Friday, April 17

Author: info@rajasdigital.com

ವಿಜಯಪುರ ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣ; ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ

ವಿಜಯಪುರ ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣ; ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ

Focus, ಪ್ರಮುಖ ಸುದ್ದಿ, ರಾಜ್ಯ
ವಿಜಯಪುರ: ತಿಕೋಟಾ ತಾಲೂಕಿನ ನವರಸಪುರ ಗ್ರಾಮದಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿ ಮೇಲೆ ಅದೇ ಕಾಲೇಜಿನ ನಾಲ್ವರು ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮತ್ತು ದೈಹಿಕ ಹಿಂಸೆ ನೀಡಲಾಗಿದೆ ಎಂಬ ಆರೋಪ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ವಿಜಯಪುರ ಮತ್ತು ತಿಕೋಟಾ ತಹಶೀಲ್ದಾರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಭೇಟಿ ಮಾಡಿ, ಪರಿಶೀಲಿಸಿ, ಯೋಗಕ್ಷೇಮ ವಿಚಾರಿಸಿದ್ದಾರೆ. ವಿದ್ಯಾರ್ಥಿಗೆ ಯಾವುದೇ ಗಾಯಗಳಾಗಿರುವುದಿಲ್ಲ ಹಾಗೂ ವಿದ್ಯಾರ್ಥಿಯು ದೈಹಿಕವಾಗಿ ಆರೋಗ್ಯಕರವಾಗಿದ್ದಾನೆ ಎಂದು ವರದಿ ನೀಡಿದ್ದಾರೆ.ಘಟನೆಯ ವಿವರವನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೊಹ್ಮದ ಮೊಹಸೀನ್ ಅವರಿಗೆ ಒದಗಿಸಿದ್ದು, ಈ ಕುರಿತು ಅವರು ಹಲ್ಲೆಗೊಳಗಾದ ವಿದ್ಯಾರ್ಥಿಗೆ ಸೂಕ್ತ ಸಹಾಯ ಹಾಗೂ ಹಲ್ಲೆ ಮಾಡಿರುವ ಹಿರಿಯ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ನಿರ್ದೇಶಿಸಿದ್ದಾರೆ. ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ದ ಸೂಕ್ತ ಕಾನೂನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದ...
ರೀಲ್ಸ್  ಮಾಡುತ್ತಿದ್ದಾಗ ರೈಲು ಡಿಕ್ಕಿ; ಮೂವರು ಯುವಕರ ಸಾವು

ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿ; ಮೂವರು ಯುವಕರ ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಸಮೀಪ ರೀಲ್ಸ್ ಮಾಡುತ್ತಿದ್ದ ಮೂವರು ಯುವಕರು ರೈಲು ಡಿಕ್ಕಿಯಾಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಈ ಘಟನೆ ನಡೆದಿದೆ.ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಲಲನ್ (24 ವರ್ಷ), ಬಿಕೇಶ್ (20 ವರ್ಷ) ಮತ್ತು ರಾಹುಲ್ (18 ವರ್ಷ) ಎಂಬವರು ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ರೀಲ್ಸ್ ಮಾಡುತ್ತಿದ್ದರು ಎನ್ನಲಾಗಿದೆ. ಅದಾಗಲೇ ಆಗಮಿಸಿದ ರೈಲು ಈ ಯುವಕರಿಗೆ ಅಪ್ಪಳಿಸಿದೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಯಶವಂತಪುರ ರೈಲ್ವೆ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ವಿಜಯಪುರ: ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ಆರೋಪ

ವಿಜಯಪುರ: ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ವಿಜಯಪುರ: ವಿಜಯಪುರ ಜಿಲ್ಲೆಯ ಅಲ್-ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ನಡೆದಿರುವ ಆರೋಪ ಕೇಳಿಬಂದಿದೆ. ಹಿರಿಯ ವಿದ್ಯಾರ್ಥಿಗಳು ಕಾಶ್ಮೀರ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.ಫೆಬ್ರವರಿ 18 ರಂದು ಕ್ರಿಕೆಟ್ ಪಂದ್ಯ ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳು ಗಲಾಟೆ ನಡೆಸಿದ್ದು, ಬಳಿಕ ರಾತ್ರಿ ಹಾಸ್ಟೇಲ್​ನಲ್ಲಿ ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ....
ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ; ಕೇಜ್ರಿವಾಲ್ ಮಣಿಸಿದ ಪರ್ವೇಶ್ ವರ್ಮಾಗೆ ಡಿಸಿಎಂ ಸ್ಥಾನ

ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ; ಕೇಜ್ರಿವಾಲ್ ಮಣಿಸಿದ ಪರ್ವೇಶ್ ವರ್ಮಾಗೆ ಡಿಸಿಎಂ ಸ್ಥಾನ

Others
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು. ಇದೇ ವೇಳೆ, ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಯಗಳಿದ್ದ ಪರ್ವೇಶ್ ವರ್ಮಾ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.ದೆಹಲಿಯ ನೂತನ ಸಿಎಂ, ಡಿಸಿಎಂ ಹಾಗೂ ಸಂಪುಟ ಸಚಿವರು ಗುರುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ....
ಇಲಾಖೆಗಳ ವಿದ್ಯುತ್ ಬಿಲ್ ಪಾವತಿಗೂ ಸರ್ಕಾರದ ಬಳಿ ಹಣ ಇಲ್ಲ? ಬಿಜೆಪಿ ವ್ಯಂಗ್ಯ

ಇಲಾಖೆಗಳ ವಿದ್ಯುತ್ ಬಿಲ್ ಪಾವತಿಗೂ ಸರ್ಕಾರದ ಬಳಿ ಹಣ ಇಲ್ಲ? ಬಿಜೆಪಿ ವ್ಯಂಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿದ್ಯುತ್ ಕ್ಷೇತ್ರದಲ್ಲಿ ರಾಜ್ಯದ ಹೀನಾಯ ಸ್ಥಿತಿ ಬಗ್ಗೆ ಪ್ರತಿಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತ ಪರಿಸ್ಥಿತಿಯತ್ತ ಬೊಟ್ಟು ಮಾಡಿದ ವಿಜಯೇಂದ್ರ, ರಾಜ್ಯದ ವಿವಿಧ ಇಲಾಖೆಗಳ ಕಚೇರಿಗಳಿಂದ ₹6 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿ ಬಾಕಿ ಇದ್ದು, ಅದರ ವಸೂಲಿಗೆ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದು ಸ್ವತಃ ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ ಎಂದು ಗಮನಸೆಳೆದರು.ರಾಜ್ಯದ ಯಾವ ಇಲಾಖೆಗಳಲ್ಲೂ ವಿದ್ಯುತ್ ಬಿಲ್ ಪಾವತಿಸುವಷ್ಟೂ ಹಣ ಇಲ್ಲದೆ ಇರುವ ದಾರುಣ ಪರಿಸ್ಥಿತಿಗೆ ತಲುಪಿರುವುದಕ್ಕೆ ಯಾರು ಹೊಣೆಗಾರರು ಎನ್ನುವುದನ್ನು ಮುಖ್ಯಮಂತ್ರಿಗಳೇ ತಿಳಿಸಬೇಕಿದೆ ಎಂದು ವಿಜಯೇಂದ್ರ ಹೇಳಿದರು.ರಾಜ್ಯದ ವಿವಿಧ ಇಲಾಖೆಗಳ ಕಚೇರಿಗಳಿಂದ ₹6 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿ ಬಾಕಿ ಇದ್ದು, ಅದರ ವಸೂಲಿಗೆ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದು ಸ್ವತಃ ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಅರ್ಥಾತ್ ರಾಜ್ಯದ ಯಾವ ಇಲಾಖ...
ಯುವ ಉದ್ಯಮಿ, ಉಡುಪಿಯ ‘ಆರ್ವಿ ಟೂರ್ಸ್ & ಟ್ರಾವೆಲ್ಸ್’ ಮಾಲೀಕ ರಾಘವೇಂದ್ರ ಭಂಡಾರಿ ವಿಧಿವಶ

ಯುವ ಉದ್ಯಮಿ, ಉಡುಪಿಯ ‘ಆರ್ವಿ ಟೂರ್ಸ್ & ಟ್ರಾವೆಲ್ಸ್’ ಮಾಲೀಕ ರಾಘವೇಂದ್ರ ಭಂಡಾರಿ ವಿಧಿವಶ

Focus, ಪ್ರಮುಖ ಸುದ್ದಿ, ರಾಜ್ಯ
ವಿಟ್ಲ: ಮಣಿಪಾಲದ ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲಕ ಪರ್ಕಳ ಸಮೀಪದ ಅಚ್ಚುತನಗರ ಗ್ಯಾಡ್ಸನ್ ನಿವಾಸಿ ಕರಿಂಕ ರಾಘವೇಂದ್ರ ಭಂಡಾರಿ (44) ವಿಧಿವಶರಾಗಿದ್ದಾರೆ. ಹೃದಯಾಘಾತಗೊಂಡು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಫೆಬ್ರವರಿ 19 ರಂದು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.ಬಂಟ್ವಾಳದ ವಿಟ್ಲ ಕರಿಂಕ ಮಾಜಿ ಸೈನಿಕ ಕೆ.ಎನ್. ಶಾಂಭ ಭಂಡಾರಿಯವರ ಪುತ್ರ ರಾಘವೇಂದ್ರ ಭಂಡಾರಿ ಕಳೆದ 15 ವರ್ಷಗಳಿಂದ ಮಣಿಪಾಲದಲ್ಲಿ ಟ್ರಾವೆಲ್ಸ್ ಉದ್ಯಮ ನಡೆಸುತ್ತಿದ್ದರು.ತುಳು ಭಾಷೆಯ 'ಪೂವರಿ' ಪತ್ರಿಕೆಯ ಪ್ರಥಮ ಖರೀಧಿದಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ರಾಘವೇಂದ್ರ ಭಂಡಾರಿಯವರು ಆ ಪತ್ರಿಕೆಯ ಪೋಷಕರಲ್ಲಿ ಒಬ್ಬರಾಗಿದ್ದರು. ಅವರು ತಾಯಿ, ಪತ್ನಿ, ಮಗು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇಂದ್ರಾಳಿಯ ರುದ್ರ ಭೂಮಿಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖರು ಪ್ರತೀವ ಶರೀರದ ಅಂತಿಮ ದರ್ಶನ ಪಡೆದು ಮೃತರಿಗೆ ಶ್ರದ್ದಾಂಜಲಿ ಸಮರ್ಪಿಸಿದರು....
ಅನ್ನಭಾಗ್ಯ: ಇನ್ನುಮುಂದೆ ಹಣಕ್ಕೆ ಬದಲು ಅಕ್ಕಿ

ಅನ್ನಭಾಗ್ಯ: ಇನ್ನುಮುಂದೆ ಹಣಕ್ಕೆ ಬದಲು ಅಕ್ಕಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯಸರ್ಕಾರ ಇನ್ನುಮುಂದೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ.ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂಪಾಯಿ ಹಣ ನೀಡಲಾಗುತ್ತಿತ್ತು. ಇನ್ನು ಮುಂದೆ 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.ಈ ತಿಂಗಳಿಂದಲೇ ಅಕ್ಕಿಯನ್ನು ನೀಡಲಾಗುತ್ತದೆ ಎಂದವರು ತಿಳಿಸಿದರು. ಕೇಂದ್ರ ಸರ್ಕಾರವು 5 ಕೆಜಿ ಅಕ್ಕಿನೀಡಲು ಒಪ್ಪಿದೆ ಎಂದ ಅವರು, ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ. ರಾಜ್ಯದ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ವಿವರಿಸಲಾಗಿದ್ದು, ನಮ್ಮ ಮನವಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದಾರೆ ಎಂದು ಸಚಿವ ಮುನಿಯಪ್ಪ ಹೇಳಿದರು....
ಕಾರವಾರ ನೌಕಾ ನೆಲೆಯ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ; ಮೂವರ ಬಂಧನ

ಕಾರವಾರ ನೌಕಾ ನೆಲೆಯ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ; ಮೂವರ ಬಂಧನ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಆರೋಪದಲ್ಲಿ ರಾಷ್ಟ್ರೀಯ ತನಿಕಾ ತಂಡ NIA ಮೂವರನ್ನು ಬಂಧಿಸಿದೆ.ಭಾರತದ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿ ಪಾಕಿಸ್ತಾನ ಮೂಲದ ಗುಪ್ತಚರ ಅಧಿಕಾರಿಗಳಿಗೆ ನೀಡಿದ ಆರೋಪದಲ್ಲಿ ವೇತನ್ ಲಕ್ಷ್ಮಣ್ ತಂಡೇಲ್, ಅಕ್ಷಯ್ ರವಿ ನಾಯಕ್ ಹಾಗೂ ಅಭಿಲಾಷ್ ಎಂಬವರನ್ನು ಬಂಧಿಸಲಾಗಿದೆ ಎಂದು NIA ಮೂಲಗಳು ತಿಳಿಸಿವೆ.ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ ನೌಕಾ ನೆಲೆಯಲ್ಲಿರುವ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಈ ಆರೋಪಿಗಳು ಸೋರಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಹಾಗೂ ಕೊಚ್ಚಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು NIA ಅಧಿಕಾರಿಗಳು ತಿಳಿಸಿದ್ದಾರೆ....
26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಪದಗ್ರಹಣ

26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಪದಗ್ರಹಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಕೇಂದ್ರ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು.ಸೋಮವಾರದಂದು ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸ್ಥಾನಕ್ಕೆ ಕೇಂದ್ರ ಸರ್ಕಾರದ ಉನ್ನತ ಸಮಿತಿ ನೇಮಕ ಮಾಡಿತ್ತು. ಈ ನೇಮಕಾತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ ನಂತರ ಬುಧವಾರ ಬೆಳಿಗ್ಗೆ ಜ್ಞಾನೇಸ್ ಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರವಹಿಸಿಕೊಂಡರು.Gyanesh Kumar's message after taking charge as Chief Election Commissioner.#ChiefElectionCommissioner | #CEC | #GyaneshKumar @ECISVEEP pic.twitter.com/xEfhDbnAgi — All India Radio News (@airnewsalerts) February 19, 2025...
ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: 'ಬಿ ಖಾತಾ' ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ ಎಂದವರು ತಿಳಿಸಿದ್ದಾರೆ. " ಬಿ ಖಾತಾ" ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ. pic.twitter.com/HlsyqED95L— Siddaramaiah (@siddaramaiah) February 18, 2025...