
ಹಲವಾರು ಎಡವಟ್ಟುಗಳು, ಹಲವಾರು ಅಕ್ರಮಗಳು; ಜಾತಿ ಗಣತಿಯ ಲೋಪಗಳತ್ತ ಬೆಳಕು ಚೆಲ್ಲಿದ ಅಶೋಕ್
ಬೆಂಗಳೂರು: ಜಾತಿ ಜನಗಣತಿ ವಿವಾದ ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಮುದಾಯಗಳು ತಿರುಗಿ ಬಿದ್ದಿವೆ.
ಈ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರವೇ ಹೊಣೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಜನಗಣತಿ ಸಂದರ್ಭದಲ್ಲಿ ಸರಿಯಾದ ಸಿದ್ಧತೆಯಿಲ್ಲದೆ ಕ್ರಮವಹಿಸಲಾಗಿದೆ ಎಂಬ ಕಹಿ ಸತ್ಯವನ್ನು ಆರ್.ಅಶೋಕ್ ನೆನಪಿಸಿದ್ದಾರೆ. ಈ ಸಂಬಂಧ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ.ಸಿಎಂ ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಕಾಟಾಚಾರಕ್ಕೆ ನಡೆಸಿದ ಜಾತಿ ಜನಗಣತಿ ಸಮೀಕ್ಷೆ ಸಾಲು ಸಾಲು ಎಡವಟ್ಟುಗಳಿಂದ ಕೂಡಿತ್ತು, ಅವ್ಯವಸ್ಥೆಯ ಗೂಡಾಗಿತ್ತು ಎನ್ನುವುದಕ್ಕೆ ಅಂದಿನ ಪತ್ರಿಕಾ ವರದಿಗಳೇ ಸಾಕ್ಷಿ ಎಂದು ಬೊಟ್ಟು ಮಾಡಿರುವ ಅಶೋಕ್, ಜಾತಿ ಜನಗಣತಿಗಾಗಿ ನಿಯೋಜನೆ ಮಾಡಲಾಗಿದ್ದ ಸಿಬ್ಬಂದಿಗಳಿಗೆ ಗಣತಿ ಅರ್ಜಿ ತುಂಬುವ ಬಗ್ಗೆ ತರಬೇತಿಯನ್ನೇ ನೀಡಿರಲಿಲ್ಲ. ಗಣತಿ ಅರ್ಜಿಯಲ್ಲಿದ್ದ 56 ಕಾಲಂಗಳಲ್ಲಿ ಸಮೀಕ್ಷೆದಾರರು ಪ್ರಾಮಾಣಿಕವಾಗಿ ತುಂಬುತಿದ್ದುದು ಕೇವಲ 8-10 ಕಾಲಂ ಮಾತ್ರ. ಉಳಿದ ಕಾಲಂಗಳ ಭರ್ತಿಗೆ ಮ...









