Wednesday, April 29

Author: info@rajasdigital.com

‘ನಿಮ್ಮ ಸರ್ಕಾರದ ಅವಧಿಯಲ್ಲಿ ನೋಟೀಸ್ ಕೊಟ್ಟಾಗ ಇವರೆಲ್ಲಾ ಬೆಟ್ಟು ಚೀಪುತ್ತಿದ್ದರಾ?’; ಬಿಜೆಪಿ ನಾಯಕರ ‘ಲ್ಯಾಂಡ್ ಜಿಹಾದ್’ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಎದಿರೇಟು

‘ನಿಮ್ಮ ಸರ್ಕಾರದ ಅವಧಿಯಲ್ಲಿ ನೋಟೀಸ್ ಕೊಟ್ಟಾಗ ಇವರೆಲ್ಲಾ ಬೆಟ್ಟು ಚೀಪುತ್ತಿದ್ದರಾ?’; ಬಿಜೆಪಿ ನಾಯಕರ ‘ಲ್ಯಾಂಡ್ ಜಿಹಾದ್’ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಎದಿರೇಟು

Others
ಬೆಂಗಳೂರು: ಹಾವೇರಿ ರೈತನ ಹೆಸರಲ್ಲೂ ಬಿಜೆಪಿಯವರು ಈಗ ರಾಜಕೀಯ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ವಕ್ಫ್ ವಿವಾದ ಕುರಿತಂತೆ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳ ಬಗ್ಗೆ ಬೆಂಗಳೂರಿನಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಿಯಾಂಕ್ ಖರ್ಗೆ, ಲ್ಯಾಂಡ್ ಜಿಹಾದ್ ಎಂದು ಹೇಳುತ್ತಿದ್ದಾರಲ್ಲ. ಅವರು ಈಗಲೇ ಯಾಕೆ ಮಾತನಾಡುತ್ತಿದ್ದಾರೆ? ನಿಮ್ಮ ಸರ್ಕಾರದ ಅವಧಿಯಲ್ಲಿ ನೋಟೀಸ್ ಕೊಟ್ಟಾಗ ಇವರೆಲ್ಲಾ ಬೆಟ್ಟು ಚೀಪುತ್ತಿದ್ದರಾ? ಶಶಿಕಲಾ ಜೊಲ್ಲೆ ಅವರ 2021ರಲ್ಲಿ ನೀಡಿರುವ ಹೇಳಿಕೆಯಲ್ಲಿ, 'ಅನ್ವರ್ ಮಾನ್ಪಡಿ ವರದಿ ನೀಡಿದ್ದು, ವರದಿ ನೀಡಿ 9 ವರ್ಷವಾಗಿದ್ದರೂ ಯಾವುದೇ ಕ್ರಮವಾಗಿಲ್ಲ. ಅದಕ್ಕೆ ಅಂದಿನ ಸಿಎಂ ಯಡಿಯೂರಪ್ಪ ಅವರು ಹಾಗೂ ಅವರ ಕುಟುಂಬದವರು ಕಾಂಗ್ರೆಸ್ ನಾಯಕರೊಂದಿಗೆ ಶಾಮೀಲಾಗಿರುವುದೇ ಕಾರಣ ಎಂದು ಅನ್ವರ್ ಮಾನ್ಪಡೆ ಅವರು ಆರೋಪ ಮಾಡಿದ್ದಾರೆ' ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಕುಟುಂಬ ಎಂದರೆ ಯಾರು, ಬಿಜ...
‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

‘ತೇಜಸ್ವಿ ಸೂರ್ಯ ಅವರು ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಾವೇರಿಯಲ್ಲಿ ರೈತ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು ಉಪಸ್ಥಿತಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಹಾವೇರಿಯ ರೈತನ ಆಸ್ತಿಯಲ್ಲಿ ವಕ್ಫ್ ಉಲ್ಲೇಖವಾಗಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸಂಸದರು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಾರೆ. ನಂತರ ಸರ್ಕಾರ ಸ್ಪಷ್ಟನೆ ನೀಡಿದ ನಂತರ ಅದನ್ನು ಡಿಲೀಟ್ ಮಾಡುತ್ತಾರೆ. ನಂತರ ಅವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ, ಇದರಿಂದ ಸಮಾಜದಲ್ಲಿ ಘರ್ಷಣೆಗೆ ಪ್ರೇರಣೆಯಾಗಲಿದೆ ಎಂದು ದೂರು ನೀಡುತ್ತಾರೆ. ಈ ದೂರಿನನ್ವಯ ಪೊಲೀಸರು ತೇಜಸ್ವಿ ಸೂರ್ಯನ ಮೇಲೆ ಎಫ್ಐಆರ್ ದಾಖಲಿಸುತ್ತಾರೆ ಎಂದು ಪ್ರಕರಣದ ಹಿನ್ನೆಲೆಯನ್ನು ವಿವರಿಸಿದರು.ಇದಕ್ಕೆ ಹೆದರಿಕೊಂಡ ಆ ಪುಟ್ಟ, 'ಪ್ರಿಯಾಂಕ್ ಖರ್ಗೆಗೆ ಕೆಲಸ ಇಲ್ಲ, ಎಫ್ಐಆರ್ ಹಾಕಿಸುವುದೇ ಕೆಲಸ” ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಾನೆ. ನಾನು ಇದು...
ಕನಕಪುರದಲ್ಲಿ ಶಾಲೆಗಳಿಗೆ 25 ಎಕರೆ ಜಾಗ ದಾನ ಮಾಡಿದ್ದೇನೆ, ದೇವೇಗೌಡರ ಕುಟುಂಬದವರು ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ?: ಡಿಕೆಶಿ

ಕನಕಪುರದಲ್ಲಿ ಶಾಲೆಗಳಿಗೆ 25 ಎಕರೆ ಜಾಗ ದಾನ ಮಾಡಿದ್ದೇನೆ, ದೇವೇಗೌಡರ ಕುಟುಂಬದವರು ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ?: ಡಿಕೆಶಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಮನಗರ: “ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ನಾವು ಕನಕಪುರದ ಮೂರು ಕಡೆಗಳಲ್ಲಿ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಪರವಾಗಿ ಶುಕ್ರವಾರ ಚಕ್ಕೆರೆ, ಹೊನ್ನನಾಯಕನಹಳ್ಳಿ ಮತ್ತಿತರ ಚುನಾವಣೆ ಪ್ರಚಾರ ಸಭೆ ನಡೆಸಿದ ಡಿಕೆಶಿ, ದೇವೇಗೌಡರ ಹೇಳಿಕೆ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ದೇವೇಗೌಡರು ಗುರುವಾರ ಭಾಷಣ ಮಾಡುತ್ತಾ, “ಒಂದು ಶಾಲೆ ಮಾಡಲು ಜಾಗ ಕೇಳಿದರೆ ಡಿ.ಕೆ. ಶಿವಕುಮಾರ್ ದುಡ್ಡು, ದುಡ್ಡು ಅಂತಾರೆ” ಎಂದು ಮಾಡಿದ್ದ ಟೀಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, “ದೇವೇಗೌಡರು ನಿನ್ನೆ ಚುನಾವಣೆ ಪ್ರಚಾರ ಮಾಡುತ್ತಾ ಡಿ.ಕೆ. ಸಹೋದರರು ಜಮೀನು ಕಬ್ಜ ಮಾಡಿಕೊಂಡಿದ್ದು, ಶಾಲೆ ಕಟ್ಟಲು ಜಾಗ ನೀಡುತ್ತಿಲ್ಲ. ಜಾಗ ಕೇಳಿದರೆ ದುಡ್ಡು, ದುಡ್ಡು ಅಂತಾರೆ ಎಂದು ಆರೋಪ ಮಾಡಿರುವ ಬಗ್ಗೆ ಮಾಧ್ಯ...
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ? ಡಿಕೆಶಿ ಕೊಟ್ಟ ಉತ್ತರ ಇದು

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ? ಡಿಕೆಶಿ ಕೊಟ್ಟ ಉತ್ತರ ಇದು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ತಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ ಎಂಬ ಬಗ್ಗೆ ಈಗಿನ್ನೂ ಚರ್ಚೆ ಸಾಗಿದೆ. ಕಾಂಗ್ರೆಸ್ ನಾಯಕರ ಪಿತೂರಿಯಿಂದಲೇ ನಿಖಿಲ್ ಸೋತಿದ್ದಾರೆ ಎಂದು ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ನಿಖಿಲ್ ತಂದೆ ಕುಮಾರಸ್ವಾಮಿಯವರೂ ಅದೇ ರೀತಿಯ ವ್ಯಾಖ್ಯಾನವನ್ನು ನೀಡಿ ಕಾಂಗ್ರೆಸ್ ನಾಯಕರ ಉಬ್ಬೇರಿಸುವಂತೆ ಮಾಡಿದ್ದಾರೆ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ತಮ್ಮದೇ ದಾಟಿಯಲ್ಲಿ ಉತ್ತರ ನೀಡಿದ್ದಾರೆ.ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಮನಗರದಲ್ಲಿ ಕುಮಾರಸ್ವಾಮಿ ಅವರೂ ಶಾಸಕರಾಗಿದ್ದರು, ಮುಖ್ಯಮಂತ್ರಿಯೂ ಆದರು. ಅವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಅವರು ಕೂಡ ಶಾಸಕರಾಗಿದ್ದರು. ಆದರೂ ನಿಖಿಲ್ ರಾಮನಗರದಲ್ಲಿ ಯಾಕೆ ಸೋತರು? ಅವರು ಕೆಲಸ ಮಾಡಿದ್ದರೆ ಜನ ಸೋಲಿಸುತ್ತಿದ್ದರಾ? ಕೆಲಸ ಮಾಡಿ, ಜನರ ಸೇವೆ ಮಾಡಿದ್ದರೆ ಸೋಲುತ್ತಿರಲಿಲ್ಲ. 5 ವರ್ಷಕ್ಕೊಮ್ಮೆ ಬಂದು ಮತ ನೀಡಿ ಎಂದರೆ ಹೇಗೆ? ಮತದಾರರು ಏನು ಕೂ...
‘ಬಿಗ್‌ಬಾಸ್’ ಸ್ಪರ್ಧಿ ಧರ್ಮ, ಮಂಜ ಅಭಿನಯದ ‘ಟೆನೆಂಟ್’ ಬಿಡುಗಡೆಗೆ ಸಜ್ಜು

‘ಬಿಗ್‌ಬಾಸ್’ ಸ್ಪರ್ಧಿ ಧರ್ಮ, ಮಂಜ ಅಭಿನಯದ ‘ಟೆನೆಂಟ್’ ಬಿಡುಗಡೆಗೆ ಸಜ್ಜು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ರಿಯಾಲಿಟಿ ಶೋ 'ಬಿಗ್‌ಬಾಸ್' ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್‌, ಉಗ್ರಂ ಮಂಜು ಅಭಿನಯದ 'ಟೆನಂಟ್' ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈ ತಿಂಗಳ 22ರಂದು ಈ ಸಿನಿಮಾ ಪ್ರದರ್ಶನ ಆರಂಭವಾಗಲಿದೆ.ಬಿಗ್‌ಬಾಸ್' ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್‌, ಉಗ್ರಂ ಮಂಜು ಅವರು ಇದೀಗ ರಿಯಾಲಿಟಿ ಶೋ ಮನೆಯೊಳಗಿದ್ದಾರೆ. ಅವರಷ್ಟೇ ಅಲ್ಲ, ತಿಲಕ್, ರಾಕೇಶ್ ಮಯ್ಯ, ಸೋನು ಗೌಡ ಸಹಿತ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿ ಪಾತ್ರಗಳನ್ನು ಹಂಚಿಕೊಂಡಿವೆ. ಮಾಸ್ಟರ್ ಚಾಯ್ಸ್ ಕ್ರಿಯೇಶನ್‌ನಡಿ ನಾಗರಾಜ್ ಟಿ. ನಿರ್ಮಾಣ ಮಾಡಿರಿವ ಈ ಸಿನಿಮಾಕ್ಕೆ ಶ್ರೀಧರ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ.https://youtu.be/vI4Ia4x2hCw?si=mqHS9-jbGMlvX4rA...
ಚಿನ್ನದ ದರ ದಾಖಲೆ ಪ್ರಮಾಣದಲ್ಲಿ ಇಳಿಕೆ

ಚಿನ್ನದ ದರ ದಾಖಲೆ ಪ್ರಮಾಣದಲ್ಲಿ ಇಳಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ದೀಪಾವಳಿ ಹೊತ್ತಲ್ಲಿ ಗಗನಮುಖಿಯಾಗಿದ್ದ ಆಭರಣ ಲೋಹದ ಧಾರಣೆ ಗುರುವಾರ ಚಿನಿವಾರ ಪೇಟೆಯಲ್ಲಿ ಬಹಳಷ್ಟು ಇಳಿಕೆಉಅಗಿತ್ತು.ಬೆಂಗಳೂರಿನಲ್ಲಿ ಸುಮಾರು 20 ದಿನಗಳ ಬಳಿಕ 10 ಗ್ರಾಂ ಚಿನ್ನದ ಬೆಲೆ 80 ಸಾವಿರದ ಗಡಿಯಿಂದ ಕೆಳಗಿಳಿದಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1790 ರೂ. ಇಳಿಕೆಯಾಗಿ 78560 ರೂಪಾಯಿ ಗಳಿಗೆ ತಲುಪಿದೆ.
ಮಹಾ ಚುನಾವಣಾ ಅಖಾಡದಲ್ಲಿ ಭರವಸೆಗಳ ಹೊಳೆ; ಗ್ಯಾರೆಂಟಿಗಳ ಸುರಿಮಳೆ

ಮಹಾ ಚುನಾವಣಾ ಅಖಾಡದಲ್ಲಿ ಭರವಸೆಗಳ ಹೊಳೆ; ಗ್ಯಾರೆಂಟಿಗಳ ಸುರಿಮಳೆ

ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬಯಿ: ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಭರವಸೆಗಳ ಮಹಾಪೂರವೇ ಹರಿದಿದೆ.ಮಹಿಳೆಯರಿಗೆ ಪ್ರತೀ ತಿಂಗಳು 3,000 ರೂಪಾಯಿ. ಸಹಾಯ ಧನ, ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಗ್ಯಾರೆಂಟಿ ಭರವಸೆಯನ್ನು ಮಹಾ ವಿಕಾಸ ಅಘಾಡಿ (ಎಂವಿಎ) ನೀಡಿದೆ.3 ಲಕ್ಷ ರೂಪಾಯಿ ವರೆಗಿನ ರೈತರ ಸಾಲ ಮನ್ನಾ ಮಾಡಲಾಗುತ್ತದೆ ಜೊತೆಗೆ, ನಿರುದ್ಯೋಗಿ ಯುವಜನರಿಗೆ ಪ್ರತೀ ತಿಂಗಳು 4,000 ರೂಪಾಯಿ ನೆರವು ನೀಡಲಾಗುತ್ತದೆ ಎಂದು ಎಂವಿಎ ತನ್ನ ಪ್ರಣಾಳಿಕೆಯಲ್ಲಿ ಆಶ್ವಾಸನೆಗಳ ಪಟ್ಟಿಯನ್ನು ನೀಡಿದೆ.ತಮ್ಮ ಒಕ್ಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದರೆ 'ಲಡ್ಕಿ ಬಹೀನ್‌’ ಯೋಜನೆಯ ಮೊತ್ತವನ್ನು 2,100 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಎಂವಿಎ ನಾಯಕರು ಘೋಷಿಸಿದ್ದಾರೆ....
ವಕ್ಫ್ ವಿವಾದ; ನೋಟಿಸ್‌ ರದ್ದಾಗುವುದರಿಂದ ಪ್ರಯೋಜನವಿಲ್ಲ, ಆದೇಶ ರದ್ದಾಗಬೇಕು

ವಕ್ಫ್ ವಿವಾದ; ನೋಟಿಸ್‌ ರದ್ದಾಗುವುದರಿಂದ ಪ್ರಯೋಜನವಿಲ್ಲ, ಆದೇಶ ರದ್ದಾಗಬೇಕು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್‌ಗೆ ಯಾವುದೇ ಬೆಲೆ ನೀಡುವುದಿಲ್ಲ. ವಕ್ಫ್‌ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಮಂಡ್ಯ ಜಿಲ್ಲೆಯ, ಚಂದ್ಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅವರು ಮಾತನಾಡಿದರು. ವಿರೋಧ ಪಕ್ಷದ ನಾಯಕನಾಗಿ ನಾನು ಎಲ್ಲಿ ಬೇಕಾದರೂ ಓಡಾಡಬಹುದು. ಆ ಅಧಿಕಾರ, ಸ್ವಾತಂತ್ರ್ಯ ನನಗಿದೆ. ಅದಕ್ಕಾಗಿ ವಕ್ಫ್‌ ಭೂಮಿ ಕಬಳಿಸಿದ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇನೆ. ಚಂದ್ಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗವನ್ನು ಒತ್ತುವರಿ ಮಾಡಲಾಗಿದೆ. ಕಣ್ಣ ಮುಂದೆ ಇರುವ ಶಾಲೆ ಪಹಣಿಯಲ್ಲಿ ಖಬರಸ್ಥಾನ ಆಗಿದೆ. ಇದು ಹೆಣ ಹೂಳುವ ಜಾಗವೇ ಎಂದು ಗ್ರಾಮಸ್ಥರೇ ಹೇಳಬೇಕು. ನಮ್ಮ ಶಾಲೆ ನಮ್ಮ ಹಕ್ಕು ಎಂಬ ಘೋಷಣೆಯಡಿ ಹೋರಾಟ ಮಾಡಬೇಕು ಎಂದರು.ಯಾವುದೇ ಜಮೀನು ತಕಾರರು ಬಂದರೆ ಜಿಲ್ಲಾಧಿಕಾರಿಗೆ ಅರ್ಜಿ ನೀಡಬೇಕು. ಆದರೆ ವಕ್ಫ್‌ಗೆ ಸಂಬಂಧಿಸಿದ ಜಮೀನು ವಿವಾದ ಬಂದರೆ ಅದನ್ನು ವಕ್ಫ್‌ನಲ್ಲೇ ಬಗೆಹರಿಸಬೇಕೆಂದು ಕೇಂದ್ರದಲ್ಲಿದ್ದ ಕಾಂಗ್ರೆಸ...
ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ 'ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ' ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. 'ಸಿಟಿಜನ್ ರೈಟ್ಸ್ ಫೌಂಡೇಶನ್' ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನ ಕೋರಿ ಕೇಂದ್ರ ಸರ್ಕಾರಕ್ಕೂ ದೂರು ಸಲ್ಲಿಕೆಯಾಗಿದೆ.ಕೈಗಾರಿಕೋದ್ಯಮಗಳನ್ನು ಉತ್ತೇಜಿಸಲು, ಉದ್ಯಮ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಸ್ಥಾಪಿಸಲಾಗಿರುವ ರಾಜ್ಯ ಸರ್ಕಾರದ ಅಧೀನದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಇದೀಗ ಹಗರಣಗಳ ಕೂಪವಾಗಿದ್ದು, ಒಂದೊಂದೇ ಕರ್ಮಕಾಂಡಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಸರ್ಕಾ...
ನ.8, 9ರಂದು ಮಂಗಳೂರಿನಲ್ಲಿ ಜಾಗತಿಕ ಸಂವಹನ ಸಮಾವೇಶ; ವಿವಿಧ ದೇಶಗಳ ಗಣ್ಯರ ಸಮಾಗಮ

ನ.8, 9ರಂದು ಮಂಗಳೂರಿನಲ್ಲಿ ಜಾಗತಿಕ ಸಂವಹನ ಸಮಾವೇಶ; ವಿವಿಧ ದೇಶಗಳ ಗಣ್ಯರ ಸಮಾಗಮ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರತಿಷ್ಠಿತ ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) 18ನೇ ಜಾಗತಿಕ ಸಂವಹನ ಸಮಾವೇಶ 2024ರ ನವೆಂಬರ್ 8 ಮತ್ತು 9ರಂದು ಮಂಗಳೂರಿನಲ್ಲಿ ನಡೆಯಲಿದೆ. PRCI ಸಂಸ್ಥೆಯು ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ವೃತ್ತಿಪರತೆಯ ಪ್ರಮಾಣಿತ ಮಾನದಂಡಗಳನ್ನು ಉತ್ತೇಜಿಸುವ ಪ್ರಮುಖ ಸಂಸ್ಥೆಯಾಗಿದ್ದು ಈ ಬಾರಿ ಕಡಲತಡಿಯ ನಗರಿಯಲ್ಲಿ ಆಯೋಜಿಸಲಾಗಿದ್ದು ದೇಶ ವಿದೇಶಗಳ ಪ್ರತಿನಿಧಿಗಳ ಸಮಾಗಮಕ್ಕೆ ಈ ಸಮಾವೇಶ ಸಾಕ್ಷಿಯಾಗಲಿದೆ. .2004ರ ಮಾರ್ಚ್ 3 ರಂದು PRCIಯು ಸ್ಥಾಪನೆಯಾಗಿದ್ದು, ಅದಕ್ಕೂ ಮೊದಲು 17 ಜಾಗತಿಕ ಸಂವಹನ ಸಮಾವೇಶಗಳನ್ನು ಜಯಪುರ, ಪುಣೆ, ಕೊಲ್ಕತ್ತಾ, ನವದೆಹಲಿ, ಮುಂಬೈ, ಹೈದರಾಬಾದ್, ಚಂಡೀಗಢ್, ಬೆಂಗಳೂರು ಮತ್ತು ಗೋವಾ ನಗರಗಳಲ್ಲಿ ಯಶಸ್ವಿಯಾಗಿ ಆಯೋಜಿಸಿತ್ತು. ದೇಶದಾದ್ಯಂತ ಮತ್ತು ವಿಶ್ವದ ಪ್ರಮುಖ ಉದ್ಯಮಗಳಿಂದ 500ಕ್ಕೂ ಹೆಚ್ಚು ಸಂವಹನ ವೃತ್ತಿಪರರು ಮತ್ತು ನಿರ್ಧಾರಮೇಕರ್‌ಗಳು ಪಬ್ಲಿಕ್ ರಿಲೇಶನ್ಸ್ ಮತ್ತು ಸಂವಹನ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳು, ಹೊಸ ವಿಚಾರಗಳು, ಮತ್ತು ಉತ್ತಮ ಅಭ್ಯಾಸಗಳ ಬಗ್ಗೆ ಚರ್ಚಿಸಲು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.ಈ ವರ್ಷದ...