಸಕರನ್ನು 6 ತಿಂಗಳವರೆಗೂ ಕಲಾಪದಿಂದ ಸ್ಪೀಕರ್ ಯುಟಿ ಖಾದರ್ ಅಮಾನತು ಮಾಡಿದ್ದಾರೆ.ಶುಕ್ರವಾರದ ವಿಧಾನಸಭಾ ಕಲಾಪದಲ್ಲಿ ತೀವ್ರ ಕೋಲಾಹಲ ಉಂಟಾಯಿತು. ಮಸೂದೆಗಳನ್ನು ಮತಕ್ಕೆ ಹಾಕುವ ಸಂದರ್ಭದಲ್ಲಿ ಪ್ರತಿಪಕ್ಷಗಳು 'ಹನಿಟ್ರ್ಯಾಪ್ ಸರ್ಕಾರ' ಎಂದು ಘೋಷಣೆ ಕೂಗಿ ಪ್ರತಿಭಟಿಸಿದವು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಡಾ. ಅಶ್ವತ್ಥ್ ನಾರಾಯಣ, ಎಸ್ಆರ್ ವಿಶ್ವನಾಥ್, ಮುನಿರತ್ನ, ಧೀರಜ್ ಮುನಿರತ್ನ, ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಬಿಪಿ ಹರೀಶ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಯಶಪಾಲ್ ಸುವರ್ಣ, ಚಂದ್ರು ಲಮಾಣಿ, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ ಅವರನ್ನು ಮಾರ್ಷಲ್ ಗಳು ಕಲಾಪದಿಂದ ಹೊರಗೆ ಕಳುಹಿಸಲಾಯಿತು....
ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

Others
ತಿರುಮಲ: ದಕ್ಷಿಣ ಭಾರತದ ಪುಣ್ಯಕ್ಷೇತ್ರ ತಿರುಪತಿ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳುವ ಸಂಬಂಧ ಆಂಧ್ರಪ್ರದೇಶ ಸರ್ಕಾರ ತೀರ್ಮಾನ ಕೈಗೊಂಡಿದೆ.ಈ ಕುರಿತಂತೆ ಶುಕ್ರವಾರ ಮಾಹಿತಿ ಹಂಚಿಕೊಂಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತಿರುಮಲದ ವೆಂಕಟೇಶ್ವರ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಪ್ರಸಕ್ತ ಇತರ ಸಮುದಾಯದ ವ್ಯಕ್ತಿಗಳೂ ಸೇವೆ ಸಲ್ಲಿಸುತ್ತಿದ್ದು ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.ಇದೇ ವೇಳೆ. ದೇಶಾದ್ಯಂತ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲೂ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಿಸಲಾಗುವುದು ಎಂದವರು ತಿಳಿಸಿದರು....
ಅಂದು ‘200 ಯೂನಿಟ್‌ ವಿದ್ಯುತ್ ಫ್ರೀ ಫ್ರೀ’ ಎಂದಿದ್ದ ಕಾಂಗ್ರೆಸ್, ಇದೀಗ ಜನತೆಗೆ ಶಾಕ್..!

ಅಂದು ‘200 ಯೂನಿಟ್‌ ವಿದ್ಯುತ್ ಫ್ರೀ ಫ್ರೀ’ ಎಂದಿದ್ದ ಕಾಂಗ್ರೆಸ್, ಇದೀಗ ಜನತೆಗೆ ಶಾಕ್..!

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚುನಾವಣೆಗೂ ಮುನ್ನ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್ ಫ್ರೀ ಫ್ರೀ ಎಂದ ಕಾಂಗ್ರೆಸ್ ಪಕ್ಷ ಇದೀಗ ಮತ್ತೊಮ್ಮೆ ಪ್ರತಿ ಯೂನಿಟ್‌ಗೆ 36 ಪೈಸೆ ವಿದ್ಯುತ್‌ ದರ ಏರಿಕೆ ಮಾಡುತ್ತಿದೆ ಎಂದು ಬಿಜೆಪಿ ಗೇಲಿಮಾಡಿದೆ.ಇತ್ತೀಚೆಗಷ್ಟೇ ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಆಟೋ ದರ ಏರಿಕೆಗೂ ಸರ್ಕಾರ ಸಮ್ಮತಿ ನೀಡಿತ್ತು. ಬಳಿಕ ವಿದ್ಯುತ್ ಮೀಟರ್ ದರವನ್ನೇ 800% ಏರಿಕೆ ಮಾಡಿ ಜನತೆಗೆ ಶಾಕ್ ನೀಡಿತ್ತು. ಇದೀಗ ಮತ್ತೊಮ್ಮೆ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಲಾಗಿದ್ದು, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ. ಬೆಲೆ ಏರಿಕೆಯೇ ಕಾಂಗ್ರೆಸ್ಸಿನ 6ನೇ ಗ್ಯಾರಂಟಿ‌ಯಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿತ್ಯ ಲೂಟಿಗೆ ನಿಂತು ಜನಸಾಮಾನ್ಯರ ಬದುಕನ್ನು ದುರ್ಬಲಗೊಳಿಸುತ್ತಿದೆ. ಒಂದು ಕಡೆ ಉಚಿತ ಎನ್ನುತ್ತಲೇ ಜನಸಾಮಾನ್ಯರ ಕಿಸೆಗೆ ಕಾಂಗ್ರೆಸ್‌ ಸರ್ಕಾರ ಕನ್ನ ಹಾಕುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.ಚುನಾವಣೆಗೂ ಮುನ...
‘ಮನಿಟ್ರ್ಯಾಪ್’ನಲ್ಲಿ ಸಿದ್ದು ಸರ್ಕಾರ.. ‘ಹನಿಟ್ರ್ಯಾಪ್’ನಲ್ಲೂ ಸಿದ್ದು ಟೀಮ್..!

‘ಮನಿಟ್ರ್ಯಾಪ್’ನಲ್ಲಿ ಸಿದ್ದು ಸರ್ಕಾರ.. ‘ಹನಿಟ್ರ್ಯಾಪ್’ನಲ್ಲೂ ಸಿದ್ದು ಟೀಮ್..!

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ಹನಿಟ್ರ್ಯಾಪ್ ವಿಚಾರ ಭಾರೀ ಸದ್ದುಮಾಡುತ್ತಿದೆ. ಈ ಬಗ್ಗೆ ತ್ಪ್ರತಿಪಕ್ಷಗಳು ತನಿಖೆಗೆ ಪಟ್ಟುಹಿಡಿದಿವೆ. ಇದೇ ವೇಳೆ, ಆಡಳಿತಾರೂಢ ಕಾಂಗ್ರೆಸ್ ನಾಯಕರ ನಡುವಿನ ಹನಿಟ್ರ್ಯಾಪ್ ಗುದ್ದಾಟ ಬಗ್ಗೆ ಪ್ರತಿಪಕ್ಷ ಬಿಜೆಪಿ ವ್ಯಂಗ್ಯವಾಡಿದೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಸದನದಲ್ಲಿ ಆರೋಪಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ತನಿಖೆಗೆ ಆಗ್ರಹಿಸಿದ್ದಾರೆ. ರಾಜಣ್ಣರ ಆರೋಪಕ್ಕೆ ದನಿಗೂಡಿಸಿರುವ ಮತ್ತಿಬ್ಬರು ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಹೆಚ್.ಸಿ.ಮಹದೇವಪ್ಪ ಅವರು ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಗೃಹ ಸಚಿವ ಡಾ.ಪರಮೇಶ್ವರ್ ಅವರು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಆದರೆ ಕನ್ನಡಿಗರಿಗೆ ಕಾಡುತ್ತಿರುವ ಯಕ್ಷ ಪ್ರಶ್ನೆ ಏನಪ್ಪಾ ಅಂದರೆ, ಹನಿಟ್ರ್ಯಾಪ್ ಜಾಲದ ಬಗ...