Monday, April 13

Author: info@rajasdigital.com

ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ.ಗುರುವಾರ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಕೇಶವಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯ ಕಲ್ಪಿಸಲಾಗುತ್ತದೆ. ಕ್ಯಾನ್ಸರ್‌ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಖಾಲಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಇಬ್ಬರು ವೈದ್ಯರು ಮಾತ್ರ ಅರ್ಜಿ ಹಾಕಿದ್ದರು ಎಂದರು.ತಾಲೂಕು ಕೇಂದ್ರಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಿಲ್ಲ. ಹಾಗೆಯೇ ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.ಉತ್ತರ ಕನ್ನಡ ಜಿಲ್ಲೆಯ ರೋಗಿಗಳು ಸೂಪರ್ ಸ್ಪೆಷಾಲಿಟಿ ಸೌಲಭ್ಯಕ್ಕಾಗಿ ಮಂಗಳೂರು ಅಥವಾ ಗೋವಾಕ್ಕೆ ಹೋಗಬೇಕಾದ ಪರಿಸ್ಥಿತಿಯಿ...
ವಿಶ್ವವಿದ್ಯಾಲಯಗಳನ್ನು ಮುಚ್ಚಿ ಬಾರ್‌ಗಳನ್ನು ತೆರೆಯುತ್ತಿದ್ದಾರೆ: ಸರ್ಕಾರಕ್ಕೆ ಮೊದಲು ನೆಟ್‌ ಬೋಲ್ಟ್‌ ಟೈಟ್‌ ಮಾಡಬೇಕಿದೆ ಎಂದ ಅಶೋಕ್

ವಿಶ್ವವಿದ್ಯಾಲಯಗಳನ್ನು ಮುಚ್ಚಿ ಬಾರ್‌ಗಳನ್ನು ತೆರೆಯುತ್ತಿದ್ದಾರೆ: ಸರ್ಕಾರಕ್ಕೆ ಮೊದಲು ನೆಟ್‌ ಬೋಲ್ಟ್‌ ಟೈಟ್‌ ಮಾಡಬೇಕಿದೆ ಎಂದ ಅಶೋಕ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯಪಾಲರ ಬಾಯಿಂದ ಸಾಕಷ್ಟು ಸುಳ್ಳುಗಳನ್ನು ಹೇಳಿಸಿದೆ. ರಾಜ್ಯಪಾಲರ ಎಲ್ಲ ಅಧಿಕಾರಗಳನ್ನು ಕಿತ್ತುಕೊಂಡು ಅವರನ್ನೇ ಬಳಸಿಕೊಂಡು ಸರ್ಕಾರವನ್ನು ಶ್ಲಾಘಿಸಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಬಾಯಿಂದ ಸುಳ್ಳಿನ ಸರಮಾಲೆಯನ್ನೇ ಹೇಳಿಸಲಾಗಿದೆ. ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷವನ್ನು ತರಲಾಗಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ʼಇವ ನಮ್ಮವʼ ಎಂಬ ಬಸವಣ್ಣನವರ ವಚನ ಹೇಳುತ್ತಾರೆ. ಆದರೆ ರಾಜ್ಯಪಾಲರ ವಿಚಾರ ಬಂದಾಗ ಮಾತ್ರ ಇವರು ನಮ್ಮವರಲ್ಲ ಎಂದು ಭೇದ ತೋರುತ್ತಾರೆ. ರಾಜ್ಯಪಾಲರು ಇತ್ತೀಚೆಗೆ ಮೈಕ್ರೋ ಫೈನಾನ್ಸ್‌ ಕಾನೂನು ತಿದ್ದುಪಡಿಯನ್ನು ವಾಪಸ್‌ ಕಳುಹಿಸಿದ್ದರು. ಅದನ್ನು ವಿವೇಚನೆ ಮಾಡದೆ ಸರ್ಕಾರದಿಂದ ದ್ವೇಷ ಸಾಧಿಸಲಾಗುತ್ತಿದೆ. ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜ ...
ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಸಂಚು: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಆಕ್ರೋಶ

ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಸಂಚು: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು, ಮಾರ್ಚ್‌ 6: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ "ಕ್ಷೇತ್ರ ಮರು ವಿಂಗಡಣೆ" ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು ನಮ್ಮ ಕಾಂಗ್ರೆಸ್‌ ಸರ್ಕಾರ ಬಿಡಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌, ಕೇಂದ್ರ ಸರ್ಕಾರ ಉದ್ದೇಶಿತ ಯೋಜನೆಯು ದಕ್ಷಿಣ ಭಾರತದ ರಾಜ್ಯಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದು ಇಲ್ಲವೇ ಅನ್ಯಾಯ ಮಾಡುವುದು ಆಗಿದೆ ಎಂದು ಕಿಡಿಕಾರಿದರು.ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಮರು ವಿಂಗಡಣೆ ಮಾಡಲಾಗುತ್ತದೆ ಎಂಬ ವರದಿಗಳು ಬಂದಿವೆ. ಇದರಿಂದ ಅನ್ಯಾಯವಾಗುವುದು ನಮ್ಮ ದಕ್ಷಿಣ ಭಾರತದ ರಾಜ್ಯಗಳಿಗೆ. ಏಕೆಂದರೆ ಹಲವಾರು ದಶಕಗಳಿಂದಲೂ ನಮ್ಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳು ಜನಸಂಖ್ಯೆ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗ...
ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ: ಸರ್ಕಾರದ ಸ್ಪಷ್ಟನೆ

ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ: ಸರ್ಕಾರದ ಸ್ಪಷ್ಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಬಿಜೆಪಿ ಆಡಳಿತಾವಧಿಯಲ್ಲಿ ಆರಂಭಿಸಲಾಗಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚವ ಬಗ್ಗೆ ಕೆಲ ಸಮಯದ ಹಿಂದೆ ಡಿಕೆಶಿ ನೀಡಿದ್ದ ಹೇಳಿಕೆಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ.ವಿಪಕ್ಷ ನಾಯಕ ಆರ್ ಅಶೋಕ್ ಅವರು ವಿಧಾನಸಭೆಯಲ್ಲಿ ಗುರುವಾರ ಈ ವಿಷಯವನ್ನು ಪ್ರಸ್ತಾಪಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಈ ವಿಷಯ ಪ್ರಸ್ತಾಪಿಸಿದ ಅಶೋಕ್, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.ಈ ಕುರಿತಂತೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಯೇ ಹೊರತು, ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ಅಥವಾ ಮಂಡ್ಯ ವಿವಿಯಲ್ಲಿ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸ ಇದೆ ಎಂದ ಅವರು, ಈ ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜ...
ರಾಜ್ಯದಲ್ಲಿ ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ?

ರಾಜ್ಯದಲ್ಲಿ ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ 'ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ' ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇದೀಗ ಖಾಸಗಿ ಬಡಾವಣೆಗಳು ಸರ್ಕಾರದ ಅನುಮತಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ ನಿರ್ಧಾರವು ಭ್ರಷ್ಟಾಚಾರವನ್ನು ವಿಧಾನ ಸೌಧದ ವರೆಗೂ ವಿಸ್ತರಿಸಿಕೊಳ್ಳುವ ಹುನ್ನಾರವೇ ಹೊರತು ಇದರ ಹಿಂದೆ ಯಾವ ಸದುದ್ದೇಶವೂ ಅಡಗಿಲ್ಲ ಎನ್ನುವುದು ಬಹಿರಂಗ ಸತ್ಯ ಎಂದಿದ್ದಾರೆ.ನಗರಾಭಿವೃದ್ಧಿ ಪ್ರಾಧಿಕಾರಗಳು ಬಹುತೇಕ ನಿಷ್ಕ್ರೀಯಗೊಂಡು ‘ನಿಂತ ನೀರಾಗಿವೆ’ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಬಡಾವಣೆ ನಿರ್ಮಿಸಲು ಸಾಧ್ಯವಾಗಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಅಭಿವೃದ್ಧಿ ಪ್ರಾಧಿಕಾರಗಳಿಗೆ ಚುರುಕು ಮುಟ್ಟಿಸುವ ಗೋಜಿಗೇ ಹೋಗಿಲ್ಲ,ಇದರ ಪರಿಣಾಮವೇ ಮೈಸೂರು ಮುಡಾ ಹಗರಣದ ಕುಖ್ಯಾತಿ ಸಾಗರದಾಚೆಗೂ ಸದ್ದುಮಾಡಿದೆ ಎಂದವರು ವಿಶ್ಲೇಷಿಸಿದ್ದಾರೆ.ಸೂರಿಲ್ಲದ ಜನರು ಗೃಹ ನಿರ್ಮಾಣ ಸಹಕಾರ ಸಂಘಗಳ ಮೂಲಕ ಹಾಗೂ ಖಾಸಗಿ ನಿರ್ಮಾಣಕಾರರ ಮೂಲಕ ಹೆಚ್ಚಿನ ಬೆಲೆ ತೆತ್ತಾದರೂ ಪ್ಲಾಟ್ ಅಥವಾ ನಿವೇಶನ ಪಡ...
ಬೆಂಗಳೂರಿಗೆ ಅಮಿತ್ ಶಾ.. ಬಿಜೆಪಿಯಲ್ಲಿ ಬೆಳವಣಿಗೆಗಳ ಕೌತುಕ

ಬೆಂಗಳೂರಿಗೆ ಅಮಿತ್ ಶಾ.. ಬಿಜೆಪಿಯಲ್ಲಿ ಬೆಳವಣಿಗೆಗಳ ಕೌತುಕ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಜಧಾನಿಯ ಮಾರತ್ತ​​ಹಳ್ಳಿ ಬಳಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.ರಾಜ್ಯ ಬಿಜೆಪಿಯಲ್ಲಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿರುವಾಗಲೇ ಅಕ್ಷದ ಚಾಣಾಕ್ಯ ಬೆಂಗಳೂರಿಗೆ ಆಗಮಿಸುತ್ತಿದ್ದು, ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ....
ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: ರಾಜ್ಯದ ೭ ಜಿಲ್ಲೆಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ

ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: ರಾಜ್ಯದ ೭ ಜಿಲ್ಲೆಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭ್ರಷ್ಟರ ವಿಬೆನ್ನತ್ತಿರುವ ಲೋಕಾಯುಕ್ತ ಪೊಲೀಸರು ಗುರುವಾರ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ವಿವಿಧ ಇಲಾಖೆಗಳ ಅಧಿಕಾರಿಗಳ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.ಬೆಂಗಳೂರು, ತುಮಕೂರು, ಕೋಲಾರ, ದಾವಣಗೆರೆ, ಕಲಬುರಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರ ವಿವಿಧ ತಂಡಗಳು ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ಶೋಧ ಕೈಗೊಂಡಿದೆ. ಬೆಂಗಳೂರಿನಲ್ಲಿ ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ ನಿವಾಸಗಳ ಮೇಲೆ ಶೋಧ ನಡೆದಿದೆ.ಕೋಲಾರದಲ್ಲಿ ಬೆಸ್ಕಾಂ ಎಇಇ ಜಿ.ನಾಗರಾಜ್​ ನಿವಾಸದ ಮೇಲೆ ಲೋಕಾಯುಕ್ತ ತಂಡ ದಾಳಿ ಕೈಗೊಂಡಿದೆ. ತುಮಕೂರಿನಲ್ಲಿ ಆರೋಗ್ಯ ಇಲಾಖೆಯ ಡಾ. ಜಗದೀಶ್ ನಿವಾಸದ ಮೇಲೆ, ದಾವಣಗೆರೆಯಲ್ಲಿ ಆಹಾರ ಇಲಾಖೆಯ ಅಧಿಕಾರಿ ಜಿ.ಎಸ್. ನಾಗರಾಜು ನಿವಾಸದ ಮೇಲೆ ದಾಳಿ ನಡೆದಿದೆ. ಕಲಬುರಗಿಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಜಗನ್ನಾಥ್ ನಿವಾಸದಲ್ಲೂ ಶೋಧ ನಡೆಸಲಾಗಿದೆ ಎಂದು ...
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ರಾತ್ರಿ ವೇಳೆ ಬಂದ್

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ರಾತ್ರಿ ವೇಳೆ ಬಂದ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ರಾತ್ರಿ ವೇಳೆ ಬಂದ್ ಆಗಲಿದೆ. ರಾತ್ರಿ ವೇಳೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.ವಾಹನ ಸವಾರರಿಗೆ ಮಾಹಿತಿ ನೀಡಿದ್ದು, ಬುಧವಾರ ರಾತ್ರಿಯಿಂದಲೇ ಅನ್ವಯವಾಗುವಂತೆ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯ ತನಕ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ಎಲ್ಲಾ ರೀತಿಯ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ ಎಂದು ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ....

ವರ್ಷಪೂರ್ತಿ ‘ಸಂಘ ಶತಾಬ್ದಿ’ ವರ್ಷ; ಮಾರ್ಚ್ 21, 22, 23ರಂದು RSS ಅಖಿಲ ಭಾರತೀಯ ಪ್ರತಿನಿಧಿ ಸಭಾ ಭೈಠಕ್’ನಲ್ಲಿ ಕಾರ್ಯತಂತ್ರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು:  ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ-ನಿರ್ಧಾರಗಳನ್ನು ನಿರೂಪಿಸುವ ಮಹತ್ವದ ಸಭೆ ಅಖಿಲ ಭಾರತೀಯ ಪ್ರತಿನಿಧಿ ಸಭಾ  ಇದೇ 2025ರ ಮಾರ್ಚ್ 21, 22, 23 ರಂದು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರ ಆವರಣದಲ್ಲಿ ನಡೆಯಲಿದೆ.ಬೈಠಕ್ ನಲ್ಲಿ ಹಿಂದಿನ ವರ್ಷ 2024-25ರ ಕಾರ್ಯಚಟುವಟಿಕೆಗಳ ಕುರಿತು ವಿಮರ್ಶಾತ್ಮಕ ಚರ್ಚೆಯ ಜೊತೆಗೆ ವಿಶೇಷ ಕಾರ್ಯಗಳ ಪ್ರಸ್ತುತಿಯೂ ಆಗಲಿದೆ. ಮುಂದಿನ ವಿಜಯದಶಮಿ (ದಸರಾ) 2025ಕ್ಕೆ ಸಂಘಕಾರ್ಯಕ್ಕೆ ನೂರು ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ 2025ರ ವಿಜಯದಶಮಿಯಿಂದ 2026ರ ವಿಜಯದಶಮಿಯವರೆಗೆ ಸಂಘ ಶತಾಬ್ದಿಯ ವರ್ಷ ಎಂದು ಕರೆಯಲಾಗುತ್ತದೆ.ಸಭೆಯಲ್ಲಿ ಶತಾಬ್ದಿ ವರ್ಷದ ಕಾರ್ಯವಿಸ್ತಾರದ ಯೋಜನೆಯ ಜೊತೆ ಜೊತೆಗೆ ಮುಂಬರುವ ಶತಾಬ್ದಿ ವರ್ಷದ ಪ್ರಯುಕ್ತ ವಿಭಿನ್ನ ಕಾರ್ಯಕ್ರಮಗಳ ಆಯೋಜನೆ ಹಾಗೂ ಅಭಿಯಾನಗಳ ರೂಪುರೇಷೆಯ ತಯಾರಿ ನಡೆಯಲಿದೆ. ಬೈಠಕ್ ನಲ್ಲಿ ರಾಷ್ಟ್ರೀಯ ವಿಷಯಗಳಿಗೆ ಸಂಬಂಧಿಸಿದ ಎರಡು ಪ್ರಸ್ತಾವನೆಯ ಕುರಿತು ವಿಚಾರ ವಿನಿಮಯಗೊಳ್ಳಲಿದೆ. ಜೊತೆಯಲ್ಲಿ ಸಂಘದ ಶಾಖೆಯ ಮೂಲಕ ಅಪೇಕ್ಷಿತ ಸಾಮಾಜಿಕ ಪರಿವರ್ತನೆಯ ಕ...
ಕೇರಳಕ್ಕೂ KSRTC ಮಾದರಿ..! ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಚೇರಿಗೆ ನೆರೆ ರಾಜ್ಯದ ನಿಯೋಗ ಭೇಟಿ

ಕೇರಳಕ್ಕೂ KSRTC ಮಾದರಿ..! ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಚೇರಿಗೆ ನೆರೆ ರಾಜ್ಯದ ನಿಯೋಗ ಭೇಟಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೇಶದಲ್ಲಿ ಜನಪ್ರಿಯ ಸಾರಿಗೆಗೆ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ಕೇರಳಕ್ಕೂ ಮಾದರಿಯಾಗಿದೆ. ಹಲವಾರು ವಿಶೇಷತೆಗಳಿಂದ ಗಮನಸೆಳೆದಿರುವ KSRTC ಬಗ್ಗೆ ಅಧ್ಯಯನಕ್ಕಾಗಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳ ತಂಡ ಬೆಂಗಳೂರಿನಲ್ಲಿರುವ KSRTC ನಿಗಮದ ಕಚೇರಿ ಹಾಗೂ ಕಾರ್ಯಾಗಾರಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.ಈ ಸಂದರ್ಭದಲ್ಲಿ ನಿಗಮದಲ್ಲಿನ ಕಾರ್ಮಿಕ ಸ್ನೇಹಿ ಹಾಗೂ ಪ್ರಯಾಣಿಕ ಸ್ನೇಹಿ ಉಪಕ್ರಮಗಳು ಹಾಗೂ ಸಾರಿಗೆಯೇತರ ಆದಾಯದ ವಿಷಯಗಳ ಬಗ್ಗೆ KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರು ಪಿ.ಎಸ್.ಪ್ರಮೋಜ್‌ ಸಂಕರ್ ಅವರಿಗೆ ಮಾಹಿತಿ ನೀಡಿದರು. ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ಕೇರಳ ತಂಡವು ವಿವಿಧ ಮಾದರಿಯ ಬಸ್ ಬ್ರಾಂಡಿಂಗ್ ಮತ್ತು ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿತು.ಬಸ್ಸುಗಳ ಕಾರ್ಯ ನಿರ್ವಹಣೆ, ಪುನಶ್ಚೇತನ ಕಾರ್ಯ, ರೂ.1 ಕೋಟಿ On duty / Off duty accident insurance, KSRTC AROGYA ಯೋಜನೆ, ವಿದ್ಯಾ ಚೇತನ ಯೋಜನೆ, ಮಾಹಿತಿ ತಂತ್ರಜ್ಞಾನಗಳ‌ಉಪಕ್ರಮಗಳಾದ HRMS, ಆ...