
ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ : ಪಾರದರ್ಶಕವಾಗಿರಬೇಕು, ಅರ್ಹರಿಗೆ ಅವಕಾಶ ಸಿಗಬೇಕು..
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ಮತ್ತೊಂದು ಬಾರಿ ಡಿಸೆಂಬರ್ 29 ರಂದು ನಡೆದಿದೆ. ಇದರಲ್ಲಿ ಮತ್ತೊಮ್ಮೆ ಲೋಪದೋಷಗಳು ಕಂಡು ಬಂದಿದ್ದರಿಂದ ವಿಚಲಿತರಾಗಿರುವ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಮರುಪರೀಕ್ಷೆಯಲ್ಲಿ ಕಂಡು ಬಂದ ಲೋಪದೋಷಗಳ ಬಗ್ಗೆ ಅಭ್ಯರ್ಥಿಗಳು ಪದೇ ಪದೆ ಅಳಲು ತೋಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೂ ಸಹ ಈ ಕುರಿತು ವರದಿ ಮಾಡಿವೆ. ಆದರೆ ಮರುಪರೀಕ್ಷೆ ನಡೆದು ಹದಿನೈದು ದಿನ ಕಳೆದರೂ ಈವರೆಗೆ ಸರ್ಕಾರವಾಗಲೀ, ಆಯೋಗವಾಗಲೀ, ಅಭ್ಯರ್ಥಿಗಳ ಆಕ್ಷೇಪಣೆಗಳಿಗೆ ಉತ್ತರ ನೀಡಿಲ್ಲ. ಲ...









