Saturday, April 11

Author: info@rajasdigital.com

ಬಹುಭಾಷಾ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಬಹುಭಾಷಾ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನೀಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಬಹುಭಾಷಾ ನಟಿ ಶಬಾನಾ ಆಜ್ಮಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗುತ್ತಿರುವ ಶಬಾನಾ ಆಜ್ಮಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಸ್ದದಾರೇ.70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ‌ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು...
KSRTC ಬಳಗದಲ್ಲಿ ವನಿತೆಯರ ಕಮಾಲ್.. ಸ್ತ್ರೀ ಸಾಧನೆಗೆ ಸಚಿವರೂ ಸಲಾಂ.. ಅರ್ಥಪೂರ್ಣ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’

KSRTC ಬಳಗದಲ್ಲಿ ವನಿತೆಯರ ಕಮಾಲ್.. ಸ್ತ್ರೀ ಸಾಧನೆಗೆ ಸಚಿವರೂ ಸಲಾಂ.. ಅರ್ಥಪೂರ್ಣ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’

Others
ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTC ಕೇಂದ್ರ ಕಚೇರಿಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಮಾರಂಭದಲ್ಲಿ ಸ್ಫೂರ್ತಿಯಾದರು.ಪದ್ಮಶ್ರೀ ಪುರಸ್ಕೃತ ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ರವರು ಈ ಸಮಾರಂಭದಲ್ಲಿ ಕುತೂಹಲದ ಕೇಂದ್ರಬಿಂದುವಾದರೂ. ತಮ್ಮ ಗಾನಸುಧೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತುಂಬಿದ ಅವರಿಗೆ ಗೌರವ ಧನ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಈಗ ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿ ಪುರುಷ ಸಿಬ್ಬಂದಿಯಷ್ಟೇ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು.ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮ...
ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ

ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹಸಕ್ಕೆ ಸಿದ್ದರಾಮಯ್ಯರವರು ಕೈ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಸ್ಲಿಮ್ ಮಹಿಳೆಯರಿಗೆ ಸ್ವಯಂರಕ್ಷಣೆಗಾಗಿ ತರಬೇತಿ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಹಿಂದೂ ಮಹಿಳೆಯರಿಗೆ ಯಾಕಿಲ್ಲ? ಮುಸ್ಲಿಂ ಬಡ ಮಹಿಳೆಯರ ಸರಳ ವಿವಾಹಕ್ಕೆ ರೂ. 50,000 ಪ್ರೋತ್ಸಾಹ ಧನ ಘೋಷಣೆ ಮಾಡಿದ್ದಾರೆ. ಹಿಂದೂಗಳಲ್ಲಿ ಬಡ ಮಹಿಳೆಯರು ಇಲ್ಲವೇ? ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ ರೂ. 20 ಲಕ್ಷ ಇದ್ದದ್ದನ್ನು ರೂ. 30 ಲಕ್ಷಕ್ಕೆ ಏರಿಸಲಾಗಿದೆ. ಯಾಕೆ ಈ ರೀತಿಯ ಯೋಜನೆಗಳು ಹಿಂದೂ ವಿದ್ಯಾರ್ಥಿಗಳಿಗಿಲ್ಲ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹ...
ಇಸ್ರೇಲ್ ಮೂಲದ ಪ್ರವಾಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್, ಆರೋಪಿಗಳ ಪತ್ತೆಗಾಗಿ 6 ತಂಡಗಳ ರಚನೆ

ಇಸ್ರೇಲ್ ಮೂಲದ ಪ್ರವಾಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್, ಆರೋಪಿಗಳ ಪತ್ತೆಗಾಗಿ 6 ತಂಡಗಳ ರಚನೆ

Focus, ಪ್ರಮುಖ ಸುದ್ದಿ, ರಾಜ್ಯ
ಕೊಪ್ಪಳ: ಗಂಗಾವತಿ ಸಮೀಪ ತುಂಗಭದ್ರ ಎಡದಂಡೆ ಕಾಲುವೆ ಬಳಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಗುರುವಾರ ತಡರಾತ್ರಿ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಮಹಿಳೆಯರ ಮೇಲೆ ಮೂವರು ಹಲ್ಲೆ ನಡೆಸಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿದೂರು ದಾಖಲಾಗಿದೆ.ಇಸ್ರೇಲಿ ಪ್ರವಾಸಿ ಮತ್ತು ಇತರ ಮೂವರು ಪುರುಷ ಪ್ರವಾಸಿಗರು ತಂಗಿದ್ದ ಹೋಂಸ್ಟೇಯ 29 ವರ್ಷದ ಮಹಿಳಾ ನಿರ್ವಾಹಕಿ ಪ್ರವಾಸಿಗರೊಂದಿಗೆ ತುಂಗಭದ್ರಾ ಎಡಗಂಡೆ ಕಾಲುವೆಯ ಪಕ್ಕದಲ್ಲಿ ಕುಳಿತು ಸಂಗೀತ ಆಲಿಸುತ್ತಿದ್ದರು. ಆ ವೇಳೆ ಆಗಮಿಸಿದ್ದ ಕಾಮುಕರು ಇಸ್ರೇಲಿ ಪ್ರವಾಸಿ ಮಹಿಳೆ ಹಾಗೂ ಆಕೆಯ ಜೊತೆಗಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಮೂವರು ಪುರುಷ ಪ್ರವಾಸಿಗರನ್ನು ಕಾಲುವೆಗೆ ತಳ್ಳಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಮತ್ತೆ ಎತ್ತಿನಹೊಳೆ ಸದ್ದು; ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ

ಮತ್ತೆ ಎತ್ತಿನಹೊಳೆ ಸದ್ದು; ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಎತ್ತಿನ ಹೊಳೆ ಇದೀಗ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ ತೆರಳಲಿದೆ.ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾ.18 ರಂದು ತಾವು ದೆಹಲಿಗೆ ತೆರಳಿ ಕೇಂದ್ರದ ನಾಯಕರ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟ. 508 ಎಕರೆ 1 ಗುಂಟೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.ಎಲ್ಲಾ ಅಡೆತಡೆಗಳನ್ನು ನಿವಾರಿಸಿ ತುಮಕೂರಿಗೆ ನೀರು ತಂದು, ಚಿಕ್ಕಬಳ್ಳಾಪುರಕ್ಕೆ ನೀರು ತರಲಾಗುವುದು ಎಂದು ಡಿಕೆಶಿ ಭರವಸೆ ನೀಡಿದರು....
ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ: ಆರ್‌.ಅಶೋಕ ಖಾರ ಪ್ರತಿಕ್ರಿಯೆ

ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ: ಆರ್‌.ಅಶೋಕ ಖಾರ ಪ್ರತಿಕ್ರಿಯೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು, ಮಾರ್ಚ್‌: ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಜೆಟ್‌ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊನೆಯ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು ಮುಂದುವರಿಸಲಾಗಿದೆ. ಹಳೆ ಮೈಸೂರು ಅಥವಾ ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆಗಳನ್ನು ಕೇಂದ್ರ ಸರ್ಕಾರದ ಅನುಮತಿ ಬಳಿಕ ಮುಂದುವರಿಸುತ್ತೇವೆ ಎಂದು ತಿಳಿಸಲಾಗಿದೆ. ಇದನ್ನು ಓದಿ ಪುಟಗಳನ್ನು ವ್ಯರ್ಥ ಮಾಡಲಾಗಿದೆ ಎಂದರು.ಕರ್ನಾಟಕದ ಇತಿಹಾಸದಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಅಂದರೆ 1,16,170 ಕೋಟಿ ರೂ. ಸಾಲ ಮಾಡಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಾಖಲೆಯಾಗಿದೆ. ಒಟ್ಟು ಸಾಲದ ಪ್ರಮಾಣ 7,81,095 ಕೋಟಿ ರೂ. ಗೆ ಏರಿದೆ. ಅಬಕಾರಿ ಇಲಾಖೆಗೆ 60,000 ಕೋಟಿ ರೂ. ಗುರಿ ನೀಡಿ, ...
ರಾಜ್ಯ ಬಜೆಟ್: ಕೌಶಲ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ನೀಡಿರುವ ಕೊಡುಗೆಗಳು ಅಮೂಲ್ಯ ಎಂದ ಶರಣ್‌ ಪ್ರಕಾಶ್‌ ಪಾಟೀಲ್‌

ರಾಜ್ಯ ಬಜೆಟ್: ಕೌಶಲ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ನೀಡಿರುವ ಕೊಡುಗೆಗಳು ಅಮೂಲ್ಯ ಎಂದ ಶರಣ್‌ ಪ್ರಕಾಶ್‌ ಪಾಟೀಲ್‌

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಸವಾಲು ಒಡ್ಡುವ ರೀತಿಯಲ್ಲಿ ನಮ್ಮ ಕರುನಾಡಿನ ಯುವ ಸಮೂಹವನ್ನು ತಯಾರು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೌಶಲ್ಯಾಭಿವೃದ್ಧಿ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್* ತಿಳಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ ಹದಿನಾರನೇ ಬಜೆಟ್‌ ಮಂಡಿಸಿದ ನಂತರ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮ ಪಡೆದವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು ನಮ್ಮ ಸರ್ಕಾರವು ʻಯುವನಿಧಿʼ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈಗಾಗಲೇ ಸುಮಾರು 2.58 ಲಕ್ಷ ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, 286 ಕೋಟಿ ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ In...
ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮ: ಶರಣ್ ಪ್ರಕಾಶ್ ಪಾಟೀಲ್

ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮ: ಶರಣ್ ಪ್ರಕಾಶ್ ಪಾಟೀಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿನ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅತಿ ಶೀಘ್ರವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.ಗುರುವಾರ ನಡೆದ ವಿಧಾನ ಸಭೆ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ.ತಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು, ಮಲೆನಾಡು ಭಾಗದ ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ತೆರೆದ ಬಾವಿ ನಿರ್ಮಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದರು.ಕಳೆದ ಬಿಜೆಪಿ ಸರ್ಕಾರ ಚಿಕ್ಕಮಗಳೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಶಂಕುಸ್ಥಾಪನೆ ನೇರವೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ 100 ಕೋಟಿ ರೂ. ಹಣ ನೀಡಿದೆ. ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. 10 ಬೋರ್ ವೆಲ್ ಕೊರೆದರೂ ನೀರು ಸಿಗ...
‘ದಲಿತರ ಕಣ್ಣೀರ ಶಾಪ ಕಾಂಗ್ರೆಸ್ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ’: ವಿಜಯೇಂದ್ರ

‘ದಲಿತರ ಕಣ್ಣೀರ ಶಾಪ ಕಾಂಗ್ರೆಸ್ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ’: ವಿಜಯೇಂದ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಡವರ ಶೋಷಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ 'ದಲಿತರ ಕಣ್ಣೀರ ಶಾಪ ತಟ್ಟದೆ ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ.ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿದ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಹಿಂದ ಹೆಸರಿನಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಪರಿಶಿಷ್ಟರ ಕರಾಳ ದಿನಕ್ಕೆ ಕಾರಣರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.ಎಸ್‍ಇಪಿ, ಟಿಎಸ್‍ಪಿ ಹಣವನ್ನು ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿರುವ ಈ ಸರ್ಕಾರ ಶೋಷಿತರ ಕಣ್ಣಲ್ಲಿ ನೀರು ಹರಿಸಿದರೆ ಆ ಶಾಪ ನಿಮ್ಮ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವ ಎನ್.ಮಹೇಶ್, ಬಿಜೆಪಿ ರಾಜ್ಯ ಪ್ರಧಾನ...
ಬೆಂಗಳೂರು ಅಭಿವೃದ್ಧಿ ಇಲ್ಲ, ಕನ್ನಡಕ್ಕೂ ಬೆಂಬಲವಿಲ್ಲ.. ದರ ಏರಿಕೆಯೇ ಎಲ್ಲಾ.

ಬೆಂಗಳೂರು ಅಭಿವೃದ್ಧಿ ಇಲ್ಲ, ಕನ್ನಡಕ್ಕೂ ಬೆಂಬಲವಿಲ್ಲ.. ದರ ಏರಿಕೆಯೇ ಎಲ್ಲಾ.

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನಲ್ಲಿ ಎಲ್ಲೆಡೆ ಕಸದ ರಾಶಿ ಕಂಡುಬರುತ್ತಿದೆ. ರಾಜಧಾನಿಯ ಪ್ರಗತಿಗೆ ಅನುದಾನವೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅಶೋಕ್, ಬೆಂಗಳೂರು ಅಭಿವೃದ್ಧಿ ಇಲ್ಲ, ಕನ್ನಡಕ್ಕೂ ಬೆಂಬಲವಿಲ್ಲ, ದರ ಏರಿಕೆಯೇ ಎಲ್ಲಾ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಎರಡು ವರ್ಷದಿಂದ ಅಭಿವೃದ್ಧಿ ನಡೆದಿಲ್ಲ. ನನ್ನ ಕ್ಷೇತ್ರಕ್ಕೆ ಕೇವಲ 10 ಕೋಟಿ ರೂ. ನೀಡಲಾಗಿದೆ. ಬಿಜೆಪಿ ಸರ್ಕಾರವಿದ್ದಾಗ ಭೈರತಿ ಸುರೇಶ್‌ ಕ್ಷೇತ್ರಕ್ಕೆ ಒಂದು ವರ್ಷಕ್ಕೆ 100 ಕೋಟಿ ರೂ. ನೀಡಲಾಗಿತ್ತು. ಆದರೆ ಈಗಿನ ಸರ್ಕಾರದಿಂದ ಹಣ ಬರುತ್ತಿಲ್ಲ. ಮಳೆಗಾಲ ಬರುವ ಮುನ್ನ ಡಾಂಬರೀಕರಣ ಮಾಡಬೇಕಿತ್ತು. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ಬ್ಯಾಡ್‌ ಬೆಂಗಳೂರು ಆಗಿದೆ ಎಂದು ಅಶೋಕ್ ದೂರಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಬಿಜೆಪಿ 431 ಕೋಟಿ ರೂ. ನೀಡಿದರೆ, ಈಗ 265 ಕೋಟಿ ರೂ. ನೀಡಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರೂ. ಅನ್ನು 10 ಕೋಟಿ ರೂ. ಇಳಿಸಲಾಗಿದೆ. ಸಾಂಸ್ಕೃತಿಕ ಸಂಘಗ...