Monday, April 13

Author: info@rajasdigital.com

ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾಗಿ IGP ಡಿ.ರೂಪ ವರ್ಗಾವಣೆ

ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾಗಿ IGP ಡಿ.ರೂಪ ವರ್ಗಾವಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನು ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ಡಿ.ರೂಪ ಅವರು ಈ ವರೆಗೂ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿದ್ದರು.
ಕೃಷ್ಣಾ ನದಿಗೆ ಹಾರಿ ತಾಯಿ, ಮೂವರು ಮಕ್ಕಳು ಆತ್ಮಹತ್ಯೆ

ಕೃಷ್ಣಾ ನದಿಗೆ ಹಾರಿ ತಾಯಿ, ಮೂವರು ಮಕ್ಕಳು ಆತ್ಮಹತ್ಯೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ಮಹಿಳೆಯೊಬ್ಬಳು ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ಸಮೀಪದ ಚಿಂಚಲಿ ಬಳಿ ನಡೆದಿದೆ.32 ವರ್ಷದ ಶಾರದಾ ಎಂಬವರು ತನ್ನ ಮಕ್ಕಳ ಜೊತೆ ನದಿಗೆ ಹಾರಿದ್ದಾರೆ. ಈ ಘಟನೆಯನ್ನು ಕಂಡ ಸ್ಥಳೀಯರು ಹೆಣ್ಣುಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸಗೆ ಸ್ಪಂದಿಸದೆ ಆಕೆ ಸಾವಿಗೀಡಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ....
ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ FIR: ವಿಜಯೇಂದ್ರ ಆಕ್ರೋಶ

ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ FIR: ವಿಜಯೇಂದ್ರ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ಪೊಲೀಸರು ಎಫ್.ಐ.ಆರ್. ದಾಖಲಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಜನಪ್ರತಿನಿಧಿಗಳನ್ನು ಬೆದರಿಸಲು ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಳ್ಳುತ್ತಿದೆ. ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಿರುವ ಕ್ರಮ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ನಿರ್ಭಯವಾಗಿ ತಮ್ಮ ಕರ್ತವ್ಯ ನಿರ್ವಹಿಸದಂತೆ ಬೆದರಿಸುವ ಮಾರ್ಗವನ್ನು ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ವಿಜಯೇಂದ್ರ ದೂರಿದ್ದಾರೆ.ಈ ಹಿಂದೆಯೂ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಮೇಲೂ ಪೊಲೀಸರು ದೂರು ದಾಖಲಿಸಿಕೊಂಡು ದೌರ್ಜನ್ಯ ಮೆರೆಯಲು ಹೊರಟಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನ್ನ ಅಸ್ತಿತ್ವಕ್ಕಾಗಿ ತಿಣುಕಾಡುತ್ತಿರುವ ಕಾಂಗ್ರೆಸ್ ಹತಾಶೆಯಿಂದ ಬಿಜೆಪಿ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರನ್ನು ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ಹತ್ತಿಕ್ಕಲು ಪೊಲೀಸ್ ಠಾಣೆಗಳ...
“ಡೌನ್ ಸಿಂಡ್ರೋಮ್ ಬುದ್ಧಿಮಾಂದ್ಯತೆಗೆ ಕಾರಣವಾಗುವ ಕಾರಣಗಳನ್ನು ಆನುವಂಶಿಕ, ಜೀವನಶೈಲಿ ಅಂಶಗಳು ವಿವರಿಸಬಹುದು”

“ಡೌನ್ ಸಿಂಡ್ರೋಮ್ ಬುದ್ಧಿಮಾಂದ್ಯತೆಗೆ ಕಾರಣವಾಗುವ ಕಾರಣಗಳನ್ನು ಆನುವಂಶಿಕ, ಜೀವನಶೈಲಿ ಅಂಶಗಳು ವಿವರಿಸಬಹುದು”

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಡೌನ್ ಸಿಂಡ್ರೋಮ್ ಹೊಂದಿರುವ ಕೆಲವು ಜನರು ಬುದ್ಧಿಮಾಂದ್ಯತೆಯಿಂದ ಬಳಲುತ್ತಿರುವ ಕಾರಣವನ್ನು ಆನುವಂಶಿಕ ಮತ್ತು ಜೀವನಶೈಲಿ ಅಂಶಗಳು ನಿರ್ಧರಿಸಬಹುದು ಎಂದು ಅಮೆರಿಕದ ಸಂಶೋಧಕರ ತಂಡವು ಡಿಕೋಡ್ ಮಾಡಿದೆ.ಡೌನ್ ಸಿಂಡ್ರೋಮ್ ಹೊಂದಿರುವ ಜನರು ವಯಸ್ಸಾದಂತೆ ಆಲ್ಝೈಮರ್ (Alzheimer’s disease) ಕಾಯಿಲೆಯಿಂದ ಉಂಟಾಗುವ ಬುದ್ಧಿಮಾಂದ್ಯತೆಯನ್ನು ಬೆಳೆಸುವ ಜೀವಿತಾವಧಿಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಪಾಯವನ್ನು ಹೊಂದಿರುತ್ತಾರೆ ಎಂದು ಅಧ್ಯಯನಗಳು ಬಹಿರಂಗಪಡಿಸುತ್ತವೆ. ಆದಾಗ್ಯೂ, ಈ ಪರಿಸ್ಥಿತಿಗಳ ಹಿಂದಿನ ಲಿಂಕ್ ಇನ್ನೂ ತಿಳಿದುಬಂದಿಲ್ಲ. ಆಲ್ಝೈಮರ್ ಬುದ್ಧಿಮಾಂದ್ಯತೆಗೆ ಸಾಮಾನ್ಯ ಕಾರಣವಾಗಿದೆ.ಡೌನ್ ಸಿಂಡ್ರೋಮ್ ಹೊಂದಿರುವ ಜನರು ಕ್ರೋಮೋಸೋಮ್ 21 ರ ಪ್ರತಿರೂಪದಂತೆ ಜನಿಸುತ್ತಾರೆ, ಇದು ಅವರ ಮೆದುಳು ಮತ್ತು ದೇಹದ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಆಲ್ಝೈಮರ್ ಒಂದು ಪ್ರಗತಿಶೀಲ ಮೆದುಳಿನ ಅಸ್ವಸ್ಥತೆಯಾಗಿದ್ದು ಅದು ನಿಧಾನವಾಗಿ ಸ್ಮರಣಶಕ್ತಿ ಮತ್ತು ಆಲೋಚನಾ ಕೌಶಲ್ಯಗಳನ್ನು ನಾಶಪಡಿಸುತ್ತದೆ. ಪಿಟ್ಸ್‌ಬರ್ಗ್ ಮತ್ತು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಗಳ ಸಂಶೋಧನೆಯು ಡೌನ್...
ಹುಲಿ ಹಾಗೂ ಸಿಂಹದ ಮರಿಗಳಿಗೆ ಹಾಲು ಕುಡಿಸಿ ಗಮನಸೆಳೆದ ಮೋದಿ

ಹುಲಿ ಹಾಗೂ ಸಿಂಹದ ಮರಿಗಳಿಗೆ ಹಾಲು ಕುಡಿಸಿ ಗಮನಸೆಳೆದ ಮೋದಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ವೈವಿಧ್ಯ
ಅಹಮದಾಬಾದ್: ಗುಜರಾತ್ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಾಮ್‌ನಗರದಲ್ಲಿರುವ ವಂತಾರದಲ್ಲಿ ವನ್ಯಜೀವಿ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು.Inaugurated Vantara, a unique wildlife conservation, rescue and rehabilitation initiative, which provides a safe haven for animals while promoting ecological sustainability and wildlife welfare. I commend Anant Ambani and his entire team for this very compassionate effort. pic.twitter.com/NeNjy5LnkO — Narendra Modi (@narendramodi) March 4, 2025ಜಗತ್ತಿನ ವಿವಿಧೆಡೆ ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ರಕ್ಷಿಸಿ ಸಲಹುವ ಪ್ರಾಣಿ ಸಂಗ್ರಹಾಲಯ ಇದಾಗಿದೆ. 2,000ಕ್ಕೂ ಹೆಚ್ಚು ಜಾತಿಯ ಪ್ರಾಣಿಗಳು ವಂತಾರದ ವನ್ಯಜೀವಿ ಕೇಂದ್ರದಲ್ಲಿವೆ. ಈ ಪೈಕಿ 1.5 ಲಕ್ಷಕ್ಕೂ ಹೆಚ್ಚು ಪ್ರಾಣಿಗಳು ರಕ್ಷಿಸಲ್ಪಟ್ಟವುಗಳಾಗಿವೆ.ಈ ವನ್ಯಜೀವಿ ಕೇಂದ್ರವನ್ನು ಉದ್ಘಾಟಿಸಿದ ನರೇಂದ್ರ ಮೋದಿ, ಪ್ರಾಣಿಗಳೊಂದಿಗೆ ಸಂತಸದ ಕ್ಷಣಗಳನ್ನು ಕಳೆದರು. ಏಷ್ಯನ್...
ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ
(ಚಿತ್ರ : ಮಂಜು ನೀರೇಶ್ವಾಲ್ಯ) ಮಂಗಳೂರು: ಆಸ್ತಿಕರ ನಾಡು, ರಾಜ್ಯ ಕರಾವಳಿ ಇದೀಗ ಸಾಲು ಸಾಲು ವೈದ್ಧಿಕ ಕೈಂಕರ್ಯಗಳಿಗೆ ಸಾಕ್ಷಿಯಾಗುತ್ತಿವೆ. ಅದರ ನಡುವೆಯೇ ಮಂಗಳೂರಿನಲ್ಲಿ ನೆರವೇರಿದ 'ಮಹಾಮಾಯ ರಥೋತ್ಸವ'ವು ಮಹಾ ವೈಭವವಾಗಿ ಗಮನಸೆಳೆಯಿತು.ಮಂಗಳೂರು ರಥಬೀದಿಯ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದಲ್ಲಿ ಅಭೂತಪೂರ್ವ ಉತ್ಸವ: ಭಕ್ತ ಸಾಗರದ ನಡುವೆ 'ಬ್ರಹ್ಮರಥೋತ್ಸವ' ವೈಭವ..ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಭಕ್ತಸಾಗರದ ನಡುವೆ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ , ಕನಕಾಭಿಷೇಕ ಗಳು ನಡೆದವು. ಯಜ್ಞ ಮಂಟಪದಲ್ಲಿ ನಡೆದ ಮಹಾ ಪೂರ್ಣಾಹುತಿ ಸಂದರ್ಭದಲ್ಲಿ ಧರ್ಮಿಕ ಪ್ರಮುಖರು ಯತಿಗಳು ಭಾಗಿಯಾದರು.ಸಂಜೆ ಬೆಳ್ಳಿ ಪಲ್ಲಕಿಯಲ್ಲಿ ಶ್ರೀ ದೇವರು ವಿರಾಜಮಾನರಾಗಿ ರಥಾರೋಹಣವು ಅನನ್ಯ ಮಹೋತ್ಸವವಾಗಿ ಆಸ್ತಿಕರ ಗಮನಕೇಂದ್ರೀಕರಿಸಿತು. ಭಕ್ತರು ರಥ ಎಳೆದು ಪುನೀತರಾದರು.ಶ್ರೀ ದೇವಳದ ಆಡಳಿತ ಮೊಕ್ತೇಸರರಾದ ಸಿ.ಎ.ಶ್ರೀನಿವಾಸ್ ಕಾಮತ್, ಮಾರೂ...
80% ಕಮಿಷನ್ ದಂಧೆ..! “ಅಭಿವೃದ್ಧಿಯ ಪರ್ಸೆಂಟೇಜ್ ತಳಕಚ್ಚಿದೆ, ಕಮಿಷನ್ ಪರ್ಸೆಂಟೇಜ್ ಮುಗಿಲುಮುಟ್ಟಿದೆ”

80% ಕಮಿಷನ್ ದಂಧೆ..! “ಅಭಿವೃದ್ಧಿಯ ಪರ್ಸೆಂಟೇಜ್ ತಳಕಚ್ಚಿದೆ, ಕಮಿಷನ್ ಪರ್ಸೆಂಟೇಜ್ ಮುಗಿಲುಮುಟ್ಟಿದೆ”

Others
ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿಯ ಪರ್ಸೆಂಟೇಜ್ ತಳಕಚ್ಚಿದೆ, ಕಾಮಗಾರಿಯ ಕಮಿಷನ್ ಪರ್ಸೆಂಟೇಜ್ ಮುಗಿಲುಮುಟ್ಟಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ಸರ್ಕಾರ ಎಂದು ಅಪಪ್ರಚಾರದ ಜಾಲ ವಿಸ್ತರಿಸಿ ಅಧಿಕಾರಕ್ಕೆ ಬಂದವರು ನೀವು. ನಿಮ್ಮ ಅವಧಿಯಲ್ಲಿ 80 % ಕಮಿಷನ್ ದಂಧೆ ನಡೆಯುತ್ತಿದೆ ಎಂದು ಸ್ವತಃ ಗುತ್ತಿಗೆದಾರರೇ ನಿಮ್ಮ ಮುಂದೆ ದೂರಿಕೊಂಡರೂ ಅದನ್ನು ಲಘುವಾಗಿ ಪರಿಗಣಿಸಿರುವ ನೀವು ಕಮಿಷನ್ ನೀವೇಕೆ ನೀಡುತ್ತೀರಿ? ಎಂದು ಗುತ್ತಿಗೆದಾರರನ್ನೇ ಬೆದರಿಸಿದ್ದೀರಿ.. - ಬಿ.ವೈ.ವಿಜಯೇಂದ್ರ.ಖಾಲಿಯಾಗಿರುವ ಸರ್ಕಾರದ ಖಜಾನೆಯಲ್ಲಿ ಅಭಿವೃದ್ಧಿಗಾಗಿ ಬಳಸಲು ಬಿಡಿಗಾಸೂ ಇಲ್ಲ, ಇನ್ನು ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಸಲು ಹಣವಿಲ್ಲದ ಪರಿಸ್ಥಿತಿ ಇರುವುದು ಅಸಲಿ ಸತ್ಯ,ಆದಾಗ್ಯೂ ಕಮಿಷನ್ ಪಾವತಿಸಿದರೆ ಮಾತ್ರ ಹೇಗಾದರೂ ಮಾಡಿ ಬಿಲ್ ಕೊಡಿಸುವುದಾಗಿ ಅಧಿಕಾರಿಗಳ ಮೂಲಕ ಸಂಕಷ್ಟಿತ ಗೊತ್ತಿಗೆದಾರರ ಬೆನ್ನು ಹತ್ತಲಾಗಿದೆ, ಇದನ್ನು ನೇರಾ ನೇರ ನಿಮ್ಮ ಮುಂದೆಯೇ ಗುತ್ತಿಗೆದಾರರು ಅನಾವರಣ ಮಾಡುತ್ತಿದ್ದಾರೆ. ನಿಮ್ಮ...
ಸಿಸಿಬಿ ಭರ್ಜರಿ ಬೇಟೆ: ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

ಸಿಸಿಬಿ ಭರ್ಜರಿ ಬೇಟೆ: ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಡ್ರ್ಯಾಗ್ ಮಾಫಿಯಾವನ್ನು ಬೇಧಿಸಿದ್ದಾರೆ. ಮಾದಕದ್ರವ್ಯ ನಿಗ್ರಹದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಸೆರೆಹಿಡಿದಿದ್ದಾರೆ. ಬಂಧಿತರನ್ನು ನೈಜೀರಿಯಾ ಮೂಲದ ಎಸ್ಸೋ ಜರ್ಮನ್, ಜಾನ್ ಚುಕುವಾ ಎಂದು ಗುರುತಿಸಲಾಗಿದೆ.ಈ ಹಿಂದೆಯೂ ಕೂಡ ಡ್ರಗ್ ಮಾರಾಟ ಆರೋಪದಲ್ಲಿ ಈ ಆರೋಪಿಗಳು ಜೈಲು ಸೇರಿದ್ದರು. ಬಿಡುಗಡೆಯಾದ ನಂತರವೂ ದಂಧೆಯನ್ನು ಮುಂದುವರಿಸಿರುವ ಬಗ್ಗೆ ಮಾಹಿತಿ ಕಲೆಹಾಕಿದ ಸಿಸಿಬಿ ಪೊಲೀಸರು ಈ ಆರೋಪಿಗಳ ಬಗ್ಗೆ ನಿಗಾ ವಹಿಸಿದ್ದರು. ಕೆ.ಆರ್.ಪುರಂ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲೇ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನುಸೆರೆಹಿಡಿದಿದ್ದಾರೆ.ಆರೋಪಿಗಳಿಂದ ಸುಮಾರು 17 ಲಕ್ಷ ರೂಪಾಯಿ ಮೌಲ್ಯದ 108 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ....
ಕೊಲೆ ಪ್ರಕರಣದಲ್ಲಿ ಆಪ್ತನ ಪಾತ್ರ: ಮಹಾ ಸಚಿವರ ತಲೆದಂಡ

ಕೊಲೆ ಪ್ರಕರಣದಲ್ಲಿ ಆಪ್ತನ ಪಾತ್ರ: ಮಹಾ ಸಚಿವರ ತಲೆದಂಡ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಹತ್ಯೆ ಪ್ರಕರಣಕ್ಕೆ ಸಚಿವರ ತಲೆದಂಡವಾಗಿದೆ. ಸರಪಂಚ್‌ ಸಂತೋಷ್‌ ದೇಶಮುಖ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ತ ಸಹಾಯಕನ ಬಂಧನ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜಿನಾಮೆ ನೀಡಿದ್ದಾರೆ.ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಧನಂಜಯ ಅವರ ಆಪ್ತ ವಾಲ್ಮಿಕ್‌ ಕರಾಡ್‌ ಸರಪಂಚ್‌ ಸಂತೋಷ್‌ ದೇಶಮುಖ್‌ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಗಿ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ದೇವೇಂದ್ರ ಫಡ್ನವೀಸ್ ಅವರು ಧನಂಜಯ ಮುಂಡೆ ರಾಜಿನಾಮೆಗೆ ಸೂಚಿಸಿದ್ದರು ಎನ್ನಲಾಗಿದೆ.ಎನ್‌ಸಿಪಿಯ ಅಜಿತ್‌ ಪವಾರ್‌ ಬಣದ ನಾಯಕರಾಗಿರುವ ಧನಂಜಯ ಅವರು ಸಿಎಂ ಸೂಚನೆ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ....
ಸಿಂಧನೂರು ಬಳಿ ಬೈಕ್​​ಗಳ ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ

ಸಿಂಧನೂರು ಬಳಿ ಬೈಕ್​​ಗಳ ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ

Focus, ಪ್ರಮುಖ ಸುದ್ದಿ, ರಾಜ್ಯ
ರಾಯಚೂರು : ಸಿಂಧನೂರು ತಾಲೂಕಿನ ಮುಳ್ಳೂರು ಕ್ಯಾಂಪ್‌ ಬಳಿ ಎರಡು ಬೈಕ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣಕ್ಕೀಡಾಗಿದ್ದಾರೆ.ಸಿಂಧನೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಶಿವಪ್ಪ ಹುಸೇನಪ್ಪ(37), ಮೌನೇಶ್ ಮಹಾದೇವ(20) ಮತ್ತು ಹನುಮೇಶ(24) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸಿಂಧನೂರು ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....