Saturday, April 11

Author: info@rajasdigital.com

ಚಿತ್ರದುರ್ಗದ ಸಿಬಾರ ಬಳಿ ಲಾರಿ-ಕಾರು ಡಿಕ್ಕಿ; ಐವರು ದುರ್ಮರಣ

ಚಿತ್ರದುರ್ಗದ ಸಿಬಾರ ಬಳಿ ಲಾರಿ-ಕಾರು ಡಿಕ್ಕಿ; ಐವರು ದುರ್ಮರಣ

Focus, ಪ್ರಮುಖ ಸುದ್ದಿ, ರಾಜ್ಯ
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಭಾನುವಾರ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದೆ.ಮೃತರನ್ನು ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ, ವಿದ್ಯಾರಣ್ಯಪುರದ ರುದ್ರಸ್ವಾಮಿ, ಮಲ್ಲಿಕಾರ್ಜುನ, ನಿರ್ದೇಚಿದಂಬರಾಚಾರ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರು ಮೂಲದವರೆನ್ನಲಾಗಿದೆ.ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ರಾಜ್ಯಕ್ಕೆ ಬರುವ ಪ್ರವಾಸಿಗರ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಭರವಸೆ

ರಾಜ್ಯಕ್ಕೆ ಬರುವ ಪ್ರವಾಸಿಗರ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಭರವಸೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ಬಳಿ ಇಸ್ರೇಲಿ ಮಹಿಳೆ ಮೇಲೆ ನಡೆದಿರುವ ಅತ್ಯಾಚಾರ ಘಟನೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದವರು ಹೇಳಿದ್ದಾರೆ.ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ ಎಂದಿರುವ ಸಿಎಂ, ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದವರು ಭರವಸೆ ನೀಡಿದ್ದಾರೆ.ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ...
ಸಿರಿಯಾದಲ್ಲಿ ಹಿಂಸಾಚಾರ ಭುಗಿಲು: ಸಂಘರ್ಷದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಬಲಿ

ಸಿರಿಯಾದಲ್ಲಿ ಹಿಂಸಾಚಾರ ಭುಗಿಲು: ಸಂಘರ್ಷದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಬಲಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಬೈರುತ್: ಸಿರಿಯಾದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಷರ್ ಅಸ್ಸಾದ್ ಬೆಂಬಲಿಗರ ನಡುವಿನ ಕಾಳಗದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಎರಡು ದಿನಗಳ ಸಂಘರ್ಷಗಳು ಪರಸ್ಪರ ಸೇಡಿನ ಹತ್ಯೆಗಳಿಗೆ ಸಾಕ್ಷಿಯಾಗುತ್ತಿವೆ. ಈ ಸಂಘರ್ಷದಲ್ಲಿ ಸಂಖ್ಯೆ ಸಾವಿರಕ್ಕೂ ಹೆಚ್ಚು ನಾಗರಿಕರ ಮಾರಣಹೋಮವಾಗಿದೆ ಎನ್ನಲಾಗುತ್ತಿದೆ.ಸುಮಾರು 745 ನಾಗರಿಕರು ಸಾವನ್ನಪ್ಪಿದರೆ, 125 ಮಂದಿ ಭದ್ರತಾ ಪಡೆ ಯೋಧರು ಹಾಗೂ ಸುಮಾರು 148 ಮಂದಿ ದಂಗೆಕೋರರು ಬಲಿಯಾಗಿದ್ದಾರೆ ಎಂದು ಸಿರಿಯನ್ ಮಾನವ ಹಕ್ಕುಗಳ ವೀಕ್ಷಣಾಲಯ ಹೇಳಿದೆ. ಅಸ್ಸಾದ್ ಅವರ ಪದಚ್ಯುತಿ ನಂತರ ಬೇಬಲಿಗರು ದಂಗೆ ಎದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಸೇನಾಪಡೆಗಳು ಹರಸಾಹಸ ನಡೆಸುತ್ತಿವೆ....
ಭೀಕರ ಅಪಘಾತ; ಬಸ್ ಪಲ್ಟಿ, ಧಗಧಗಿಸಿದ ಕಾರು; ಇಬ್ಬರು ಸಜೀವ ದಹನ

ಭೀಕರ ಅಪಘಾತ; ಬಸ್ ಪಲ್ಟಿ, ಧಗಧಗಿಸಿದ ಕಾರು; ಇಬ್ಬರು ಸಜೀವ ದಹನ

Focus, ಪ್ರಮುಖ ಸುದ್ದಿ, ರಾಜ್ಯ
ಚಿಕ್ಕಬಳ್ಳಾಪುರ: ಚಿಂತಾಮಣಿ ಬಳಿ ಖಾಸಗಿ ಬಸ್‌ ಮತ್ತು ಕಾರು ಅಪಘಾತಕ್ಕೀಡಾಗಿ ಪ್ರಯಾಣಿಕರಿಬ್ಬರು ಸಾವನ್ನಪ್ಪಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಈ ಅಪಘಾತ ನಡೆದಿದೆ. ಬಸ್ಸು ಡಿಕ್ಕಿಯಾದ ಸಂದರ್ಭದಲ್ಲಿ ಕಾರು ಧಗಧಗಿಸಿ ಹೊತ್ತಿ ಉರಿದಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಮೃತರನ್ನು ಆಂಧ್ರ ಮೂಲದ ಧನಂಜಯ ರೆಡ್ಡಿ, ಮತ್ತು ಕಲಾವತಿ ಮೃತರು ಎಂದು ಗುರುತಿಸಲಾಗಿದೆ.ಅಪಘಾತಕ್ಕೀಡಾದ ಬಸ್ಸು ಕೂಡಾ ಉರುಳಿ ಬಿದ್ದಿದ್ದು ಅದರಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ....
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು.

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2023-24ನೇ ಸಾಲಿನ 3 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು (National Transport Excellence Award) ಲಭಿಸಿವೆ.ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಈ ಒಕ್ಕೂಟವು 1965 ರ ಆಗಸ್ಟ್ 13ರಂದು ಅಸ್ತಿತ್ವಕ್ಕೆ ಬಂದಿದ್ದು, ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ.KSRTCಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಮೂರು ಪ್ರಶಸ್ತಿಗಳು ಲಭಿಸಿವೆ.ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ನಿವೃತ್ತ IPS ಅಧಿಕಾರ...
‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್

‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಆನೇಕಲ್: ಮಹಿಳೆಯರು ವಿಶ್ವದಾದ್ಯಂತ ಅನೇಕ ರಂಗಗಳಲ್ಲಿ ಯಶಸ್ವಿಯಾಗಿ ತಮ್ಮ ಛಾಪು ಮೂಡಿಸಿದ್ದು ನಮ್ಮತನವನ್ನು ಮಾರ್ಚ್ 8ಕ್ಕೆ ಮಾತ್ರ ಸೀಮಿತಗೊಳಿಸ ಬಾರದು. ಸಾಗರ ತಳ, ವಿಶಾಲ ಭೂಮಿ, ಆಗಸ ದಾಟಿ ಮುನ್ನಡೆಯಬೇಕೆಂದು ಪಂಚಭಾಷಾ ತಾರೆ ಪದ್ಮಶ್ರೀ ಡಾ. ಭಾರತಿ ವಿಷ್ಣು ವರ್ಧನ್ ಕರೆ ನೀಡಿದರು.ಆನೇಕಲ್ ಸಮೀಪ ಅಲಯಂನ್ಸ್ ವಿಶ್ವವಿದ್ಯಾಲಯ ಏರ್ಪಡಿಸಿದ್ದ, ವಿಶ್ವ ಮಹಿಳಾ ಮಹಿಳಾ ದಿನಾಚರಣೆಯ ಅಂಗವಾಗಿ ಸಮಾಜದ ವಿವಿಧ ಸ್ಥರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕಿ ಮಹಿಳೆಯರಿಗೆ ಮಹಿಳಾ ಸ್ಪಂದನ ಅವಾರ್ಡ್ ವಿತರಿಸಿ ಮಾತನಾಡಿದ ಅವರು, ತಾಯಿಯಾಗಿ, ಸಹೋದರಿಯಾಗಿ, ಮಗಳಾಗಿ ವಿವಿಧ ಹಂತಗಳಲ್ಲಿ ಹೆಣ್ಣು ಪರಿಪೂರ್ಣತೆಯಿಂದ ತನ್ನ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾಳೆ. ತ್ಯಾಗಮಯಿಯಾದ ಆಕೆ ತನ್ನ ಕುಟುಂಬ ದೇಶ ಕ್ಕಾಗಿ ಕೊಡುಗೆಯನ್ನೂ ನೀಡಿ ಇತರರ ಗೆಲುವನ್ನು ತನ್ನದೆಂದು ಪರಿಭಾವಿಸಿ ತೃಪ್ತಿ ಪಡುತ್ತಾಳೆ. ಮಹಿಳೆಯರು ಇದ್ದೆಡೆ ಗೌರವ ಶಕ್ತಿ ಇದ್ದು ಪ್ರಭಾವಿತಳಾಗಿ ಕಾಣುತ್ತಾಳೆ ಎಂದರು. ಶಿಕ್ಷಣ, ಅರೋಗ್ಯ, ಉದ್ಯೋಗ, ಕೃಷಿ, ಉದ್ಯಮ ಸೇರುದಂತೆ ಹಲವು ವಿಭಾಗದ 30ಕ್ಕೂ ಹೆಚ್ಚು ಸಾಧಕರನ್ನು ಸನ್ಮಾನಿಸ...
ಪ್ರಾಧ್ಯಾಪಕಿ ‘ಲವೀನಾ ಮಾರಿಯೆಟ್ ವೇಗಸ್’ ಅವರಿಗೆ PhD ಪದವಿ

ಪ್ರಾಧ್ಯಾಪಕಿ ‘ಲವೀನಾ ಮಾರಿಯೆಟ್ ವೇಗಸ್’ ಅವರಿಗೆ PhD ಪದವಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಂಗಳೂರು ಮೂಲದ ಪ್ರಾಧ್ಯಾಪಕಿ ಲವೀನಾ ಮಾರಿಯೆಟ್ ವೇಗಸ್ ಅವರು ಯಶೋಗಾಥೆ ಬರೆದಿದ್ದಾರೆ. ಅವರ ಸುದೀರ್ಘ ಸಂಶೋಧನೆ ಹಾಗೂ ಮಹಾ ಪ್ರಬಂಧಕ್ಕೆ ಪ್ರತಿಷ್ಠಿತ ಕ್ರೈಸ್ಟ್ ವಿಶ್ವವಿದ್ಯಾಲಯವು ಸಂತ ಜೋಸೆಫ್ ವಿಶ್ವ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲವೀನಾ ಮಾರಿಯೆಟ್ ವೇಗಸ್ ಅವರಿಗೆ ಪಿಎಚ್.ಡಿ. ಪದವಿ ಪ್ರಕಟಿಸಿದೆ.ಅಪರೂಪದಲ್ಲಿ ಅಪರೂಪದ ಸಂಶೋಧನೆ ಎಂಬ ಹೆಗ್ಗಳಿಕೆಗೆ ಲವೀನಾ ಮಾರಿಯೆಟ್ ವೇಗಸ್ ಪಾತ್ರರಾಗಿದ್ದಾರೆ. 'ಮೋಡಿಫೈಡ್ ಮಲ್ಟಿ ವಾಲ್ಡ್ ಕಾರ್ಬನ್ ನಾನೊಟ್ಯೂಬ್ ಬೇಸ್ಡ್ ಸಿಸ್ಟಮ್ಸ್ ಫಾರ್ ಕ್ಯಾಟಲಿಸ್ಟ್ ಅಂಡ್ ಟ್ರಾನ್ಸ್ಪರೆಂಟ್ ಕಂಡಕ್ಟಿಂಗ್ ಎಲೆಕ್ಟ್ರೋಡ್ ಅಪ್ಲಿಕೇಶನ್ ' (MODIFIED MULTIWALLED CARBON NANOTUBE BASED SYSTEMS FOR CATALYTIC AND TRANSPARENT CONDUCTING ELECTRODE APPLICATIONS) ಎಂಬ ವಿಷಯದಲ್ಲಿ ಇತ್ತೀಚೆಗಷ್ಟೇ ಮಂಡಿಸಿರುವ ಸಂಶೋಧನಾ ಮಹಾ ಪ್ರಬಂಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮಸೆಳೆದಿದೆ. ರಾಷ್ಟ್ರೀಯ ವಿಜ್ಞಾನ ತಂತ್ರಜ್ಞಾನ ಪರಿಣಿತ ಶಿಕ್ಷಣ ತಜ್ಞರು ಈ ಮಹಾಪ್ರಬಂಧವನ್ನು ಶ್ಲಾಘಿಸಿ, ತತ್ವಜ್ಞಾನಿಗಳ ಸಾಲಿಗೆ ಲವೀನಾ ಮಾರಿಯೆಟ್ ವೇಗಸ್ ಅವ...
ಮುಸ್ಲಿಮರ ಬಗ್ಗೆ ‘ಲೆಹರ್ ಸಿಂಗ್’ ಅನುಕಂಪದ ಲಹರಿ? ಕೆಪಿಸಿಸಿ ರಮೇಶ್ ಬಾಬು ವ್ಯಂಗ್ಯ

ಮುಸ್ಲಿಮರ ಬಗ್ಗೆ ‘ಲೆಹರ್ ಸಿಂಗ್’ ಅನುಕಂಪದ ಲಹರಿ? ಕೆಪಿಸಿಸಿ ರಮೇಶ್ ಬಾಬು ವ್ಯಂಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ಸಿಂಗ್ ಅವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷ ಕಾಳಜಿಯನ್ನು ವ್ಯಕ್ತಪಡಿಸುತ್ತಿರುವುದು ಅಚ್ಚರಿಯ ಸಂಗತಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ಜಸ್ಟಿಸ್ ಆನಂದ್ ಅವರ ವರದಿಯನ್ನು ಇಟ್ಟುಕೊಂಡು ಲೆಹರ್ ಸಿಂಗ್ ದೊಡ್ಡಮಟ್ಟದ ನಾಟಕ ಆಡಲು ಪ್ರಯತ್ನ ಪಡುತ್ತಿದ್ದಾರೆ ಎಂದೂ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ.ಲೆಹರ್ ಸಿಂಗ್ ಅವರು ರಾಜ್ಯ ಬಜೆಟ್ ಬಗ್ಗೆ ಟೀಕಿರುವ ವೈಖರಿ ಬಗ್ಗೆ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ರಾಜ್ಯಸಭಾ ಸದಸ್ಯರಾದ ರಾಜಸ್ಥಾನಿ ಲೆಹರ್ ಸಿಂಗ್ ರವರು ಕಾಂಗ್ರೆಸ್ ಸರ್ಕಾರದ ಮೇಲೆ ಅನೇಕ ಆರೋಪಗಳನ್ನು ಮಾಡಿರುತ್ತಾರೆ. ತಾವೇ ಸ್ವತಃ ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ರವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷವಾದ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಸ್ಟಿಸ್ ಆನಂದ್ ಆಯೋಗದ ವಖ್ಫ್ ಆಸ್ತಿಗೆ ಸಂಬಂಧಪಟ್ಟಂತಹ ವರದಿಯನ್ನು ನಿಷ್ಕ್ರಿಯ ಗೊಳಿಸಿದೆ ಎಂದ...
‘ನಟಿ ರಶ್ಮಿಕಾಗೆ ರಕ್ಷಣೆ ಕೊಡಿ’: ಕೊಡವ ರಾಷ್ಟ್ರೀಯ ಮಂಡಳಿಆಗ್ರಹ

‘ನಟಿ ರಶ್ಮಿಕಾಗೆ ರಕ್ಷಣೆ ಕೊಡಿ’: ಕೊಡವ ರಾಷ್ಟ್ರೀಯ ಮಂಡಳಿಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರು ರಾಜ್ಯದ ಬಗ್ಗೆ ಅಗೌರವ ತೋರಿದ್ದಾರೆ ಎಂಬ ಆರೋಪದ ಮೇಲೆ ಕರ್ನಾಟಕದ ಕನ್ನಡ ಸಂಘಟನೆಗಳು ಮತ್ತು ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಕೊಡವ ರಾಷ್ಟ್ರೀಯ ಮಂಡಳಿ ಅವರಿಗೆ ರಕ್ಷಣೆ ನೀಡುವಂತೆ ಕೋರಿದೆ.ಪರಿಷತ್ತಿನ ಅಧ್ಯಕ್ಷ ಎನ್.ಯು. ನಾಚಪ್ಪ ಅವರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕರ್ನಾಟಕದ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಈ ವಿಷಯದ ಕುರಿತು ಪತ್ರ ಬರೆದಿದ್ದಾರೆ.ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಾಣಿಗ ಅವರು ರಶ್ಮಿಕಾ ಅವರನ್ನು ಟೀಕಿಸಿದ್ದರು. ಕರ್ನಾಟಕ ಸರ್ಕಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಶ್ಮಿಕಾ ಆಹ್ವಾನವನ್ನು ನಿರಾಕರಿಸಿದ್ದಾರೆ ಎಂದು ಶಾಸಕರು ಆರೋಪಿಸಿದ್ದರು. ರಶ್ಮಿಕಾ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದಾರೆ ಮತ್ತು ಕರ್ನಾಟಕ ಎಲ್ಲಿದೆ ಎಂದು ತಿಳಿದಿಲ್ಲ ಎಂದು ಹೇಳಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು.ಈ ಬೆಳವಣಿಗೆಗಳ ನಂತರ, ಅನೇಕ ಕನ್ನಡ ಸಂಘಟನೆಗಳು ಮತ್ತು ಕಾರ್ಯಕರ್ತರು ರಶ್ಮಿಕಾ ಅವರನ್ನು ಟೀಕಿಸಿದ್ದಾರೆ ಮತ್ತು ಅವರಿಂದ ಕ್ಷಮೆಯಾಚಿಸಬೇಕೆಂದು ಒತ...
ಸರ್ವರ ಹಿತ ಕಾಂಗ್ರೆಸ್‌ ಸರ್ಕಾರದ ಪಥ: ರಣದೀಪ್‌ ಸುರ್ಜೇವಾಲ

ಸರ್ವರ ಹಿತ ಕಾಂಗ್ರೆಸ್‌ ಸರ್ಕಾರದ ಪಥ: ರಣದೀಪ್‌ ಸುರ್ಜೇವಾಲ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ʻʻನನ್ನ ದೃಷ್ಟಿಯಲ್ಲಿ ಹೆಣ್ಣು ಕೇವಲ ಮಾನುಷಿಯಲ್ಲ, ಅಬಲೆಯೂ ಅಲ್ಲ. ಅವಳೊಂದು ಮಹಾಶಕ್ತಿʼʼ ಎಂಬುದಾಗಿ ನಮ್ಮ ರಾಷ್ಟ್ರಕವಿ ಕುವೆಂಪು ಅವರು ಹೇಳಿದ್ದು ಅಕ್ಷರಶಃ ಸತ್ಯ. ಈ ವಾಕ್ಯದಂತೆ ಕರ್ನಾಟಕದ ನಮ್ಮ ಕಾಂಗ್ರೆಸ್‌ ಸರ್ಕಾರ ನಡೆಯುತ್ತಿದೆ. ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಕಾಂಗ್ರೆಸ್‌ ಸರ್ಕಾರದ ಸಂಕಲ್ಪವಾಗಿದೆ. ಅಲ್ಲದೆ, ʻಸರ್ವರ ಹಿತ - ಕಾಂಗ್ರೆಸ್ ಸರ್ಕಾರದ ಫಥʼ ಎಂಬುದು ನಮ್ಮ ಧ್ಯೇಯವಾಕ್ಯವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.ರಾಜ್ಯ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಬಜೆಟ್ 4.09 ಲಕ್ಷ ಕೋಟಿ ರೂ.ಗಳನ್ನು ಒಳಗೊಂಡಿದೆ. ಕಳೆದ ವರ್ಷದ ಬಜೆಟ್ ಅಂದಾಜುಗಳಿಗಿಂತ ಶೇ. 10.3ರಷ್ಟು ಬೆಳವಣಿಗೆ ಕಂಡುಬಂದಿದೆ. ಕರ್ನಾಟಕ ರಾಜ್ಯದ ಜಿಡಿಪಿ 7.4% ರಷ್ಟು ಬೆಳೆದಿದೆ ಅದರೊಂದಿಗೆ ಕೃಷಿ ಕ್ಷೇತ್ರದಲ್ಲಿ ಕೂಡ ಶೇ. 4ರಷ್ಟು ಬೆಳವಣಿಗೆಯನ್ನು ಕಂಡಿದೆ. ಕರ್ನಾಟಕ ರಾಜ್ಯದ ಜಿಡಿಪಿ ರಾಷ್ಟ್ರೀಯ ಬೆಳವಣಿಗೆಯನ್ನು ಶೇ. 6.2% ರಷ್ಟು ಮೀರಿಸಿದೆ. ಇದು ಕರ್ನಾಟಕ ರಾಜ್ಯದ ಅಭಿವೃದ್ಧಿಯಲ್ಲಿ ನಮ್ಮ ಕಾಂಗ್ರೆಸ್...