Sunday, April 5

Author: info@rajasdigital.com

ಆಪ್ ನಾಯಕರಿಗೆ ಸಂಕಷ್ಟ: ಸಿಸೋಡಿಯಾ, ಸತ್ಯೇಂದ್ರ ಜೈನ್ ವಿರುದ್ಧ FIRಗೆ ರಾಷ್ಟ್ರಪತಿ ಗ್ರೀನ್ ಸಿಗ್ನಲ್

ಆಪ್ ನಾಯಕರಿಗೆ ಸಂಕಷ್ಟ: ಸಿಸೋಡಿಯಾ, ಸತ್ಯೇಂದ್ರ ಜೈನ್ ವಿರುದ್ಧ FIRಗೆ ರಾಷ್ಟ್ರಪತಿ ಗ್ರೀನ್ ಸಿಗ್ನಲ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ದೆಹಲಿ ಸರ್ಕಾರಿ ಶಾಲೆಗಳ ತರಗತಿ ಕೊಠಡಿಗಳ ನಿರ್ಮಾಣದಲ್ಲಿನ ಭ್ರಷ್ಟಾಚಾರ ಆರೋಪದಲ್ಲಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆದಿದೆ.ಸುಮಾರು 1,300 ಕೋಟಿ ರೂಪಾಯಿ ಹಗರಣ ಆರೋಪ ಸಂಬಂಧ ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ ಎನ್ನಲಾಗಿದೆ.ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಿಸೋಡಿಯಾ ಮತ್ತು ಜೈನ್ ಸಚಿವರಾಗಿದ್ದ ಅವಧಿಯಲ್ಲಿ ಈ ಹಗರಣ ನಡೆದಿದ್ದು, 2022 ರಲ್ಲಿ ದೆಹಲಿ ಸರ್ಕಾರದ ಜಾಗೃತ ನಿರ್ದೇಶನಾಲಯ, ಹಗರಣದ ತನಿಖೆಗೆ ಶಿಫಾರಸು ಮಾಡಿ ಮತ್ತು ಮುಖ್ಯ ಕಾರ್ಯದರ್ಶಿಗೆ ವರದಿಯನ್ನು ಸಲ್ಲಿಸಿತ್ತು. ಇದೀಗ ಎಫ್‌ಐಆರ್ ದಾಖಲಿಸಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಲು ಪ್ರಕ್ರಿಯೆ ಆರಂಭವಾಗಿದೆ ಎನ್ನಲಾಗಿದೆ....
‘ಆವೆ ಮಣ್ಣನ್ನು ಮೈನ್ಸ್‌ ಎಂದು ಪರಿಗಣಿಸಬೇಡಿ’: ಸರ್ಕಾರದ ನಿರ್ಧಾರಕ್ಕೆ ಗಂಟಿಹೊಳೆ ಆಕ್ರೋಶ..

‘ಆವೆ ಮಣ್ಣನ್ನು ಮೈನ್ಸ್‌ ಎಂದು ಪರಿಗಣಿಸಬೇಡಿ’: ಸರ್ಕಾರದ ನಿರ್ಧಾರಕ್ಕೆ ಗಂಟಿಹೊಳೆ ಆಕ್ರೋಶ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಆವೆ ಮಣ್ಣನ್ನು ಮೈನ್ಸ್‌ ಎಂದು ಸರ್ಕಾರ ಪರಿಗಣಿಸಿರುವುದಕ್ಕೆ ಕರಾವಳಿ ಜಿಲ್ಲೆಗಳ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.'UDAYA NEWS' ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯ.. ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಬೈಂದೂರು ಶಾಸಕ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿದ್ದಾರೆ.ಹಂಚಿನ ಕಾರ್ಖಾನೆಗಳು ಸಾವಿರಾರು ಬಡವರಿಗೆ ಬದುಕು ಕಲ್ಪಿಸಿದೆ. ಆದರೆ ಹಂಚಿನ ಕಾರ್ಖಾನೆಗಳಿಗೆ ಅಗತ್ಯವಾಗಿರುವ ಆವೆ ಮಣ್ಣನ್ನು ಮೈನ್ಸ್‌ ಎಂದು ಸರ್ಕಾರ ಪರಿಗಣಿಸಿದೆ. ಇದರಿಂದ ಕಾರ್ಖಾನೆಗಳು ಮುಚ್ಚುವ ಪರಿಸ್ಥಿತಿ ಉದ್ಭವವಾಗಿದೆ. ಕಾರ್ಖಾನೆಗಳು ಬಾಗಿಲು ಹಾಕಿದರೆ ಸಾವಿರಾರು ಬಡವರಿಗೆ ಅನ್ಯಾಯವಾಗಲಿದೆ.#CongressFailsKarnataka pic.twitter.com/uBamTkA3eV — BJP Karnataka (@BJP4Karnataka) March 13, 2025ಆವೆ ಮಣ್ಣನ್ನು ಹಂಚಿನ ಕಾರ್ಖಾನೆಗಳಿಗೆ ಬಳಸಲಾಗುತ್ತಿದೆ ಎಂದು ಸರ್ಕಾರದ ಗಮನಸೆಳೆದ ಅವರು, ಹಂಚಿನ ಕಾರ್ಖಾನೆಗಳು ಸಾವಿರಾರು ಬಡವರಿಗೆ ಬದುಕು ಕಲ್ಪಿಸಿದೆ. ಆದರೆ ಹಂಚಿನ ಕಾರ್ಖಾನೆಗಳಿಗೆ ಅಗತ್ಯವಾಗಿರುವ ಆವೆ ಮಣ್ಣನ್ನು...
ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಲಬುರಗಿ: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ.ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ ನಡೆದ ಸಂವಾದದ ವೇಳೆ ಸಚಿವರು ಈ ವಿಷಯ ತಿಳಿಸಿದ್ದಾರೆ.ಸಂವಾದದ ವೇಳೆ ಜಯದೇವದ ಹಿರಿಯ ವೈದ್ಯರು ಕೆಲವು ವಿಷಯ ಪ್ರಸ್ತಾಪಿಸಿದರು. ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷಗಳನ್ನು ವ್ಯಯಿಸಿರಲಾಗಿರುತ್ತದೆ. 60 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ ಸೇವೆ ಸಲ್ಲಿಸಲು ಅವಕಾಶ ಲಭ್ಯವಾಗಿರುತ್ತದೆ ಎಂದು ವೈದ್ಯರು ಗಮನ ಸೆಳೆದರು.ಆಗ ಸಚಿವರು ಮಾತನಾಡಿ,...
ರಾಜ್ಯದಲ್ಲಿ ಕುರಿಗಾರರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ:

ರಾಜ್ಯದಲ್ಲಿ ಕುರಿಗಾರರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ:

Focus, ಪ್ರಮುಖ ಸುದ್ದಿ, ರಾಜ್ಯ
ಗದಗ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಉಗಳವಾಟ ಗ್ರಾಮದಲ್ಲಿ ಕುರಿಗಾಹಿಯ ಕತ್ತು ಕತ್ತರಿಸಿ ಹತ್ಯೆ ಮಾಡಿರುವದನ್ನು ಖಂಡಿಸಿ, ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ಕುರುಬ ಸಮಾಜದ ಮಹಿಳಾ ಪಿ.ಡಿ.ಓ ಮೇಲೆ ಹಲ್ಲೆಮತ್ತು ಕಲಬುರಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿ ಕುರುಬರಿಗೆ ಬಹಿಷ್ಕಾರ ಹಾಕಿರುವದನ್ನು ಖಂಡಿಸಿ ಗದಗ ಜಿಲ್ಲೆಯ ಕುರುಬ ಸಮುದಾಯದ ವಿವಿಧ ಸಂಘಟನೆಗಳು ಹಾಗೂ ಜಿಲ್ಲಾ ಕುರಿಗಾರರ ಸಹಕಾರಿ ಸಂಘಗಳ ಒಕ್ಕೂಟದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ.ಗದಗ ನಗರದ ಟಿಪ್ಪು ವೃತ್ತದಿಂದ ಕುರುಬ ಸಮಾಜ ಬಾಂಧವರು ನೂರಾರು ಕುರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿವರೆಗೂ ತೆರಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. 'UDAYA NEWS' ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯ ಬಾಗಲಕೋಟೆ ಜಿಲ್ಲೆ, ಬಾದಾಮಿ ತಾಲ್ಲೂಕು, ಉಗಲವಾಟ ಗ್ರಾಮದಲ್ಲಿ ಕುರಿಗಾಹಿ ಯುವಕ ಶರಣಪ್ಪ ಜಮ್ಮನಕಟ್ಟಿಯ ಮೇಲೆ ದುಷ್ಕರ್ಮಿಗಳು ರಾಕ್ಷಸಿಕೃತ್ಯ ಮೆರೆದು ಕತ್ತು ಸೀಳಿ ಕೊಂದು ಹಾಕಿದ್ದಾರೆ. ಒಂದೇ ತಿಂಗಳಿನಲ್ಲಿ ಮೂ...
‘ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ’ ಯಾಕೆ ಗೊತ್ತಾ?

‘ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ’ ಯಾಕೆ ಗೊತ್ತಾ?

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಲಖನೌ: ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ. ಐತಿಹಾಸಿಕ ‘ಲಾಟ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ.This was never happening before 2014 that mosques in India were being covered before Holi.BJP has destroyed this country 👇pic.twitter.com/ezd1n7tR3w — Dhruv Rathee (Parody) (@dhruvrahtee) March 12, 2025ಹೋಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಾಗಾಗಿ ಶಹಜಹಾನ್‌ಪುರದಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗುವ ‘ಲಾಟ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ಕರಮ್ ಕೈಗೊಂಡಿದೆ. 20 ಮಸೀದಿಗಳಿಗೆ ಟಾರ್ಪಾಲಿನ್‌ ಹೊದಿಸಲಾಗುವುದು. ಸುರಕ್ಷತೆ ದೃಷ್ಟಿಯಿಂದ ಮಸೀದಿಗಳು ಹಾಗೂ ಟ್ರಾ...
ಬಲೂಚಿಸ್ತಾನ ರೈಲು ಅಪಹರಣ: ಯಶಸ್ವೀ ಕಾರ್ಯಾಚರಣೆಯಲ್ಲಿ ಎಲ್ಲಾ ಪ್ರಯಾಣಿಕರ ರಕ್ಷಣೆ

ಬಲೂಚಿಸ್ತಾನ ರೈಲು ಅಪಹರಣ: ಯಶಸ್ವೀ ಕಾರ್ಯಾಚರಣೆಯಲ್ಲಿ ಎಲ್ಲಾ ಪ್ರಯಾಣಿಕರ ರಕ್ಷಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲು ಅಪಹರಣ ಮಾಡಿರುವ ಉಗ್ರರ ವಿರುದ್ದ ಸೆಣಸಾಡಿರುವ ಸೇನಾ ಪಡೆಗಳು ಎಲ್ಲಾ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ರೈಲಿನ್ನು ವಶಕ್ಕೆ ಪಡೆದು ಅಪಹರಿಸಿದ್ದ ಉಗ್ರರು, 400 ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ಮಂಗಳವಾರ ಈ ರೈಲನ್ನು ಹಿಡಿತಕ್ಕೆ ತೆಗೆದುಕೊಂಡಿದ್ದರು. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಈ ದಾಳಿಯ ಹೊಣೆ ಹೊತ್ತುಕೊಂಡಿದೆ.ಈ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ ರೈಲನ್ನು ಹೈಜಾಕ್ ಮಾಡಿದ್ದ ಬಲೂಚಿಸ್ತಾನ ಬಂಡುಕೋರರ ಪೈಕಿ ಸುಮಾರು 30 ಉಗ್ರರನ್ನು ಹತ್ಯೆ ಮಾಡಿದೆ. 30 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆಯಲ್ಲಿ, 340 ಕ್ಕೂ ಹೆಚ್ಚು ರೈಲು ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ, ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆಯ 2...
VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಕರ್ನಾಟಕದ ಪುರಾಣ ಪ್ರಸಿದ್ಧ ಶ್ರೀ ಪೊಳಲಿ ಕ್ಷೇತ್ರ ಒಂದಿಲ್ಲೊಂದು ಮಹಿಮೆಯಿಂದ ಗಮನಸೆಳೆಯುತ್ತಿರುತ್ತದೆ. ಶತಮಾನಗಳಷ್ಟು ಹಳೆಯ ಈ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ 105 ವರ್ಷಗಳ ಬಳಿಕ ನಡೆದ 'ಶತ ಚಂಡಿಕಾಯಾಗ' ಆಸ್ತಿಕ ವಲಯದ ಕುತೂಹಲದ ಕೇಂದ್ರಬಿಂದುವಾಗಿತ್ತು. ಇದೀಗ ಪುರಾಣ ಪ್ರಸಿದ್ಧ 'ಚೆಂಡಿನ ಉತ್ಸವ'ಕ್ಕೆ ಪೊಳಲಿ ಕ್ಷೇತ್ರ ಸಜ್ಜಾಗಿರುವಂತೆಯೇ ಶ್ರೀ ಕ್ಷೇತ್ರದ ಗುಣಗಾನ ಮಾಡಿರುವ ಹಾಡೊಂದು ಬಿಡುಗಡೆಯಾಗಿದೆ.https://www.youtube.com/watch?v=LGZAxO0gJzkಪೊಳಲಿ ಸನ್ನಿಧಾನದಲ್ಲಿ ನಿನ್ನೆ (ಬುಧವಾರ) ಬಿಡುಗಡೆಯಾಗಿರುವ 'ಪುರಲ್ದ ಸಿರಿಯೇ..' ಹೆಸರಿನ ಭಕ್ತಿ ಗಾಯನದ ವೀಡಿಯೊ ನಾಡಿನ ಆಸ್ತಿಕ ಸಮೂಹದ ಚಿತ್ತವನ್ನು ಸೂಜಿಗಲ್ಲಿನಂತೆ ಸೆಳೆದಿಟ್ಟುಕೊಳ್ಳುವಂತಿದೆ.ದೇವೀ ನೆಲೆಯಾಗಿರುವ ಪೊಳಲಿಯನ್ನು ತುಳು ಭಾಷೆಯಲ್ಲಿ 'ಪುರಾಲ್' ಎಂದು ಕರೆಯಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಭಕ್ತ ಸೀಮೆಗೆ ಪೊಳಲಿ ರಾಜರಾಜೇಶ್ವರಿಯೇ ನಾಡಿನ ಅಧಿದೇವತೆ. ಈ ಸೀಮೆಯುದ್ದಕ್ಕೂ ಪೊಳಲಿ ದೇವಿಯನ್ನು 'ಪುರಲ್ದ ಉಳ್ಳಾಲ್ತಿ' ಎಂದೇ ಆಸ್ತಿಕರು ಕರೆಯು...
‘ಗ್ರೇಟರ್ ಬೆಂಗಳೂರು’: ರಾಜಧಾನಿ ನಗರ ವಿಭಜನೆ ಮೂಲಕ ಲೂಟಿಗೆ ಹುನ್ನಾರ?

‘ಗ್ರೇಟರ್ ಬೆಂಗಳೂರು’: ರಾಜಧಾನಿ ನಗರ ವಿಭಜನೆ ಮೂಲಕ ಲೂಟಿಗೆ ಹುನ್ನಾರ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿಯನ್ನು ಗ್ರೇಟರ್ ಬೆಂಗಳೂರು ಹೆಸರಲ್ಲಿ ವಿಭಜಿಸುವ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.'UDAYA NEWS' ಈಗ ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯಬೆಂಗಳೂರನ್ನು ಕೆಂಪೇಗೌಡರು ಯೋಜನಾ ಬದ್ಧವಾಗಿ ರೂಪಿಸಿದ್ದರು. ಮೈಸೂರು ಮಹಾರಾಜರ ಕಾಲದಲ್ಲೂ ಬೆಂಗಳೂರು ಯೋಜನಾಬದ್ಧವಾಗಿತ್ತು. ಆದರೆ ನಮ್ಮ ಕಾಲದಲ್ಲಿ ಯೋಜನಾ ಬದ್ಧವಾಗಿದ್ದ ನಗರವನ್ನು ಯಾವ ಸ್ಥಿತಿಗೆ ತಲುಪಿಸಿದ್ದೇವೆ ಎಂಬುದರ ಬಗ್ಗೆ ನಾವು ಅವಲೋಕಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾರ್ಮಿಕವಾಗಿ ಹೇಳಿದ್ದಾರೆ.ಬೆಂಗಳೂರನ್ನು ಕೆಂಪೇಗೌಡರು ಯೋಜನಾ ಬದ್ಧವಾಗಿ ರೂಪಿಸಿದ್ದರು. ಮೈಸೂರು ಮಹಾರಾಜರ ಕಾಲದಲ್ಲೂ ಬೆಂಗಳೂರು ಯೋಜನಾಬದ್ಧವಾಗಿತ್ತು. ಆದರೆ ನಮ್ಮ ಕಾಲದಲ್ಲಿ ಯೋಜನಾ ಬದ್ಧವಾಗಿದ್ದ ನಗರವನ್ನು ಯಾವ ಸ್ಥಿತಿಗೆ ತಲುಪಿಸಿದ್ದೇವೆ ಎಂಬುದರ ಬಗ್ಗೆ ನಾವು ಅವಲೋಕಿಸಬೇಕಾಗಿದೆ. ಗ್ರೇಟರ್ ಬೆಂಗಳೂರು ಎಂದು ವಿಭಾಗಿಸುವ ಮೂಲಕ ಲೂಟಿ ಹೊಡೆಯುವವರಿಗೆ ಅವಕಾಶ… pic.twitter.com/TT7yT44Ys2— BJP Karnataka (@BJP4Karnataka) March 12, 2025ಗ್ರೇಟರ್ ಬೆಂಗಳೂರು ...
ಕೆ.ಎ.ಎಸ್. ಪರೀಕ್ಷೆ: ಭಾಷಾಂತರ ಅವಾಂತರ ಕೊನೆಗೊಳಿಸಲು KPSCಗೆ ಸಿಎಂ ತಾಕೀತು

ಕೆ.ಎ.ಎಸ್. ಪರೀಕ್ಷೆ: ಭಾಷಾಂತರ ಅವಾಂತರ ಕೊನೆಗೊಳಿಸಲು KPSCಗೆ ಸಿಎಂ ತಾಕೀತು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಅವರ ಮೇಲೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದವರು ಸೂಚಿಸಿದ್ದಾರೆ.ಭಾಷಾಂತರಕಾರರ ಲೋಪವಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಆಯೋಗವು ನಡೆಸುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಮೊದಲು ಕನ್ನಡದಲ್ಲಿ ತಯಾರಿಸಿ, ನಂತರ ಇಂಗ್ಲೀಷ್ ಬಗ್ಗೆ ಭಾಷಾಂತರ ಮಾಡಲು ಆಯೋಗಕ್ಕೆ ಸೂಚನೆಯನ್ನು ನೀಡಲಾಗುವುದು ಎಂದವರು ತಿಳಿಸಿದ್ದಾರೆ.ಏನೇ ಆದರೂ ಈಗ ಪ್ರಕರಣವು ಉಚ್ಛ ನ್ಯಾಯಾಲಯ ಹಾಗೂ ಕೆಎಟಿಗಳು ನೀಡುವ ಆದೇಶಗಳನ್ನು ಆಧರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು...
ಸಿಎಂ ಸಿದ್ದರಾಮಯ್ಯ ಮನೆ ಬಾಗಿಲಿಗೆ ತಲುಪಿತೇ..? ಪೋಸ್ಟ್ ಹಾಕಿದ ಮಾಳವೀಯಗೆ ನೆಟ್ಟಿಗರ ಕ್ಲಾಸ್

ಸಿಎಂ ಸಿದ್ದರಾಮಯ್ಯ ಮನೆ ಬಾಗಿಲಿಗೆ ತಲುಪಿತೇ..? ಪೋಸ್ಟ್ ಹಾಕಿದ ಮಾಳವೀಯಗೆ ನೆಟ್ಟಿಗರ ಕ್ಲಾಸ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣ ರಾಜ್ಯ ರಾಜಕಾರಣದಲ್ಲೂ ತಲ್ಲಣ ಸೃಷ್ಟಿಸಿದೆ. ದುಬೈನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹೊತ್ತು ತಂದ ಆರೋಪದಲ್ಲಿ ನಟಿ ರನ್ಯಾ ರಾವ್ ಬಂಧನವಾಗಿದೆ. ಈ ಸ್ಮಗ್ಲಿಂಗ್ ಕೇಸ್ ಕುರಿತಂತೆ DRI, CBI ತನಿಖೆ ನಡೆಸುತ್ತಿದ್ದು, ಪೊಲೀಸ್ ಅಧಿಕಾರಿಗಳ ಶಾಮೀಲು ಬಗ್ಗೆಯೂ ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ.ಇನ್ನೊಂದೆಡೆ ರಮ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್'ನಲ್ಲಿ ರಾಜ್ಯದ ಸಚಿವರಿಬ್ಬರ ಕೈವಾಡ ಇರುವ ಬಗ್ಗೆ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡುತ್ತಿದ್ದು ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕರ ನಡುವೆ ವಾಕ್ಸಮರ ನಡೆದಿದೆ. ಕೆಜಿಎಫ್..? ಈ ಮಧ್ಯೆ, ಕರ್ನಾಟಕದಲ್ಲಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಾಗಿಲಿಗೆ ತಲುಪಿದೆ ಎಂದು ಬಿಜೆಪಿ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ.'ಕಾಂಗ್ರೆಸ್ ಗೋಲ್ಡ್ ಫೀಲ್ಡ್' (#CongressGoldField) ಎಂಬ ಹ್ಯಾಷ್ ಟ್ಯಾಗ್ ಮೂಲಕ ಸಾಮಾಜಿಕ...