Saturday, April 18

Author: info@rajasdigital.com

ರಾಜ್ಯ ಬಿಜೆಪಿಯಲ್ಲಿ ಈಗ ‘ಜಗನ್ನಾಥ ಭವನ Vs ಬಾಲಭವನ’; ಏನಿದು ಕಾಂಗ್ರೆಸ್ ವ್ಯಾಖ್ಯಾನ?

ರಾಜ್ಯ ಬಿಜೆಪಿಯಲ್ಲಿ ಈಗ ‘ಜಗನ್ನಾಥ ಭವನ Vs ಬಾಲಭವನ’; ಏನಿದು ಕಾಂಗ್ರೆಸ್ ವ್ಯಾಖ್ಯಾನ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಈಗ 'ಜಗನ್ನಾಥ ಭವನ Vs ಬಾಲಭವನ' ಎಂಬ ಎರಡು ಗುಂಪುಗಳಿವೆ ಎಂದು ಪ್ರದೇಶ ಕಾಂಗ್ರೆಸ್ ವ್ಯಾಖ್ಯಾನಿಸಿದೆ.ಕರ್ನಾಟಕದ ಭಾರತೀಯ ಜನತಾ ಪಕ್ಷ ಗುಂಪುಗಾರಿಕೆಯಿಂದ ಬಸವಳಿದಿದ್ದು, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರವರು ಕರ್ನಾಟಕ ಬಿಜೆಪಿಯನ್ನು ಒಣಗಿದ ಮರಕ್ಕೆ ಹೋಲಿಸಿಕೊಂಡು ಭಿನ್ನಮತೀಯರನ್ನು ಕಾಗೆಗಳಿಗೆ ಹೋಲಿಕೆ ಮಾಡಿ, ಅಪಶಕುನದ ಕಾಗೆಗಳನ್ನು ಗುಂಡಿಟ್ಟು ಓಡಿಸಬೇಕೆಂದು ಪತ್ರಿಕಾ ಸಂದರ್ಶನದಲ್ಲಿ ಹೇಳುವುದರ ಮೂಲಕ ಭೌದ್ದಿಕವಾಗಿ ದಿವಾಳಿಯಾಗಿರುವ, ಗುಂಪುಗಾರಿಕೆಯಿಂದ ತತ್ತರಿಸಿ ಸ್ವಜನ ಪಕ್ಷಪಾತದಿಂದ ತುಳುಕಿರುವ ರಾಜ್ಯ ಬಿಜೆಪಿ ನಾಯಕರ ವ್ಯಕ್ತಿತ್ವವನ್ನು ಅನಾವರಣಗೊಳಿಸಿದ್ದಾರೆ ಎಂದು ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ.ಸದಾನಂದ ಗೌಡರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುಚ ರಮೇಶ್ ಬಾಬು, ಹಿಂದೂ ಸಂಪ್ರದಾಯದಲ್ಲಿ ಕಾಗೆಯನ್ನು ವಿವಿಧ ಆಯಾಮಗಳಲ್ಲಿ ನೋಡಲಾಗುತ್ತದೆ. ಸದಾನಂದ ಗೌಡರು ಕಾಗೆಯನ್ನು ಅಪಶಕುನವೆಂದು ಭಾವಿಸಿ, ರಾಜ್ಯ ಬಿಜೆಪಿಯ ಭಿನ್ನಮತೀಯರನ್ನು ಅಪಶಕುನದ ಕಾಗೆಗಳೆಂದು ಚಿತ್ರಿಸಿರುವುದು ಅವರ ಪಕ್ಷದ ವ್ಯ...
VIDEO: ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

VIDEO: ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಯಶೋಗಾಥೆ ಬರೆದಿದೆ. ಎನ್'ವಿಎಸ್-02 ಉಪಗ್ರಹವನ್ನು ಯಶಸ್ವಿಯಾಗಿ ಉಡ್ಡಯಿಸಿದೆ. ಈ ಮೂಲಕ ಇಸ್ರೋ ಸಂಸ್ಥೆಯು ತನ್ನ 100ನೇ ಉಡ್ಡಯನವನ್ನು ಬುಧವಾರ ಯಶಸ್ವಿಯಾಗಿ ನಡೆಸಿದೆ. ಈ ಕುರಿತ ವೀಡಿಯೊವನ್ನು ಇಸ್ರೋ ಸಂಸ್ಥೆ ಹಂಚಿಕೊಂಡಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಯಶೋಗಾಥೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.🌍 A view like no other! Watch onboard footage from GSLV-F15 during the launch of NVS-02.India’s space programme continues to inspire! 🚀 #GSLV #NAVIC #ISRO pic.twitter.com/KrrO3xiH1s — ISRO (@isro) January 29, 2025...
ಇಸ್ರೋ ಶತಕದ ಯಶೋಗಾಥೆ; ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

ಇಸ್ರೋ ಶತಕದ ಯಶೋಗಾಥೆ; ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

Focus, Update Videos, ಆಧ್ಯಾತ್ಮ, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಯಶೋಗಾಥೆ ಬರೆದಿದೆ. ಎನ್'ವಿಎಸ್-02 ಉಪಗ್ರಹವನ್ನು ಯಶಸ್ವಿಯಾಗಿ ಉಡ್ಡಯಿಸಿದೆ. ಈ ಮೂಲಕ ಇಸ್ರೋ ಸಂಸ್ಥೆಯು ತನ್ನ 100ನೇ ಉಡ್ಡಯನವನ್ನು ಬುಧವಾರ ಯಶಸ್ವಿಯಾಗಿ ನಡೆಸಿದೆ.ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಬುಧವಾರ ಬೆಳಿಗ್ಗೆ 6.23ರ ಸುಮಾರಿಗೆ ಎನ್'ವಿಎಸ್-02 ಉಪಗ್ರಹ ಹೊತ್ತ ಜಿಎಸ್ಎಲ್'ವಿ ನಭಕ್ಕೆ ಜಿಗಿದಿದೆ. ಸ್ವದೇಶಿ ಜಿಪಿಎಸ್ ಯೋಜನೆಯ ಭಾಗವಾಗಿ ಎನ್'ವಿಎಸ್-02 ಉಪಗ್ರಹವನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ.1963ರ ನ.21ರಂದು ಅಮೆರಿಕಾದ ರಾಕೆಟ್ ಬಳಸಿ ಮೊದಲ ಬಾರಿಗೆ ಉಪಗ್ರಹ ಮಾಡಿದ್ದ ಇಸ್ರೋ, ಬುಧವಾರ ತನ್ನ 100ನೇ ಉಡ್ಡಯನದೊಂದಿಗೆ ಇತಿಹಾಸ ಸೃಷ್ಟಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇಸ್ರೋ, ಬಾಹ್ಯಾಕಾಶ ನ್ಯಾವಿಗೇಷನ್‌ನಲ್ಲಿ ಭಾರತ ಹೊಸ ಎತ್ತರಕ್ಕೆ ತಲುಪಿದೆ ಎಂದು ಸಂತಸ ವ್ಯಕ್ತಪಡಿಸಿದೆ....
ಕರ್ನಾಟಕದಲ್ಲಿ 2024-25ರ ಹಿಂಗಾರು ಬೆಳೆ ಕಡಲೆಗೆ ಬೆಂಬಲ ಬೆಲೆ; ಕೇಂದ್ರದ ಅನುಮತಿ

ಕರ್ನಾಟಕದಲ್ಲಿ 2024-25ರ ಹಿಂಗಾರು ಬೆಳೆ ಕಡಲೆಗೆ ಬೆಂಬಲ ಬೆಲೆ; ಕೇಂದ್ರದ ಅನುಮತಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕರ್ನಾಟಕ ಸರ್ಕಾರದ ಪ್ರಸ್ತಾವನೆಯಂತೆ ಕರ್ನಾಟಕದಲ್ಲಿ 2024-25 ರ ರಾಬಿ ಋತುವಿನಲ್ಲಿ ( ಹಿಂಗಾರು ಬೆಳೆ) ಬೆಳೆದ ಕಡಲೆಯನ್ನು ಬೆಂಬಲ ಬೆಲೆ ಯೋಜನೆಯಡಿ Price Support Scheme (PSS) ಖರೀದಿಗೆ ಕೇಂದ್ರ ಸರ್ಕಾರದ ಕೃಷಿ ಸಚಿವಾಲಯ ಅನುಮತಿ ನೀಡಿದೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದಲ್ಲಿ ಕಡಲೆ ಬೆಳೆದ ರೈತರ ಪರಿಸ್ಥಿತಿ ಅರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ರೈತರ ಹಿತ ದೃಷ್ಟಿಯಿಂದ ರೈತಪರ ನಿರ್ಣಯ ತೆಗೆದುಕೊಂಡಿದೆ ಎಂದು ತಿಳಿಸಿದ್ಫ್ದಾರೆ.ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ msp ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಂಡಿದ್ದು ರಾಜ್ಯ ಸರ್ಕಾರ ತನ್ನ ಪ್ರಸ್ತಾವನೆಯಲ್ಲಿ ನಮೂದಿಸಿದಂತೆ 96,498 ಮೆಟ್ರಿಕ್ ಟನ್ ಗುಣಮಟ್ಟದ ಕಡಲೆ ಕಾಳನ್ನು ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದವರು ತಿಳಿಸಿದ್ದಾರೆ.ಈಗ ಜಿಲ್ಲಾವಾರು 90 ದಿನದೊಳಗಾಗಿ‌ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ರೈತರಿಂದ ಖರೀದಿ ಮಾಡಿ, ರೈತರ...
ಮೈಸೂರು: ಕಾಲೇಜು ಕಟ್ಟಡ ದುರಸ್ತಿ ವೇಳೆ ಅವಘಡ; ಕಾರ್ಮಿಕ ಸಾವು

ಮೈಸೂರು: ಕಾಲೇಜು ಕಟ್ಟಡ ದುರಸ್ತಿ ವೇಳೆ ಅವಘಡ; ಕಾರ್ಮಿಕ ಸಾವು

Focus, ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಘೋರ ಅನಾಹುತ ಸಂಭವಿಸಿದೆ. ಕಾಲೇಜಿನ ಕಟ್ಟಡದ ಮೇಲ್ಛಾವಣಿ ಕುಸಿದು ಸಂಭವಿಸಿದ ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.ಮೃತನನ್ನು 32 ವರ್ಷದ ಕಾರ್ಮಿಕ, ಮೊಹಮ್ಮದ್ ಸದ್ದಾಂ ಎಂದು ಗುರ್ತಿಸಲಾಗಿದೆ. ಈತ ಮೈಸೂರಿನ ಗೌಸಿಯಾ ನಗರದ ನಿವಾಸಿ ಎನ್ನಲಾಗಿದೆ. ಸುಮಾರು 80 ವರ್ಷಗಳ ಹಳೆಯ ಕಟ್ಟಡದ ದುರಸ್ಥಿ ಕಾರ್ಯ ನಡೆಯುತ್ತಿರುವಾಗ ಮಂಗಳವಾರ ಸಂಜೆ ಕಟ್ಟಡದ ಮೇಲ್ಛಾವಣಿ ಕುಸಿದಿದೆ. ಆ ಸಂದರ್ಭದಲ್ಲಿ ಕಟ್ಟಡದಲ್ಲಿ 15 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನನ್ನ ರಕ್ಷಿಸಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸುದೀರ್ಘ ಕಾರ್ಯಾಚರಣೆ ನಡೆಸಿದ್ದರು....
ಮಹಾಕುಂಭಮೇಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ; ಮಲ್ಲಿಕಾರ್ಜುನ ಖರ್ಗೆ ವಿರುದ್ದ ಕೇಸ್

ಮಹಾಕುಂಭಮೇಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ; ಮಲ್ಲಿಕಾರ್ಜುನ ಖರ್ಗೆ ವಿರುದ್ದ ಕೇಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಪಾಟ್ನಾ: ಮಹಾಕುಂಭದ ಕುರಿತು ವಿವಾದಾತ್ಮಕ ಹೇಳಿಜೆ ನೀಡಿರುವ ಆರೋಪ ಕುರಿತಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಪ್ರಕರಣ ದಾಖಲಾಗಿದೆ. ಬಿಹಾರದ ಮುಜಾಫರ್‌ಪುರ ಜಿಲ್ಲಾ ನ್ಯಾಯಾಲಯದ ವಕೀಲ ಸುಧೀರ್ ಕುಮಾರ್ ಓಜಾ ಅವರು ದೂರು ದಾಖಲಿಸಿದ್ದಾರೆ.ಖರ್ಗೆ ಅವರು ಉದ್ದೇಶಪೂರ್ವಕವಾಗಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಮಧ್ಯಪ್ರದೇಶದ ಮ್ಹೋ ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಖರ್ಗೆ ಅವರು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ದೂರು ನೀಡಲಾಗಿದೆ. ಇದು ಸನಾತನ ಧರ್ಮವನ್ನು ಅವಮಾನಿಸುವ ಉದ್ದೇಶವನ್ನು ಹೊಂದಿದೆ ಮತ್ತು ಗಂಗಾ ಮೈಯಾ (ಗಂಗಾ ನದಿ) ಮತ್ತು ಕುಂಭಮೇಳದ ಭಕ್ತರನ್ನು ಅಪರಾಧ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಓಜಾ ಆರೋಪಿಸಿದ್ದಾರೆ.“ಪವಿತ್ರ ಗಂಗೆಯನ್ನು ಪೂಜಿಸುವ ಮತ್ತು ಕುಂಭದಲ್ಲಿ ಭಾಗವಹಿಸುವ ಹಿಂದೂಗಳ ಭಾವನೆಗಳಿಗೆ ಅವರು ನೋವುಂಟು ಮಾಡಿದ್ದಾರೆ. ಅವರ ಹೇಳಿಕೆಯನ್ನು ಸಾರ್ವಜನಿಕವಾಗಿ ರಾಜಕೀಯ ಗಮನ ಸೆಳೆಯಲು ಮತ್ತು ಅವರ ಪಕ್ಷಕ್ಕೆ ಲಾಭ ಪಡೆಯಲು ಮಾ...
MCC ಹಗರಣ ತನಿಖೆಗೆ ರೋಚಕ ತಿರುವು; 33 ಬ್ಯಾಂಕ್ ಸದಸ್ಯರ ದೂರಿನ ಹಿನ್ನೆಲೆ ತನಿಖೆ ಪ್ರಕ್ರಿಯೆಗೆ ಸರ್ಕಾರದ ಮುನ್ನುಡಿ!

MCC ಹಗರಣ ತನಿಖೆಗೆ ರೋಚಕ ತಿರುವು; 33 ಬ್ಯಾಂಕ್ ಸದಸ್ಯರ ದೂರಿನ ಹಿನ್ನೆಲೆ ತನಿಖೆ ಪ್ರಕ್ರಿಯೆಗೆ ಸರ್ಕಾರದ ಮುನ್ನುಡಿ!

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಎಂಸಿಸಿ ಬ್ಯಾಂಕ್ ಹಗರಣಕ್ಕೆ ರೋಚಕ ತಿರುವು ಸಿಕ್ಕಿದೆ. ಹಲವಾರು ಅಕ್ರಮ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಹಾಗೂ ಅಕ್ರಮಗಳಿಂದ ರೋಸಿಹೋದ ಸದಸ್ಯರೊಬ್ಬರು ಸಾವಿಗೆ ಶರಣಾದ ಪ್ರಕರಣ ಹಿನ್ನೆಲೆಯಲ್ಲಿ ಎಂಸಿಸಿ ಬ್ಯಾಂಕ್ ಸೂಪರ್‌ಸೀಡ್ ಮಾಡಬೇಕೆಂಬ ಆಗ್ರಹ ಹೆಚ್ಚಾಗಿದೆ. ಈ ಕುರಿತಂತೆ ಎಂಸಿಸಿ ಬ್ಯಾಂಕಿನ ಸುಮಾರು 33 ಸದಸ್ಯರು ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಕಾರ್ಯದರ್ಶಿ ಸಹಿತ ಸರ್ಕಾರದ ಪ್ರಮುಖರಿಗೆ ದೂರು ಸಲ್ಲಿಸಿದ್ದಾರೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಎಂಸಿಸಿ ಬ್ಯಾಂಕಿನ ವಿರುದ್ದದ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸಹಕಾರ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಇಲಾಖಾ ಅಧಿಕಾರಿಗಳ ಪರಿಶೀಲನಾ ವರದಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ಹಠಾತ್ ಬೆಳವಣಿಗೆ? 'ಮಂಗಳೂರು ಕೆಥೋಲಿಕ್ ಸಹಕಾರ ಬ್ಯಾಂಕ್ (MCC Bank) ಬಹುಕೋಟಿ ರೂಪಾಯಿ ಅವ್ಯವಹಾರ ಆರೋಪ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಸಾಲ ವಸೂಲಾತಿ ನೆಪದಲ್ಲಿ ಜನ...
ಮುಡಾ ಹಗರಣ: ಜಿಟಿ ದೇವೇಗೌಡ ವಿರುದ್ಧವೂ ಲೋಕಾಯುಕ್ತಕ್ಕೆ ದೂರು

ಮುಡಾ ಹಗರಣ: ಜಿಟಿ ದೇವೇಗೌಡ ವಿರುದ್ಧವೂ ಲೋಕಾಯುಕ್ತಕ್ಕೆ ದೂರು

Focus, ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಮುಡಾ ಹಗರಣ ಆರೋಪದಲ್ಲಿ ಇದೀಗ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ವಿರುದ್ದವೂ ದೂರು ದಾಖಲಾಗಿದೆ. ಶಾಸಕ ಜಿಟಿ ದೇವೇಗೌಡ ಹಾಗೂ ಪುತ್ರ ಹರೀಶ್ ಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.ಸರ್ವೇ ನಂಬರ್ 81/2 ರಲ್ಲಿ 2.22 ಎಕರೆ ಜಮೀನಿಗೆ ಪರಿಹಾರ ನೀಡಿಲ್ಲ ಎಂದು 19 ನಿವೇಶನ ಪಡೆದಿರುವ ಬಗ್ಗೆ ಜಿ.ಟಿ.ದೇವೇಗೌಡ ಬಗ್ಗೆ ಆರೋಪ ಕೇಳಿಬಂದಿದೆ. ಶಾಸಕ ಜಿಟಿ ದೇವೇಗೌಡರಿಂದ ಅಧಿಕಾರ ದುರುಪಯೋಗವಾಗಿದೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಮಂಗಳವಾರ ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಅವರು ದೂರು ಸಲ್ಲಿಸಿದ್ದಾರೆ....
ತುಮಕೂರು: ಅಂತಸರನಹಳ್ಳಿಯ ಕಾರ್ಖಾನೆಯಲ್ಲಿ ಅವಘಡ: ಇಬ್ಬರು ಕಾರ್ಮಿಕರು ಸಾವು

ತುಮಕೂರು: ಅಂತಸರನಹಳ್ಳಿಯ ಕಾರ್ಖಾನೆಯಲ್ಲಿ ಅವಘಡ: ಇಬ್ಬರು ಕಾರ್ಮಿಕರು ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ತುಮಕೂರು: ಅಂತಸರನಹಳ್ಳಿಯಲ್ಲಿರುವ ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವಗೀಡಾಗಿದ್ದಾರೆ.ಮಂಗಳವಾರ ಸಂಜೆ 5.30ರ ಸುಮಾರಿಗೆ ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿರುವ ಕಾರ್ಖಾನಿಯಲ್ಲಿ ಈ ಘಟನೆ ಸಂಭವಿಸಿದ್ದು, ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ.ಮೃತರನ್ನು ಬಿಹಾರ ಮೂಲದ ಸಂತೋಷ್, ಹಾಗೂ ಚಂದನ್ ಶರ್ಮ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಮುಡಾ ಕೇಸ್: ಸಿಎಂ ಪತ್ನಿಗೆ ED ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ

ಮುಡಾ ಕೇಸ್: ಸಿಎಂ ಪತ್ನಿಗೆ ED ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಅಕ್ರಮ ಹಂಚಿಕೆ ಹಗರಣ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ)ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್‌ಗೆ ನೀಡಿದ್ದ ನೋಟಿಸ್​‌ಗೆ ಹೈಕೋರ್ಟ್ ತಡೆ ನೀಡಿದೆ.ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ED ನೊಟೀಸ್ ನೀಡಿತ್ತು. ಇದಕ್ಕೆ ತಡೆ ಕೋರಿ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಇಡಿ ನೀಡಿದ್ದ ಸಮನ್ಸ್‌ಗೆ ತಾತ್ಕಾಲಿಕ ತಡೆ ನೀಡಿದೆ....