Wednesday, April 15

Author: info@rajasdigital.com

ಉತ್ತರಾಖಂಡ: ಹಿಮಪಾತದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಮುಂದುವರಿದ ಪ್ರಯತ್ನ

ಉತ್ತರಾಖಂಡ: ಹಿಮಪಾತದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಮುಂದುವರಿದ ಪ್ರಯತ್ನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ ಆತಂಕದ ಸನ್ನಿವೇಶ ಸೃಷ್ಟಿಸಿದೆ. ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಹಿಮಪಾತದಲ್ಲಿ 55 ಕಾರ್ಮಿಕರು ಸಿಲುಕಿದ್ದು ಹಲವರನ್ನು ರಕ್ಷಿಸಲಾಗಿದೆ. ಇನ್ನೂ 20ಕ್ಕೂ ಹೆಚ್ಚು ಮಂದಿ ಹಿಮದಡಿಯಲ್ಲಿ ಸಿಲುಕಿದ್ದಾರೆನ್ನಲಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಭೀಕರ ಹಿಮಪಾತ ಸಂಭವಿಸಿದೆ ಎನ್ನಲಾಗಿದೆ. ಮಾನಾದ ಗಡಿ ಪ್ರದೇಶದ ಗಡಿ ರಸ್ತೆ ಸಂಸ್ಥೆ ಶಿಬಿರದ ಬಳಿ ಭಾರೀ ಹಿಮಪಾತ ಸಂಭವಿಸಿದೆ. ಆ ಸ್ಥಳದಲ್ಲಿ ಕಾಮಗಾರಿಯಲ್ಲಿ ತೊಡಗಿದ್ದ 55ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿದ್ದರು. ಕೆಶಿಪ್[ರ ಕಾರ್ಯಾಚರಣೆ ನಡೆಸಿದ ಪೊಲೀಸ್ ಹಾಗೂ ಸೇನಾ ತಂಡಗಳು 32 ಜನರನ್ನು ರಕ್ಷಿಸಿಸಿದ್ದಾರೆ. ಆದರೆ, ಇನ್ನೂ 23 ಕಾರ್ಮಿಕರು ಹಿಮದಡಿ ಸಿಲುಕಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. At least 57 BRO workers are missing after the deadly avalanche in Chamoli, Uttarakhand. Prayers for their safety. (Representative Vide...
ನೆಲ್ಲಿದಡಿಗುತ್ತು ದೈವಸ್ಥಾನಕ್ಕೆ ತೊಂದರೆಯಾಗದಿರಲಿ; ಎಸ್‌ಇಝೆಡ್ ಅಧಿಕಾರಿಗಳಿಗೆ ಪದ್ಮರಾಜ್ ಎಚ್ಚರಿಕೆ

ನೆಲ್ಲಿದಡಿಗುತ್ತು ದೈವಸ್ಥಾನಕ್ಕೆ ತೊಂದರೆಯಾಗದಿರಲಿ; ಎಸ್‌ಇಝೆಡ್ ಅಧಿಕಾರಿಗಳಿಗೆ ಪದ್ಮರಾಜ್ ಎಚ್ಚರಿಕೆ

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಮಂಗಳೂರು ಹೊರ ವಲಯದ ಬಜಪೆ ಗ್ರಾಮದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ತೆರಳಿ ನಿತ್ಯ ಆರಾಧನೆಗೆ ಮುಂದಿನ ದಿನಗಳಿಂದ ಅವಕಾಶ ನಿರಾಕರಿಸುವ ಮೂಲಕ ಮಂಗಳೂರು ಎಸ್‌ಇಝೆಡ್ ತುಳುನಾಡಿನ ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಿರುವುದು ವಿಷಾದನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ಪದ್ಮರಾಜ್ ವಿಷಾದ ವ್ಯಕ್ತಪಡಿಸಿದ್ದಾರೆ.ಈ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದ್ದು, ಇದೀಗ ದೈವಕ್ಕೆ ಹೂವು, ನೀರು ಇಡಲು ಬಿಡುವುದಿಲ್ಲ ಎನ್ನುವ ಮೂಲಕ ಎಸ್‌ಇಝೆಡ್ ಅಧಿಕಾರಿಗಳು ನೀಡಿರುವ ಆದೇಶ ತುಳುನಾಡಿದ ನಂಬಿಕೆ ಮೇಲೆ ಮಾಡಿರುವ ಅಪಮಾನ ಎಂದವರು ಕಿಡಿಕಾರಿದ್ದಾರೆ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಅನಾಹುತ ಸಂಭವಿಸುವುದನ್ನೂ ದೈವ ದೇವರು ಕಾಪಾಡಿಕೊಂಡು ಬಂದಿರುವುದು ನಮಗೆಲ್ಲ ತಿಳಿದ ವಿಷಯ. ನಾವು ಯಾವುದೇ ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಅನಾದಿಕಾಲದಿಂದಲೂ ನಂಬಿಕೊಂಡು ಬಂದಿರುವ ದೈವಸ್ಥಾನಗಳಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಬೇಕಿರುವುದು ಅಧಿಕಾರಿಗಳ ಧರ್ಮ. ಅಭಿವೃದ್ಧಿಯ ನೆಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಕೂಡದು ಎಂದವರು ಮ...
KSRTCಗೆ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ‘Governance now 11th PSU ರಾಷ್ಟ್ರೀಯ ಪ್ರಶಸ್ತಿ’ ಮತ್ತು ‘PSU ನಾಯಕತ್ವ ಪ್ರಶಸ್ತಿ -2025’

KSRTCಗೆ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ‘Governance now 11th PSU ರಾಷ್ಟ್ರೀಯ ಪ್ರಶಸ್ತಿ’ ಮತ್ತು ‘PSU ನಾಯಕತ್ವ ಪ್ರಶಸ್ತಿ -2025’

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ದೇಶದಲ್ಲೇ ಅತ್ಯುತ್ತಮ ಸಾರಿಗೆ ಸೇವೆ ಮೂಲಕ ಜನಪ್ರಿಯತೆ ಗಳಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದುಕೊಂಡಿದೆ. 'Governance now 11th PSU ರಾಷ್ಟ್ರೀಯ ಪ್ರಶಸ್ತಿ' ಮತ್ತು 'PSU ನಾಯಕತ್ವ ಪ್ರಶಸ್ತಿ -2025' ಯನ್ನು KSRTC ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಸ್ವೀಕರಿಸಿದ್ದಾರೆ.'Governance Now' ರವರು ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಗಮಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ PSU ಆತ್ಮ‌ನಿರ್ಭರ್ ನಾಯಕತ್ವ ಪ್ರಶಸ್ತಿಯನ್ನು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ರಾಜ್ಯ ಸಚಿವ ಸತೀಶ್ ಚಂದ್ರ ದುಬೆ ಮತ್ತು ಮಾಜಿ ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಅವರು ಪ್ರದಾನ‌ ಮಾಡಿದರು.KSRTC ನಿಗಮದಲ್ಲಿ 1314 ಬಸ್ಸುಗಳು ಪುನಶ್ಚೇತನಗೊಂಡಿದ್ದು, ಕರ್ನಾಟಕ ಸಾರಿಗೆ 1184 , ನಗರ ಸಾರಿಗೆ 115, ಐರಾವತ ಕ್ಲಬ್ ಕ್ಲಾಸ್ 15 ಬಸ್ಸುಗಳನ್ನು ಸಹ ಪುನಶ್ಚೇತನಗೊಳಿಸಲಾಗಿದೆ. ಈ ಮೂಲಕ ರೂ.250 ಕೋಟಿಗೂ ಹೆಚ್ಚು ಹಣ ನಿಗಮಕ್ಕೆ ಉಳಿತಾಯವಾಗಿದ್ದು, ಈ ಉಪಕ್ರ...
ಪಾಕಿಸ್ತಾನದ ಪೇಶಾವರದ ಮಸೀದಿ ಬಳಿ ಸ್ಫೋಟ: ಐವರ ಸಾವು

ಪಾಕಿಸ್ತಾನದ ಪೇಶಾವರದ ಮಸೀದಿ ಬಳಿ ಸ್ಫೋಟ: ಐವರ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಪಾಕಿಸ್ತಾನದ ಪೇಶಾವರ ಸಮೀಪ ಮಸೀದಿ ಬಳಿ ಬಾಂಬ್ ಸ್ಫೋಟ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ.ಪೇಶಾವರ ಸಮೀಪದ ಖೈಬರ್ ಪಖ್ತುಂಖ್ವಾದಲ್ಲಿರುವ ಮಸೀದಿ ಬಳಿ ಸಂಭವಿಸಿದ ಈ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದ ಬೆನ್ನಲ್ಲೇ ಉಗ್ರರು ದಾಳಿನಡೆಸುವ ಎಚ್ಚರಿಕೆ ನೀಡಿದ್ದರು. ಅದರಂತೆಯೇ ಸ್ಫೋಟ ಸಂಭವಿಸಿದ್ದು ಪಾಕಿಸ್ತಾನಕ್ಕೆ ಈ ಘಟನೆ ಸವಾಲಾಗಿ ಪರಿಣಮಿಸಿದೆ....
ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ತನಿಖೆಯ ಅಖಾಡಕ್ಕೆ ಧುಮುಕಿದ ಸಿಬಿಐ

ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ತನಿಖೆಯ ಅಖಾಡಕ್ಕೆ ಧುಮುಕಿದ ಸಿಬಿಐ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೊಳಗಾಗಿದ್ದು, ಇದೀಗ ಸಿಬಿಸಿ ಕೂಡಾ ಪ್ರತನಿಖೆಯ ಅಖಾಡಕ್ಕೆ ಧುಮುಕಿದೆ.ನಟಿ ರನ್ಯಾ ರಾವ್ ವಿರುದ್ಧ ಡಿಆರ್​ಐ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎನ್ನಲಾಗಿದೆ. ಸಿಬಿಐ ಮುಂಬೈ ಹಾಗೂ ಬೆಂಗಳೂರಿನಲ್ಲಿ ಪರಿಶೀಲನೆಯಲ್ಲಿ ತೊಡಗಿರುವ ಸಿಬಿಐ ಇದೀಗ ತಾನು ಕೂಡಾ ತನಿಖೆಗೆ ಮುಂದಾಗಿದೆ.ವಿದೇಶದಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಬಂಧಿಸಲಾಗಿತ್ತು. ಆಕೆಯಿಂದ ಸುಮಾರು 14.20 ಕೆಜಿ ಚಿನ್ನ ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಡಿಆರ್​ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗಂಭೀರ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. #WATCH | Bengaluru | Kannada actor Ranya Rao, arrested by DRI for allegedly smuggling gold from Dubai, brought to a special court hearing cases of economic offences pic.twitter.com/7w3E38qYwV— ANI (@ANI)...
ಕನ್ನಡಿಗರ ಮೇಲಿನ ದಾಳಿ ಖಂಡಿಸಿ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

ಕನ್ನಡಿಗರ ಮೇಲಿನ ದಾಳಿ ಖಂಡಿಸಿ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕನ್ನಡಿಗರ ಮೇಲೆ ಮರಾಠಿಗರು ನಡೆಸಿರುವ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘನೆಗಳು ಸರಣಿ ಪ್ರತಿಭಟನೆ ಹಾಗೂ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕೆಎಸ್ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳ ಮೇಲಿನ ಮರಾಠಿಗರ ದಾಳಿ ಖಂಡಿಸಿ ಶುಕ್ರವಾರ ಸರಣಿ ಪ್ರತಿಭಟನೆಗಳನ್ನು ನಡೆಸಲಾಗುವುದು ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಆಚರಿಸಲಾಗುವುದು ಎಂದು ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.ಈ ಸಂಬಂಧ ಬೆಂಗಳೂರಿನಲ್ಲಿ ಶುಕ್ರವಾರ ಕನ್ನಡ ಪರ ಸಂಘಟನೆಗಳ ಸಭೆ ನಡೆಯಿತು. ಈ ಸಭೆಯಲ್ಲಿ ಸರಣಿ ಹೋರಾಟ ಹಾಗೂ ಕರ್ನಾಟಕ ಬಂದ್ ಆಚರಿಸಲು ನಿರ್ಧರಿಸಲಾಯಿತು. ಈ ಬಗ್ಗೆ ಸುದ್ದಿಗಾರರಿಗೆ ವಿವರ ಒದಗಿಸಿದ ವಾಟಾಳ್ ನಾಗರಾಜ್, ಶುಕ್ರವಾರ ಸರಣಿ ಪ್ರತಿಭಟನೆಗಳನ್ನು ನಡೆಸಲಾಗುವುದು, ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಆಚರಿಸಲಾಗುವುದು ಎಂದು ತಿಳಿಸಿದರು.ಈ ನಡುವೆ, ಮಾರ್ಚ್ 7 ರಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ...
ಸರ್ಕಾರದ ಅನುದಾನ ಇಲ್ಲದಿದ್ದರೂ ಬೈಂದೂರು ಶಾಸಕ ಗಂಟಿಹೊಳೆ ಕಾಮಗಾರಿ ಕಮಾಲ್

ಸರ್ಕಾರದ ಅನುದಾನ ಇಲ್ಲದಿದ್ದರೂ ಬೈಂದೂರು ಶಾಸಕ ಗಂಟಿಹೊಳೆ ಕಾಮಗಾರಿ ಕಮಾಲ್

Focus, ಪ್ರಮುಖ ಸುದ್ದಿ, ರಾಜ್ಯ
ಉಡುಪಿ: ಸರ್ಕಾರದ ಅನುದಾನ ಇಲ್ಲದೇ ಇದ್ದರೂ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ  ಕಾಮಗಾರಿ ಕಮಾಲ್ ಪ್ರದರ್ಶಿಸಿದ್ದಾರೆ.ಇಡೀ ರಾಜ್ಯದಲ್ಲಿ ಎರಡೂ ಪಕ್ಷದಲ್ಲಿ ರಾಜಕೀಯ ತಲ್ಲಣವಾಗುತ್ತಿದ್ದರೂ ಈ ಬೈಂದೂರು ಶಾಸಕ ಗಂಟಿಹೊಳೆ ಮಾತ್ರ ತನ್ನ ಕ್ಷೇತ್ರಕ್ಕೆ ಬೇರೆ ಬೇರೆ ಖಾಸಗಿ ಸಂಸ್ಥೆಗಳ ಮುಕಾಂತರ ಒಂದಲ್ಲಾ ಒಂದು ಕೆಲಸ ಮಾಡುತ್ತಾ ಸುದ್ದಿಯಲಿರುತ್ತಾರೆ. ಶಾಸಕರು 'ಸಮೃದ್ಧ ಬೈಂದೂರು' ಪರಿಕಲ್ಪನೆಯಲ್ಲಿ ಖಾಸಗಿ ಸಂಸ್ಥೆಗಳಿಂದ ಮತ್ತು ದೇಶ ವಿದೇಶಗಳಲ್ಲಿರುವ ಉದ್ಯಮಿ & ದಾನಿಗಳನ್ನು ಭೇಟಿಯಾಗಿ ತನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಸಂಗ್ರಹಿಸಿದ್ದಾರೆ.ಶಾಸಕ ಗಂಟಿಹೊಳೆಯವರು 300 ಟ್ರೀಸ್ ಎನ್ನುವ ಯೋಜನೆಯಡಿಯಲ್ಲಿ 300 ಸರ್ಕಾರಿ ಶಾಲೆ ಅಭಿವೃದ್ಧಿ ಪಡೆಸುವ ಗುರಿ ಇಟ್ಟುಕೊಂಡು ಹಳ್ಳಿ ಪ್ರದೇಶದ ಶಾಲೆಗಳನ್ನು ದಾನಿಗಳ ಮುಖಾಂತರ ಅಭಿವೃದ್ಧಿಗೆ ಕಾರಣರಾಗಿದ್ದಾರೆ.ಬೈಂದೂರು ಜನರು ಎಂದೂ ಕಾಣದ ಡಯಲಿಸಿಸ್ ಸೆಂಟರ್, ಸುಸರ್ಜಿತ ಆಸ್ಪತ್ರೆ, ICU, ಎಮರ್ಜೆನ್ಸಿ ಚಿಕಿತ್ಸೆ, ಬೆನ್ನು ಹುರಿ ಸಮಸ್ಯೆ ನಿಗ್ರಹ ಕೇಂದ್ರ ಹೀಗೆ ಹಲವಾರು ಯೋಜನೆಗಳನ್ನು ಜಾರಿಗೆ ತರುವಲ್ಲಿ ಸಫಲರಾಗಿದ್ದಾರೆ.ಇದೀಗ ಬೈ...
ಪುಣೆ ಬಸ್ಸಿನಲ್ಲೇ ಅತ್ಯಾಚಾರ; ಆರೋಪಿ ಬಂಧನ

ಪುಣೆ ಬಸ್ಸಿನಲ್ಲೇ ಅತ್ಯಾಚಾರ; ಆರೋಪಿ ಬಂಧನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಪುಣೆ: ಮಹಿಳೆ ಮೇಲೆ ಬಸ್ಸಿನಲ್ಲೇ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ಧಾರೆ.ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂಬಾತ ಆರೋಪಿಯಾಗಿದ್ದು ಆತನನ್ನು ಶಿರೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಠಾಣೆ ಸಮೀಪವೇ ಸಾರಿಗೆ ಸಂಸ್ಥೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿತ್ತು.ಈ ಪ್ರಕರಣ ಬೇಧಿಸಲು ಪೊಲೀಸರು ಮಹಾರಾಷ್ಟ್ರದಾದ್ಯಂತ ಒಟ್ಟು 13 ತಂಡಗಳನ್ನು ನಿಯೋಜಿಸಿದ್ದರು. ಜೊತೆಗೆ ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನೂ ಕೂಡ ಪುಣೆ ಪೊಲೀಸರು ಘೋಷಿಸಿದ್ದರು. ಈ ನಡುವೆ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ....
ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ, ಬಿಹಾರಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?

ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ, ಬಿಹಾರಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದಿದ್ದಾರೆ.ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದಾರೆ.ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡಬಾರದೆಂಬ ಸದುದ್ದೇಶ ಕೇಂದ್ರ ಸರ್ಕಾರ ಹೊಂದಿರುವುದಾಗಿದ್ದರೆ ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ. ಎಂದಿರುವ ಸಿದ್ದರಾಮಯ್ಯ, ಇತ್ತೀಚಿನ ಜನಸಂಖ್ಯೆಯ ಅನುಪ...
ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಹರಿಸಿತೇ ರಾಜ್ಯದ ಕಾಂಗ್ರೆಸ್‌ ಸರ್ಕಾರ?

ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಹರಿಸಿತೇ ರಾಜ್ಯದ ಕಾಂಗ್ರೆಸ್‌ ಸರ್ಕಾರ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಕಾಂಗ್ರೆಸ್‌ ಸರ್ಕಾರ ಹರಿಸಿದೆ. ಅಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ತೃಪ್ತಿಪಡಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಕನ್ನಡಿಗರ ಹಿತವನ್ನು ಕಡೆಗಣಿಸಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ಮಾಡುತ್ತಿದ್ದಾರೆ. ಈಗ ಅದೇ ಸರ್ಕಾರದ ಸಚಿವರು ನೀರು ಹರಿಸಿರುವುದು ಜನರಿಗೆ ಮಾಡಿರುವ ದ್ರೋಹ. ಮೀರ್‌ ಸಾಧಿಕ್‌ನಂತೆ ಸರ್ಕಾರ ವರ್ತಿಸಿರುವುದನ್ನು ರೈತರು ಕ್ಷಮಿಸುವುದಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಾಗ ನೀರು ಹರಿಸಿರುವುದರಿಂದ ಜನರಿಗೆ ತೊಂದರೆಯಾಗಲಿದೆ. ಒಬ್ಬೊಬ್ಬ ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಬ್ಬಂದಿಗೆ ಸರ...