Saturday, December 6

Author: info@rajasdigital.com

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಿಜೆಪಿ ಕ್ಯಾಂಡಲ್  ಮಾರ್ಚ್

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಿಜೆಪಿ ಕ್ಯಾಂಡಲ್ ಮಾರ್ಚ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ನೇತೃತ್ವದಲ್ಲಿ ಕ್ಯಾಂಡಲ್ ಮಾರ್ಚ್ ನಡೆಯಿತು. ಬಳಿಕ ದಾಳಿಯಲ್ಲಿ ಮೃತರಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಿ.ಟಿ.ರವಿ, ಶಾಸಕರಾದ ವೇದವ್ಯಾಸ್ ಕಾಮತ್, ನಾಯಕರಾದ ಎಸ್. ಹರೀಶ್, ಸಪ್ತಗಿರಿ ಗೌಡ, ಜಗದೀಶ್ ಹಿರೇಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP ಅವರ ನೇತೃತ್ವದಲ್ಲಿ ಕ್ಯಾಂಡಲ್ ಮಾರ್ಚ್ ನಡೆಯಿತು. ಬಳಿಕ ದಾಳಿಯಲ್ಲಿ ಮೃತರಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ @CTRavi_BJP… pic.twitter.com/gGB5alNcKI— BJP Karnataka (@BJP4Karnataka) April 23, 2025...
ಪೆಹಲ್ಗಮ್ ದಾಳಿಯ ಪ್ರತಿಧ್ವನಿ: ರಾಜ್ಯದಲ್ಲಿನ ಸ್ಲೀಪರ್‌ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ

ಪೆಹಲ್ಗಮ್ ದಾಳಿಯ ಪ್ರತಿಧ್ವನಿ: ರಾಜ್ಯದಲ್ಲಿನ ಸ್ಲೀಪರ್‌ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ, ಅಭಿವೃದ್ಧಿಗೆ ದಾರಿ ಮಾಡಿದ್ದರು. ನಾನು ಕೂಡ ಎರಡು ವರ್ಷಗಳ ಹಿಂದೆ ಅಲ್ಲಿಗೆ ಭೇಟಿ ನೀಡಿದ್ದೆ. ವ್ಯಾಪಾರ ವಹಿವಾಟು ಉತ್ತಮವಾಗಿ ನಡೆಯುತ್ತಿತ್ತು. ಬಹುಸಂಖ್ಯಾತ ಮುಸ್ಲಿಮರು ಪ್ರತಿ ದಿನ 10,000 ರೂ. ಸಂಪಾದನೆ ಮಾಡುತ್ತಿದ್ದೇವೆ ಎಂದು ಖುಷಿಯಿಂದ ಹೇಳಿಕೊಂಡಿದ್ದರು. ಆದರೆ ಈಗ ಪಾಕಿಸ್ತಾನ ಪ್ರೇರಿತವಾದ ಭಯೋತ್ಪಾದಕ ಸಂಘಟನೆ ಈ ಕೆಲಸ ಮಾಡಿರುವುದು ಖಂಡನೀಯ ಎಂದರು. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಿದೆ. ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಮಾಡಬೇಕು. ಜಾಮೀನು ಪಡೆದು ಹೊರಗೆ ಬಂದ ಭಯೋತ್ಪಾದಕರ ಮೇಲೆ ನಿಗಾ ವಹಿಸಬೇಕು. ಅಂಥವರನ್ನು ಪೊಲೀಸರು ಕೂಡ...
ಉಗ್ರರ ಧಮನ ಮಾಡಿ; ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ ಎಂದ ಡಿಕೆಶಿ

ಉಗ್ರರ ಧಮನ ಮಾಡಿ; ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ ಎಂದ ಡಿಕೆಶಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು.. ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂ...
ಇವರೇ ಪಹಲ್ಗಾಮ್ ದಾಳಿಕೋರರು? ಶಂಕಿತ ಉಗ್ರರ ರೇಖಾ ಚಿತ್ರ ಬಿಡುಗಡೆ

ಇವರೇ ಪಹಲ್ಗಾಮ್ ದಾಳಿಕೋರರು? ಶಂಕಿತ ಉಗ್ರರ ರೇಖಾ ಚಿತ್ರ ಬಿಡುಗಡೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮಂಗಳವಾರ ಗುಂಡಿನ ದಾಳಿ ನಡೆಸಿರುವ ಮೂವರು ಶಂಕಿತ ಉಗ್ರರ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಮಂಗಳವಾರ ಪಹಲ್ಗಮ್ ಬಳಿ ಉಗ್ರರು ಹಿಂದೂಗಳನ್ನು ಗುರಿಯಾಗಿಸಿ ಪೈಶಾಚಿಕತೆ ಮೆರೆದಿದ್ದರು. 26 ಮಂದಿಯನ್ನು ಪತ್ನಿ-ಮಕ್ಕಳೆದುರೇ ಹತ್ಯೆ ಮಾಡಿದ್ದಾರೆ. ಮೂವರು ಶಾಸ್ತ್ರಧಾರಿ ಭಯೋತ್ಪಾದಕರ ಬಗ್ಗೆ ಸುಳಿವು ಸಿಕ್ಕಿದೆ ಎನ್ನಲಾಗಿದ್ದು ಅವರ ರೇಖಾ ಚಿತ್ರವನ್ನು ಸೇನಾ ಮೂಲಗಳು ಬಿಡುಗಡೆ ಮಾಡಿವೆ. ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂಬ ಹೆಸರಿನ ವ್ಯಕ್ತಿಗಳು ಈ ಕೃತ್ಯ ನಡೆಸಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದ್ದು ಸೇನಾ ಪದೇ ಭಯೋತ್ಪಾದಕರಿಗಾಗಿ ಬೇಟೆ ಕೈಗೊಂಡಿದೆ. ಅರಣ್ಯ ಪ್ರದೇಶ ಪ್ರವೇಶಿಸಿ ದಾಳಿಕೋರರು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದ್ದು ಶೋಧಕಾರ್ಯ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಉಗ್ರರ ದಾಳಿ ವೇಳೆ ಬದುಕುಳಿದವರ ಮಾಹಿತಿ ಹಾಗೂ ಪ್ರಾಥಮಿಕ ವಿಧಿವಿಜ್ಞಾನ ವಿಶ್ಲೇಷಣೆ ಆಧರಿಸಿ ಶಂಕಿತರ ರೇಖಾ ಚಿತ್ರವನ್ನು ಸಿದ್ಧಪಡಿಸಿರುವ ಸೇನೆ, ಶಂಕಿತರ ಪತ್ತೆಗಾಗಿ ಬಿಗಿ ಕ್ರಮ ಕೈಗೊಂಡಿದೆ. ಪಹ...
ಪೈಶಾಚಿಕತೆ ಮೆರೆದವರಿಗೆ ಸೂಕ್ತ ಉತ್ತರ: ಅಮಿತ್ ಶಾ ಗುಡುಗು

ಪೈಶಾಚಿಕತೆ ಮೆರೆದವರಿಗೆ ಸೂಕ್ತ ಉತ್ತರ: ಅಮಿತ್ ಶಾ ಗುಡುಗು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀನಗರ: ಉಗ್ರರು ಪೈಶಾಚಿಕ ಕೃತ್ಯದಿಂದ ನಲುಗಿರುವ ಜಮ್ಮು-ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. पहलगाम के आतंकी हमले में अपनों को खोने का दर्द हर भारतीय को है। इस दुःख को शब्दों में व्यक्त नहीं किया जा सकता।मैं अपने इन सभी परिवारों और पूरे देश को विश्वास दिलाता हूँ कि बेगुनाह मासूम लोगों को मारने वाले इन आतंकियों को बिल्कुल बख्शा नहीं जाएगा। pic.twitter.com/Dwkt6Hhj7P— Amit Shah (@AmitShah) April 23, 2025 ಭಯೋತ್ಪಾದಕರ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಅಮಿತ್ ಶಾ, ಮಾರಣಾಂತಿಕ ದಾಳಿ ನಡೆಸಿದ ಉಗ್ರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ....
ಪಹಲ್ಗಾಮ್ ದಾಳಿ: ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನಿಂತ ಸಂತೋಷ್ ಲಾಡ್

ಪಹಲ್ಗಾಮ್ ದಾಳಿ: ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನಿಂತ ಸಂತೋಷ್ ಲಾಡ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಮ್'ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಈ ನಡುವೆ ಜಮ್ಮುಕಾಶ್ಮೀರಕ್ಕೆ ಪ್ರವಾಸ ತೆರಳಿರುವ ಕನ್ನಡೀರನೇಕರು ಆತಂಕದಲ್ಲಿದ್ದು ರಾಜ್ಯಕ್ಕೆ ಮರಳಲು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕನ್ನಡಿಗರಿಗೆ ಸರ್ಕಾರದ ವತಿಯಿಂದ ನೆರವಾಗಲು ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಅಧಿಕಾರಿಗಳನ್ನೊಳಗೊಂಡ ತಂಡ ಕಾಶ್ಮೀರಕ್ಕೆ ತೆರಳಿದೆ. ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಚರ್ಚಿಸಿರುವ ಸಚಿವ ಸಂತೋಷ್ ಲಾಡ್, ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ. ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಭೀಕರ ದಾಳಿಗೆ ತುತ್ತಾಗಿರುವ ಕರ್ನಾಟಕದ ಪ್ರವಾಸಿಗರ ರಕ್ಷಣೆಗಾಗಿ ಮಾನ್ಯ @CMofKarnataka ಶ್ರೀ @siddaramaiah ಅವರ ಸೂಚನೆಯಂತೆ ನಾನು ಮತ್ತು ವಿಶೇಷ ಅಧಿಕಾರಿಗಳ ತಂಡ ಕಾಶ್ಮೀರದ ಪಹಲ್ಗಾಮ್ ತಲುಪಿದ್ದೇವೆ.ಸಂತ್ರಸ್ತರಾಗಿರುವ ರಾಜ್ಯದ ಪ್ರವಾಸಿಗರ ಸಂಪೂರ್ಣ ಮಾಹಿತಿ ಕಲೆಹಾಕಲಾಗುತ್ತಿದೆ. ದಾಳಿಯಲ್ಲಿ…...
ಪಹಲ್ಗಾಮ್ ದಾಳಿ ಹಿನ್ನೆಲೆ; ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ

ಪಹಲ್ಗಾಮ್ ದಾಳಿ ಹಿನ್ನೆಲೆ; ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್'ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಜಮ್ಮುಕಾಶ್ಮೀರಕ್ಕೆ ಪ್ರವಾಸ ತೆರಳಿರುವ ಕನ್ನಡೀರನೇಕರು ಆತಂಕದಲ್ಲಿದ್ದು ರಾಜ್ಯಕ್ಕೆ ಮರಳಲು ಪರದಾಡುತ್ತಿದ್ದಾರೆ. ಈ ನಡುವೆ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿಯಯನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ Tour Operators & Travel Agents ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಸಹಾಯವಾಣಿಗೆ ನೀಡಬೇಕೆಂದು ಸರ್ಕಾರ ತಿಳಿಸಿದೆ. ಪ್ರವಾಸಿಗರ ಸಂಬಂಧಿಕರು ಅಥವಾ ಸಾರ್ವಜನಿಕರು ಪ್ರವಾಸಿಗರ ವಿವರಗಳನ್ನು ಸಹಾಯವಾಣಿ ಸಂಖ್ಯೆಗಳಾದ 080-43344334, 080-43344335, 080-43344336, 080-43344342 ಗೆ ನೀಡಬೇಕೆಂದು ಸರ್ಕಾರ ಮನವಿ ಮಾಡಿದೆ....
ಹಿಂದೂಗಳೇ ಟೆರರ್ ಟರ್ಗೆಟ್.. ಪುರುಷರನ್ನೇ ಹತ್ಯೆ ಮಾಡಿದ ಉಗ್ರರು

ಹಿಂದೂಗಳೇ ಟೆರರ್ ಟರ್ಗೆಟ್.. ಪುರುಷರನ್ನೇ ಹತ್ಯೆ ಮಾಡಿದ ಉಗ್ರರು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆ ಪಹಲ್ಗಾಮ್ ಬಳಿ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 28 ಮಂದಿ ಬಲಿಯಾಗಿದ್ದಾರೆ. ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಹಿಂದೀಗಳನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ. ಪ್ರವಾಸಿಗರ ಗುಂಪಿನತ್ತ ಲಗ್ಗೆ ಹಾಕಿ ಧರ್ಮದ ಯಾವುದೆಂದು ತಿಳಿದು, ಹಿಂದೂಗಳಾಗಿದ್ದಲ್ಲಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಕುಟುಂಬ ಸಮೇತರಾಗಿ ತೆರಳಿದ್ದವರಲ್ಲಿ ಗಂಡಸರನ್ನು ಮಾತ್ರ ಕೊಲೆ ಮಾಡಿ ಪತ್ನಿ, ಮಕ್ಕಳನ್ನು ಅನಾಥರಾಗಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಕಂಡು ಕೇಳರಿಯದ ಭೀಕರ ಕೃತ್ಯ ಇದಾಗಿದೆ. ಕಣಿವೆಗಳಿಂದ ಕೂಡಿದ ಸುಂದರ ಪ್ರವಾಸಿ ತಾಣದಲ್ಲಿ ಮರಗಳ ನಡುವಿನಿಂದ ನುಸುಳಿ ಬಂದ ಉಗ್ರರು, ಪ್ರವಾಸಿಗರ ರಕ್ತದೋಕುಳಿ ಹರಿಸಿದ್ದಾರೆ. ಕರ್ನಾಟಕ, ಆಂಧ್ರ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 28 ಮಂದಿ ಬಲಿಯಾಗಿದ್ದಾರೆ. ಇಬ್ಬರು ವಿದೇಶಿಗರೂ ಉಗ್ರರ ದಾಳಿಗೆ ಬಲಿಯಾಗಿದ್ದಾರೆ....
ಪಹಲ್ಗಾಂ ಉಗ್ರರ ದಾಳಿಯಲ್ಲಿ 26 ಮಂದಿ ಬಲಿ

ಪಹಲ್ಗಾಂ ಉಗ್ರರ ದಾಳಿಯಲ್ಲಿ 26 ಮಂದಿ ಬಲಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆ ಪಹಲ್ಗಾಮ್ ಬಳಿ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 26 ಮಂದಿ ಬಲಿಯಾಗಿದ್ದಾರೆ. ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಹಿಂದೀಗಳನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ. ಪ್ರವಾಸಿಗರ ಗುಂಪಿನತ್ತ ಲಗ್ಗೆ ಹಾಕಿ ಧರ್ಮದ ಯಾವುದೆಂದು ತಿಳಿದು, ಹಿಂದೂಗಳಾಗಿದ್ದಲ್ಲಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಕುಟುಂಬ ಸಮೇತರಾಗಿ ತೆರಳಿದ್ದವರಲ್ಲಿ ಗಂಡಸರನ್ನು ಮಾತ್ರ ಕೊಲೆ ಮಾಡಿ ಪತ್ನಿ, ಮಕ್ಕಳನ್ನು ಅನಾಥರಾಗಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಕಂಡು ಕೇಳರಿಯದ ಭೀಕರ ಕೃತ್ಯ ಇದಾಗಿದೆ. ಕಣಿವೆಗಳಿಂದ ಕೂಡಿದ ಸುಂದರ ಪ್ರವಾಸಿ ತಾಣದಲ್ಲಿ ಮರಗಳ ನಡುವಿನಿಂದ ನುಸುಳಿ ಬಂದ ಉಗ್ರರು, ಪ್ರವಾಸಿಗರ ರಕ್ತದೋಕುಳಿ ಹರಿಸಿದ್ದಾರೆ. ಕರ್ನಾಟಕ, ಆಂಧ್ರ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 28 ಮಂದಿ ಬಲಿಯಾಗಿದ್ದಾರೆ. ಇಬ್ಬರು ವಿದೇಶಿಗರೂ ಉಗ್ರರ ದಾಳಿಗೆ ಬಲಿಯಾಗಿದ್ದಾರೆ....
ಕೇಂದ್ರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಹೋರಾಟ; ಏ.28ರಿಂದ ‘ಸಂವಿಧಾನ ಉಳಿಸಿ’ ಅಭಿಯಾನ

ಕೇಂದ್ರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಹೋರಾಟ; ಏ.28ರಿಂದ ‘ಸಂವಿಧಾನ ಉಳಿಸಿ’ ಅಭಿಯಾನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಜೈಪುರ: ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್, ಮತ್ತೊಂದು ಅಭಿಯಾನಕ್ಕೆ ತಯಾರಿ ನಡೆಸಿದೆ. ಏಪ್ರಿಲ್ 28 ರಂದು ಜೈಪುರದಲ್ಲಿ 'ಸಂವಿಧಾನ ಉಳಿಸಿ' ಅಭಿಯಾನದ ಭಾಗವಾಗಿ ಬೃಹತ್ ರಾಜ್ಯ ಮಟ್ಟದ ರ್ಯಾಲಿ ಆರಂಭವಾಗಲಿದೆ. ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ಸಿಂಗ್ ದೋತಾಸ್ರಾ ಅವರು, ಮುಂಬರುವ ವಾರಗಳಲ್ಲಿ ಈ ಅಭಿಯಾನ ರಾಜ್ಯ ಮಟ್ಟದಿಂದ ಬೂತ್ ಮಟ್ಟದವರೆಗೆ ನಡೆಯಲಿದೆ ಎಂದು ಹೇಳಿದರು. ಇಂಗ್ಲಿಷ್'ನಲ್ಲೂ ಈ ಸುದ್ದಿಯನ್ನು ಓದಿ.. Congress to launch ‘Save Constitution’ campaign in Jaipur on April 28 ಜೈಪುರದಲ್ಲಿ ನಡೆಯುವ ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಹಿರಿಯ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಸುಮಾರು 2,200 ವಿಭಾಗೀಯ ಅಧ್ಯಕ್ಷರ ವಿಶೇಷ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ವ್ಯವಸ್ಥೆಗಳನ್ನು ಸುಗಮಗೊಳಿಸಲು ಏಪ್ರಿಲ್ 24 ರಂದು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ದೋತಾಸ್ರಾ ಹ...