Friday, April 17

Author: info@rajasdigital.com

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.https://www.youtube.com/watch?v=7ru18HS_934&ab_channel=SaregamaKannada...
ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಕೋಲ್ಕತ್ತಾ: ಕೇವಲ ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS ಸಂಘಟನಾ ಕೆಲಸ ಮಾಡುತ್ತಿದೆ ಎಂದು ಸರಸಂಘಚಾಲಕ್ ಮೋಹನ್ ಭಾಗವತ್ ಹೇಳಿದ್ದಾರೆ. ಒಗ್ಗಟ್ಟಿನ ಹಿಂದೂ ಸಮಾಜಕ್ಕಾಗಿ ಸಂಘಟನೆಯನ್ನು ರಚಿಸುವುದು ಸಂಘದ ಮುಖ್ಯ ಉದ್ದೇಶವಾಗಿದೆ ಎಂದವರು ತಿಳಿಸಿದ್ದಾರೆ.ಪಶ್ಚಿಮ ಬಂಗಾಳದ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಬುರ್ದ್ವಾನ್‌ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜದ ಏಕತೆಗೆ ಏಕೆ ಒತ್ತು ನೀಡಲಾಗುತ್ತದೆ ಎಂದರು. ಭಾರತವು ಕೇವಲ ಭೌಗೋಳಿಕವಲ್ಲ, ಅದರ ಗಾತ್ರವು ಕಾಲಾನಂತರದಲ್ಲಿ ಬದಲಾಗುತ್ತದೆ. ಭಾರತವು ತನ್ನದೇ ಆದ ಸ್ವಭಾವವನ್ನು ಹೊಂದಿದೆ. ಆ ಸ್ವಭಾವದೊಂದಿಗೆ ಬದುಕಲು ಸಾಧ್ಯವಿಲ್ಲ ಎಂದು ಭಾವಿಸಿದವರು ತಮ್ಮದೇ ಆದ ದೇಶವನ್ನು ಮಾಡಿಕೊಂಡರು. ದೇಶದಿಂದ ಬೇರ್ಪಡದವರು ಭಾರತದ ಸ್ವಭಾವವನ್ನು ಬಯಸಿದ್ದರು ಎಂದು ಭಾಗವತ್ ಹೇಳಿದರು.ಹಿಂದೂಗಳು ಪ್ರಪಂಚದ ವೈವಿಧ್ಯತೆಯನ್ನು ಸ್ವೀಕರಿಸುವ ಮೂಲಕ ವರ್ಷಗಳಿಂದ ಮುಂದುವರೆದಿದ್ದಾರೆ ಎಂದ ಅವರು, ಈ ಮೂಲಕ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ ಎಂದು ಪ್ರತಿಪಾದಿಸಿದರು. "ಒಬ್ಬ ವ್ಯಕ್...
ರೈಲು ನಿಲ್ದಾಣದಲ್ಲಿನ ಕಾಲ್ತುಳಿತ: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ರೈಲು ನಿಲ್ದಾಣದಲ್ಲಿನ ಕಾಲ್ತುಳಿತ: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ರಾಷ್ಟ್ರ ರಾಜಧಾನಿಯ ರೈಲು ನಿಲ್ದಾಣದಲ್ಲಿನ ಕಾಲ್ತುಳಿತ ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಅವರು ಶ್ರಿನಾಟೆ, ವೈಷ್ಣವ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಿದರು.ಈ ಘಟನೆಯ ನೈತಿಕ ಹೊಣೆ ಹೊತ್ತು ವೈಷ್ಣವ್ ರಾಜೀನಾಮೆ ನೀಡದಿದ್ದರೆ, ರೈಲು ನಿಲ್ದಾಣದಲ್ಲಿ ದುರಾವಸ್ಥೆಯಿಂದಾಗಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು....
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿ ಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ ನಡೆಸಿದ ಸಚಿವರು, ಹೊಸದಾಗಿ ಸಮಿತಿ ರಚಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 77 ರನ್ವಯ 15 ಜನ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ 3  ಸದಸ್ಯರನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿ ರಚಸಿ ಆದೇಶಿಸಲಾಗಿದೆ. 15.02.2025 ರಂದು ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಈ‌ ಕೆಳಕಂಡ ತೀರ್ಮಾನಗಳನ್ನು‌ ತೆಗೆದುಕೊಳ್ಳಲಾಗಿದೆ. ಮುಜರಾಯಿ ಇಲಾಖೆ ಆಯುಕ್ತರು ಈ ಸಮಿತಿಗೆ...
‘ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡಿ’ ಎಂದ ಶಿವಕುಮಾರ್

‘ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡಿ’ ಎಂದ ಶಿವಕುಮಾರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅವರನ್ನು ಪಕ್ಷ ಎರಡು ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡ ಎಂದು ಡಿಕೆಶಿ ಹೇಳಿದರು.ಪಕ್ಷದಲ್ಲಿ ಗೊಂದಲದ ಹೇಳಿಕೆ ಯಾಕೆ ಎಂದು ಕೇಳಿದಾಗ, "ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ ದಿನ ನಿತ್ಯ ಎಲ್ಲವನ್ನು ಗಮನಿಸುತ್ತಿದೆ" ಎಂದು ತಿಳಿಸಿದರು.ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡರ ಹ...
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದರು."ಈ ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ಎಲ್ಲೆಲ್ಲಿ ನಾಯಕರ ಮಧ್ಯೆ ಹೊಂದಾಣಿಕೆ ಸಾಧಿಸಿ, 50% ಮ...
ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 18 ಪ್ರಯಾಣಿಕರು ಮೃತಪಟ್ಟಿದ್ದಾರೆ.ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾ ಕುಂಭಮೇಳಕ್ಕೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ಜಮಾಯಿಸಿದ್ದರು. ವಿಶೇಷ ರೈಲಿನ್ನು ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ ಎನ್ನಲಾಗಿದೆ.ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ....
ಮೋದಿ ಸರ್ಕಾರದ ‘PAN 2.0’ ಪರಿಕಲ್ಪನೆ ಏನು? PAN ಕಾರ್ಡ್ ಪರಿವರ್ತನೆಗೆ ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ

ಮೋದಿ ಸರ್ಕಾರದ ‘PAN 2.0’ ಪರಿಕಲ್ಪನೆ ಏನು? PAN ಕಾರ್ಡ್ ಪರಿವರ್ತನೆಗೆ ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ

Others
ಭಾರತ ಸರ್ಕಾರವು 'PAN 2.0' ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಡಿಜಿಟಲ್ ರೂಪಾಂತರದತ್ತ ಮಹತ್ವಪೂರ್ಣ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿಡೇ. ಇದರ ಪ್ರಾಥಮಿಕ ಗುರಿ ತೆರಿಗೆದಾರರ ಗುರುತನ್ನು ಆಧುನೀಕರಿಸಿ ಭದ್ರತೆ ಮತ್ತು ದಕ್ಷತೆಯನ್ನು ಖಚಿತಪಡಿಸುವುದಾಗಿದೆ.ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿರುವ 'PAN 2.0', ವರ್ಧಿತ ಕಾರ್ಯಕ್ಷಮತೆ ಮತ್ತು ದೃಢೀಕರಣಕ್ಕಾಗಿ QR ಕೋಡ್‌ಗಳನ್ನು ಸಂಯೋಜಿಸುತ್ತದೆ. 1,435 ಕೋಟಿ ರೂ.ಗಳ ಮೀಸಲಾದ ಬಜೆಟ್‌ನೊಂದಿಗೆ, ಈ ಯೋಜನೆಯು ತೆರಿಗೆ ಸಂಬಂಧಿತ ಕಾರ್ಯಗಳನ್ನು ಸುಗಮಗೊಳಿಸಲು ಮತ್ತು ಭಾರತದಲ್ಲಿ ಡಿಜಿಟಲ್ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಸಜ್ಜಾಗಿದೆ. 'PAN 2.0' ಯೋಜನೆ ಎಂದರೇನು? 'PAN 2.0' ಒಂದು ಹೊಸ ಮತ್ತು ಸುಧಾರಿತ ಇ-ಆಡಳಿತ ವ್ಯವಸ್ಥೆಯಾಗಿದೆ, ಇದು ತೆರಿಗೆದಾರರ ನೋಂದಣಿಯನ್ನು ಸರಳಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆ PAN (ಶಾಶ್ವತ ಖಾತೆ ಸಂಖ್ಯೆ) ಮತ್ತು TAN (ತೆರಿಗೆ ಕಡಿತ ಮತ್ತು ಸಂಗ್ರಹ ಖಾತೆ ಸಂಖ್ಯೆ) ವ್ಯವಸ್ಥೆಗಳನ್ನು ಏಕೀಕೃತ ಡಿಜ...
ಕಾಂಗ್ರೆಸ್‌ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: ಬಿಜೆಪಿ ವ್ಯಂಗ್ಯ

ಕಾಂಗ್ರೆಸ್‌ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: ಬಿಜೆಪಿ ವ್ಯಂಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ.ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುವ ಭಾಗ್ಯವನ್ನು ಕಾಂಗ್ರೆಸ್‌ ನೀಡಿದೆ. ಕಿಸಾನ್‌ ಸಮ್ಮಾನ್‌, ವಿದ್ಯಾನಿಧಿ ಸೇರಿದಂತೆ ಅನೇಕ ಯೋಜನೆಗಳನ್ನು ಮುಚ್ಚಿ ಹಾಕಲಾಗಿದೆ. ಈಗ ಮಾರಿ ಕಣ್ಣು ಹೋರಿ ಮೇಲೆ ಎಂಬಂತೆ, ಸಿಎಂ ಸಿದ್ದರಾಮಯ್ಯನವರ ಕಣ್ಣು ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುವಜನರು ಪದವೀಧರರಾಗುವುದನ್ನು ತಪ್ಪಿಸಲು ಈ ರೀತಿ ಮಾಡಲಾಗಿದೆ. ಯಾರೂ ಪದವೀಧರರಾಗದೇ ಇದ್ದಲ್ಲಿ ಯುವನಿಧಿ ಯೋಜನೆಯನ್ನು ನಿಲ್ಲಿಸಬಹುದು ಎಂಬುದು ಇವರ ಚಿಂತನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬೇರೆ ರಾಜ್ಯ, ದೇಶಗಳ ವಿದ್ಯಾರ್ಥಿಗಳು ನಮ್ಮ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬರುತ್ತಿದ್ದಾರೆ. ಮಂಡ್ಯದ ವಿಶ್ವವಿದ್ಯಾಲಯವನ್ನು ಮುಚ್ಚಿ, ಅಮ್ಯೂಸ...
ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ವೈವಿಧ್ಯ
ಆಪಲ್ ತನ್ನ ವರ್ಷದ ಮೊದಲ ಪ್ರಮುಖ ಉತ್ಪನ್ನ ಬಿಡುಗಡೆಗೆ ಸಜ್ಜಾಗಿದ್ದು, ಫೆಬ್ರವರಿ 19 ಬುಧವಾರದಂದು ಬಿಡುಗಡೆಯಾಗಲಿದೆ. ಸಿಇಒ ಟಿಮ್ ಕುಕ್ ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡುವ ಮೂಲಕ 'ಐಫೋನ್ ಎಸ್‌ಇ 4' ದಿನಾಂಕವನ್ನು ದೃಢಪಡಿಸಿದ್ದಾರೆ. 'ಕುಟುಂಬದ ಹೊಸ ಸದಸ್ಯರನ್ನು ಭೇಟಿಯಾಗಲು ಸಿದ್ಧರಾಗಿ' ಎಂಬ ಸಂದೇಶದೊಂದಿಗೆ ಅವರು ಮುಂಬರುವ ಸರಣಿ ಬಗ್ಗೆ ಕುತೂಹಲಕಾರಿ ಸಂಗತಿಯನ್ನು ತೆರೆದಿಟ್ಟಿದ್ದಾರೆ.ಜೊತೆಗೆ ಅನಿಮೇಟೆಡ್ ಆಪಲ್ ಲೋಗೋ ಕೂಡ ಇದೆ. ಆಪಲ್ ಅಧಿಕೃತವಾಗಿ ಏನನ್ನು ಸಂಗ್ರಹಿಸಿದೆ ಎಂಬುದನ್ನು ಬಹಿರಂಗಪಡಿಸಿಲ್ಲವಾದರೂ, ಮ್ಯಾಕ್‌ಬುಕ್ ಏರ್, ಐಪ್ಯಾಡ್ ಮತ್ತು ಬಹುಶಃ ವಿಷನ್ ಪ್ರೊ ಹೆಡ್‌ಸೆಟ್‌ಗೆ ನವೀಕರಣಗಳ ಜೊತೆಗೆ ಬಹುನಿರೀಕ್ಷಿತ ಐಫೋನ್ ಎಸ್‌ಇ 4 ಮೇಲೆ ಸ್ಪಾಟ್‌ಲೈಟ್ ಇರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಹೊಸ 'iPhone SE 4' ಹೇಗಿದೆ ಎಂಬ ಬಗ್ಗೆ ಎಲ್ಲರಲ್ಲೂ ಕುತೂಹಲ ಇದೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಗೆಬಗೆಯ ವೀಡಿಯೊಗಳು ಹರಿದಾಡುತ್ತಿವೆ. ಆದರೆ ಹೊಸ 'iPhone SE 4' ಇದೇ ರೀತಿಯಲ್ಲೇ ಇರಲಿದೆಯೇ ಎಂಬ ಬಗ್ಗೆ ಕಂಪನಿತು ತನ್ನ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ...