Saturday, April 18

Author: info@rajasdigital.com

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ ಘೋಷಣೆ

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ ಘೋಷಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದ್ಸಾರೆ.ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ ಎಂದು ಸ್ಪಷ್ಟಪಡಿಸಿದರು.ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮ‌ಭಾಷೆಯಾಗುತ್ತದೆ ಎಂದರು.ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್...
ವಿಧಾನಸೌಧದ ಆವರಣದಲ್ಲಿ  ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಆವರಣದಲ್ಲಿ ನಿರ್ಮಿಸಲಾದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗಳಿಸಿದರು.ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್, ವಿಧಾನ ಪರಿಷತ್ ನ‌ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಶಿವಾಜಿನಗರ ವಿಧಾನಸಭಾ ಕ್ಷೇತ್ರ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು....
ಸರ್ಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್‌ನ ಮೊರೆ ಹೋದ ಜನ, ಆತ್ಮಹತ್ಯೆಗೆ ಶರಣು?

ಸರ್ಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್‌ನ ಮೊರೆ ಹೋದ ಜನ, ಆತ್ಮಹತ್ಯೆಗೆ ಶರಣು?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ. ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 60 ಕೋಟಿ ರೂ. ನೀಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದಿಂದ ಹಣ ಫ್ರೀಜ್ ಆ...
ಬಿಗ್ ಬಾಸ್ ಕನ್ನಡ ಸೀಸನ್ 11: ಪ್ರಶಸ್ತಿ ಗೆದ್ದ ಹನುಮಂತ

ಬಿಗ್ ಬಾಸ್ ಕನ್ನಡ ಸೀಸನ್ 11: ಪ್ರಶಸ್ತಿ ಗೆದ್ದ ಹನುಮಂತ

Others
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಹಳ್ಳಿ ಹೈದ ಹನುಮಂತ ವಿಜೇತರಾಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಎಂಟ್ರಿಕೊಟ್ಟಿದ್ದ ಹನುಮಂತ ಪ್ರಶಸ್ತಿ ಗೆದ್ದು ಅಚ್ಚರಿ ಮೂಡಿಸಿದೆ.ಟಾಪ್ ಐವರ ಪೈಕಿ ಉಗ್ರಂ ಮಂಜು, ರಜತ್ ಮತ್ತು ಮೋಕ್ಷಿತ ಒಬ್ಬೊಬ್ಬರಾಗಿಯೇ ಹೊರನಡೆದರು. ಅಂತಿಮವಾಗಿ ತ್ರಿವಿಕ್ರಮ್ ಮತ್ತು ಹನುಮಂತ ನಡುವೆ ಪೈಪೋಟಿ ಏರ್ಪಟ್ಟಿತ್ತು. ಕಿಚ್ಚ ಸುದೀಪ್ ಅವರು ಹನುಮಂತ ಅವರ ಗೆಲುವನ್ನು ಪ್ರಕಟಿಸುವ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರ ಕುತೂಹಲಕ್ಕೆ ತೆರೆ ಬಿದ್ದಿದೆ....
ಮಂಗಳೂರು: ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ವಿಧಿವಶ

ಮಂಗಳೂರು: ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ವಿಧಿವಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಹೊಸದಿಗಂತ ಪತ್ರಿಕೆಯ ವರದಿಗಾರ, ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ವಿಧಿವಶರಾಗಿದ್ದಾರೆ. ಕೆಲ ಸಮಯದಿಂದ ಅಸೌಖ್ಯದಿಂದ ಇದ್ದ ಅವರು ಭಾನುವಾರ ನಿಧನರಾಗಿದ್ದಾರೆ.ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದ ಅವರು, ಸುಮಾರು ಎರಡೂವರೆ ದಶಕಗಳಿಂದ ಹೊಸದಿಗಂತ ಪತ್ರಿಕೆಯ ಮಂಗಳೂರು ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ.ಕ್ರಿಯಾಶೀಲ ಬರಹಗಾರರಾಗಿದ್ದ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಹಿತ ಅನೇಕ ಪುರಸ್ಕಾರಗಳನ್ನು ಪಡೆದಿದ್ದಾರೆ‌ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಅವರು ಸೇವೆ ಸಲ್ಲಿಸಿದ್ದಾರೆ....
ತ್ರಿವರ್ಣ ಧ್ವಜ ವಂದನೆಯೊಂದಿಗೆ ಲಂಡನ್‌ನಲ್ಲಿ ಭಾರತದ ಗಣರಾಜ್ಯೋತ್ಸವ.. ಅನಿವಾಸಿ ಭಾರತೀಯರ ಸಮಾಗಮ

ತ್ರಿವರ್ಣ ಧ್ವಜ ವಂದನೆಯೊಂದಿಗೆ ಲಂಡನ್‌ನಲ್ಲಿ ಭಾರತದ ಗಣರಾಜ್ಯೋತ್ಸವ.. ಅನಿವಾಸಿ ಭಾರತೀಯರ ಸಮಾಗಮ

Others
ಲಂಡನ್: ಭಾರತದ 76 ನೇ ಗಣರಾಜ್ಯೋತ್ಸವವವನ್ನು ಬ್ರಿಟಿಷ್ ನೆಲದಲ್ಲಿ ವಿಶಿಷ್ಠವಾಗಿ ಆಚರಿಸಲಾಯಿತು. ಲಂಡನ್‌ನ ಹೃದಯಭಾಗದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಲಂಡನ್‌ನ ಐಕಾನಿಕ್ ಟೌನ್ ಹಾಲ್‌ನಲ್ಲಿ ಈ ಕಾರ್ಯಕ್ರಮ ಗಮನಸೆಳೆಯಿತು, ಲಂಡನ್‌ನ ಮಾಜಿ ಮೇಯರ್ ಡಾ. ನೀರಜ್ ಪಾಟೀಲ್ ಅವರು ಈ ಸಂಭ್ರಮಾಚರಣೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಾರ್ಯಕ್ರಮವನ್ನು ಆಯೋಜಿಸಿಸಿದ ಕೋವೆಂಟ್ರಿ ಲೇಬರ್ ಪಾರ್ಟಿಯ ಪ್ರಯತ್ನವನ್ನು ಅವರು ಶ್ಲಾಘಿಸಿದ್ದಾರೆ. ಟೌನ್ ಹಾಲ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲು ಕೋವೆಂಟ್ರಿ ಲೇಬರ್ ಪಾರ್ಟಿಯ ಪ್ರಯತ್ನಕ್ಕಾಗಿ ನಾವು ಶ್ಲಾಘಿಸುತ್ತೇವೆ ಎಂದು ಪಾಟೀಲ್ ಹೇಳಿದರು.ಈ ಕಾರ್ಯಮವು ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ಸಂಬಂಧವನ್ನು ಬಲಗೊಳಿಸಿದೆ ಎಂದು ಡಾ.ನೀರಜ್ ಪಾಟೀಲ್ ಬಣ್ಣಿಸಿದ್ದಾರೆ. ಎರಡೂ ರಾಷ್ಟ್ರಗಳನ್ನು ಬಂಧಿಸುವ ಬಲವಾದ ಸಾಂಸ್ಕೃತಿಕ ಸಂಬಂಧವನ್ನು ಅವರು ಒತ್ತಿ ಹೇಳಿದರು. "ದೇವರು ಗ್ರೇಟ್ ಬ್ರಿಟನ್ ಮತ್ತು ಭಾರತವನ್ನು ಆಶೀರ್ವದಿಸಲಿ", ಎರಡು ರಾಷ್ಟ್ರಗಳ ನಡುವಿನ ಸಮೃದ್ಧ ಭವಿಷ್ಯದ ಹಂಚಿಕೆಯ ಭರವಸೆಯನ್ನು ಪ್...
ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಮಲ್ಲಿಕಾರ್ಜುನ ಖರ್ಗೆ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, 76ನೇ ಗಣರಾಜ್ಯೋತ್ಸವ ಬಹಳ ಮಹತ್ವದ್ದಾಗಿದೆ. ಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ ಈಗಿರುವ ಕೇಂದ್ರ ಸರ್ಕಾರ ಸಂವಿಧಾನದ ಎಲ್ಲಾ ಮೌಲ್ಯಗಳನ್ನು ಮೂಲೆಗುಂಪು ಮಾಡುತ್ತಿದೆ. ಇದರಿಂದ ನಾಗರೀಕರಿಗೆ ಸಿಗಬೇಕಾದ ಮೂಲಭೂತ ಹಕ್ಕುಗಳು, ಅದರಲ್ಲೂ ಮಹಿಳೆಯರಿಗೆ ವಿಶೇಷವಾಗಿ ಸಿಗುವ ಸ್ವಾತಂತ್ರ್ಯ ಮೊಟಕುಗೊಳಿಸಲಾಗುತ್ತಿದೆ ಎಂದರು.ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ಸಿಕ್ಕ ನಂತರ ನಮಗೆ ವಿಶೇಷವಾದ ಸ್ಥಾನಮಾನ ಸಿಕ್ಕಿದೆ. ಇದು ಅನೇಕರಿಗೆ ಗೊತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ಹೋಗಿ ಮತ ಕೇಳಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಕೊಡುಗೆ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಪಂಡಿತ್ ಜವಹಾರ್ ಲಾಲ್ ನೆಹರು ...
ಗಣರಾಜ್ಯೋತ್ಸವ: ಆರೆಸ್ಸೆಸ್ ಸರಸಂಘಚಾಲಕ್ ಮೋಹನ್ ಭಾಗವತ್ ಧ್ವಜಾರೋಹಣ

ಗಣರಾಜ್ಯೋತ್ಸವ: ಆರೆಸ್ಸೆಸ್ ಸರಸಂಘಚಾಲಕ್ ಮೋಹನ್ ಭಾಗವತ್ ಧ್ವಜಾರೋಹಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮುಂಬಯಿ: ದೇಶಾದ್ಯಂತ ಗಣರಾಜ್ಯೋತ್ಸವವನ್ನು ರಾಷ್ಟ್ರಭಕ್ತಿಯ ಪ್ರತೀಕವಾಗಿ ಆಚರಿಸಲಾಗುತ್ತಿದೆ. ಮಹಾರಾಷ್ಟ್ರದ ಭಿವಂಡಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಡಾ.ಭಾಗವತ್ ಭಾಗವಹಿಸಿದರು.ಭಿವಂಡಿಯಲ್ಲಿರುವ ಪದ್ಮಶ್ರೀ ಅಣ್ಣಾಸಾಹೇಬ್ ಜಾಧವ್ ವಿದ್ಯಾಲಯದಲ್ಲಿ ಆರ್‌ಎಸ್‌ಎಸ್ ಸಾರಸಂಘಚಾಲಕ್ ಡಾ.ಮೋಹನ್ ಭಾಗವತ್ ಅವರು ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು.ವಿವಿಧ ಸಂಘಟನೆಗಳ ಪ್ರಮುಖರು, ಶಿಕ್ಷಣ ತಜ್ಞರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು....
ಗಣರಾಜ್ಯೋತ್ಸವ: ಕೆಪಿಸಿಸಿ ಸಮಾರಂಭದಲ್ಲಿ ಖರ್ಗೆ ಭಾಗಿ

ಗಣರಾಜ್ಯೋತ್ಸವ: ಕೆಪಿಸಿಸಿ ಸಮಾರಂಭದಲ್ಲಿ ಖರ್ಗೆ ಭಾಗಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು.ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಆದ ಡಿಸಿಎಂ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು....
ರಾಷ್ಟ್ರ ರಾಜಧಾನಿಯಲ್ಲಿ ಕುತೂಹಲದ ಕೇಂದ್ರಬಿಂದುವಾದ ಕರುನಾಡಿನ ‘ಲಕ್ಕುಂಡಿ ವೈಭವ’

ರಾಷ್ಟ್ರ ರಾಜಧಾನಿಯಲ್ಲಿ ಕುತೂಹಲದ ಕೇಂದ್ರಬಿಂದುವಾದ ಕರುನಾಡಿನ ‘ಲಕ್ಕುಂಡಿ ವೈಭವ’

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ವೈವಿಧ್ಯ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕದ ಲಕ್ಕುಂಡಿ ದೇಗುಲದ ಸ್ಥಬ್ದಚಿತ್ರ ಗಮನಸೆಳೆಯಿತು. ಕರ್ತವ್ಯಪಥದಲ್ಲಿ ವಿವಿಧ ರಾಜ್ಯಗಳ ಸ್ಥಬ್ದ ಚಿತ್ರಗಳ ನಡುವೆ ಕರ್ನಾಟಕದ ಈ ಟ್ಯಾಬ್ಲೋ ಎಲ್ಲರ ಕುತೂಹಲದ ಕೇಂದ್ರಬಿಂದುವಾಯಿತು.#RepublicDay🇮🇳: Karnataka’s tableau showcased during the 76th #RepublicDay Parade on Kartavya Path, in Delhi The tableau celebrates the historic town of Lakkundi, located in the Gadag district, often referred to as the "Cradle of Stone Craft."(Source: DD News) pic.twitter.com/dNoVtRuS16— ANI (@ANI) January 26, 2025...