Tuesday, April 21

Author: info@rajasdigital.com

‘ಮಹಾ ಕುಂಭಮೇಳ’ದಲ್ಲಿ ಸನಾತನ ಬಗ್ಗೆ ಕೆಣಕಿದ ಯೂಟ್ಯೂಬರ್’ಗೆ ನಾಗಾಸಾಧು ಧರ್ಮದೇಟು

‘ಮಹಾ ಕುಂಭಮೇಳ’ದಲ್ಲಿ ಸನಾತನ ಬಗ್ಗೆ ಕೆಣಕಿದ ಯೂಟ್ಯೂಬರ್’ಗೆ ನಾಗಾಸಾಧು ಧರ್ಮದೇಟು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಪ್ರಯಾಗರಾಜ್: ಉತ್ತರಪ್ರದೇಶದ ಪ್ರಯಾಗರಾಜ್'ನಲ್ಲಿ ನಡೆಯುತ್ತಿರುವ ಶತಮಾನದ ವೈಭವದ ಮಹಾಕುಂಭಮೇಳ ಜಗತ್ತಿನ ಗಮನಸೆಳೆದಿದೆ. ಹಿಂದೂ ಧರ್ಮದ ಅತ್ಯಂತ ದೊಡ್ಡ ಹಾಗೂ ಅತ್ಯಂತ ಪವಿತ್ರ ಉತ್ಸವಗಳಲ್ಲಿ ಈ ಮಹಾ ಕುಂಭಮೇಳ ಒಂದಾಗಿದೆ. ಕೋಟ್ಯಂತರ ಆಸ್ತಿಕರ ಸಮಾಗಮಕ್ಕೆ ಸಾಕ್ಷಿಯಾಗುತ್ತಿರುವ ಈ ಮಹಾಕುಂಭ ಮೇಳದಲ್ಲಿ ಲಕ್ಷಾಂತರ ನಾಗ ಸಾಧುಗಳು, ಸಾಧು ಸಂತರುಗಳು ಜಮಾಯಿಸಿದ್ದಾರೆ.महाकुंभ में कवरेज करने आये युट्यूबरो को मुश्किलें ज्यादा होगी!अपने चैनल के रीच को बढ़ाने के चक्कर मे फालतू सवाल पूछेगे बाबा जी लोग चिमटे से ठोक पीट कर सही कर देंगे।🤣 pic.twitter.com/vk4WsJMRcB — Suresh Singh (@sureshsinghj) January 12, 2025  ಈ ನಡುವೆ ಯೂಟ್ಯೂಬರ್ ಒಬ್ಬ ಧ್ಯಾನಾಸಕ್ತ ಸಾಧುಸಂತರನ್ನು ಕೆಣಕಲು ಹೋಗಿ ಧರ್ಮದೇಟು ತಿಂದಿದ್ದಾನೆ. ಮಹಾಕುಂಭದಲ್ಲಿ ಭಾಗಿಯಾಗಿದ್ದ ನಾಗಾ ಸಾಧುವೊಬ್ಬರ ಸಂದರ್ಶನ ನಡೆಸಿದ ಯೂಟ್ಯೂಬರ್ ಸನಾತನ ಸಂಪ್ರದಾಯದ ಬಗ್ಗೆ ಅಸಂಬದ್ಧ ಪ್ರಶ್ನೆ ಕೇಳಿದ್ದಾನೆ. ಇದರಿಂದ ಕುಪಿತರಾದ ನಾಗಾಸಾಧು ಆ ಯೂಟ್ಯೂಬರನ್ನು ಹೊಡೆದು ಸಿಟ್ಟು ತೋರಿಸಿಕೊ...
ಹಸುವಿನ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಹಸುವಿನ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣದ ಸೂಕ್ತ ತನಿಖೆಗಾಗಿ ಆಗ್ರಹಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಿದೆ. ಈ ಘಟನೆಯಿಂದ ಹಿಂದೂಗಳನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದು, ರಕ್ತ ಸುರಿಯುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆದರೆ ಇದು ಒಬ್ಬರೇ ಮಾಡಿದ ಕೃತ್ಯವಲ್ಲ. ಇದರಲ್ಲಿ ಹಲವರು ಭಾಗಿಯಾಗಿದ್ದಾರೆ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ಮಾಡಬೇಕಿತ್ತು. ಈಗ ಸಂಕ್ರಾಂತಿ ಹಬ್ಬ ನಡೆಯುತ್ತಿದೆ. ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ಇಂತಹ ಸಮಯದಲ್ಲೇ ಈ ಕೃತ್ಯ ಮಾಡುವುದರ ಜೊತೆಗೆ ಹಸು ಮಾಲೀಕ ಕರ್ಣ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹಸುವನ್ನು ಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ದೂರಿದರು.1 ಲಕ್ಷ ರೂ. ಪರಿಹಾರವನ್ನು ಹಸು ಮಾಲೀಕ ಕರ್ಣ ಅವರಿಗೆ ಬಿಜೆಪಿ ವತಿಯಿಂದ ನೀಡಲಾಗಿದೆ. ಹಿಂದೂಗಳು ಬೇಡುವ ಸ್ಥಿತಿಯಲ್ಲಿಲ್ಲ. ಕಾಂಗ್ರೆಸ್‌ನವರು ಒಂದು ಕೈಯಲ್ಲಿ ಹಸುವನ್ನು ನೀಡುತ್ತಾರೆ. ಮತ್ತೊಂ...
ಹಸುವಿನ ಕೆಚ್ಚಲು ಕೊಯ್ದ ಘಟನೆ; ಹಸು ಮಾಲೀಕರಿಗೆ ಬಿಜೆಪಿಯಿಂದ ಪರಿಹಾರ

ಹಸುವಿನ ಕೆಚ್ಚಲು ಕೊಯ್ದ ಘಟನೆ; ಹಸು ಮಾಲೀಕರಿಗೆ ಬಿಜೆಪಿಯಿಂದ ಪರಿಹಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ. ಸಂತ್ರಸ್ತರ ಗೋಳನ್ನು ಸರ್ಕಾರ ಕೇಳಲಿಲ್ಲ ಎಂದು ಆರೋಪಿಸಿರುವ ಬಿಜೆಪಿ ನಾಯಕರು ತಾವೇ ಹಸುಮಾಲೀಕರಿಗೆ ಪರಿಹಾರ ನೀಡಿ ಮಾನವೀಯತೆ ಮೆರೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಸಂತ್ರಸ್ತರನ್ನು ಭೇಟಿಮಾಡಿ 1 ಲಕ್ಷ ರೂ. ಪರಿಹಾರವನ್ನು ನೀಡಿದ್ದಾರೆ.ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಮತ್ತು ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ, ಗೋ ಪೂಜೆ ನೆರವೇರಿಸಿ ಪಕ್ಷದ ವತಿಯಿಂದ ಗೋವನ್ನು ಸಂತ್ರಸ್ತರಿಗೆ ನೀಡಿದರು.ಈ… pic.twitter.com/1ibb9aSlrf — BJP Karnataka (@BJP4Karnataka) January 14, 2025...
ಡಾಲಿ ಧನಂಜಯ್, ನಾಗಭೂಷಣ್ ಕಾಂಬಿನೇಷನ್​ನ ‘ವಿದ್ಯಾಪತಿ’ ಬಿಡುಗಡೆಗೆ ಡೇಟ್ ಫಿಕ್ಸ್

ಡಾಲಿ ಧನಂಜಯ್, ನಾಗಭೂಷಣ್ ಕಾಂಬಿನೇಷನ್​ನ ‘ವಿದ್ಯಾಪತಿ’ ಬಿಡುಗಡೆಗೆ ಡೇಟ್ ಫಿಕ್ಸ್

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಡಾಲಿ ಧನಂಜಯ್ ಮತ್ತು ನಾಗಭೂಷಣ್ ಕಾಂಬಿನೇಷನ್​ನ ಸಿನಿಮಾ ‘ವಿದ್ಯಾಪತಿ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಡಾಲಿ ಧನಂಜಯ್ ನಿರ್ಮಾಣ ಮಾಡಿರುವ, ನಾಗಭೂಷಣ್ ನಟಿಸಿರುವ ‘ವಿದ್ಯಾಪತಿ’ ಮುಂಬರುವ ಏಪ್ರಿಲ್ ೧೦ರಂದು ಬಿಡುಗಡೆಯಾಗಲಿದೆ. ಈ ಕುರಿತಂತೆ ಡಾಲಿ ಪಿಕ್ಚರ್ಸ್ ತಂಡ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. View this post on Instagram  A post shared by Daali Pictures (@daalipictures)...
ನಾಡಿನಾದ್ಯಂತ ಮಕರ ಸಂಕ್ರಾಂತಿ ವೈಭವ; ದೇವಕಾಲಯಗಳಲ್ಲಿ ವಿಶೇಷ ಕೈಂಕರ್ಯ

ನಾಡಿನಾದ್ಯಂತ ಮಕರ ಸಂಕ್ರಾಂತಿ ವೈಭವ; ದೇವಕಾಲಯಗಳಲ್ಲಿ ವಿಶೇಷ ಕೈಂಕರ್ಯ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಉತ್ತರಾಯಣ ಪರ್ವಕಾಲವನ್ನು ಸ್ವಾಗತಿಸುವ ಕೈಂಕರ್ಯ ಎಲ್ಲೆಡೆ ಸಾಗಿದೆ. ಎಲ್ಲೆಲ್ಲೂ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಅದರಲ್ಲೂ ಅಯ್ಯಪ್ಪ ದೇಗುಲಗಳಲ್ಲಿ ಮಕರ ಸಂಕ್ರಾಂತಿಯನ್ನು ವಿಶೇಷ ವೈಭವ ರೀತಿಯಲ್ಲಿ ಅಕ್ಕಿಗರಿಸಲಾಗುತ್ತಿದೆ.ಬೆಂಗಳೂರಿನ ಗವಿಪುರದಲ್ಲಿರುವ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿದ್ದು ಇಂದು ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಅಭೀಷೇಕ, ನೆರವೇರಿದ್ದು, ದೇಗುಲಗಳು ಭಕ್ತಸಮೂಹದಿಂದ ತುಂಬಿವೆ....
ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಸಚಿವೆ ಮತ್ತು ಸಹೋದರ ಆಸ್ಪತ್ರೆಗೆ ದಾಖಲು

ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಸಚಿವೆ ಮತ್ತು ಸಹೋದರ ಆಸ್ಪತ್ರೆಗೆ ದಾಖಲು

Focus, ಪ್ರಮುಖ ಸುದ್ದಿ, ರಾಜ್ಯ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಸಚಿವೆ ಹಾಗೂ ಅವರ ಸಹೋದರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದೆ.ಸಿಎಲ್ ಪಿ ಸಭೆ ಮುಗಿಸಿ ಸೋಮವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ಅಂಬಡಗಟ್ಟಿ ಗ್ರಾಮದ ಬಳಿ ಅವರಿದ್ದ ಕಾರಿಗೆ ನಾಯಿ ಅಡ್ಡಬಂದಿದೆ. ಅದನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಂಭವಿಸಿದ ಈ ಅಪಘಾತದಲ್ಲಿ ಕಾರಿನಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದು, ಅವರು ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ಕಾಂಗ್ರೆಸ್ ತೀರ್ಮಾನ

ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ಕಾಂಗ್ರೆಸ್ ತೀರ್ಮಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ, ಈ ತಿಂಗಳ 21ರಂದು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಇದರ ಜತೆಗೆ ಕೆಪಿಸಿಸಿ ಅಧ್ಯಕ್ಷರು, ಸಿಎಂ ಸೇರಿ ಚರ್ಚೆ ಮಾಡಿ ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ತೀರ್ಮಾನಿಸಿದ್ದಾರೆ. ಮುಂದಿನ ತಿಂಗಳು ಫೆಬ್ರವರಿ ತಿಂಗಳಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಒಟ್ಟಿಗೆ ಈ ಎಲ್ಲಾ ಕಚೇರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.ಈಗಾಗಲೇ 74 ಕಚೇರಿಗಳ ನಿರ್ಮಾಣದ ಜಾಗ ಗುರುತಿಸಲಾಗಿದ್ದು, ಉಳಿದ ಕಚೇರಿಗಳ ನಿರ್ಮಾಣದ ಬಗ್ಗೆ ಪಕ್ಷ ಶೀಘ್ರ ತೀರ್ಮಾನ ಮಾಡಲಿದೆ ಎಂದವರು ವಿವರಿಸಿದರು. ಇನ್ನು ಈ ವರ್ಷ ಪಕ್ಷದ ಸಂಘಟನೆಗೆ ಆದ್ಯತೆ ನೀಡಲಾಗಿದ್ದು, ಪಂಚಾಯ್ತಿ ಹಾಗೂ ವಾರ್ಡ್ ಮಟ್ಟದ ಸಮಿತಿಗಳನ್ನು ರಚಿಸಲು ಗಮನ ಹರಿಸಲಾಗುವುದ...
ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ. ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು.ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆ...
ಶ್ರೀನಗರ: 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗ ಪ್ರಧಾನಿ ಲೋಕಾರ್ಪಣೆ

ಶ್ರೀನಗರ: 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗ ಪ್ರಧಾನಿ ಲೋಕಾರ್ಪಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್‌ನಲ್ಲಿ 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗʼವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು.ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಜಿತೇಂದ್ರ ಸಿಂಗ್, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಇಂದು ಉದ್ಘಾಟಿಸಿದರು.#WATCH | Jammu & Kashmir: Prime Minister Narendra Modi inaugurates the Z-Morh tunnel in Sonamarg today.CM Omar Abdullah and LG Manoj Sinha, Union Minister Nitin Gadkari are also present.(Source: DD/ANI)#KashmirOnTheRise pic.twitter.com/GF7rwZaVn1 — ANI (@ANI) January 13, 2025ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿ ಈ ಸುರಂಗ ಮಾರ್ಗವು ಹಿಮಕುಸಿತ, ಭೂಕುಸಿತದಂತಹ ಎಲ್ಲ ರೀತಿಯ ಹವಾಮಾನ ವೈಪರೀತ್ಯದ ಸಂದರ್ಭದಲ್ಲಿಯೂ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ....
ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ ಎಂದ ಡಿಕೆಶಿ

ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ ಎಂದ ಡಿಕೆಶಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕ್ರ.ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ವಿಚಾರವನ್ನು ನಾವು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದು, ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು ತಿಳಿಸಿದರು.ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಉಸ್ತುವಾರಿಗಳು ನೋಡಿಕೊಳ್ಳುತ್ತಾರೆ ಎಂದು ಡಿಕೆಶಿ ತಿಳಿಸಿದರು.ಸಚಿವರ ಕಾರ್ಯಗಳ ಬಗ್ಗೆ ವರದಿ ಸಲ್ಲಿಕೆ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ಸಚಿವರ ಕಾರ್ಯಗಳ ವಿಚಾರವಾಗಿ ಮುಖ್ಯಮಂತ್ರಿಗಳು ಹೈಕಮಾಂಡ್ ಗೆ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಎಐಸಿಸಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು....