Friday, April 17

Author: info@rajasdigital.com

ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು ಸಂತಸಗೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿರುವ ನಟ ಡಾಲಿ ಧನಂಜಯ ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು ಎಂದಿದ್ದಾರೆ.ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು ಎಂದಿದ್ದಾರೆ.ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀರ್ವಾದವಿರಲಿ ಎಂದವರು ವಿನಂತಿಸಿಕೊಂಡಿದ್ದಾರೆ.ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು , ತಾರೆಯರು, ಕಾರ್ಮಿಕರು, ಹಾಗೂ ನ...
ಕೇಂದ್ರ ಮುಖ್ಯ ಚುನಾವಣಾ ಅಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಕೇಂದ್ರ ಮುಖ್ಯ ಚುನಾವಣಾ ಅಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಂದಿನ ಮುಖ್ಯ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈವರೆಗೂ ಅವರು ಚುನಾವಣಾ ಆಯುಕ್ತರಾಗಿದ್ದರು. ನೂತನ ಮುಖ್ಯ ಆಯುಕ್ತರನ್ನು ಸಮಿತಿ ಆಯ್ಕೆ‌ಮಾಡಿರುವ ಬಗ್ಗೆ ಕಾನೂನು ಸಚಿವಾಲಯ ಮಾಹಿತಿ ನೀಡಿದೆ.ಜ್ಞಾನೇಶ್ ಕುಮಾರ್ ಅಧಿಕಾರಾವಧಿಯು ಜನವರಿ 26, 2029 ರವರೆಗೆ ಇರಲಿದೆ.
ಬಿಲ್ಲವಾಸ್ ಕತಾರ್’ನ ನೂತನ ಅಧ್ಯಕ್ಷರಾಗಿ ಅಪರ್ಣ ಶರತ್; ಸಂದೀಪ್ ಸಾಲಿಯಾನ್’ಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ

ಬಿಲ್ಲವಾಸ್ ಕತಾರ್’ನ ನೂತನ ಅಧ್ಯಕ್ಷರಾಗಿ ಅಪರ್ಣ ಶರತ್; ಸಂದೀಪ್ ಸಾಲಿಯಾನ್’ಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಕತಾರ್: ಸಾಗರೋತ್ತರ ರಾಷ್ಟ್ರ ಕತಾರ್'ನ ಬಿಲ್ಲವ ಸಮುದಾಯದ ಪಾಳಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಿಲ್ಲವಾಸ್ ಕತಾರ್'ನ ಈವರೆಗೂ ಅಧ್ಯಕ್ಷರಾಗಿದ್ದ ಸಂದೀಪ್ ಸಾಲಿಯಾನ್'ಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಗಿದೆ. ಇದೇ ವೇಳೆ, ನೂತನ ಅಧ್ಯಕ್ಷರಾಗಿ ಅಪರ್ಣ ಶರತ್ ನೇಮಕವಾಗಿದ್ದಾರೆ.ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ಕತಾರ್'ನ ಎಂ.ಆರ್.ಎ, ಸಲ್ವ ರೋಡ್, ಔತಣಕೂಟ ಹಾಲ್'ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಸಂದೀಪ್ ಸಾಲಿಯಾನ್ ಅವರನ್ನು ಅಭಿನಂಧಿಸಿದ ಅಪೂರ್ವ ಸನ್ನಿವೇಶ ಗಮನಸೆಳೆಯಿತು. ಸಮುದಾಯದ ಮುಖಂಡರ ಹಾಗೂ ವಿವಿಧ ಸಂಘಟನೆಗಳ ಪ್ರಮುಖರ ಉಪಸ್ಥಿತಿಯಲ್ಲಿ ನೆರವೇರಿದ ಸಮಾರಂಭದಲ್ಲಿ ಸಂದೀಪ್ ಸಾಲಿಯಾನ್ ವಿನಯಪೂರ್ವಕವಾಗಿ ಬೀಳ್ಕೊಡಲಾಯಿತು.ಉದ್ಯೋಗ ನಿಮಿತ್ತ ನೆರೆಯ ಕೊಲ್ಲಿ ರಾಷ್ಟ್ರಕ್ಕೆ ವರ್ಗಾವಣೆಗೊಂಡ ಅನಿವಾರ್ಯತೆ ಹಿನ್ನೆಲೆಯಲ್ಲಿ ಬಿಲ್ಲವಾಸ್ ಕತಾರ್'ನ ಜವಾಬ್ಧಾರಿಯಿಂದ ಬಿಡುಗೊಂಡಿರುವುದಾಗಿ ಹೇಳಿದ ಸಂದೀಪ್ ಸಾಲಿಯಾನ್, ಈ ವರೆಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಸಂದೀಪ್ ಸಾಲಿಯಾನ್ ನಿರ್ಗಮದ ಹಿನ್ನೆಲೆಯಲ್ಲಿ ತೆರವಾಗಿರುವ ಬ...
ಜೂನ್ ಅಥವಾ ಜುಲೈನಲ್ಲಿ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಸಾಧ್ಯತೆ; ಹೈಕೋರ್ಟಿಗೆ ಸರ್ಕಾರದ ಮಾಹಿತಿ

ಜೂನ್ ಅಥವಾ ಜುಲೈನಲ್ಲಿ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಸಾಧ್ಯತೆ; ಹೈಕೋರ್ಟಿಗೆ ಸರ್ಕಾರದ ಮಾಹಿತಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟಿಗೆ ಮಾಹಿತಿ ನೀಡಿದೆ.3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ‌ ಅರ್ಜಿ ಸೋಮವಾರ ಹೈಕೋರ್ಟಿನಲ್ಲಿ ವಿಚಾರಣೆಗೆ ಬಂದಿದೆ. ಮೂರು ವರ್ಷಗಳಾದರೂ ಸಹ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು ಹೈಕೋರ್ಟ್​ ಗಮನಸೆಳೆದರು. ಸರ್ಕಾರವು ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ನಿಲುವನ್ನು ತಿಳಿಸಿದರು.ಈ ವೇಳೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಬಳಿಕ ಎಲೆಕ್ಷನ್ ನಡೆಸುವುದಾಗಿ ಮಾಹಿತಿ ನೀಡಿದರು. ಈ ಕುರಿತು ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥಪಡಿಸಿತು.ಈ ನಡುವೆ, ಮೇ ಅಂತ್ಯದೊಳಗೆ ಸರ್ಕಾರವು ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ನೀಡಿದರೆ, ಜೂನ್ ಅಥವಾ ಜುಲೈ ತಿಂಗಳಲ್...

ಆಂಧ್ರ ಪ್ರದೇಶದಲ್ಲಿ GBS ಸೋಂಕಿನ ತಲ್ಲಣ; ಇಬ್ಬರು ಬಲಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಅಮರಾವತಿ: ದೇಶಾದ್ಯಂತ ಆತಂಕದ ಏಲ್ ಎಬ್ಬಿಸಿರುವ GBS (Guillain Barre Syndrome) ಸೋಂಕಿಗೆ ಆಂಧ್ರ ಪ್ರದೇಶದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಘಟನೆಯ ನಂತರ ಮಾರಣಾಂತಿಕ ಸೋಂಕಿನ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ.'ಸೋಂಕು ದೃಢಪಟ್ಟ 45 ವರ್ಷದ ಮಹಿಳೆ ಕಮಲಮ್ಮ ಎಂಬವರು ಭಾನುವಾರ ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ, 10 ವರ್ಷದ ಬಾಲಕ ಸುಮಾರು 10 ದಿನಗಳ ಹಿಂದೆ ಶ್ರೀಕಾಕುಳಂನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಂಧ್ರ ಪ್ರದೇಶ ಆರೋಗ್ಯ ಸಚಿವ ಸತ್ಯ ಕುಮಾರ್ ಯಾದವ್ ಮಾಹಿತಿ ನೀಡಿದ್ದಾರೆ.ಈ ನಡುವೆ ಆಂಧ್ರ ಪ್ರದೇಶದಲ್ಲಿ ಸುಮಾರು 17 GBS ಸೋಂಕಿನ ಪ್ರಕರಣಗಳು ದಾಖಲಾಗಿವೆ ಎಂದು ಸಚಿವರು ತಿಳಿಸಿದ್ದಾರೆ....
ಮಾರ್ಚ್​ 7ರಂದು ಬಜೆಟ್ ಮಂಡನೆ: ಸಿಎಂ ಮಾಹಿತಿ

ಮಾರ್ಚ್​ 7ರಂದು ಬಜೆಟ್ ಮಂಡನೆ: ಸಿಎಂ ಮಾಹಿತಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ ಮುಂದಿನ ತಿಂಗಳ 7ರಂದು ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಅವರು ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘದ ಮುಖಂಡರುಗಳೊಂದಿಗೆ ಆಯವ್ಯಯ ಸಂಬಂಧ ಪೂರ್ವಭಾವಿ ಸಭೆ ನಡೆಸಿದರು. ರೈತರ ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿ ಅಗತ್ಯ ಮಾಹಿತಿ ಸಂಗ್ರಹಿಸಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಂಬರುವ ಬಜೆಟ್ ಮಂಡನೆ ಬಗ್ಗೆ ಮಾಹಿತಿ ನೀಡಿದರು. ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಮಾರ್ಚ್​ 7ರಂದು ಬಜೆಟ್ ಮಂಡಿಸುವುದಾಗಿ ತಿಳಿಸಿದರು....
ದೆಹಲಿ ಸುತ್ತಮುತ್ತ ಭೂಕಂಪನ ಹಿನ್ನೆಲೆ; ಎಚ್ಚರವಹಿಸಲು ಜನತೆಗೆ ಪ್ರಧಾನಿ ಸಲಹೆ

ದೆಹಲಿ ಸುತ್ತಮುತ್ತ ಭೂಕಂಪನ ಹಿನ್ನೆಲೆ; ಎಚ್ಚರವಹಿಸಲು ಜನತೆಗೆ ಪ್ರಧಾನಿ ಸಲಹೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೆಹಲಿ-ಎನ್‌ಸಿಆರ್ ಸುತ್ತಮುತ್ತ ಲಘು ಭೂಕಂಪನವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಧಾನಿ ಸುತ್ತಮುತ್ತಲ ನಿವಾಸಿಗಳು ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಪ್ರಧಾನಿ, ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಕಂಪನಗಳು ಅನುಭವವಾಗಿವೆ. ಎಲ್ಲರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು, ಸಂಭವನೀಯ ನಂತರದ ಕಂಪನಗಳ ಬಗ್ಗೆ ಎಚ್ಚರದಿಂದಿರಲು ಒತ್ತಾಯಿಸುತ್ತಿದ್ದಾರೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. Tremors were felt in Delhi and nearby areas. Urging everyone to stay calm and follow safety precautions, staying alert for possible aftershocks. Authorities are keeping a close watch on the situation.— Narendra Modi (@narendramodi) February 17, 2025...
ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್​​ನಲ್ಲಿ ನಡೆದಿದೆ.ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಹಾಗೂ ಕುಶಾಲ್ ​(15) ಮೃತ ದುರ್ದೈವಿಗಳು. ತನ್ನ ಕುಟುಂಬ ಸದಸ್ಯರಿಗೆ ವಿಷ ವುಣಿಸಿ ನಂತರ ಚೇತನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.ಚೇತನ್ ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಹಣಕಾಸಿನ ಸಮಸ್ಯೆ ಬಗ್ಗೆ ಅದರಲ್ಲಿ ಬರೆಯಲಾಗಿದೆ ಎನ್ನಲಾಗಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಮೈಸೂರು ನಗರ ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್, ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ದೆಹಲಿ ಸುತ್ತಮುತ್ತ ಲಘು ಭೂಕಂಪನ; ಜನರಲ್ಲಿ ಆತಂಕ

ದೆಹಲಿ ಸುತ್ತಮುತ್ತ ಲಘು ಭೂಕಂಪನ; ಜನರಲ್ಲಿ ಆತಂಕ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ರಾಷ್ಟ್ರ ರಾಜಧಾನಿ ಸುತ್ತಮುತ್ತ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ದೆಹಲಿ-ಎನ್​ಸಿಆರ್​ನಲ್ಲಿ ಲಘು ಕಂಪನವಾಗಿದ್ದು, ಕಂಪನದ ಪ್ರಮಾಣವು 4.0 ತೀವ್ರತೆಯಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸೋಮವಾರ ನಸುಕಿನ ಜಾವ ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.ಸೋಮವಾರ ಬೆಳಗ್ಗೆ 5.36 ಸುಮಾರಿಗೆ ಭೂಮಿ ಕಂಪಿಸಿದ್ದು ನಿದ್ದೆಯಲ್ಲಿದ್ದವರೂ ಎಚ್ಚರಗೊಂಡು ಏಕಾಏಕಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ....
ನುಡಿದಂತೆ ನಡೆದ ಮೋದಿ: ಯಮುನಾ ನದಿಯನ್ನು ಸ್ವಚ್ಛ ಕಾರ್ಯಕ್ಕೆ ಮುನ್ನುಡಿ

ನುಡಿದಂತೆ ನಡೆದ ಮೋದಿ: ಯಮುನಾ ನದಿಯನ್ನು ಸ್ವಚ್ಛ ಕಾರ್ಯಕ್ಕೆ ಮುನ್ನುಡಿ

Others
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನೀಡಿದ ಯಮುನೆ ಶುದ್ಧಿ ಭರವಸೆಯನ್ನು ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕ್ರಿಯೆ ಆರಂಭಿಸಿದ್ದಾರೆ. ದಿಲ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಇದೀಗ ನುಡಿದಂತೆ ನಡೆಯುವ ಸಂಕಲ್ಪ ಮಾಡಿರುವ ಮೋದಿ, ರಾಜಧಾನಿಯಲ್ಲಿ ಹೊಸ ಸರ್ಕಾರ ರಚನೆಯಾಗುವ ಮೊದಲೇ ಈ ಯೋಜನೆಯ ಕೆಲಸ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ.ಮೋದಿ ಅವರ ಸಲಹೆಯಂತೆ, ರಾಷ್ಟ್ರ ರಾಜಧಾನಿ ನಗರದಲ್ಲಿ ಭಾನುವಾರ ಯಮುನಾ ನದಿಯ ಶುಚಿಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಕಸದ ಸ್ಕಿಮ್ಮರ್‌ಗಳು, ಕಳೆ ಕೊಯ್ಲು ಯಂತ್ರಗಳು ಮತ್ತು ಡ್ರೆಡ್ಜಿಂಗ್ ಯುಟಿಲಿಟಿ ಕ್ರಾಫ್ಟ್‌ಗಳಂತಹ ಆಧುನಿಕ ಯಂತ್ರಗಳನ್ನು ಬಳಸಲಾಯಿತು.ಇದಕ್ಕೂ ಮೊದಲು, ದೆಹಲಿ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿ.ಕೆ. ಸಕ್ಸೇನಾ ಅವರು ಶನಿವಾರ ಮುಖ್ಯ ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ನೀರಾವರಿ ಮತ್ತು ಪ್ರವಾಹ ನಿಯಂತ್ರಣ) ಅವರನ್ನು ಭೇಟಿ ಮಾಡಿ, ಶುಚಿಗೊಳಿಸುವ ಕಾರ್ಯವನ್ನು ತಕ್ಷಣ...