Wednesday, May 13

Author: info@rajasdigital.com

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ -ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಜಯಭೇರಿ

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ -ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಜಯಭೇರಿ

ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಗೆದ್ದು ಬೀಗಿದೆ.ವಿಧಾನಸಭಾ ಚುನಾವಣೆಯ ಮತಗಳ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಬಹುಮತ ಗಳಿಸಿದೆ.90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚನೆ 46 ಸ್ಥಾನಗಳ ಅಗತ್ಯ ಇದ್ದು ಅದರಂತೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ 48 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗಿದೆ....
ಜಾತಿಗಣತಿ ವರದಿ ಜಾರಿಯಾದರೆ ಯೋಜನೆಗಳನ್ನು ರೂಪಿಸಲು ಸಹಾಯ; ಪರಮೇಶ್ವರ್

ಜಾತಿಗಣತಿ ವರದಿ ಜಾರಿಯಾದರೆ ಯೋಜನೆಗಳನ್ನು ರೂಪಿಸಲು ಸಹಾಯ; ಪರಮೇಶ್ವರ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜಾತಿಗಣತಿ ವರದಿಯನ್ನು ಜಾರಿಗೊಳಿಸಲು ಮುಂದಾಗಿರುವುದು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ ‌ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜಾತಿಗಣತಿಯ ವರದಿಯನ್ನು ತರದೇ ಇದ್ದಾಗ ಕೋಲ್ಡ್ ಸ್ಟೋರೆಜ್‌ನಲ್ಲಿಟ್ಟುಬಿಟ್ಟರು ಎಂದು ಟೀಕಿಸುತ್ತಿದ್ದರು. ಯಾಕೆ ಅಷ್ಟೊಂದು ಹಣ ಖರ್ಚು ಮಾಡಿದರು. ಯಾಕೆ ಪೆಟ್ಟಿಗೆಯೊಳಗೆ ಇಡಬೇಕಿತ್ತು ಎಂದೆಲ್ಲ‌ ಪ್ರಶ್ನಿಸಿದರು. ಜನಸಮುದಾಯಕ್ಕೆ ಜಾರಿಗೊಳಿಸುತ್ತೇವೆ ಎಂದಾಗ ನುಂಗಲಾರದ ತುತ್ತಾಗಿದೆ. ರಾಜ್ಯದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತ ಸಮುದಾಯದ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.ಜಾತಿಗಣತಿ ವರದಿಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸಹಾಯವಾಗುತ್ತದೆ ಎಂದು ಎಲ್ಲರು ಹೇಳುತ್ತಿದ್ದಾರೆ. ಸಮುದಾಯಗಳಿಗೆ ಯೋಜನೆಗಳನ್ನು ನೀಡಬಾರದೇ? ಎಂದು ಅವರು ಪ್ರಶ್ನಿಸಿದರು.ಯಾವ ಆಧಾರದ ಮೇಲೆ ಯೋಜನೆಗಳನ್ನು ಕೊಡಬೇಕು ಎಂಬ ಪ್ರಶ್ನೆ ಬಂದಾಗ ಸ್ವಾಭಾವಿಕವಾಗಿ ನಾವು ಜನಸಂಖ್ಯೆ ಆಧಾರವಾಗಿ...
KSRTC: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

KSRTC: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗಿಳಿಸಿದೆ.ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ದಸರಾ ವಿಶೇಷ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ಸೋಮವಾರ ಚಾಲನೆ ನೀಡಲಾಯಿತು. ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲದೆ.ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು‌ ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ. ಇದರೊಂದಿಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ 2000 ವಿಶೇಷ ಬಸ್ಸುಗಳ ಕಾರ್ಯಾಚರಣೆ‌ ನಡೆಯಲಿದೆ ಕೆಎಸ್ಸಾರ್ಟಿಸಿ ಮಾಹಿತಿ ಒದಗಿಸಿದೆ....
KSRTC ಪ್ರಯಾಣಕ್ಕೆ ಹೈಟೆಕ್ ಸ್ಪರ್ಶ:  ಐರಾವತ ಕ್ಲಬ್ ಕ್ಲಾಸ್ 2.0 ಬಸ್ ವಿಶೇಷತೆ ಹೀಗಿದೆ..

KSRTC ಪ್ರಯಾಣಕ್ಕೆ ಹೈಟೆಕ್ ಸ್ಪರ್ಶ:  ಐರಾವತ ಕ್ಲಬ್ ಕ್ಲಾಸ್ 2.0 ಬಸ್ ವಿಶೇಷತೆ ಹೀಗಿದೆ..

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರದ ನಿಗಮ KSRTCಯಲ್ಲಿನ ಪ್ರಯಾಕ್ಕೆ ಹೈಟೆಕ್ ಸ್ಪರ್ಶ  ಐರಾವತ ಕ್ಲಬ್ ಕ್ಲಾಸ್ 2.0 ವಿಶೇಷ ಬಸ್‌ಗಳು ಸದ್ಯವೇ ಸೇರ್ಪಡೆಯಾಗಲಿವೆ.ಬೆಂಗಳೂರು ಹೊರವಲಯದ ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ನೂತನ ವೋಲ್ವೋ (9600 ಮಾದರಿ) ಬಸ್ಸನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪರಿಶೀಲಿಸಿದರು. KSRTC ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ (ವಾಸು), ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಮತ್ತು ವ್ಯವಸ್ಥಾಪಕ ನಿರ್ದೇಶಕರು ವಿ.ಅನ್ಬುಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.'ಐರಾವತ ಕ್ಲಬ್ ಕ್ಲಾಸ್ 2.0' ಮಾದರಿಯ 20 ಬಸ್ಸುಗಳನ್ನು ಕೆ ಎಸ್ ಆರ್ ಟಿ ಸಿ ಯು ಈ ತಿಂಗಳ ಕೊನೆಯ ವಾರದಲ್ಲಿ ತನ್ನ ವಾಹನಗಳ ಸಮೂಹಕ್ಕೆ ಸೇರ್ಪಡೆ ಗೊಳಿಸಲಿದೆ. ಒಂದು ಬಸ್ಸಿನ ದರ ರೂ.1.78 ಕೋಟಿಗಳು. ನಿಗಮದಲ್ಲಿ ಒಟ್ಟು 443 ಐಷಾರಾಮಿ ಬಸ್ಸುಗಳ ಜೊತೆ ಈ ಹೈಟೆಕ್ ಬಸ್‌ಗಳೂ ಸೇರ್ಪಡೆಯಾಗಲಿವೆ.'ಐರಾವತ ಕ್ಲಬ್ ಕ್ಲಾಸ್ 2.0' ಬಸ್ಸಿನ ವಿಶೇಷತೆಗಳು: ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟ...
ಜಾತಿ ಗಣತಿ ವರದಿ ಬಹಿರಂಗ: ಅ.18 ರಂದು ಮುಹೂರ್ತ ಫಿಕ್ಸ್

ಜಾತಿ ಗಣತಿ ವರದಿ ಬಹಿರಂಗ: ಅ.18 ರಂದು ಮುಹೂರ್ತ ಫಿಕ್ಸ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜಾತಿ ಗಣತಿ ವರದಿ ಬಹಿರಂಗ ಸಂಬಂಧ ಅ.18 ರಂದು ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ಈ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.2013 - 18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗ...
ಬೆಸ್ಕಾಂ ಅವಾಂತರ; ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

ಬೆಸ್ಕಾಂ ಅವಾಂತರ; ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ರಾಜಧಾನಿ ಹೊರವಲಯದ ಚಿಕ್ಕನಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ಮಹಿಳೆಯರು ನಿಂತಿದ್ದ ಸ್ಥಳದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅವಘಡ ಸಂಭವಿಸಿದೆ.ಮೃತ ಮಹಿಳೆಯನ್ನು ಮಂಜಮ್ಮ ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಯ ದೂರು ಆಧರಿಸಿ ತಾವರೆಕೆರೆ ಠಾಣೆ ಪೊಲೀಸರು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ....
ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಸೇನೆಯ ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿಯಾಗಿದ್ದಾರೆ. ಈ ಬಗ್ಗೆ ಸೋಮವಾರ ಮಾಹಿತಿ ಹಂಚಿಕೊಂಡಿರುವ ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಬಿಸಿಲಿನ ತಾಪಮಾನಕ್ಕೆ ಐವರು ಸಾವನ್ನಾಪಿದ್ದಾರೆ ಎಂದು ತಿಳಿಸಿದ್ದಾರೆ.ಏರ್ ಶೋ ವೇಳೆ ಬಿಸಿಲಿನ ಝಳದಿಂದ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು 90ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಐವರು ಸಾವನ್ನಪ್ಪಿದ್ದಾರೆ ಎಂದು ಸುಬ್ರಮಣಿಯನ್ ತಿಳಿಸಿದ್ದಾರೆ....
‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಸಿಂಗಂ ಚಿತ್ರದ ಮುಂದಿನ ಆವೃತ್ತಿ ನಿರ್ಮಾಣವಾಗಿದ್ದು 'ಸಿಂಗಂ ಅಗೈನ್' ಹೆಸರಿನಲ್ಲಿ ಈ ಸಿನಿಮಾ ಕುತೂಹಲ ಕೆರಳಿಸಿದೆ.ಅಜೇಯ್ ದೇವಗನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಸಹಿತ ಹಲವರು 'ಸಿಂಗಂ ಅಗೈನ್' ಚಿತ್ರದಲ್ಲಿ ನಟಿಸಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಜೇಯ್ ದೇವಗನ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು ಈ ಸಿನಿಮಾದ ಟ್ರೈಲರ್ ಬಗ್ಗೆ ನೆಟ್ಟಿಗರು ಸಕತ್ ಲೈಕ್ಸ್ ನೀಡಿದ್ದಾರೆ.https://www.youtube.com/watch?v=MD7v0-igVIM&t=64s&ab_channel=JioStudios...
ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಜ್ ಅಲಿ ಮೃತದೇಹ ಪತ್ತೆ

ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಜ್ ಅಲಿ ಮೃತದೇಹ ಪತ್ತೆ

ಪ್ರಮುಖ ಸುದ್ದಿ, ರಾಜ್ಯ
ಕಾವೂರು: ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಝ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರದ ಕೂಳೂರು ಸೇತುವೆಯ ಬಳಿ ಸೋಮವಾರ ಮುಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ.ಭಾನುವಾರದಿಂದ ಶೋಧ ಕಾರ್ಯ ನಡೆಸಿದ್ದ ತಜ್ಞರು ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮತ್ತೆ ಹುಡುಕಾಟ ಆರಂಭಿಸಿದರು. ಬೆಳಿಗ್ಗೆ 10:40 ರ ಸುಮಾರಿಗೆ ಸ್ಥಳೀಯ ಮೀನುಗಾರರು ಮೃತದೇಹವನ್ನು ಪತ್ತೆ ಮಾಡಿದ್ದಾರೆ.ಈ ನಡುವೆ ಮುಮ್ತಾಜ್ ಅಲಿ ಸಾವಿನ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಪ್ರಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ....
ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು; ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು; ವಿಜಯೇಂದ್ರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಇದೀಗ ರಾಜಕೀಯ ವಿದ್ಯಮಾನಗಳ ಕೇಂದ್ರಬಿಂದುವಾಗಿದೆ. ಖರ್ಗೆಯವರನ್ನು ಕಾಂಗ್ರೆಸ್ ನಾಯಕರು ಭೇಟಿಯಾಗಿ ಮಾತಿಕತೆ ನಡೆಸಿದ್ದಾರೆಂಬ ಬೆಳವಣಿಗೆಯ ಬೆನ್ನಲ್ಲೇ ಡಿ.ಕೆ. ಸುರೇಶ್ ಸೇರಿದಂತೆ ಹಲವು ರಾಜಕೀಯ ನಾಯಕರು ಸೋಮವಾರ ಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಕಾಂಗ್ರೆಸ್ ಪಕ್ಷದಲ್ಲಿನ ಈ ಬೆಳವಣಿಗೆಯ ನಡುವೆಯೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡಾ ಸತೀಶ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಯನ್ನು ಗಮನಿಸಿದರೆ ಸಿದ್ದರಾಮಯ್ಯ ಸರ್ಕಾರವು ಯಾವುದೇ ಕ್ಷಣದಲ್ಲೂ ಬೀಳಬಹುದು ಎಂದು ವಿಶ್ಲೇಷಿಸಿದರು.ನಮ್ಮ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮುಖಂಡರೊಂದಿಗೆ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಶಿಕಾರಿಪುರದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ನಂ-57 ಶಿವಮೊಗ್ಗ- ಶಿಕಾರಿಪುರ -ಹಾನಗಲ್ -ತಡಸ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ಕ...