Saturday, April 18

Author: info@rajasdigital.com

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಅಶೋಕ ಆಗ್ರಹ

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಅಶೋಕ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆರ್‌.ಅಶೋಕ ಭೇಟಿ ನೀಡಿದರು. ನಂತರ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಅವರ ಮೇಲೆ ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡು ಮನೆಗೆ ಹೋಗಿ ಎಂದು ಬೆದರಿಸಿದ್ದಾರೆ. ಅವರಿಗೆ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಅವರಿಗೆ ಕುಡಿಯುವ ನೀರು, ಶೌಚಾಲಯ, ಟೆಂಟ್‌ ಮೊದಲಾದ ಸೌಲಭ್ಯ ನೀಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ. ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,000 ರೂ. ನೀಡಲಾಗುವುದು ಎಂದು ಘೋಷಿಸಲಾಗಿದೆ. ಇದರಂತೆಯೇ ಈಗಲೇ ಸರ್ಕಾರ ಗೌರವಧನ ನೀಡಲಿ ಎಂದು ಆಗ್ರಹಿಸಿದರು.ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ...
ಬಿಎಂಟಿಸಿ-ಕೆನರಾ ಬ್ಯಾಂಕ್ ಒಡಂಬಡಿಕೆ; ನೌಕರರಿಗೆ ವಿಮೆ, ಮೃತರ ಅವಲಂಬಿತರಿಗೆ ಪರಿಹಾರ

ಬಿಎಂಟಿಸಿ-ಕೆನರಾ ಬ್ಯಾಂಕ್ ಒಡಂಬಡಿಕೆ; ನೌಕರರಿಗೆ ವಿಮೆ, ಮೃತರ ಅವಲಂಬಿತರಿಗೆ ಪರಿಹಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೆನರಾ ಬ್ಯಾಂಕ್ ನೊಂದಿಗೆ ರೂ. 1.5 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆಯ ಒಡಂಬಡಿಕೆ ಮಾಡಿಕೊಂಡಿದ್ದು, ಮೃತರ ಅವಲಂಬಿತರಿಗೆ ರೂ. 1 ಕೋಟಿ ವಿಮಾ ಪರಿಹಾರ ಮೊತ್ತದ ಚೆಕ್ ವಿತರಣಾ ಕಾರ್ಯಕ್ರಮ ನಡೆಯಿತು.ಬೆಂ.ಮ.ಸಾ.ಸಂಸ್ಥೆಯು ಒಟ್ಟು 51 ಘಟಕಗಳನ್ನು ಹೊಂದಿದದ್ದು, ಪ್ರತಿದಿನ 5861 ಅನುಸೂಚಿಗಳಿಂದ 61536 ಸುತ್ತುವಳಿಗಳನ್ನು 12.04 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿ ದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಪ್ರಸ್ತುತ 1279 ಎಲೆಕ್ನಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ 352 ಎಲೆಕ್ನಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಯೋಜಿಸಲಾಗಿದೆ. ಪ್ರಸ್ತುತ ಒಟ್ಟು 6158 ವಾಹನಗಳನ್ನು ಹೊಂದಿದ್ದು, ಪರಿಸರಸ್ನೇಹಿ ಹಾಗೂ ವಾಯುಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲೆಕ್ನಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.ಇದರ ಜೊತೆಯಲ್ಲೇ, ನಿಗಮದ ನೌಕರರ...
ALF 4.0 : ‘ಏಷ್ಯನ್ ಶತಮಾನ’ ಸಾಹಿತ್ಯ ಮತ್ತು ಸಂಸ್ಕೃತಿಗೆ ‘ಅಲಯನ್ಸ್‌ ವಿಶ್ವವಿದ್ಯಾಲಯ’ ವೇದಿಕೆ

ALF 4.0 : ‘ಏಷ್ಯನ್ ಶತಮಾನ’ ಸಾಹಿತ್ಯ ಮತ್ತು ಸಂಸ್ಕೃತಿಗೆ ‘ಅಲಯನ್ಸ್‌ ವಿಶ್ವವಿದ್ಯಾಲಯ’ ವೇದಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಲೈಯನ್ಸ್ ವಿಶ್ವವಿದ್ಯಾಲಯವು ಫೆಬ್ರವರಿ 13 ರಿಂದ ಫೆಬ್ರವರಿ 15, 2025 ರವರೆಗೆ ಮೂರು ದಿನಗಳ ಸಾಹಿತ್ಯ, ಸಂಸ್ಕೃತಿ ಮತ್ತು ಬೌದ್ಧಿಕ ಸಂವಾದವನ್ನೊಳಗೊಂಡ 'ಅಲಯನ್ಸ್ ಸಾಹಿತ್ಯ ಉತ್ಸವ (ALF 4.0)' ನಾಲ್ಕನೇ ಆವೃತ್ತಿಯನ್ನು ಆಚರಿಸಲಿದೆ. ಈ ವರ್ಷದ ವಿಷಯವಾದ “ದಿ ಏಷ್ಯನ್ ಸೆಂಚುರಿ” ಜಾಗತಿಕ ಸಂಸ್ಕೃತಿ, ರಾಜಕೀಯ, ಆರ್ಥಿಕತೆ ಮತ್ತು ಕಲೆಯ ಮೇಲೆ ಏಷ್ಯಾದ ಆಳವಾದ ಪ್ರಭಾವವನ್ನು ಎತ್ತಿ ತೋರಿಸುತ್ತದೆ, ಸಾಹಿತ್ಯ ಉತ್ಸಾಹಿಗಳು, ಶಿಕ್ಷಣ ತಜ್ಞರು, ನೀತಿ ನಿರೂಪಕರು, ರಾಜತಾಂತ್ರಿಕರು ಮತ್ತು ಸಾಂಸ್ಕೃತಿಕ ಅಭಿಜ್ಞರು ಅರ್ಥಪೂರ್ಣ ಸಂಭಾಷಣೆಗಳು ಮತ್ತು ತಲ್ಲೀನಗೊಳಿಸುವ ಅನುಭವಗಳಲ್ಲಿ ತೊಡಗಿಸಿಕೊಳ್ಳಲು ಅಸಾಧಾರಣ ವೇದಿಕೆಯನ್ನು ಕಲ್ಪಿಸಿದೆ ಎಂದು ಸಂಘಟಕರು ತಿಳಿಸಿದ್ದಾರೆ.ಈ ಉತ್ಸವವು 25 ಕ್ಕೂ ಹೆಚ್ಚು ದೇಶಗಳ ಸಾಹಿತ್ಯ ಸೇರಿದಂತೆ 120 ಕ್ಕೂ ಹೆಚ್ಚು ಭಾಷಣಕಾರರನ್ನು ಒಳಗೊಂಡ ಅಸಾಧಾರಣ ಶ್ರೇಣಿಯನ್ನು ಭರವಸೆ ನೀಡುತ್ತದೆ. ಪ್ರಸಿದ್ಧ ಭಾರತೀಯ ಚಿತ್ರಕಥೆಗಾರ ಮತ್ತು ಗೀತರಚನೆಕಾರ ಜಾವೇದ್ ಅಖ್ತರ್; ಪ್ರಸಿದ್ಧ ಜಪಾನಿನ ಲೇಖಕ ಅಸಕೊ ಯುಜುಕಿ, ಏಷ್ಯನ್ ಶತಮಾನದ ಭಾರತದ ಧ್ವನಿ ಪಾಲ್ಕಿ ಶರ್ಮ...
ಕೇಂದ್ರ ಬಜೆಟ್; ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಳ

ಕೇಂದ್ರ ಬಜೆಟ್; ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಳ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಈ ಬಾರಿಯ ಬಜೆಟ್ ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಲಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಶನಿವಾರ ಬಜೆಟ್ ಮಂಡಿಸಿದರು. ಮಧ್ಯಮ ವರ್ಗದ ಬಹು ದಿನಗಳ ಬೇಡಿಕೆಯಂತೆ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಿಸುವ ಭರವಸೆ ಪ್ರಕಟಿಸಿದರು.ಹೊಸ ತೆರಿಗೆ ಪದ್ಧತಿಯಂತೆ 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ. 4 ಲಕ್ಷದಿಂದ 8 ಲಕ್ಷದವರೆಗೆ ಶೇ.5 ತೆರಿಗೆ, 8 ಲಕ್ಷದಿಂದ 11 ಲಕ್ಷದವರೆಗೆ ಶೇ.10 ತೆರಿಗೆ, 12 ಲಕ್ಷದಿಂದ 15 ಲಕ್ಷದವರೆಗೆ ಶೇ.15 ತೆರಿಗೆ, 15 ಲಕ್ಷದಿಂದ 20 ಲಕ್ಷದವರೆಗೆ ಶೇ.20 ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25 ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆಹೊಸ ತೆರಿಗೆ ಪದ್ಧತಿ ಅನ್ವಯ 4 ಲಕ್ಷ ರೂ ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ. ಹಿರಿಯ ನಾಗರಿಕರಿಗೆ ತೆರಿಗೆ ಕಡಿತದ ಮಿತಿಯನ್ನು 1 ಲಕ್ಷ ರೂ.ಗೆ ದ್ವಿಗುಣಗೊಳಿಸಲಾಗಿದೆ ಎಂದು ಪ್ರಕಟಿಸಿದ ನಿರ್ಮಲಾ ಸೀತಾರಾಮನ್ ಬಾಡಿಗೆ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿಯನ್ನು 2.4 ಲಕ್ಷ ರೂ.ಗಳಿಂದ 6 ಲಕ್ಷ ರ...
ಅಮೆರಿಕಾದಲ್ಲಿ ಮತ್ತೊಂದು ವಿಮಾನ ದುರಂತ; ಅನೇಕ ಮನೆಗಳಿಗೆ ಅಗ್ನಿಸ್ಪರ್ಶ

ಅಮೆರಿಕಾದಲ್ಲಿ ಮತ್ತೊಂದು ವಿಮಾನ ದುರಂತ; ಅನೇಕ ಮನೆಗಳಿಗೆ ಅಗ್ನಿಸ್ಪರ್ಶ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯಲ್ಲಿ 67 ಜನರ ಸಾವಿಗೆ ಕಾರಣವಾದ ವಿಮಾನ ಡಿಕ್ಕಿಯಿಂದ ಅಮೆರಿಕ ಚೇತರಿಸಿಕೊಳ್ಳುತ್ತಿರುವಾಗಲೇ, ಶುಕ್ರವಾರ ಸಂಜೆ ಮತ್ತೊಂದು ವಿಮಾನ ಅಪಘಾತ ಸಂಭವಿಸಿದೆ. ಪೆನ್ಸಿಲ್ವೇನಿಯಾ ಪ್ರಾಂತ್ಯದ ಫಿಲಡೆಲ್ಫಿಯಾದಲ್ಲಿ ಲಘು ವಿಮಾನವೊಂದು ಪತನಗೊಂಡು ಹಲವಾರು ಮನೆಗಳಿಗೆ ಬೆಂಕಿ ಹಚ್ಚಿಕೊಂಡಿದೆ.ಈ ವಿಮಾನದಲ್ಲಿ ಆರು ಜನ ಪ್ರಯಾಣಿಸುತ್ತಿದ್ದು, ಅದು ವೈದ್ಯಕೀಯ ಸೇವಾ ನಿರತ ವಿಮಾನವಾಗಿತ್ತು ಎನ್ನಲಾಗಿದೆ. ಈ ವಿಮಾನ ಪತನದಿಂದಾಗಿ ನ್ಯೂ ರೂಸ್‌ವೆಲ್ಟ್ ಬೌಲೆವಾರ್ಡ್ ಮತ್ತು ಕಾಟ್‌ಮನ್ ಅವೆನ್ಯೂದಲ್ಲಿ ಹಲವಾರು ಮನೆಗಳಿಗೆ ಬೆಂಕಿ ಹೊತ್ತಿಕೊಂಡಿದೆ.ಶುಕ್ರವಾರ ಸಂಜೆ 6 ಗಂಟೆಯ ನಂತರ ವಸತಿ ಬೀದಿಯಾದ ಕ್ಯಾಲ್ವರ್ಟ್ ಸ್ಟ್ರೀಟ್‌ನ 7200 ಬ್ಲಾಕ್ ಬಳಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ತುರ್ತು ಸೇವೆಗಳ ರವಾನೆಗಳನ್ನು ಸುದ್ದಿ ತಾಣ ಉಲ್ಲೇಖಿಸಿದೆ....
‘ಪೂರ್‌ ಲೇಡಿ’ ಹೇಳಿಕೆ: ಸೋನಿಯಾ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

‘ಪೂರ್‌ ಲೇಡಿ’ ಹೇಳಿಕೆ: ಸೋನಿಯಾ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರು ನೀಡಿದ 'ಪೂರ್‌ ಲೇಡಿ' ಹೇಳಿಕೆ ಅತ್ಯಂತ ಖಂಡನೀಯ ಎಂದಿರುವ ಬಿಜೆಪಿ, ಈ ದೇಶದ ಆದಿವಾಸಿಗಳು, ದಲಿತರು ರಾಷ್ಟ್ರದ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿದರೆ, ಕಾಂಗ್ರೆಸ್‌ ಅದನ್ನು ಸಹಿಸುವುದಿಲ್ಲ ಎಂಬುದಕ್ಕೆ ಸೋನಿಯಾ ಗಾಂಧಿಯವರ ಕೀಳು ಹೇಳಿಕೆಯೇ ಸಾಕ್ಷಿ ಎಂದಿದೆ.ಈ ದೇಶದ ಆದಿವಾಸಿ ಹಾಗೂ ದಲಿತ ಸಮುದಾಯದವರ ಬಗ್ಗೆ ಕಾಂಗ್ರೆಸ್‌ ಎಂತಹ ಮನಸ್ಥಿತಿ ಹೊಂದಿದೆ ಎಂಬುದಕ್ಕೆ ಬಹುಷಃ ಇದಕ್ಕಿಂತ ಬೇರೆ ಉದಾಹರಣೆ ಸಿಗುವುದಿಲ್ಲ ಎಂದು ಬಿಜೆಪಿ ಹೇಳಿದೆ.ಸೋನಿಯಾ ಗಾಂಧಿಯವರು ತಮ್ಮ ಹೇಳಿಕೆಯ ಬಗ್ಗೆ ಕೂಡಲೇ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ. ರಾಷ್ಟ್ರಪತಿ @rashtrapatibhvn ದ್ರೌಪದಿ ಮುರ್ಮು ಅವರ ಬಗ್ಗೆ @INCIndia ಅಧಿನಾಯಕಿ ಶ್ರೀಮತಿ ಸೋನಿಯಾ ಗಾಂಧಿಯವರು ನೀಡಿದ “ಪೂರ್‌ ಲೇಡಿ” ಹೇಳಿಕೆ ಅತ್ಯಂತ ಖಂಡನೀಯ.ಈ ದೇಶದ ಆದಿವಾಸಿಗಳು, ದಲಿತರು ರಾಷ್ಟ್ರದ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿದರೆ, ಕಾಂಗ್ರೆಸ್‌ ಅದನ್ನು ಸಹಿಸುವುದಿಲ್ಲ ಎಂಬುದಕ್ಕೆ ಸೋನಿಯಾ ಗಾಂಧಿಯವರ ಕೀಳು ಹೇಳಿಕೆಯೇ… ...
ಓಮನ್: ಮಾಜಿ ಸಚಿವ ಸಿ.ಟಿ.ರವಿ ಅವರಿಗೆ “ಗ್ಲೋಬಲ್ ಆಚಿವರ್ಸ್ ಅವಾರ್ಡ್” ಪ್ರಶಸ್ತಿ ಪ್ರದಾನ

ಓಮನ್: ಮಾಜಿ ಸಚಿವ ಸಿ.ಟಿ.ರವಿ ಅವರಿಗೆ “ಗ್ಲೋಬಲ್ ಆಚಿವರ್ಸ್ ಅವಾರ್ಡ್” ಪ್ರಶಸ್ತಿ ಪ್ರದಾನ

Focus, Update, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಓಮನ್: ಓಮನ್ ನಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಚಿವ ಸಿ.ಟಿ.ರವಿ ಅವರಿಗೆ "ಗ್ಲೋಬಲ್ ಆಚಿವರ್ಸ್ ಅವಾರ್ಡ್" ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಅಪರೂಪದ ಸಾಧಕರನ್ನು ಗುರುತಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವಿಸುವ ಉನ್ನತ ಆಶಯದಿಂದ "ವಿಶ್ವವಾಣಿ" "ಸಂಸ್ಥೆ ಕರ್ನಾಟಕ ಸಂಘ ಮಸ್ಕತ್" ಅವರ ಸಹಯೋಗದೊಂದಿಗೆ ಓಮನ್ ನಲ್ಲಿ ನಡೆದ "ಗ್ಲೋಬಲ್ ಆಚಿವರ್ಸ್ ಅವಾರ್ಡ್" ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಮಾಜಿ ಸಚಿವ ಸಿ.ಟಿ.ರವಿ ಅವರಿಗೆ "ಗ್ಲೋಬಲ್ ಆಚಿವರ್ಸ್ ಅವಾರ್ಡ್" ಪ್ರಶಸ್ತಿನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಿ.ಟಿ.ರವಿ, ಸಾಧಕರನ್ನು ಗೌರವಿಸುವ ಮಹೋನ್ನತ ಕಾರ್ಯಮಾಡಿದ ವಿಶ್ವವಾಣಿ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು.ಎರಡು ದೇಶಗಳ ಮೈತ್ರಿ ಮತ್ತು ಪರಸ್ಪರ ಸಂಸ್ಕೃತಿಕ ವಿನಿಮಯದ ಆಶಯದಿಂದ ನೆರವೇರಿಸಲಾದ ಮಹಾ ಸಮಾರಂಭದಲ್ಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ವಿಧಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಲವಾರು ಜನ ಸಾಧಕರೊಂದಿಗೆ, ವಿಧಾನ ಸಭೆಯ ಸಭಾಧ್ಯಕ್ಷ ಯುಟಿ ಖಾದರ್, ಮಸ್ಕತ್ ನ ಕರ್ನಾ...
ದೇಶದ 14.72 ಲಕ್ಷ ಶಾಲೆಗಳಲ್ಲಿ 24.8 ಕೋಟಿ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ : ಆರ್ಥಿಕ ಸಮೀಕ್ಷೆ 2024-25

ದೇಶದ 14.72 ಲಕ್ಷ ಶಾಲೆಗಳಲ್ಲಿ 24.8 ಕೋಟಿ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ : ಆರ್ಥಿಕ ಸಮೀಕ್ಷೆ 2024-25

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ಆರ್ಥಿಕ ಸಮೀಕ್ಷೆಯ ಹೈಲೈಟ್ಸ್:ಕಂಪ್ಯೂಟರ್ ಹೊಂದಿರುವ ಶಾಲೆಗಳ ಪ್ರಮಾಣ 2019-20ರಲ್ಲಿ ಇದ್ದ 38.5%ನಿಂದ 2023-2024ರಲ್ಲಿ 57.2% ಗೆ ಏರಿಕೆ, ಇಂಟರ್ ನೆಟ್ ಸೌಲಭ್ಯ ಹೊಂದಿರುವ ಶಾಲೆಗಳ ಪ್ರಮಾಣ 2019-20ರಲ್ಲಿ ಇದ್ದ 22.3%ನಿಂದ 2023-2024ರಲ್ಲಿ 53.9%ಗೆ ಏರಿಕೆ ಇತ್ತೀಚಿನ ವರ್ಷಗಳಲ್ಲಿ ಶಾಲೆ ತೊರೆಯುತ್ತಿರುವ ವಿದ್ಯಾರ್ಥಿಗಳ ಪ್ರಮಾಣ ಸ್ಥಿರವಾಗಿ ಕಡಿಮೆಯಾಗಿವೆ, ಪ್ರಾಥಮಿಕ ಹಂತದಲ್ಲಿ 1.9%, ಉನ್ನತ ಪ್ರಾಥಮಿಕ ಹಂತದಲ್ಲಿ 5.2% ಮತ್ತು ಮಾಧ್ಯಮಿಕ ಹಂತದಲ್ಲಿ 14.1%ಗೆ ತಗ್ಗಿದೆ ಶಿಕ್ಷಣ ವ್ಯವಸ್ಥೆಯ ಚಲನಶೀಲತೆಯನ್ನು ವೇಗವಾಗಿ ಅಭಿವೃದ್ಧಿಪಡಿಸುವಲ್ಲಿ ತಂತ್ರಜ್ಞಾನದ ಏಕೀಕರಣ(ಕೃತಕ ಬುದ್ಧಿಮತ್ತೆ) ಅತ್ಯಗತ್ಯ ಒಟ್ಟು ಉನ್ನತ ಶಿಕ್ಷಣ ಸಂಸ್ಥೆಗಳು(ಎಚ್ಇಐಎಸ್) 2014-15ರಲ್ಲಿ ಇದ್ದ 51,534ರಿಂದ 2022-23ರಲ್ಲಿ 58,643ಕ್ಕೆ ಅಂದರೆ ಶೇಕಡ 13.8ರಷ್ಟು ಹೆಚ್ಚಾಗಿದೆನವದೆಹಲಿ: ಆರ್ಥಿಕ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರದ ಗುರಿಗಳನ್ನು ಸಾಧಿಸಲು ಪೀರ್ ಬೋಧನೆ(ಶಿಕ್ಷಕರಿಗೆ ಬದಲಾಗಿ ಮಕ್ಕಳ ನಡುವೆ ಬೋಧನೆ)ಯಂತಹ ನಾವೀನ್ಯತೆಗೆ ಆರ್ಥಿಕ ಸಮೀಕ್ಷೆ ಒತ್ತು ನೀಡಿದೆ.ಕೇಂದ್ರ ಹಣ...
ಅಂಗನವಾಡಿ ಕಾರ್ಯರ್ತೆಯರ ಹೋರಾಟಕ್ಕೆ ಅಡ್ಡಿ; ಟೆಂಟ್ ಕಿತ್ತುಹಾಕಿಸಿದ ಸರ್ಕಾರದ ವಿರುದ್ಧ ಆಕ್ರೋಶ

ಅಂಗನವಾಡಿ ಕಾರ್ಯರ್ತೆಯರ ಹೋರಾಟಕ್ಕೆ ಅಡ್ಡಿ; ಟೆಂಟ್ ಕಿತ್ತುಹಾಕಿಸಿದ ಸರ್ಕಾರದ ವಿರುದ್ಧ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿಯ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯರ್ತೆಯರ ಹೋರಾಟಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಫ್ರೀಡಂ ಪಾರ್ಕ್ ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯರ್ತೆಯರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಟ್ಟಹಾಸ ಮೆರೆದಿದ್ದು, ಪೊಲೀಸರ ಮೂಲಕ ಟೆಂಟ್ ಕಿತ್ತುಹಾಕಿಸಿ ಬಲವಂತವಾಗಿ ಪ್ರತಿಭಟನೆ ಅಂತ್ಯಗೊಳಿಸುವ ಮೂಲಕ ಹಿಟ್ಲರ್ ಧೋರಣೆ ತೋರಿದೆ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಚುನಾವಣೆ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಟ್ಟ ಆಶ್ವಾಸನೆ ಈಡೇರಿಸುವುದಕ್ಕಂತೂ ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಕೊರೆಯುವ ಚಳಿಯನ್ನೂ ಲೆಕ್ಕಿಸದೆ ನಾಲ್ಕು ದಿನದಿಂದ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿರುವ ಮಹಿಳೆಯರ ಬಳಿ ಹೋಗಿ ಕನಿಷ್ಠ ಪಕ್ಷ ಅವರನ್ನ ಸಮಾಧಾನ ಪಡಿಸುವ ಸೌಜನ್ಯವೂ ನಿಮ್ಮ ಸರ್ಕಾರಕ್ಕೆ ಇಲ್ಲ. ಈಗ ಅವರ ಶಾಂತಿಯುತ ಪ್ರತಿಭಟನೆಗೂ ಅಡ್ಡಿಪಡಿಸುವುದು ಯಾವ ...
ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ 1,737.68 ಕೋ.ರೂ.ಖರ್ಚು

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ 1,737.68 ಕೋ.ರೂ.ಖರ್ಚು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು 1,737.68 ಕೋಟಿ ರೂ. ಖರ್ಚು ಮಾಡಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ಲೆಕ್ಕ ಕೊಟ್ಟಿದೆ.884.45 ಕೋಟಿ ರೂ ಪಕ್ಷದ ಪ್ರಚಾರಕ್ಕಾಗಿ ಖರ್ಚು, 853.23 ಕೋಟಿ ರೂ ಅಭ್ಯರ್ಥಿಗಳ ವೆಚ್ಚ, ಜಾಹೀರಾತು ಮತ್ತಿತರ ಪ್ರಚಾರಗಳಿಗಾಗಿ ಸುಮಾರು 611.50 ಕೋಟಿ ರೂ ಖರ್ಚು ಮಾಡಲಾಗಿದೆ. ಪೋಸ್ಟರ್‌ಗಳು, ಬ್ಯಾನರ್‌, ಧ್ವಜ ಮುಂತಾದ ಪ್ರಚಾರ ಸಾಮಗ್ರಿಗಳಿಗಾಗಿ 55.75 ಕೋಟಿ ರೂ, ವೇದಿಕೆ, ಆಸನ, ಧ್ವನಿವರ್ಧಕ ವಾಹನಗಳು ಸೇರಿದಂತೆ ಬಹಿರಂಗ ಪ್ರಚಾರಗಳಿಗಾಗಿ 19.84 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಬಿಜೆಪಿ ತನ್ನ ಖರ್ಚು-ವೆಚ್ಚಗಳ ವರದಿಯಲ್ಲಿ ತಿಳಿಸಿದೆ....