Tuesday, April 7

Author: info@rajasdigital.com

ರೈಲು ಅಪಹರಣ ಬೇಧಿಸಿದ ಸೇನೆ; 16 ಉಗ್ರರ ಹತ್ಯೆ, ನೂರಕ್ಕೂ ಹೆಚ್ಚು ಪ್ರಯಾಣಿಕರ ರಕ್ಷಣೆ

ರೈಲು ಅಪಹರಣ ಬೇಧಿಸಿದ ಸೇನೆ; 16 ಉಗ್ರರ ಹತ್ಯೆ, ನೂರಕ್ಕೂ ಹೆಚ್ಚು ಪ್ರಯಾಣಿಕರ ರಕ್ಷಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲು ಅಪಹರಣ ಮಾಡಿರುವ ಉಗ್ರರ ಧಮನ ಕಾರ್ಯಾಚರಣೆ ಮುಂದುವರಿಸಿರುವ ಸೇನೆ ನೂರಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.After 6 hours of hijacking Jaffar Express train in Balochistan, 20 Pakistani military personnel were eliminated, and 182 hostages remain in custody of BLA.More power to Balochs 💪#TrainHijack #Balochistan pic.twitter.com/WbKCWs55yM — Wahida 🇦🇫 (@RealWahidaAFG) March 11, 2025ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ರೈಲಿನ್ನು ವಶಕ್ಕೆ ಪಡೆದು ಅಪಹರಿಸಿದ್ದ ಉಗ್ರರು, ಸುಮಾರು 400 ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ಮಂಗಳವಾರ ಈ ರೈಲನ್ನು ಹಿಡಿತಕ್ಕೆ ತೆಗೆದುಕೊಂಡಿದ್ದರು. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಈ ದಾಳಿಯ ಹೊಣೆ ಹೊತ್ತುಕೊಂಡಿದೆ.ಈ ಭಯೋತ್ಪಾದಕರ ವಿರುದ್ಧ ಕಾ...
‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ತನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ನಟ ಸರ್ಶನ್ ಬೇಸರ ವ್ಯಕ್ತಪಡಿಸಿದ್ಫ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್, ಇನ್ನೂ ಸಾಧನೆ ಮಾಡದ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ. View this post on Instagram  A post shared by Darshan Thoogudeepa Shrinivas (@darshanthoogudeepashrinivas)'ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಅದರಿಂದ ಡ...
2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಜ್ವಲ್ ದೇವರಾಜ್, ಅಕ್ಷತಾಗೆ ಅತ್ಯುತ್ತಮ ನಟ, ನಟಿ ಪುರಸ್ಕಾರ

2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಜ್ವಲ್ ದೇವರಾಜ್, ಅಕ್ಷತಾಗೆ ಅತ್ಯುತ್ತಮ ನಟ, ನಟಿ ಪುರಸ್ಕಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾದರೆ, ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿಯಾಗಿ ಗುರುತಾಗಿದ್ದಾರೆ. ಪಿಂಕಿ ಎಲ್ಲಿ ಸಿನಿಮಾಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ. ಪ್ರಶಸ್ತಿ ಪಟ್ಟಿ ಹೀಗಿದೆ.ಅತ್ಯುತ್ತಮ ನಟ: ಪ್ರಜ್ವಲ್‍ ದೇವರಾಜ್‍ (ಚಿತ್ರ: ಜಂಟಲ್‌ಮನ್) ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಚಿತ್ರ: ಪಿಂಕಿ ಎಲ್ಲಿ) ಅತ್ಯುತ್ತಮ ಪೋಷಕ ನಟ: ರಮೇಶ್‍ ಪಂಡಿತ್‍, ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ, ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ 2ನೇ ಅತ್ಯುತ್ತಮ ಚಿತ್ರ: ವರ್ಣಪಟಲ 3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು ವಿಶೇಷ ಸಾಮಾಜಿಕ ಕಾಳಜಿ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್ ಅತ್ಯುತ್ತಮ ಮಕ್ಕಳ ಚಿತ್ರ: ಪದಕ ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ನೀಲಿ ಹಕ್ಕಿ ಅತ್ಯುತ್ತಮ ಪ್ರಾದೇಶಿಕ ಚಿತ್ರ: ಜೀಟಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ: ...
‘ಗ್ಯಾರಂಟಿ’ ಅವಾಂತರ: ಜನರ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ?

‘ಗ್ಯಾರಂಟಿ’ ಅವಾಂತರ: ಜನರ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.'UDAYA NEWS' ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರನ್ನು ನೇಮಿಸಿ, 25,000 ರೂ. ಸಂಬಳ ನೀಡಿ, ಅವರಿಗೆ ಆಪ್ತ ಸಹಾಯಕರನ್ನು ನೇಮಿಸಲಾಗುತ್ತಿದೆ. 1,100 ರೂ. ಸಿಟ್ಟಿಂಗ್‌ ಫೀಸ್‌ ನಿಗದಿಪಡಿಸಲಾಗಿದೆ. ರಾಜ್ಯದ ಅಧ್ಯಕ್ಷನಿಗೆ 40,000 ರೂ. ಸಂಬಳ, ಉಪಾಧ್ಯಕ್ಷನಿಗೆ 25,000 ರೂ. ಸಂಬಳ ನೀಡಲಾಗುತ್ತಿದೆ. ಪ್ರತಿ ವರ್ಷ 15-20 ಕೋಟಿ ರೂ. ಲೂಟಿ...
‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ

‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ಯಾವ ಗ್ಯಾರಂಟಿ ಕೊಡದಿದ್ದರೂ ಸರ್ಕಾರ ರಾಜ್ಯದ ಜನರ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗೆ ಆದ್ಯತೆ ನೀಡಿ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರ ಕೈಗೊಳ್ಳುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ವಿಜಯೇಂದ್ರ, ಸರ್ಕಾರದ ತೀರ್ಮಾನಗಳ ಬಗ್ಗೆ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಶೈಕ್ಷಣಿಕ ಕ್ಷೇತ್ರಕ್ಕೆ ಪೆಟ್ಟು ಬೀಳಲಿದೆ ಎಂಬ ಮಾತು ಅಕ್ಷರಶಃ ಸತ್ಯ. 9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟು ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಒಂದೆಡೆಯಾದರೆ ಮತ್ತೊಂದೆಡೆ ಇರುವ ವಿಶ್ವವಿದ್ಯಾಲಯಗಳ ಪರಿಸ್ಥಿತಿ ಶೋಚನೀಯ ಹಂತ ತಲುಪಿರುವುದು ಆರ್ಥಿಕ ದಿವಾಳಿ ಅಂಚಿಗೆ ತಲುಪಿರುವ ಸರ್ಕಾರದ ದುಸ್ಥಿತಿಯನ್ನು ಸಾಕ್ಷೀಕರಿಸುತ್ತಿದೆ ಎಂದು ವಿಷಮೇಶಿಸಿದ್ದಾರೆ.ಶಿಕ್ಷಣದ ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ ಹಕ್ಕು ಪ್ರತಿಯೊಬ್ಬ...
ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

Focus, ಪ್ರಮುಖ ಸುದ್ದಿ, ರಾಜ್ಯ
ಗದಗ್: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ 2017ರಲ್ಲಿ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನರ ವಿರುದ್ಧ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.8 ವರ್ಷಗಳ ಹಿಂದೆ, 2017ರಲ್ಲಿ ಅಕ್ರಮ ಮರಳು ಸಾಗಿಸುವ ವಾಹನ ತಡೆದ ಪೊಲೀಸರು ಚಾಲಕನನ್ನು ಥಳಿಸಿದ್ದರಿಂದ ಆತ ಮೃತಪಟ್ಟಿದ್ದ ಎಂದು ಆರೋಪಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು. ಆ ಸಂದರ್ಭದಲ್ಲಿ ಉದ್ರಿಕ್ತರು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದರು. ಪೀಠೋಪಕರಗಳು, ಪೊಲೀಸ್ ಜೀಪ್ ಹಾಗೂ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದರು.ಈ ಘಟನೆ ಸಂಬಂಧ 112 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪೈಕಿ 8 ಮಂದಿ ಮೃತಪಟ್ಟಿದ್ದಾರೆ. ಈ ಪ್ರಕರಣ ಕುರಿತಂತೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ 23 ಜನರನ್ನು ದೋಷಿ ಎಂದು ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಕಾಯ್ದಿರಿಸಿದೆ....
ಗೋಲ್ಡ್ ಸ್ಮಗ್ಲಿಂಗ್ ಕೇಸ್: ಡಿಜಿಪಿ ರಾಮಚಂದ್ರ ರಾವ್ ವಿರುದ್ಧವೂ ತನಿಖೆಗೆ ಆದೇಶ

ಗೋಲ್ಡ್ ಸ್ಮಗ್ಲಿಂಗ್ ಕೇಸ್: ಡಿಜಿಪಿ ರಾಮಚಂದ್ರ ರಾವ್ ವಿರುದ್ಧವೂ ತನಿಖೆಗೆ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕಾರಣದಲ್ಲೂ ತಲ್ಲಣ ಸೃಷ್ಟಿಸಿರುವ ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಹಠಾತ್ ತಿರುವು ಸಿಕ್ಕಿದೆ‌. ಈ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿರುದ್ಧವೂ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದಲ್ಲಿ ನಟಿ ರನ್ಯಾ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ನಟಿ ರನ್ಯಾ ಅವರು ವಿಮಾನ ನಿಲ್ದಾಣದಲ್ಲಿ ತಂದೆಯ ಹೆಸರು ಬಳಸಿ ಭದ್ರತಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ.ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಬಗ್ಗೆ ಈ ತನಿಖೆ ನಡೆಯಲಿದೆ. ಇದಕ್ಕಾಗಿ ಹಿರಿಯ ಐಪಿಎಸ್ ಅಧಿಕಾರಿ ಗೌರವ್ ಗುಪ್ತಾ ತನಿಖಾ ಅಧಿಕಾರಿಯಾಗಿ ಸರ್ಕಾರ ನೇಮಿಸಿದೆ....
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ Mo-Jo-Kit: ಅರ್ಜಿ ಆಹ್ವಾನ.

ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ Mo-Jo-Kit: ಅರ್ಜಿ ಆಹ್ವಾನ.

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ Mo-Jo-Kitಗಳನ್ನು ವಿತರಿಸಲು ಸರ್ಕಾರ ಅರ್ಜಿ ಆಹ್ವಾನಿಸಿದೆ.ಇಂಗ್ಲಿಷ್‌ನಲ್ಲೂ UdayaNews ಲಭ್ಯ ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು.ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬAಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮು...
‘X’ ಮೇಲೆ ಸೈಬರ್‌ ದಾಳಿ: ಬೆಚ್ಚಿಬಿದ್ದ ಮುಸ್ಕ್..

‘X’ ಮೇಲೆ ಸೈಬರ್‌ ದಾಳಿ: ಬೆಚ್ಚಿಬಿದ್ದ ಮುಸ್ಕ್..

Focus, ದೇಶ-ವಿದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್:‌ ಟ್ವಿಟರ್‌' ಕೈಕೊಟ್ಟ ಪರಿಣಾಮ ಸೋಮವಾರ ಸಾಮಾಜಿಕ ಮಾಧ್ಯಮ ಅಲ್ಲೋಲಕಲ್ಲೋಲವಾಯಿತು. ಎಲಾನ್‌ ಮಸ್ಕ್ ಒಡೆತನದ ಟ್ವಿಟರ್‌'ಗೆ ಸೋಮವಾರ ಜಗತ್ತಿನ ಬಹುತೇಕ ಪ್ರದೇಶಗಳಲ್ಲಿ ತಾಂತ್ರಿಕ ಸಮಸ್ಯೆಗೆ ತುತ್ತಾಯಿತು. ಸರ್ವರ್‌ ಏರುಪೇರಿನಿಂದಾಗಿ ಟ್ವಿಟರ್‌ ಬಳಕೆ ನಿಧಾನವಾಗಿತ್ತು. ಈ ಬಗ್ಗೆ ಸಾರ್ವಜನಿಕವಲಯದಲ್ಲಿ ಮಸ್ಕ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.ಈ ನಡುವೆ, ಸೈಬರ್ ದಾಳಿಯಿಂದಾಗಿ ಈ ರೀತಿ ಆಗಿದೆ ಎಂದು 'X' ಮಾಲೀಕ ಎಲಾನ್‌ ಮಸ್ಕ್‌ ತಿಳಿಸಿದ್ದಾರೆ. ಈ ಕುರಿತು ತಮ್ಮ 'X' ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, 'X' ಮೇಲೆ ಸೈಬರ್‌ ದಾಳಿ ನಡೆದಿದ್ದು, ಸಂಘಟಿತ ಗುಂಪು ಅಥವಾ‌ ವಿರೋಧಿ ರಾಷ್ಟ್ರ ಇದರ ಹಿಂದಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ."There was (still is) a massive cyberattack against 𝕏. We get attacked every day, but this was done with a lot of resources. Either a large, coordinated group and/or a country is involved. Tracing …" ಎಂದು ಅವರು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ....
ಅಮೆಜಾನ್, ಬಿಗ್ ಬ್ಯಾಸ್ಕೆಟ್, ಡಿ.ಮಾರ್ಟ್ ಸೇರಿದಂತೆ ಎಲ್ಲ ಇ–ಪ್ಲಾಟ್​ಫಾರ್ಮ್ ಎಪಿಎಂಸಿ ವ್ಯಾಪ್ತಿಗೆ

ಅಮೆಜಾನ್, ಬಿಗ್ ಬ್ಯಾಸ್ಕೆಟ್, ಡಿ.ಮಾರ್ಟ್ ಸೇರಿದಂತೆ ಎಲ್ಲ ಇ–ಪ್ಲಾಟ್​ಫಾರ್ಮ್ ಎಪಿಎಂಸಿ ವ್ಯಾಪ್ತಿಗೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಮೆಜಾನ್, ಬಿಗ್ ಬ್ಯಾಸ್ಕೆಟ್, ಡಿ.ಮಾರ್ಟ್ ಸೇರಿದಂತೆ ಎಲ್ಲ ಇ–ಪ್ಲಾಟ್​ಫಾರ್ಮ್ ವೇದಿಕೆಗಳು ಇನ್ಮುಂದೆ ಎಪಿಎಂಸಿ ನಿಯಂತ್ರಣಕ್ಕೆ ಬರಲಿವೆ. ಈ ಸಂಬಂಧದ ವಿದೇಯಕವನ್ನು ವಿಧಾನಸಭೆ ಅಂಗೀಕರಿಸಿದೆ.ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಈ ವಿದೇಯಕ ಸೋಮವಾರ ಅಂಗೀಕಾರಗೊಂಡಿದೆ.ಮಸೂದೆ ಮಂಡಿಸಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಈ ಹಿಂದೆ ಸರ್ಕಾರ ಎಪಿಎಂಸಿ ಯಾರ್ಡ್‌ಗಳನ್ನು ಮಾತ್ರ ನಿಯಂತ್ರಿಸುತ್ತಿತ್ತು. ಆದರೆ ಈ ಕಾಮರ್ಸ್ ಕ್ಷೇತ್ರವನ್ನು ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಇದೀಗ ಈ ಮಸೂದೆ ಕಾನೂನು ಆಗಿ ಜಾರಿಗೆ ಬಂದರೆ ಸೆಸ್ ಪಾವತಿಸದೆ ವ್ಯಾಪಾರ ಮಾಡುವುದನ್ನು ನಿಯಂತ್ರಿಸಲು ಈ ಕಾನೂನು ತರುತ್ತಿದ್ದೇವೆ ಎಂದು ತಿಳಿಸಿದರುಈ ಮಸೂದೆಯಿಂದಾಗಿ ಇ- ಪ್ಲಾಟ್ ಫಾರ್ಮ್'ಗಳಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಲೈಸನ್ಸ್, ಸೆಸ್ ನಿರ್ವಹಿಸುವ, ಅಮಾನತುಪಡಿಸುವ ಅಧಿಕಾರ ಎಪಿಎಂಸಿ ಅಧಿಕಾರಿಗಳಿಗೆ ಲಭಿಸಲಿದೆ....