Friday, May 15

Author: info@rajasdigital.com

ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು
ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮ ಗಮನಸೆಳೆಯಿತು. ‌ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಾಗೂ ಕಾಂಗ್ರೆಸ್ ನಾಯಕರು, ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಸಿದ್ದರು.ಭಾರತ ಜೋಡೋ ಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, "ನಾವಿಂದು ಬಹಳ ಪುಣ್ಯದ ವರ್ಷದಲ್ಲಿದ್ದೇವೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ ಬೆಳಗಾವಿ ಅಧಿವೇಶನಕ್ಕೆ ಈಗ ಶತಮಾನ ತುಂಬಿದೆ. ಈ ಸಂದರ್ಭವನ್ನು ನಾವು ಬಳಸಿಕೊಂಡು ಗಾಂಧಿಜಿ ಅವರು ಹಾಕಿಕೊಟ್ಟ ದಾರಿ ಹಾಗೂ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದೆ. ಈ ದೇಶಕ್ಕೆ ಕಾಂಗ್ರೆಸ್ ಹಾಕಿಕೊಟ್ಟಿರುವ ಬುನಾದಿ, ಗಾಂಧಿ ಅವರ ತತ್ವ, ಆದರ್ಶವೇ ನಮ್ಮ ಆಸ್ತಿ. ಈ ಸಂದರ್ಭದಲ್ಲಿ ಕರ್ನಾಟಕದವೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಎಐಸಿಸಿ ಅಧ್ಯಕ್ಷರಾಗಿರ...
ಕೆಪಿಸಿಸಿಯಿಂದ ಜ್ಯೋತಿ ಸಹಿತ ಗಾಂಧಿ ನಡಿಗೆ ಕಾರ್ಯಕ್ರಮ

ಕೆಪಿಸಿಸಿಯಿಂದ ಜ್ಯೋತಿ ಸಹಿತ ಗಾಂಧಿ ನಡಿಗೆ ಕಾರ್ಯಕ್ರಮ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು....
ದ.ಕ-ಉಡುಪಿ ವಿಧಾನಪರಿಷತ್ ಅಖಾಡ; ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ

ದ.ಕ-ಉಡುಪಿ ವಿಧಾನಪರಿಷತ್ ಅಖಾಡ; ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ಕರಾವಳಿಯ ವಿಧಾನ ಪರಿಷತ್ ಸ್ಥಾನಕ್ಜೆ ಬಿಜೆಪಿ ಅಭ್ಯರ್ಥಿಯಗಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಪಕ್ಷ ಆಯ್ಕೆ ಮಾಡಿದೆ.ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ಕಾರಣ ತೆರವಾಗಿದ್ದ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ.ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಸಹಿತ ಅನೇಕ ಮುಖಂಡರು ಲಾಭಿ ನಡೆಸುತ್ತಿದ್ದರು. ಇದೀಗ ಬಿಜೆಪಿ ನಾಯಕ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರಿಗೆ ಹೈಕಮಾಂಡ್ ಟಿಕೆಟ್‌ ಘೋಷಣೆ ಮಾಡಿದೆ.ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸುತ್ತಿದ್ದಂತೆಯೇ ಪಕ್ಷದ ಪಾಳಯದಲ್ಲಿ ಚಟುವಟಿಕೆಗಳು ಬ...
ಆಸ್ಮಾಕಂ ಸಂಸ್ಕೃತಂ; ಹನೂರಿನಲ್ಲಿ ಹೀಗೊಂದು ವಿಶೇಷ ಕಾರ್ಯಕ್ರಮ

ಆಸ್ಮಾಕಂ ಸಂಸ್ಕೃತಂ; ಹನೂರಿನಲ್ಲಿ ಹೀಗೊಂದು ವಿಶೇಷ ಕಾರ್ಯಕ್ರಮ

Others
ಚಾಮರಾಜನಗರ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಶ್ರೀ ಮಹದೇಶ್ವರ ಸಂಸ್ಕೃತ ಪಾಠಶಾಲೆ ಹೊಸಪಾಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಆಸ್ಮಕಂ ಸಂಸ್ಕೃತಂ ಕಾರ್ಯಕ್ರಮವನ್ನು ಬೈಲೂರಿನ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.ಬೈಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಮಹದೇವಸ್ವಾಮಿ ಮಾತನಾಡಿ ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡುವುದರಿಂದ ಜ್ಞಾನ ಶಕ್ತಿ ಹೆಚ್ಚಿಸುತ್ತದೆ ಕಲಿಕೆಯ ದೃಷ್ಠಿಯಿಂದ ಅನುಕೂಲವಾಗುವುದು , ಸಂಸ್ಕಾರ ಸಂಸ್ಕೃತಿಗಳ ಬಗ್ಗೆ ಹೆಚ್ಚು ಅರಿವು ಮೂಡುತ್ತದೆ ಎಂದರು.ಸಂಸ್ಕೃತ ಪಾಠಶಾಲೆಯ ಮುಖ್ಯ ಶಿಕ್ಷಕರಾದ ರವಿಕುಮಾರ್ ಮಾತನಾಡಿ ಯಾವುದೇ ಭಾಷೆಯಾದರೂ ಸಂವಹನದ ಮೂಲಕ ಬಳಕೆ ಮಾಡಿದಾಗ ಮಾತ್ರ ಆ ಭಾಷೆ ಬೆಳೆಯುತ್ತದೆ , ಸುಮಾರು 3000 ವರ್ಷಗಳ ಇತಿಹಾಸ ವನ್ನು ಸಂಸ್ಕೃತ ಭಾಷೆ ಹೊಂದಿದೆ ಸಂಸ್ಕೃತ ಭಾಷೆಯಲ್ಲಿ ವೇದ ಉಪನಿಷತ್ತುಗಳು, ಇತಿಹಾಸ ಪುರಾಣಗಳು ,ಅನೇಕ ಶಾಸ್ತ್ರಗಳು ರಚನೆಯಾಗಿದೆ. ಇಂದಿನ ವಿದ್ಯಾರ್ಥಿಗಳು ಸಂಸ್ಕೃತವನ್ನು ವೈಜ್ಞಾನಿಕ ದೃಷ್ಟಿಕೋನವಿಟ್ಟು ಅಧ್ಯಯನ ಮಾಡಿದರೆ ಆಧುನಿಕ ಭಾಷೆಯೊಂದಿಗೆ ಸಂವಹನ ಮೂಲಕ ಅಧ್ಯಯನಗ...
HDK ಬೆಂಬಲಕ್ಕೆ ನಿಂತ BJP; ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಕ್ರಮಕ್ಕೆ ಆಗ್ರಹ

HDK ಬೆಂಬಲಕ್ಕೆ ನಿಂತ BJP; ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಈ ಹೋರಾಟ ನಿಲ್ಲಲ್ಲ. ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿದರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದರು.ಚುನಾವಣಾ ಬಾಂಡ್‌ ಬಗ್ಗೆ ಕಾಂಗ್ರೆಸ್‌ ದೊಡ್ಡದಾಗಿ ಮಾತಾಡುತ್ತಿದೆ. ಕಾಂಗ್ರೆಸ್‌ ಪಕ್ಷಕ್ಕೆ *1,500 ಕೋಟಿ ರೂ.ಗೂ ಅಧಿಕ* ಹಣ ದೇಣಿಗೆ ಬಂದಿದೆ. ತೃಣಮೂಲ ಕಾಂಗ್ರೆಸ್‌ಗೆ 1,610 ಕೋಟಿ ರೂ. ಬಂದಿದೆ. ವಿರೋಧ ಪಕ್ಷಗಳ ಒಟ್ಟು ಹಣಕ್ಕೆ ಹೋಲಿಸಿದರೆ ಬಿಜೆಪಿಯದ್ದು ತೀರಾ ಕಡಿಮೆ....
ಸಿಎಂ ಪತ್ನಿಯ ಮುಡಾ ಸೈಟ್ ವಾಪಸ್; ಹೋರಾಟಕ್ಕೆ ಸಂದ ಜಯ ಎಂದ ಬಿಜೆಪಿ

ಸಿಎಂ ಪತ್ನಿಯ ಮುಡಾ ಸೈಟ್ ವಾಪಸ್; ಹೋರಾಟಕ್ಕೆ ಸಂದ ಜಯ ಎಂದ ಬಿಜೆಪಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದಾರೆ.  ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದವರು ಪ್ರಶ್ನಿಸಿದ್ದಾರೆ.'ಕೆಟ್ಟ ಮೇಲೆ ಬುದ್ಧಿ ಬಂತು' ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ 'ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ' ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂ...
ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜಿನಿಕಾಂತ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸೋಮವಾರ ಅವರನ್ಬು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೊಟ್ಟೆ ನೋವು ಕಾಣಿಸಿಕೊಂಡು ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
‘ಸರ್ಕಾರ ಪತನಗೊಳಿಸಿ ಸಿಎಂವಾಗಲು ಕೋಟಿ ರೂ’; ಬಿಜೆಪಿ ನಾಯಕನ ವಿರುದ್ದ ಕಾಂಗ್ರೆಸ್ ದೂರು

‘ಸರ್ಕಾರ ಪತನಗೊಳಿಸಿ ಸಿಎಂವಾಗಲು ಕೋಟಿ ರೂ’; ಬಿಜೆಪಿ ನಾಯಕನ ವಿರುದ್ದ ಕಾಂಗ್ರೆಸ್ ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಯತ್ನ ನಡೆದಿದೆ ಎಂದೂ, ಕೆಲವರು ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.ಬೆಂಗಳೂರಿನ ಹೈಗ್ರೌಂಡ್ ಪೊಲೀಸರಿಗೆ ಕಾಂಗ್ರೆಸ್ ಹಿರಿಯವನಾಯಕ ಉತ್ತಪ್ಪ ನೇತೃತ್ವದ ನಿಯೋಗ ಸೋಮವಾರ ದೂರು ನೀಡಿದೆ.ಸೆಪ್ಟೆಂಬರ್ 29ರಂದು ದಾವಣಗೆರೆಯಲ್ಲಿ ಯತ್ನಾಳ್‌ ಅವರು ಈ ಹೇಳಿಕೆ ನೀಡಿದ್ದರು. ಅವರ ವಿರುದ್ದ ಎಫ್‌ಐಆರ್ ದಾಖಲಿಸಬೇಕು ಹಾಗೂ 1,000 ಕೋಟಿ ಹಣದ ಮೂಲ ಯಾವುದು ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ....
ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ಮಹಾತ್ಮ ಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಷತೆ ಜತೆಗೆ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು 100 ವರ್ಷಗಳಾಗಿವೆ. ಈ ನೆನಪಿಗೆ ರಾಜ್ಯಾದ್ಯಂತ ʼಗಾಂಧಿ ನಡಿಗೆʼ, ʼಸ್ವಚ್ಚತಾ ಪ್ರತಿಜ್ಞಾವಿಧಿʼ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜತೆಗೆ ಇಡೀ ವರ್ಷ ನಾನಾ ಕಾರ್ಯಕ್ರಮಗಳನ್ನು ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ..ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಸೋಮವಾರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದಿಂದ ರಾಜ್ಯದ ಉದ್ದಗಲಕ್ಕೂ ಅಕ್ಟೋಬರ್ 2 ರ ಬೆಳಿಗ್ಗೆ 11 ಗಂಟೆಗೆ ಎಂ.ಜಿ ರಸ್ತೆಯ ಗಾಂಧಿ ಪ್ರತಿಮೆಯಿಂದ, ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ತನಕ ʼಗಾಂಧಿ ಜ್ಯೋತಿ ಪಾದಯಾತ್ರೆʼ ನಡೆಸಲಾಗುವುದು” ಎಂದರು.“ಪಾದಯಾತ್ರೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಮತ್ತು ಬ್ಲಾಕ್ ಮಟ್ಟದಲ್ಲಿ ''ಗಾಂಧಿ ನಡಿಗೆ'' ಕಾರ್ಯಕ್ರಮ ನಡೆಯುತ್ತದೆ. ...
ಮಂಗಳೂರು: ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ! ಅಕ್ರಮ ದಂಧೆ ಬಗ್ಗೆ ಅಧಿಕಾರಿಗಳ ಮೌನವೇಕೆ? CSಗೆ ಪರಿಸರ ಹೋರಾಟಗಾರ ಆಲ್ವಿನ್ ದೂರು

ಮಂಗಳೂರು: ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ! ಅಕ್ರಮ ದಂಧೆ ಬಗ್ಗೆ ಅಧಿಕಾರಿಗಳ ಮೌನವೇಕೆ? CSಗೆ ಪರಿಸರ ಹೋರಾಟಗಾರ ಆಲ್ವಿನ್ ದೂರು

Others
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ 'ಉಳಿಯ' ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡುತ್ತಿರುವಂತೆಯೇ, ಮರಳು ಮಾಫಿಯಾ ಜೊತೆ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಕೆಯಾಗಿದೆ. ಹಿರಿಯ ಪತ್ರಕರ್ತರೂ ಆದ ಪರಿಸರ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರು ಈ ದೂರನ್ನು ಸಲ್ಲಿಸಿದ್ದು, ಅಧಿಕಾರಿಗಳ ವಿರುದ್ಧವೇ ಆದ್ಯ ಕ್ರಮವಾಗಬೇಕಿದೆ ಎಂದು ಗಮನಸೆಳೆದಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯು ನದಿಯನ್ನು ಆವರಿಸಿಕೊಂಡಿರುವ ಪ್ರದೇಶವಾಗಿದೆ. ಕುಮಾರಧಾರ, ನೇತ್ರಾವತಿ, ಫಲ್ಗುಣಿ, ನಂದಿನಿ ಸಹಿತ ಹಲವಾರು ನದಿಗಳು ಕರಾವಳಿ ಜನರ ಜೀವನಾಡಿಯಾಗಿದ್ದು, ಇದೀಗ ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜಲಮೂಲಕ್ಕೆ ಸಂಚಕಾರ ಎದುರಾಗಿದೆ. ಕರ್ನಾಟಕ ಕರಾವಳಿಯ ದೊಡ್ಡ ನದಿಗಳಲ್ಲಿ ಒಂದಾಗಿರುವ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ವ್ಯಾಪಕ ಚರ್ಚೆಗಳು ನ...