Friday, April 17

Author: info@rajasdigital.com

ಭಲೇ ಸಿಎಂ: ಉದಯಗಿರಿ ಗಲಭೆಕೋರರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಲು ತಾಕೀತು

ಭಲೇ ಸಿಎಂ: ಉದಯಗಿರಿ ಗಲಭೆಕೋರರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಲು ತಾಕೀತು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ಉದಯಗಿರಿ ಗಲಭೆಯಲ್ಲಿ ಕಲ್ಲುತೂರಿದವರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಮ್, ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ.ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು ಎಂದವರು ಪ್ರತಿಪಾದಿಸಿದ್ದಾರೆ.ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕ...
ಹೊಸ ಚರಿತ್ರೆ ಬರೆದ ಮಹಾಕುಂಭಮೇಳ: ಈವರೆಗೂ 50 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ

ಹೊಸ ಚರಿತ್ರೆ ಬರೆದ ಮಹಾಕುಂಭಮೇಳ: ಈವರೆಗೂ 50 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಯಾಗರಾಜ್: ಹಿಂದೂಗಳ ಪವಿತ್ರ ಆಚರಣೆಯಾಗಿ ಹೆಗ್ಗುರುತಾಗಿರುವ ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ 50 ಕೋಟಿಗೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಇದು ಜಾಗತಿಕ ದಾಖಲೆಯಾಗಿದೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜನವರಿ 13ರಂದು ಪ್ರಾರಂಭವಾಗಿರುವ ಮಹಾಕುಂಭ ಮೇಳವು ಫೆಬ್ರವರಿ 26ರವರೆಗೆ ನಡೆಯಲಿದೆ. ಹಿಂದೂಗಳು ಪವಿತ್ರವೆಂದು ಪರಿಗಣಿಸುವ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದ ದಡದಲ್ಲಿ ಮಹಾಕುಂಭ ನಡೆಯುತ್ತಿದೆ.ಈ ಮಹಾಕುಂಭಮೇಳದ ಸಂದರ್ಭದಲ್ಲಿ ಈವರೆಗೆ 50 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಹೇಳಿದ್ದಾರೆ....
ಮಹಾಕುಂಭ ಮೇಳಕ್ಕೆ ತೆರಳಿದ್ದವರ ವಾಹನ ಅಪಘಾತ; 10 ಮಂದಿ ಸಾವು

ಮಹಾಕುಂಭ ಮೇಳಕ್ಕೆ ತೆರಳಿದ್ದವರ ವಾಹನ ಅಪಘಾತ; 10 ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಯಾಗರಾಜ್: ಮಹಾಕುಂಭ ಮೇಳಕ್ಕೆ ತೆರಳಿದ್ದ ಆಸ್ತಿಕರ ಗುಂಪು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್‌ ಸಮೀಪ ಸಂಭವಿಸಿದೆ. ಮೇಜಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಹೆದ್ದಾರಿಯಲ್ಲಿ ಬಸ್‌ ಮತ್ತು ಲೆರೊ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಬೊಲೆರೊ ಕಾರಿನಲ್ಲಿ ಮಹಾಕುಂಭ ಮೇಳಕ್ಕೆ ಪ್ರಯಾಣಿಸುತ್ತಿದ್ದ ಹತ್ತು ಜನರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತರು ಛತ್ತೀಸ್‌ಗಢ ರಾಜ್ಯದ ಕೊರ್ಬಾ ಜಿಲ್ಲೆಯವರೆಂದು ಹೇಳಲಾಗುತ್ತಿದೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 19 ಮಂದಿಗೆ ಗಾಯಗಳಾಗಿದ್ದು ಆಸ್ರತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
‘ಲವ್ ಜಿಹಾದ್’ಗೆ ಮಹಾ ಬ್ರೇಕ್..! ಡಿಜಿಪಿ ನೇತೃತ್ವದಲ್ಲಿ 7 ಸದಸ್ಯರ ಸಮಿತಿ ರಚನೆ

‘ಲವ್ ಜಿಹಾದ್’ಗೆ ಮಹಾ ಬ್ರೇಕ್..! ಡಿಜಿಪಿ ನೇತೃತ್ವದಲ್ಲಿ 7 ಸದಸ್ಯರ ಸಮಿತಿ ರಚನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬೈ: ಮಹಾರಾಷ್ಟ್ರ ಸರ್ಕಾರವು 'ಲವ್ ಜಿಹಾದ್'ಗೆ ಕಡಿವಾಣ ಹಾಕುವ ಸಂಬಂಧ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ ಕಾನೂನಾನಾತ್ಮಕ ನಿರ್ಧಾರ ಕೈಗೊಳ್ಳಲು ಅಧ್ಯಯನ ಸಮಿತಿಯನ್ನು ರಚಿಸಿದೆ.ಚುನಾಯಿತ ಪ್ರತಿನಿಧಿಗಳು ಮತ್ತು ವಿವಿಧ ಸಂಘಟನೆಗಳ ಬೇಡಿಕೆಯ ಮೇರೆಗೆ, ಮಹಾರಾಷ್ಟ್ರ ಸರ್ಕಾರವು 'ಲವ್ ಜಿಹಾದ್' (ಅಂತರ್ಧರ್ಮ ಸಂಬಂಧಗಳಿಗೆ ಸೌಮ್ಯೋಕ್ತಿ) ಮತ್ತು ವಂಚನೆಯ ಮೂಲಕ ಬಲವಂತದ ಮತಾಂತರ ಅಥವಾ ಮತಾಂತರ ತಡೆಯುವ ಸಂಬಂಧ ಕಾನೂನು ನಿಬಂಧನೆಗಳನ್ನು ಅಧ್ಯಯನ ಮಾಡಲು ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ.ಕರ್ನಾಟಕ, ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿ ಶಾಸನವನ್ನು ಜಾರಿಗೆ ತರುವ ಬಗ್ಗೆಯೂ ಸಮಿತಿಯು ಶಿಫಾರಸು ಮಾಡುವ ನಿರೀಕ್ಷೆಯಿದೆ. ಸಮಿತಿಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿ, ಕಾನೂನು ಮತ್ತು ನ್ಯಾಯಾಂಗ, ಸಾಮಾಜಿಕ ನ್ಯಾಯ ಮತ್ತು ವಿಶೇಷ ನೆರವು ಮತ್ತು ಗೃಹ ಇಲಾಖೆಗಳ ಕಾರ್ಯದರ್ಶಿಗಳನ್ನು ಒಳಗೊಂಡಿದೆ. ಗೃಹ ಇಲಾಖೆಯ ಉಪ ಕಾರ್ಯದರ್ಶಿ ಹೇಮಂತ್ ಮಹಾಜನ್ ಸಹಿ ಮಾಡಿದ ಸರ್ಕಾರಿ ...
AICCಯಲ್ಲಿ ಭಾರೀ ಬದಲಾವಣೆ: ಬಿ.ಕೆ. ಹರಿಪ್ರಸಾದ್’ಗೆ ಮಹತ್ವದ ಹೊಣೆ

AICCಯಲ್ಲಿ ಭಾರೀ ಬದಲಾವಣೆ: ಬಿ.ಕೆ. ಹರಿಪ್ರಸಾದ್’ಗೆ ಮಹತ್ವದ ಹೊಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಪ್ರದೇಶ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು ರಾಜ್ಯಗಳಿಗೆ ಹೊಸಬರನ್ನು ಎಐಸಿಸಿ ನೇಮಕ ಮಾಡಿದೆ. ಇದೇ ವೇಳೆ, ಪ್ರದೇಶ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಕರ್ನಾಟಕದ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಹರಿಯಾಣಕ್ಕೆ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ತಮಿಳುನಾಡು ಮತ್ತು ಪುದುಚೇರಿಗೆ ಗಿರಿ ಚೋಡಂಕರ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ.ಶುಕ್ರವಾರ ನಡೆದ ಪ್ರಮುಖ ಪುನರ್ರಚನೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳನ್ನು AICC ನೇಮಿಸಿದೆ.  ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರನ್ನು ಪಂಜಾಬ್‌ಗೆ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ. ಮಧ್ಯಪ್ರದೇಶಕ್ಕೆ ವರ್ಗಾವಣೆಗೊಂಡಿರುವ ಹರೀಶ್ ಚೌಧರಿ ಅವರ ಬದಲಿಗೆ ಬಘೇಲ್ ನೇಮಕಗೊಂಡಿದ್ದಾರೆ.ಕರ್ನಾಟಕದ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ಗೆ ...
ಮೈಸೂರಿನ ಗಲಭೆ ವಿಚಾರದಲ್ಲಿ ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ..!?

ಮೈಸೂರಿನ ಗಲಭೆ ವಿಚಾರದಲ್ಲಿ ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ..!?

Focus, ಪ್ರಮುಖ ಸುದ್ದಿ, ರಾಜ್ಯ
ಹಾಸನ: ಕಾಂಗ್ರೆಸ್‌ ನಾಯಕರು ಮುಸ್ಲಿಮರ ಮತಗಳ ಋಣದಲ್ಲಿ ಇರುವುದರಿಂದ ಗಲಭೆ ವಿಚಾರದಲ್ಲಿ ಗಲಭೆಕೋರರ ಪರ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ.ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಸಕಲೇಶಪುರ ಪಟ್ಟಣದಲ್ಲಿ ನಡೆದ, ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್,, ಮೈಸೂರಿನಲ್ಲಿ ನಡೆದ ಗಲಭೆಯ ವಿಚಾರದಲ್ಲಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಒಂದು ದಾರಿ ಹಿಡಿದರೆ, ಸಿಎಂ ಸಿದ್ದರಾಮಯ್ಯ ಮತ್ತೊಂದು ದಾರಿ ಹಿಡಿದಿದ್ದಾರೆ. ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿ, ಪೊಲೀಸರನ್ನು ಗಾಯಗೊಳಿಸುವುದು ಹೊಸತಲ್ಲ. ಮೈಸೂರಿನ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸದೇ ಇದ್ದಲ್ಲಿ ಇಡೀ ಪೊಲೀಸ್‌ ಠಾಣೆ ಧ್ವಂಸವಾಗುತ್ತಿತ್ತು. ಪೊಲೀಸರು ಬಹಳ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದಾರೆ. ಮುಸ್ಲಿಮರ ಮತಗಳ ಭಿಕ್ಷೆಯ ಋಣದಲ್ಲಿ ಕಾಂಗ್ರೆಸ್‌ ಇರುವುದರಿಂದ, ಸಚಿವರು, ಮುಖ್ಯಮಂತ್ರಿ ಈ ರೀತಿ ವರ್ತಿಸುತ್ತಿದ್ದಾರೆ. ಕಾಂ...
ಭೀಮಾತೀರದ ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರ ಸೆರೆ

ಭೀಮಾತೀರದ ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರ ಸೆರೆ

Focus, ಪ್ರಮುಖ ಸುದ್ದಿ, ರಾಜ್ಯ
ವಿಜಯಪುರ: ಭೀಮಾತೀರದ ಕುಖ್ಯಾತ ರೌಡಿ ಬಾಗಪ್ಪ ಹರಿಜನ ಕೊಲೆ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಕೃತ್ಯ ನಡೆದ 24 ಗಂಟೆಗಳಲ್ಲಿ ಆರೋಪಿಗಳನ್ನು ಸೆರೆಹಿಡಿದಿದ್ದಾರೆ.ಭೀಮಾತೀರದ ಹಂತಕ ಖ್ಯಾತಿಯ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ರೌಡಿ ಬಾಗಪ್ಪ ಹರಿಜನನನ್ನ ಫೆಬ್ರವರಿ 11 ರಾತ್ರಿ 9:45ರ ಸುಮಾರಿಗೆ ವಿಜಯಪುರದ ಮದೀನಾ ನಗರದಲ್ಲಿ ಹಂತಕರು ಬರ್ಬರ ಕೊಲೆ ಮಾಡಿದ್ದರು. ಕೃತ್ಯವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.ಬಾಗಪ್ಪ ಹರಿಜನ ಕೊಲೆ ಪ್ರಕರಣ ಸಂಬಂಧ ಪ್ರಕಾಶ ಅಲಿಯಾಸ್​ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್, ರಾಹುಲ್ ತಳಕೇರಿ, ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ, ಸುದೀಪ್ ಕಾಂಬಳೆ ಎಂಬವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ....
ನಾನು ನನ್ನ ಜೀವನವನ್ನು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ’: ರಶ್ಮಿಕಾ ಮಂದಣ್ಣ

ನಾನು ನನ್ನ ಜೀವನವನ್ನು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ’: ರಶ್ಮಿಕಾ ಮಂದಣ್ಣ

Focus, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ನವದೆಹಲಿ: ಚಲನಚಿತ್ರಗಳಲ್ಲಿನ ಅದ್ಭುತ ಅಭಿನಯಕ್ಕೆ ಹೆಸರುವಾಸಿಯಾದ ರಶ್ಮಿಕಾ ಮಂದಣ್ಣ, ಅಭಿಮಾನಿಗಳಿಂದ ಪ್ರೀತಿಯಿಂದ "ಕ್ರುಷ್ಮಿಕಾ" ಎಂದು ಕರೆಯುತ್ತಾರೆ, ಅವರು ತಮ್ಮ ಬಹುಮುಖ ಪ್ರತಿಭೆ ಮತ್ತು ಆಕರ್ಷಕ ಪರದೆಯ ಉಪಸ್ಥಿತಿಗಾಗಿ ಗಮನಾರ್ಹ ಜನಪ್ರಿಯತೆಯನ್ನು ಗಳಿಸಿದ್ದಾರೆ. ಆದಾಗ್ಯೂ, ಚಲನಚಿತ್ರಗಳನ್ನು ಆಯ್ಕೆ ಮಾಡುವಲ್ಲಿ ತಾನು ಯಾವುದೇ ತಂತ್ರವನ್ನು ಅನುಸರಿಸುವುದಿಲ್ಲ ಎಂದು ನಟಿ ಹೇಳುತ್ತಾರೆ. ಒಂದು "ದೈವಿಕ ಶಕ್ತಿ" ತನ್ನನ್ನು ಮುನ್ನಡೆಸುತ್ತಿದೆ ಎಂದು ನಂಬುತ್ತಾ, ತನ್ನ ಜೀವನವನ್ನು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದಿದ್ದಾರೆ."ಗೀತ ಗೋವಿಂದಂ", "ಚಮಕ್", "ಪುಷ್ಪ" ಫ್ರಾಂಚೈಸ್ ಮತ್ತು "ಅನಿಮಲ್" ನಂತಹ ಬ್ಲಾಕ್‌ಬಸ್ಟರ್‌ಗಳಲ್ಲಿ ಅವರು ಮಾಡಿದ ಕೆಲಸದ ಮೂಲಕ ರಶ್ಮಿಕಾ ಅವರನ್ನು ಭಾರತೀಯ ಚಿತ್ರರಂಗದ ಉನ್ನತ ನಾಯಕಿಯರಲ್ಲಿ ಒಬ್ಬರೆನಿಸಿದ್ದಾರೆ.ಚಲನಚಿತ್ರಗಳನ್ನು ಆಯ್ಕೆ ಮಾಡುವ ವಿಷಯಕ್ಕೆ ಬಂದಾಗ, ಅವರು ಯೋಜನೆಗೆ ಸೇರಿಸುವ ಮೌಲ್ಯದ ಬಗ್ಗೆ ಅಥವಾ ಅದು ಅವರಿಗೆ ಸೇರಿಸುವ ಮೌಲ್ಯದ ಬಗ್ಗೆ ಯೋಚಿಸುತ್ತಾರೆಯೇ, ಪ್ರಕಾಶಮಾನವಾದ ನಗುವನ್ನು ಹೊಂದಿರುವ ನಟಿ ಸುದ್ದಿಸಂಸ್ಥೆಗೆ ಹೇಳಿದ್ದಾ...
ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಅಮೆರಿಕದಲ್ಲಿ ಭಾರತೀಯರು ಅಕ್ರಮ ವಲಸಿಗರಾಗಿ ನೆಲೆಸಿದ್ದಲ್ಲಿ ಅಂಥವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳುತ್ತೇವೆ ಜೊತೆಗೆ ಮಾನವ ಕಳ್ಳಸಾಗಣೆದಾರರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಭಾರತ ಮತ್ತು ಅಮೆರಿಕ "ಯಾವಾಗಲೂ ಒಂದೇ ಅಭಿಪ್ರಾಯವನ್ನು ಹೊಂದಿವೆ, ಮತ್ತು ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಯಾವುದೇ ಭಾರತೀಯರನ್ನು ನಾವು ಭಾರತಕ್ಕೆ ಮರಳಿ ಕರೆದೊಯ್ಯಲು ಸಂಪೂರ್ಣವಾಗಿ ಸಿದ್ಧರಿದ್ದೇವೆ" ಎಂದು ಅವರು ಗುರುವಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಅಮೆರಿಕವು ಈ ತಿಂಗಳು ಅಮೃತಸರಕ್ಕೆ ಮಿಲಿಟರಿ ವಿಮಾನದಲ್ಲಿ ಭಾರತದಿಂದ ಸುಮಾರು 100 ಅಕ್ರಮ ವಲಸಿಗರನ್ನು ವಾಪಸ್ ಕಳುಹಿಸಿತು. ಭಾರತವು 18,000 ಅಕ್ರಮ ವಲಸಿಗರನ್ನು ವಾಪಸ್ ತೆಗೆದುಕೊಳ್ಳಲು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ."ದೊಡ್ಡ ಕನಸುಗಳು ಮತ್ತು ದೊಡ್ಡ ಭರವಸೆಗಳೊಂದಿಗೆ" ಅವರನ್ನು ಆಕರ್ಷಿಸಿ "ಸಾಮಾನ್ಯ ಕುಟುಂಬಗಳ ಮಕ್ಕಳನ್ನು" ಶೋಷಿಸುವ ಮಾನವ ಕಳ್ಳಸಾಗಣೆದಾರರ ವಿರುದ್ಧ ಹೋರಾಡಲು...
ಸಾರ್ವಜನಿಕರ ಆಕ್ರೋಶಕ್ಕೆ ಬೆಚ್ಚಿದ BMRCL; ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಇಳಿಕೆ

ಸಾರ್ವಜನಿಕರ ಆಕ್ರೋಶಕ್ಕೆ ಬೆಚ್ಚಿದ BMRCL; ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಇಳಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಮತ್ತೆ ಪರಿಷ್ಕರಿಸಲಾಗಿದೆ. ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ 'ನಮ್ಮ ಮೆಟ್ರೋ' ಪ್ರಯಾಣ ದರವನ್ನು ಸ್ವಲ್ಪ ಮಟ್ಟಿಗೆ ಇಳಿಕೆ ಮಾಡಿದೆ.ಟಿಕೆಟ್ ದರ ಏರಿಕೆ ಬಗ್ಗೆ ಸಾರ್ವಜನಿಕ ವಲಯದಲ್ಲಿನ ಆಕ್ರೋಶ ಹಿನ್ನೆಲೆಯಲ್ಲಿ ದರ ಇಳಿಸುವಂತೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಬಿಎಂಆರ್​ಸಿಎಲ್, ಶೇ 90 ರಿಂದ 100 ರಷ್ಟು ದರ ಹೆಚ್ಚಳ ಮಾಡಿರುವ ನಿಲ್ದಾಣಗಳ ಮಧ್ಯೆ ತಲಾ 10 ರೂಪಾಯಿಗಳಷ್ಟು ಇಳಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.ಹೊಸ ದರ ಹೀಗಿದೆ: ಮೆಜೆಸ್ಟಿಕ್​​ನಿಂದ ವೈಟ್​ಫಿಲ್ಡ್​ಗೆ ಹಳೆಯ ದರ 90 ರೂ. ಹೊಸ ದರ 80 ರೂ. ಮೆಜೆಸ್ಟಿಕ್​​ನಿಂದ ಚಲ್ಲಘಟ್ಟಕ್ಕೆ ಹಳೆಯ 70 ರೂ. ಹೊಸ ದರ 60 ರೂ. ಮೆಜೆಸ್ಟಿಕ್​​ನಿಂದ ವಿಧಾನಸೌಧಕ್ಕೆ ಹಳೆಯ 20 ರೂ. ಹೊಸ ದರ 10 ರೂ. ಮೆಜೆಸ್ಟಿಕ್​​ನಿಂದ ಬೈಯಪ್ಪನಹಳ್ಳಿಗೆ ಹಳೆಯ 60 ಹೊಸ ದರ 50 ರೂ. ಮೆಜೆಸ್ಟಿಕ್​​ನಿಂದ ರೇಷ್ಮೆ ಸಂಸ್ಥೆಗೆ ಹಳೆಯ 70 ರೂ. ದರ ಈಗ 60 ರೂ. ಇದೇ ವೇಳೆ, ಕನಿಷ್ಠ, ಗರಿಷ್ಠ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಮೂಲಗಳು ತಿಳಿಸಿವೆ....