Wednesday, May 13

Author: info@rajasdigital.com

ವಿಜಯೇಂದ್ರ ವಿರುದ್ದವೇ ಇಡಿ ಕೇಸ್ ಇದೆ; ಭ್ರಷ್ಟಾಚಾರ ಪ್ರಕರಣಗಳಿವೆ, ರಾಜೀನಾಮೆ ಕೊಡ್ತಾರ ಎಂದ ಕೈ ನಾಯಕರು

ವಿಜಯೇಂದ್ರ ವಿರುದ್ದವೇ ಇಡಿ ಕೇಸ್ ಇದೆ; ಭ್ರಷ್ಟಾಚಾರ ಪ್ರಕರಣಗಳಿವೆ, ರಾಜೀನಾಮೆ ಕೊಡ್ತಾರ ಎಂದ ಕೈ ನಾಯಕರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಕಾಂಗ್ರೆಸ್ ನಾಯಕರು, ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡಿದೆ.ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕಿಯೋನಿಕ್ಸ್‌ ಅಧ್ಯಕ್ಷ ಶರತ್‌ ಬಚ್ಚೇಗೌಡ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣಾ ಆಯೋಗಕ್ಕೆ ವಿಜಯೇಂದ್ರ ಅವರು ಸಲ್ಲಿಸಿರುವ ಅಫಿಡವಿಟ್ ಅಲ್ಲಿ ಅವರ ಮೇಲಿರುವ ಪ್ರಕರಣಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. 16.09. 2022 ರಂದು ಲೋಕಾಯುಕ್ತದಿಂದ ಇವರ ಮೇಲೆ ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಸೆಕ್ಷನ್ 7 A, 9, 10, 13 ಹಾಗೂ 383, 384, 415, 418, 420 ಕಾಯ್ದೆಗಳಡಿ ದೂರು ದಾಖಲಿಸಲಾಗಿದೆ. ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಇವರಿಗೆ ಸಮನ್ಸ್ ಜಾರಿಯಾಗಿದೆ ಎಂದು ನೆನಪಿಸಿದರು.ಸಿಎಂ ಸಿದ್ದರಾಮಯ್ಯರ ರಾಜಿನಾಮೆ ಕೇಳುವ ಬಿಜೆಪಿಗರೇ ಮೊದಲು ವಿಜಯೇಂದ್ರ ಅವರಿಂದ ರಾಜಿನಾಮೆ ಕೊಡಿಸಿ....
ಸಿದ್ದರಾಮಯ್ಯ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಆರ್‌.ಅಶೋಕ

ಸಿದ್ದರಾಮಯ್ಯ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಆರ್‌.ಅಶೋಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮುಡಾ ಹಗರಣವನ್ನು ಮರೆ ಮಾಚಲು ಜಾತಿ ಗಣತಿ ವರದಿ ಬಿಡುಗಡೆಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಬಿಜೆಪಿಯ ಮೇಲೆ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿಯಲ್ಲಿ ಏನಿರಬೇಕೆಂದು ಹೇಳಿ ಬರೆಸಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಯಾರೂ ಮನೆಗೆ ಬಂದೇ ಇಲ್ಲ ಎಂದು ಲಿಂಗಾಯತ, ಒಕ್ಕಲಿಗ ಮೊದಲಾದ ಸಮುದಾಯದವರು ಹೇಳಿದ್ದಾರೆ. ಕೆಲವೇ ಜಾತಿಗಳ ವೈಭವೀಕರಣ, ಇನ್ನೂ ಕೆಲವು ಜಾತಿಗಳ ಮೇಲೆ ದ್ವೇಷ ಹಾಗೂ ಅವೈಜ್ಞಾನಿಕತೆ ಇದರಲ್ಲಿ ಕಂಡುಬಂದಿದೆ ಎಂದರು.ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಈ ವರದಿ ಬಗ್ಗೆ ಬಾಯಿ ಬಿಡಲಿಲ್ಲ. ಒಂದು ಕಡೆ ಮುಡಾ, ಮತ್ತೊಂದು ಕಡೆ ಜಾರಿ ನಿರ್ದೇಶನಾಲಯದ ತನಿಖೆ,‌ ಮತ್ತೊಂದು ಕಡೆ ಲೋಕಾಯುಕ್ತ‌ ತನಿಖೆ ನಡೆಯುತ್ತಿದೆ. ಇವೆಲ್ಲವನ್ನೂ ಮುಚ್ಚಿಹಾಕಲು ಈಗ ವರದಿಯನ್ನು ಹೊರತೆಗೆಯಲಾಗಿದೆ ಎಂದರು.ಜನಸಂಖ್ಯಾ ಗಣತಿ ಜೊ...
ಪಾಕ್ ಪ್ರಜೆಗಳ ಅಕ್ರಮ ವಾಸ; ಬಂಧಿತರ ಸಂಖ್ಯೆ 22ಕ್ಕೆ ಏರಿಕೆ

ಪಾಕ್ ಪ್ರಜೆಗಳ ಅಕ್ರಮ ವಾಸ; ಬಂಧಿತರ ಸಂಖ್ಯೆ 22ಕ್ಕೆ ಏರಿಕೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರು ಸುತ್ತಮುತ್ತ ಅಕ್ರಮವಾಗಿ ನೆಲೆಸಿರುವ ಪಾಕ್ ಪ್ರಜೆಗಳ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳ ಬಂಧನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದ್ದು, ಬಂಧಿತರು ನೀಡಿದ ಹೇಳಿಕೆ ಆಧಾರಿಸಿ ಕಾರ್ಯಾಚರಣೆ ನಡೆಸಿದ ಜಿಗಣಿ ಪೊಲೀಸರು 14 ಮಂದಿ ಪಾಕಿಸ್ತಾನೀಯರನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತ ಪಾಕ್ ಪ್ರಜೆಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ....
ಲೈಂಗಿಕ ಕಿರುಕುಳ ಆರೋಪ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್‌ಐಆರ್

ಲೈಂಗಿಕ ಕಿರುಕುಳ ಆರೋಪ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್‌ಐಆರ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅತ್ಯಾಚಾರ ಆರೋಪ ಸಂಬಂಧ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ. ತನ್ನ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. ವಿನಯ್ ಕುಲಕರ್ಣಿ, ಅವರ ಆಪ್ತ ಸಹಾಯಕ ಅರ್ಜುನ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ....
ಹರಿಯಾಣ; ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್‌ ಫೋಗಾಟ್‌‌ಗೆ ಜಯ

ಹರಿಯಾಣ; ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್‌ ಫೋಗಾಟ್‌‌ಗೆ ಜಯ

ದೇಶ-ವಿದೇಶ, ಪ್ರಮುಖ ಸುದ್ದಿ
ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ವ್ಯಕ್ತವಾಗಿದೆ.ಹರಿಯಾಣ ವಿಧಾನಸಭೆಗೆ ಆಯ್ಕೆ ಬಯಸಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್‌ ಫೋಗಾಟ್‌ ಜಯಗಳಿಸಿದ್ದಾರೆ.ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಕುಸ್ತಿಪಟು ವಿನೇಶ್‌ ಫೋಗಾಟ್‌ ಅವರು ಬಿಜೆಪಿಯ ಕ್ಯಾಪ್ಟನ್‌ ಬೈರಾಗಿ ವಿರುದ್ಧ 6,000 ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ....
ಜಮ್ಮು ಕಾಶ್ಮೀರ: ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ: ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ

ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಗೆದ್ದು ಬೀಗಿದೆ.90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚನೆ 46 ಸ್ಥಾನಗಳ ಅಗತ್ಯ ಇದ್ದು ಅದರಂತೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ 48 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗಿದೆ.ಇದೇ ವೇಳೆ, ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಘೋಷಣೆ ಮಾಡಿದ್ದಾರೆ. ತನ್ನ ಮಗ ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಪ್ರಕಟಿಸಿದ್ದಾರೆ....
ಕಾಂಗ್ರೆಸ್‌ಗೆ ಇದೀಗ ಯಡಿಯೂರಪ್ಪ ಟಾರ್ಗೆಟ್..!?

ಕಾಂಗ್ರೆಸ್‌ಗೆ ಇದೀಗ ಯಡಿಯೂರಪ್ಪ ಟಾರ್ಗೆಟ್..!?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೀಗ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರೇ ಟಾರ್ಗೆಟ್. ಕೆಲವು ದಿನಗಳಿಂದ ಕಾಂಗ್ರೆಸ್ ನಾಯಕರು ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣವನ್ನು ಮುಂದಿಟ್ಟು ನೀಡುತ್ತಿರುವ ಹೇಳಿಕೆಗಳು ಕುತೂಹಲಕ್ಕೆ ಕಾರಣವಾಗುತ್ತಿದೆ. ಅದರಲ್ಲೂ ಬಿಎಸ್‌ವೈ ವಿರುದ್ದ ಪ್ರಕರಣ ದಾಖಲಾದ ಸಂದರ್ಭದಲ್ಲಿ ದೂರುದಾರರ ಮಾನಸಿಕ ಸ್ಥಿರತೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರೇ ಅನುಮಾನ ವ್ಯಕ್ತಪಡಿಸಿದ್ದಾರೆ. ನಂತರ ತಿಂಗಳುಗಟ್ಟಲೆ ಮೌನವಿದ್ದ ಕಾಂಗ್ರೆಸ್ ನಾಯಕರು ಇದೀಗ ತಡವಾಗಿ ಬಿಎಸ್‌ವೈ ಪ್ರಕರಣವನ್ನು ಕೆದಕುತ್ತಿರುವ ವೈಖರಿ ಗಮನಿಸಿದರೆ ಮುಂದಿನ ಬೆಳವಣಿಗೆ ಕುತೂಹಲ ಮೂಡುವಂತಿದೆ.ಈ ನಡುವೆ, ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಪೋಕ್ಸೋ ಕಾಯ್ದೆಯಡಿ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೃತ್ಯ ನಿರ್ದೇಶಕರಾದ ಜಾನಿ ಮಾಸ್ಟರ್ ಅವರಿಗೆ ನೀಡಲಾಗಿದ್ದ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಜಾನಿ ಮಾಸ್ಟರ್ ವಿಚಾರದಲ್ಲಿ ಕಠಿಣ ನಿಲುವು ತಾಳಿರುವ ಬಿಜೆಪಿ ನಾಯಕರು ವಿಚಾರದಲ್ಲಿ ಬಿಜೆಪಿ ಸ್ಪಷ್ಟ ನಿಲುವು ತೋರುತ್ತಿಲ್ಲ ಯಾಕೆ? ಎಂದು...
ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ; ಪ್ರಧಾನಿ ಜೊತೆ ಸೋಮಣ್ಣ ಚರ್ಚೆ

ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ; ಪ್ರಧಾನಿ ಜೊತೆ ಸೋಮಣ್ಣ ಚರ್ಚೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ ಸಹಿತ ಕರ್ನಾಟಕದ ಹಲವು ಯೋಜನೆಗಳ ತ್ವರಿತ ಅನುಷ್ಠಾನ ಸಂಬಂಧ ಪ್ರಧಾನಿ ಜೊತೆ ಕೇಂದ್ರ ರೇಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಮಂಗಳವಾರ ಚರ್ಚೆ ನಡೆಸಿದರು.ನವದೆಹಲಿಯಲ್ಲಿ  ಪ್ರಧಾನ ಮಂತ್ರಿಗಳನ್ನು ಬೇಟಿ ಮಾಡಿದ ಸಚಿವ ವಿ ಸೋಮಣ್ಣ ಸುಮಾರು 30 ನಿಮಿಷಗಳ ಕಾಲ ಚರ್ಚಿಸಿದರು.ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ್ ರೇಲ್ವೆ ಇತ್ಯಾದಿಗಳ ಬಗ್ಗೆ ೨ ಸುತ್ತಿನ ಸಭೆ ನಡೆಸಿರುವ ಬಗ್ಗೆ  ಸೋಮಣ್ಣ ಪ್ರಧಾನ ಮಂತ್ರಿಗಳಿಗೆ ವಿವರಿಸಿದರು. ಕಳೆದ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ತುಮಕೂರು ರಾಯದುರ್ಗ ರೇಲ್ವೆ ಮಾರ್ಗ ಭೂಸ್ವಾಧಿನ ಪ್ರಕ್ರಿಯೆಯನ್ನು ಕೇವಲ 3 ತಿಂಗಳ ಅವಧಿಯಲ್ಲಿ 90% ಕ್ಕಿಂತಲೂ ಮಿಗಲಾಗಿ ಮುಗಿಸಿರುವ ಬಗ್ಗೆ ಪ್ರಧಾನ ಮಂತ್ರಿಗಳಿಗೆ ವಿವರಿಸಿದ್ದಾರೆ.ರೇಲ್ವೆ ಅಧಿಕಾರಿ ಮತ್ತು ಜಿಲ್ಲಾಡಳಿತದ ಉತ್ತಮ ಕಾರ್ಯವೈಖರಿಯ ಬಗ್ಗೆಯೂ ಮಾನ್ಯ ಪ್ರದಾನ ಮಂತ್ರಿಗಳ ಗಮನ ಸೆಳೆದಿದ್ದು , ಪ್ರಧಾನಮಂತ್ರಿಗಳು ಅತ್ಯಂತ ಹರ್ಷ ವ್ಯಕ್ತಪಡಿಸಿದ ಬಗ್ಗೆ ಕೇಂದ್ರ ಸಚಿವ ಸೋಮಣ್ಣ ತಿಳಿಸಿದ್ದಾರೆ.ಇದಲ್ಲದೆ ಕಳೆದ 3 ...
‘ಸಿಎಂ ಬದಲಾವಣೆ ಸನ್ನಿವೇಶ ಬಂದಿಲ್ಲ, ಸಿದ್ದರಾಮಯ್ಯ ರಾಜೀನಾಮೆ ಅಗತ್ಯವೂ ಇಲ್ಲ’

‘ಸಿಎಂ ಬದಲಾವಣೆ ಸನ್ನಿವೇಶ ಬಂದಿಲ್ಲ, ಸಿದ್ದರಾಮಯ್ಯ ರಾಜೀನಾಮೆ ಅಗತ್ಯವೂ ಇಲ್ಲ’

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸನ್ನಿವೇಶ ಬಂದಿಲ್ಲ, ಸಿದ್ದರಾಮಯ್ಯ ರಾಜೀನಾಮೆ ಅಗತ್ಯವೂ ಇಲ್ಲ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿರುವ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಚರ್ಚೆಗಳಾದರೆ ಆದರೆ ಒಳ್ಳೆಯದಲ್ಲವೇ. ಚಾಯ್ ಪೇ ಚರ್ಚೆ ಅಂತ ಕಾರ್ಯಕ್ರಮ ಇದೆಯಲ್ಲ. ಅದೇರೀತಿ ಕಾಫಿ ಪೇ‌ ಚರ್ಚೆ. ನಾವಿಬ್ಬರು ಕುಳಿತುಕೊಂಡು ಎರಡು ಲೋಟ ಕಾಫಿ ಕುಡಿದರೆ ಮುಖ್ಯಮಂತ್ರಿ ಮಾಡಿಬಿಡುತ್ತಾರೆ ಎನ್ನುವುದಾದರೆ ಬಹಳ ಚರ್ಚೆಗಳಾಗುತ್ತಿದ್ದವು. ಬಹಳಷ್ಟು ಕಾಫಿ ಖರ್ಚಾಗುತ್ತಿತ್ತು ಎಂದರು.ನಾವು ಮಾತನಾಡುವುದರಿಂದ ಏನು ಆಗುವುದಿಲ್ಲ. ನಿರ್ಧಾರ ಎಲ್ಲ ಹೈಕಮಾಂಡ್ ಮಾಡುತ್ತದೆ. ಅಂತಹ ಸನ್ನಿವೇಶ ಈಗ ಬಂದಿಲ್ಲ. ಸನ್ನಿವೇಶ ಬಂದಾಗ ಚರ್ಚೆ ಮಾಡೋಣ, ಅದರ ಬಗ್ಗೆ ಕೂಗು ಹಾಕೋಣ, ಬೇಡಿಕೆ‌ ಇಡೋಣ. ಬೇಕಾದದ್ದು ಮಾಡೋಣ. ಆದರೆ ಈಗ ಸನ್ನಿವೇಶ ಬಂದಿಲ್ಲವಲ್ಲ. ಮುಖ್ಯಮಂತ್ರಿ ರಾಜೀನಾಮೆ ಕೊಡುವ ಅಗತ್ಯವು ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.ಬಿಟ್‌ಕಾಯಿನ್ ಪ್ರಕರಣಕ್ಕೆ...
ಅಕ್ಕ ಕೆಫೆ ಗ್ರಾಮೀಣ ಮಹಿಳಾ ಉದ್ಯಮಿಗಳ ಬದುಕು ಪರಿವರ್ತಿಸುವುದು ಪಕ್ಕಾ: ಸಚಿವ ಡಾ. ಪಾಟೀಲ್

ಅಕ್ಕ ಕೆಫೆ ಗ್ರಾಮೀಣ ಮಹಿಳಾ ಉದ್ಯಮಿಗಳ ಬದುಕು ಪರಿವರ್ತಿಸುವುದು ಪಕ್ಕಾ: ಸಚಿವ ಡಾ. ಪಾಟೀಲ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೇವನಹಳ್ಳಿ: ರಾಜ್ಯ ಸರ್ಕಾರದ ವತಿಯಿಂದ ಜಾರಿಗೆ ತಂದಿರುವ “ಅಕ್ಕ ಕೆಫೆ” ಯೋಜನೆ ಕರ್ನಾಟಕದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ ಮಹಿಳಾ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ.ಮಂಗಳವಾರ ದೇವನಹಳ್ಳಿಯಲ್ಲಿ “ಅಕ್ಕ ಕೆಫೆ” ಉದ್ಘಾಟಿಸಿದ ಸಚಿವ ಡಾ.ಪಾಟೀಲ್, ನಗರ ಮತ್ತು ಗ್ರಾಮೀಣ ಪ್ರದೇಶಗಳ ಮಹಿಳೆಯರಿಗೆ ಸ್ವಾವಲಂಬನೆ ಮತ್ತು ಉದ್ಯಮಶೀಲತೆ ಉತ್ತೇಜಿಸುವ ಯೋಜನೆ ಇದಾಗಿದೆ. ಇದು ಪರಿವರ್ತನೆಯ ಸಾಮರ್ಥ್ಯವನ್ನು ಹೊಂದಿದೆ. "ಅಕ್ಕ ಕೆಫೆ ಮಹಿಳೆಯರನ್ನು ಸಬಲೀಕರಣಗೊಳಿಸುವ ಮೂಲಕ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಉದ್ಯಮಶೀಲತೆಗೆ ಆದ್ಯತೆ ನೀಡಲಿದೆ. ಕರ್ನಾಟಕದ ಸಾಮಾಜಿಕ-ಆರ್ಥಿಕ ಕ್ಷೇತ್ರದ ಮೇಲೆ ಶಾಶ್ವತವಾದ ಪರಿಣಾಮವನ್ನು ಬೀರುತ್ತದೆ" ಎಂದು ಸಚಿವರು ಹೇಳಿದರು.2024-25ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಚಯಿಸಿದ ಅಕ್ಕ ಕೆಫೆಯು ಮಹಿಳೆಯರಿಗೆ ಸುಸ್ಥಿರ ಜೀವನೋಪಾಯವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಇದು ನಿರ್ದಿಷ...