Monday, April 13

Author: info@rajasdigital.com

ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ, ವೈವಿಧ್ಯ
ಮಂಗಳೂರು: ದಕ್ಷಿಣ ಭಾರತದ ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿ ಇದೀಗ ಮತ್ತೊಂದು ಕೈಂಕರ್ಯದಿಂದ ಆಸ್ತಿಕರ ಗಮನಸೆಳೆದಿದೆ. 'ಚೆಂಡು ಉತ್ಸವದ ನಾಡು' ಎಂದೇ ಗುರುತಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಶತಮಾನದ ನಂತರ ಶತಚಂಡಿಕಾಯಾಗ ನಡೆಯುತ್ತಿದೆ.ಇದು ನಿಜಕ್ಕೂ ಅಪೂರ್ವ ಹಾಗೂ ಅನನ್ಯ ಕೈಂಕರ್ಯ. ಸುಮಾರು 105 ವರ್ಷಗಳ ಹಿಂದೆ ಈ ಕ್ಷೇತ್ರದಲ್ಲಿ ಇಂತಹಾ ಚಂಡಿಕಾ ಯಾಗ ನಡೆದಿತ್ತು. ಲೋಕ ಕಲ್ಯಾಣಾರ್ಥವಾಗಿ ನೆರವೇರುತ್ತಿರುವ ಈ ಶತಚಂಡಿಕಾಯಾಗದಲ್ಲಿ ದೇಶದ ವಿವಿಧೆಡೆಯ ಯತಿಗಳು ಭಾಗಿಯಾಗುತ್ತಿದ್ದಾರೆ. ಚೆಂಡು ಉತ್ಸವ ಸಂದರ್ಭದ ಜನೋತ್ಸಾಹಕ್ಕೆ ಈ ಶತಚಂಡಿಕಾಯಾಗದ ಸಡಗರ ಸಾಕ್ಷಿಯಾಗುತ್ತಿರುವುದು ವಿಶೇಷ.ಮಾರ್ಚ್ 5ರ ಬೆಳಿಗ್ಗೆ 6 ರಿಂದ ಶತಚಂಡಿಕಾಯಾಗ ಆರಂಭವಾಗಲಿದ್ದು, ಮಧ್ಯಾಹ್ನ ಗಂಟೆ 12ಕ್ಕೆ ಪೂರ್ಣಾಹುತಿ ನೆರವೇರಲಿದೆ. ಮರುದಿನ, ಮಾರ್ಚ್ 6, ಗುರುವಾರ 'ದೊಡ್ಡ ರಂಗಪೂಜೆ' ಉತ್ಸವ ನೆರವೇರಲಿದೆ.ಮಾರ್ಚ್ 1 ರಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವೈಧಿಕ, ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು ವಿವಿಧ ಕೈಂಕರ್ಯಗಳು ನೆರವೇರುತ್ತಿವೆ. ಮಾರ್ಚ್ 5 ರಂದು ಬುಧವಾರ ಶತಚಂಡಿಕಾಯಾಗ ...
“ಹಕ್ಕಿ ಜ್ವರ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ”; ಜನರಿಗೆ ಧೈರ್ಯ ತುಂಬಿದ ಡಿಸಿ, ಸಿಇಒ

“ಹಕ್ಕಿ ಜ್ವರ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ”; ಜನರಿಗೆ ಧೈರ್ಯ ತುಂಬಿದ ಡಿಸಿ, ಸಿಇಒ

Focus, ಪ್ರಮುಖ ಸುದ್ದಿ, ರಾಜ್ಯ
ಬಳ್ಳಾರಿ: ಕೋಳಿ ಶೀತ ಜ್ವರ (ಹಕ್ಕಿ ಜ್ವರ)ವು ಹೆಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ಪಷ್ಟನೆ ನೀಡಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಾಮಾನ್ಯವಾಗಿ ಶೀಥಲ ಪ್ರದೇಶದ ವಲಸೆ ಹಕ್ಕಿಗಳು ವಂಶಾಭಿವೃದ್ಧಿಗಾಗಿ ಬಂದಾಗ ಹಿಕ್ಕೆ, ಪುಕ್ಕ ಹಾಗೂ ಬಾಯಿ ಮತ್ತು ಕಣ್ಣಿನಿಂದ ಹೊರ ಬರುವ ಸ್ರವಿಕೆಯಿಂದ ಕಾಯಿಲೆ ಹರಡು ಸಂಭವವಿದ್ದು, ಪಕ್ಷಿಗಳಿಗೆ ರೋಗವು ಹರಡುತ್ತದೆ ಎಂದು ತಿಳಿಸಿದರು.ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು 70 ಡಿಗ್ರಿ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಿದಾಗ ವೈರಾಣು ನಾಶಗೊಳ್ಳುತ್ತದೆ. ಹಾಗಾಗಿ ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿದ ನಂತರ ಸೇವನೆ ಮಾಡಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಫೆ.23 ರಂದು ಕುರೇಕುಪ್ಪ ಕುಕ್ಕುಟ ಸಂವರ್ಧನಾ ಕೇಂದ್ರದಲ್ಲಿ ಸಾಕಾಣಿಕೆ ಮಾಡಿದ ಅಸ...
ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರದ ಅಚ್ಚರಿಯ ಂದೆ; ಇಬ್ಬರು ಉಸ್ತುವಾರಿ ಸಚಿವರ ನೇಮಕ

ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರದ ಅಚ್ಚರಿಯ ಂದೆ; ಇಬ್ಬರು ಉಸ್ತುವಾರಿ ಸಚಿವರ ನೇಮಕ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮುಂಬೈ: ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕರ ಮೇಲಿನ ದಾಳಿಯ ನಂತರ ಮಹಾರಾಷ್ಟ್ರ-ಕರ್ನಾಟಕ ನಡುವೆ ಗಡಿ ವಿವಾದ ಉಲ್ಬಣಗೊಂಡಿದೆ. ಮಹಾರಾಷ್ಟ್ರ ಸರ್ಕಾರವು ಅಚ್ಚರಿಯ ನಿರ್ಧಾರವೊಂದರಲ್ಲಿ ಗಡಿ ವಿವಾದದ ಉಸ್ತುವಾರಿಗಾಗಿ ಇಬ್ಬರು ಸಚಿವರನ್ನು ನೇಮಕ ಮಾಡಿದೆ. ಈ ಕುರಿತ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ.ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ಗಡಿ ವಿವಾದ ಪ್ರಕರಣದಲ್ಲಿ ಮಹಾರಾಷ್ಟ್ರದ ಕಾನೂನು ತಂಡದೊಂದಿಗೆ ಸಮನ್ವಯ ಸಾಧಿಸಲು ಉಸ್ತುವಾರಿ ವಹಿಸಲಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರ ಸರ್ಕಾರದ ಈ ನಡೆ ಅಚ್ಚರಿಗೆ ಕಾರಣವಾಗಿದೆ....
‘ಎಲ್ಲದಕ್ಕೂ ಬಂದೇ ಅಸ್ತ್ರ ಆಗಬಾರದು’: ಮಾ.22ರ ‘ಕರ್ನಾಟಕ ಬಂದ್’ಗೆ ಕರವೇ ಬೆಂಬಲ ಇಲ್ಲ

‘ಎಲ್ಲದಕ್ಕೂ ಬಂದೇ ಅಸ್ತ್ರ ಆಗಬಾರದು’: ಮಾ.22ರ ‘ಕರ್ನಾಟಕ ಬಂದ್’ಗೆ ಕರವೇ ಬೆಂಬಲ ಇಲ್ಲ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ತುಮಕೂರು: ಮರಾಠಿಗರ ದೌರ್ಜನ್ಯ ಖಂಡಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಮಾರ್ಚ್ 22ರಂದು ಕರೆ ನೀಡಿರುವ ಬಂದ್'ಗೆ ತಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾಯಾಯಣಗೌಡ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲದಕ್ಕೂ ಬಂದೇ ಅಸ್ತ್ರ ಆಗಬಾರದು ಎಂದು ಪ್ರತಿಪಾದಿಸಿದರು.ಕೆಪಿಎಸ್ಸಿ ಅಭ್ಯರ್ಥಿಗಳು ಹಾಗೂ ಇತರ ಪರೀಕ್ಷೆ ಬರೆಯುವವರಿಗೆ ಬಹಳ ತೊಂದರೆ ಆಗಿದೆ. ಹಾಗಾಗಿ ಅವರ ಜೊತೆ ನಾನು ಇರಬೇಕಾಗಿದೆ ಎಂದಿರುವ ನಾರಾಯಣಗೌಡ, ಆ ಬಂದ್ ಗೆ ನನ್ನ ಬೆಂಬಲ ಇಲ್ಲ. ಎಲ್ಲದಕ್ಕೂ ಬಂದೇ ಅಸ್ತ್ರ ಆಗಬಾರದು, ಕೊನೆಯ ಬ್ರಹ್ಮಾಸ್ತ್ರ ಬಂದ್ ಆಗಬೇಕು ಎಂದರು.ಎಸ್ಸೆಸೆಲ್ಸಿ ಪರೀಕ್ಷೆ ಮುಂದೂಡುವುದು ಸರಿಯಲ್ಲ. ಇದನ್ನು ಹಿರಿಯ ಹೋರಾಟಗಾರ ವಾಟಾಲ್ ನಾಜರಾಜು ಅವರು ಅರಿತುಕೊಳ್ಳಬೇಕು ಎಂದವರು ಹೇಳಿದರು....
ಅಯೋಧ್ಯೆಯ ರಾಮಮಂದಿರ ಮೇಲೆ ದಾಳಿಗೆ ಸಂಚು: ಶಂಕಿತ ಉಗ್ರಾಣ ಸೆರೆ

ಅಯೋಧ್ಯೆಯ ರಾಮಮಂದಿರ ಮೇಲೆ ದಾಳಿಗೆ ಸಂಚು: ಶಂಕಿತ ಉಗ್ರಾಣ ಸೆರೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಅಹಮದಾಬಾದ್: ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಶಂಕಿತನನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.ಫರಿದಾಬಾದ್ ಪೊಲೀಸರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿದ ಗುಜರಾತ್ ಎಟಿಎಸ್ ತಂಡವು ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಶಂಕಿತ ಉಗ್ರನನ್ನ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತನನ್ನು 19 ವರ್ಷದ ಅಬ್ದುಲ್ ರೆಹಮಾನ್‌ ಎಂದು ಗುರುತಿಸಲಾಗಿದ್ದು, ಈತನನ್ನು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದಾಗ ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಈತ ನೀಡಿದ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿರುವ ಎಟಿಎಸ್ ಅಧಿಕಾರಿಗಳು, ಪಾಳುಬಿದ್ದ ಮನೆಯೊಂದರಲ್ಲಿ ಎರಡು ಜೀವಂತ ಹ್ಯಾಂಡ್ ಗ್ರೆನೇಡ್‌ಗಳನ್ನು ಪತ್ತೆ ಮಾಡಿದ್ದಾರೆ....
ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ: ಉತ್ತರ ಭಾರತದಲ್ಲಿ ಮೂರನೇ ಭಾಷೆ ಯಾವುದು ಎಂದು ಸ್ಟಾಲಿನ್ ಪ್ರಶ್ನೆ

ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ: ಉತ್ತರ ಭಾರತದಲ್ಲಿ ಮೂರನೇ ಭಾಷೆ ಯಾವುದು ಎಂದು ಸ್ಟಾಲಿನ್ ಪ್ರಶ್ನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಚೆನ್ನೈ: ಕೇಂದ್ರದ ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ ಹೊರಹಾಕಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಉತ್ತರ ಭಾರತದಲ್ಲಿ ಕೇವಲ ಎರಡು ಭಾಷೆಗಳನ್ನು ಕಲಿಸಲಾಗುತ್ತಿದೆ ಎಂದು ಬೊಟ್ಟು ಮಾಡಿದ್ದಾರೆ. ಅಲ್ಲಿ ಹಾಗಿರುವಾಗ, ದಕ್ಷಿಣದ ವಿದ್ಯಾರ್ಥಿಗಳಿಗೆ ಮೂರನೇ ಭಾಷೆಯನ್ನು ಏಕೆ ಕಲಿಸಬೇಕು ಎಂದು ಪ್ರಶ್ನಿಸಿದ್ದಾರೆ.ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್‌ ಕಾಕಿರುವ ಅವರು, ಉತ್ತರ ಭಾರತದಲ್ಲಿ ಮೂರನೇ ಭಾಷೆಯಾಗಿ ಯಾವ ಭಾಷೆಯನ್ನು ಕಲಿಸಲಾಗುತ್ತಿದೆ ಎಂಬುದನ್ನು ಮೊದಲು ಹೇಳಬೇಕು ಎಂದು ಕೇಂದ್ರಕ್ಕೆ ಸವಾಲು ಹಾಕಿದ್ದಾರೆ.ತಮಿಳುನಾಡಿನ ವಿದ್ಯಾರ್ಥಿಗಳಿಗೆ ಮೂರನೇ ಭಾಷೆ ಕಲಿಯುವ ಅವಕಾಶವನ್ನು ನೀವು ಏಕೆ ನಿರಾಕರಿಸುತ್ತಿದ್ದೀರಿ? ಎಂಬ ಪ್ರಶ್ನೆಗಳ ಕುರಿತಂತೆಯೂ ಪ್ರತುಕ್ರಿಯಿಸಿರುವ ಸ್ಟಾಲಿನ್, ಉತ್ತರ ಭಾರತದಲ್ಲಿ ಮೂರನೇ ಭಾಷೆಯಾಗಿ ಯಾವ ಭಾಷೆಯನ್ನು ಕಲಿಸಲಾಗುತ್ತಿದೆ ಎಂದು ಮೊದಲು ಕೇಂದ್ರ ಉತ್ತರಿಸಲಿ ಎಂದು ಸಲಹೆ ಮಾಡಿದ್ದಾರೆ. Some guardians of lopsided policies, wailing in great concern, ask, “Why are you denying Tamil Nadu students the opportunit...
ಶೂನ್ಯ ಸಾಧನೆ ತೋರಿದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಶೂನ್ಯ ಸಾಧನೆ ತೋರಿದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಶೂನ್ಯ ಸಾಧನೆ ತೋರಿದ್ದರೂ, ನಾವು ಚಾಂಪಿಯನ್‌ ಎಂದು ಕಾಂಗ್ರೆಸ್‌ ಸರ್ಕಾರ ಹೇಳಿಕೊಂಡಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡು ಈಗ ಅವರ ಮೂಲಕವೇ ಸಾಧನೆ ಮಾಡಿದ್ದೇವೆ ಎಂದು ಸುಳ್ಳು ಹೇಳಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭಾಷಣದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ, ಅಭಿವೃದ್ಧಿ ಶೂನ್ಯವಾದ ಕಾಂಗ್ರೆಸ್‌ ಸರ್ಕಾರ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದೆ. ಅಭಿವೃದ್ಧಿ ಹಾಗೂ ವಿಕಾಸ ಎಂಬ ಮಾತನ್ನು ಅವರ ಬಾಯಲ್ಲಿ ಹೇಳಿಸಿದ್ದಾರೆ. ಕಾಂಗ್ರೆಸ್‌ ನಾಯಕರ ಜೇಬು ತುಂಬಿದೆ, ಕಾಂಗ್ರೆಸ್‌ ಶಾಸಕರ ಮನೆ ತುಂಬಿದೆಯೇ ಹೊರತು ರಾಜ್ಯದ ಅಭಿವೃದ್ಧಿ ಆಗಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗಿದೆ. ರಾಜ್ಯಪಾಲರನ್ನು ಹೀಯಾಳಿಸುವ ಮಾತಾಡಿ, ಅವರ ಅಧಿಕಾರಗಳನ್ನು ಕಿತ್ತುಕೊಂಡು, ಈಗ ಅವರ ಕೈಯಲ್ಲೇ ನಾವೇ ನಂ.1 ಎಂಬ ರೀತಿಯಲ್ಲಿ ಹೇಳಿಸಲಾಗಿದೆ ಎಂದು ದೂರಿದರು.ಆರೋಗ್ಯ ಕೈಗೆಟುಕುತ್ತಿದೆ ಎನ್ನಲಾಗಿದೆ. ಆದರೆ ಸರ್ಕಾ...
“ವಾಯು ಮಾಲಿನ್ಯವು ಆಲ್ಝೈಮರ್‌ನಲ್ಲಿ ಸ್ಮರಣಶಕ್ತಿ ನಷ್ಟಕ್ಕೆ ಕಾರಣವಾಗಬಹುದು”

“ವಾಯು ಮಾಲಿನ್ಯವು ಆಲ್ಝೈಮರ್‌ನಲ್ಲಿ ಸ್ಮರಣಶಕ್ತಿ ನಷ್ಟಕ್ಕೆ ಕಾರಣವಾಗಬಹುದು”

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ವಾಯು ಮಾಲಿನ್ಯದಲ್ಲಿ ಕಂಡುಬರುವ ವಿಷಕಾರಿ ವಸ್ತುಗಳು ಮತ್ತು ಕಾಡ್ಗಿಚ್ಚಿನ ಹೊಗೆಯು ಮೆದುಳಿನಲ್ಲಿ ರಾಸಾಯನಿಕ ಬದಲಾವಣೆಯನ್ನು ಉಂಟುಮಾಡಬಹುದು. ಇದು ಆಲ್ಝೈಮರ್ ಕಾಯಿಲೆಯಲ್ಲಿ ಕಂಡುಬರುವಂತೆ ಸ್ಮರಣಶಕ್ತಿ ನಷ್ಟಕ್ಕೆ ಕಾರಣವಾಗಬಹುದು ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ.ಯುಎಸ್‌ನ ಸ್ಕ್ರಿಪ್ಸ್ ರಿಸರ್ಚ್‌ನ ವಿಜ್ಞಾನಿಗಳು ಎಸ್-ನೈಟ್ರೋಸೈಲೇಷನ್ ಎಂದು ಕರೆಯಲ್ಪಡುವ ರಾಸಾಯನಿಕ ಬದಲಾವಣೆಯನ್ನು ಕಂಡುಹಿಡಿದರು. ಇದು ಮೆದುಳಿನ ಕೋಶಗಳು ಹೊಸ ಸಂಪರ್ಕಗಳನ್ನು ಮಾಡುವುದನ್ನು ತಡೆಯುತ್ತದೆ ಮತ್ತು ಅಂತಿಮವಾಗಿ ಜೀವಕೋಶದ ಸಾವಿಗೆ ಕಾರಣವಾಗುತ್ತದೆ. ಎಸ್-ನೈಟ್ರೋಸೈಲೇಷನ್ ಅನ್ನು ನಿರ್ಬಂಧಿಸುವುದರಿಂದ ಆಲ್ಝೈಮರ್‌ನ ಮೌಸ್ ಮಾದರಿಗಳು ಮತ್ತು ಮಾನವ ಕಾಂಡಕೋಶಗಳಿಂದ ಉತ್ಪತ್ತಿಯಾಗುವ ನರ ಕೋಶಗಳಲ್ಲಿ ಸ್ಮರಣಶಕ್ತಿ ನಷ್ಟದ ಚಿಹ್ನೆಗಳು ಭಾಗಶಃ ಹಿಮ್ಮೆಟ್ಟುತ್ತವೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ."ಮಾಲಿನ್ಯಕಾರಕಗಳು ಸ್ಮರಣಶಕ್ತಿ ನಷ್ಟ ಮತ್ತು ನರಕ್ಷೀಣ ಕಾಯಿಲೆಗೆ ಹೇಗೆ ಕೊಡುಗೆ ನೀಡಬಹುದು ಎಂಬುದರ ಆಣ್ವಿಕ ವಿವರಗಳನ್ನು ನಾವು ಬಹಿರಂಗಪಡಿಸಿದ್ದೇವೆ" ಎಂದು ಸ್ಕ್ರಿಪ್ಸ್ ರಿಸರ್ಚ್‌ನ ಪ್ರಾಧ...
“ಕಲಾವಿದರು ಯಾರ ಸ್ವತ್ತೂ ಅಲ್ಲ, ಪಕ್ಷಗಳ ಕಾರ್ಯಕರ್ತರೂ ಅಲ್ಲ”

“ಕಲಾವಿದರು ಯಾರ ಸ್ವತ್ತೂ ಅಲ್ಲ, ಪಕ್ಷಗಳ ಕಾರ್ಯಕರ್ತರೂ ಅಲ್ಲ”

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕಲಾವಿದರ ನೆಟ್ ಬೋಲ್ಟ್ ಟೈಟ್ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, "ಕಲಾವಿದರು ಯಾರ ಸ್ವತ್ತೂ ಅಲ್ಲ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಅಲ್ಲ" ಎಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ 'X'ನಲ್ಲಿ ಬರೆದುಕೊಂಡಿರುವ ಅಶೋಕ್, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಅವರು ಡಿಕೆಶಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಸಮಾಜದಲ್ಲಿ ಎಲ್ಲರೂ ತಮಗೆ ಮತ್...
ಮೈಸೂರಿನ 150 ಎಕರೆ ಜಾಗದಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ: ಚಿಗುರಿದ ಕನಸು

ಮೈಸೂರಿನ 150 ಎಕರೆ ಜಾಗದಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ: ಚಿಗುರಿದ ಕನಸು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದರು.ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇ...