Friday, May 15

Author: info@rajasdigital.com

ಭೂಸ್ವಾಧೀನ ಅಕ್ರಮ ಆರೋಪದ ಪ್ರತಿಧ್ವನಿ; ದೂರು ಪರಿಶೀಲನೆಯಲ್ಲಿರುವಾಗಲೇ ಅಧಿಕಾರಿಯ ಪರ ನಿಂತ ಸಚಿವ; ಭೂಸ್ವಾಧೀನಾಧಿಕಾರಿ ವರ್ಗಾವಣೆ ಬೇಡ ಎಂದು ಸಿಎಂ ಮೇಲೆ ಒತ್ತಡ!

ಭೂಸ್ವಾಧೀನ ಅಕ್ರಮ ಆರೋಪದ ಪ್ರತಿಧ್ವನಿ; ದೂರು ಪರಿಶೀಲನೆಯಲ್ಲಿರುವಾಗಲೇ ಅಧಿಕಾರಿಯ ಪರ ನಿಂತ ಸಚಿವ; ಭೂಸ್ವಾಧೀನಾಧಿಕಾರಿ ವರ್ಗಾವಣೆ ಬೇಡ ಎಂದು ಸಿಎಂ ಮೇಲೆ ಒತ್ತಡ!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಭೂಸ್ವಾದೀನ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿರುವಾಗಲೇ ಬಿಎಂಐಸಿಪಿ ಭೂಸ್ವಾಧೀನಾಧಿಕಾರಿ ವರ್ಗಾವಣೆ ಮಾಡದಂತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಸರ್ಕಾರಕ್ಕೆ ಮಾಡಿರುವ ಶಿಫಾರಸು ಭಾರೀ ಚರ್ಚೆಗೆ ಕಾರಣವಾಗಿದೆ.ಕೆ.ಎ.ಎಸ್.(ಕಿರಿಯ ಶ್ರೇಣಿ) ಅಧಿಕಾರಿಯಾಗಿರುವ ಬಿಎಂಐಸಿಪಿ ಭೂಸ್ವಾಧೀನಾಧಿಕಾರಿ-2, ಬಾಳಪ್ಪ ಹಂದಿಗುಂದ ಅವರನ್ನು ವರ್ಗಾವಣೆ ಮಾಡಬಾರದೆಂದು ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಗೆ ಹಾಗೂ ಡಿಪಿಎಆರ್ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ..ಬಾಳಪ್ಪ ಹಂದಿಗುಂದ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು ಇಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇಲಾಖೆಯಲ್ಲಿ ತ್ವರಿತವಾಗಿ ಭೂಸ್ವಾಧೀನ ಪ್ರಕ್ರಿಯೆಗಳು ಪೂರ್ಣಗೊಳಿಸಿ, Foxconn Company ಹಾಗೂ Knowledge Health Innovation and Research (KHIR) ಭೂಮಿಯನ್ನು ಹಸ್ತಾಂತರಿಸಬೇಕಾಗಿರುವುದರಿಂದ, ಸದರಿಯವರ ಸೇವೆಯು ಮಂಡಳಿ...
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

ಪ್ರಮುಖ ಸುದ್ದಿ, ರಾಜ್ಯ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ಸಿಗಲಿದೆ. ಈ ಸಂಬಂಧದ ಕಾಮಗಾರಿ ತ್ವರಿತವಾಗಿ ಸಾಗಿದೆ.ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌ನ ಹೊಸ ಕಟ್ಟಡದ ಕಾಮಗಾರಿ ವೀಕ್ಷಣೆ ನಡೆಸಿ ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಹೊಸ ಕಟ್ಟಡದ ಕಾಮಗಾರಿಯ ಪರಿಶೀಲನಾ ಸಭ ನಡೆಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಏರ್ಪೋರ್ಟ್ ನ ಅಪ್ರಾನ್ ಏರಿಯಾ ( ವಿಮಾನ ನಿಲ್ಲಿಸುವ ಪ್ರದೇಶ) ವಿಸ್ತರಣೆ ಕುರಿತು ಚರ್ಚಿಸಲಾಯಿತು. ಈಗಾಗಲೇ ತಾತ್ವಿಕವಾಗಿ ಈ ಕಾಮಗಾರಿಕೆಗೆ ಒಪ್ಪಿಗೆ ನೀಡಿದ್ದು ಆದಷ್ಟು ಬೇಗನೆ ಇದಕ್ಕೆ ಟೆಂಡರ್ ಕರೆಯಲಾಗುವುದು ಎಂದು ಪ್ರಲ್ಹಾದ್ ಜೋಷಿ ತಿಳಿಸಿದರು.ಸದ್ಯಕ್ಕೆ ನಾಲ್ಕು ವಿಮಾನ ನಿಲ್ಲುವ ಸ್ಥಳವನ್ನು ಸುಮಾರು ಹತ್ತು ಏರ್ ಬಸ್, ಬೋಯಿಂಗ್ ನಿಲ್ಲಿಸುವಷ್ಟು ಪ್ರದೇಶವನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.ಮಾರ್ಚ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು 273 ಕೋಟಿ ರೂಪಾಯಿ ವೆಚ್ಚದ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಾಮಗಾರಿಗೆ ಚಾಲನೆ ನೀಡಿದ್ದರು. ವೇಗವಾಗಿ ಕಾಮಗಾ...
ಹರಿಯಾಣ: ಬಿಜೆಪಿಯ ಹ್ಯಾಟ್ರಿಕ್ ಗೆಲುವಿನ ಕನಸಿಗೆ ಬಂಡಾಯವೇ ಸವಾಲು

ಹರಿಯಾಣ: ಬಿಜೆಪಿಯ ಹ್ಯಾಟ್ರಿಕ್ ಗೆಲುವಿನ ಕನಸಿಗೆ ಬಂಡಾಯವೇ ಸವಾಲು

ದೇಶ-ವಿದೇಶ, ಪ್ರಮುಖ ಸುದ್ದಿ
ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿರುವ ಬಿಜೆಪಿಗೆ ಇದೀಗ ಬಂಡಾಯ ಸವಾಲಾಗಿದೆ. ಬಂಡಾಯ ಮುಖಂಡರ ವಿರುದ್ದ ನಿಷ್ಠೂರ ಕ್ರಮಕ್ಕೆ ನಿರ್ಧರಿಸಿರುವ ಬಿಜೆಪಿ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಮತ್ತು ಇತರ ಏಳು ನಾಯಕರನ್ನು ಪಕ್ಷದಿಂದ ಉಚ್ಛಾಟಿಸಿದೆ.90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿಯೂ ಗೆಲುವು ಸಾಧಿಸಲೇಬೇಕೆಂದು ಕಾರ್ಯತಂತ್ರ ರೂಪಿಸಿರುವ ಬಿಜೆಪಿಗೆ ಟಿಕೆಟ್ ವಂಚಿತರ ಸವಾಲು ಎದುರಾಗಿದೆ.ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಸಹಿತ ಹಲವು ಮುಖಂಡರು ಸಂಧಾನಕ್ಕೆ ಮಣಿಯಲಿಲ್ಲ. ಈ ಹಿನ್ನೆಲೆಯಲ್ಲಿ ಏಳು ನಾಯಕರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.ಹರಿಯಾಣ ಬಿಜೆಪಿಯ ಮುಖ್ಯಸ್ಥ ಮೋಹನ್ ಲಾಲ್ ಅವರ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಣದ ಮೂಲಗಳು ತಿಳಿಸಿವೆ....
NWKRTC: ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣಗಳು ಲೋಕಾರ್ಪಣೆ

NWKRTC: ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣಗಳು ಲೋಕಾರ್ಪಣೆ

ಪ್ರಮುಖ ಸುದ್ದಿ, ರಾಜ್ಯ
ಬಾಗಲಕೋಟೆ: ವಾಯುವ್ಯ ರಸ್ತೆ ಸಾರಿಗೆ ನಿಗಮ (NWKRTC) ವ್ಯಾಪ್ತಿಯ ಬಾಗಲಕೋಟೆ ಜಿಲ್ಲೆ ಸಾವಳಗಿ, ರಬಕವಿ-ಬನಹಟ್ಟಿಯ ಸುಸಜ್ಜಿತ ಬಸ್ ನಿಲ್ದಾಣಗಳು ಲೋಕಾರ್ಪಣೆಯಾಗಿದೆ.ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣಗಳನ್ನು  ಸಾರಿಗೆ ಹಾಗೂ ‌ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರು ಭಾನುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ವಾಕರಸಾ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ಕೊರತೆ ಇದ್ದು, 2000 ಚಾಲನಾ ಸಿಬ್ಬಂದಿಗಳ ನೇಮಕಕ್ಕೆ ಅನುಮೋದನೆಯನ್ನು ‌ನೀಡಿದ್ದು, ಈಗಾಗಲೇ 1000 ಜನರ ನೇಮಕಾತಿ ‌ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.ನಾನು ಈ ಹಿಂದೆ ಸಾರಿಗೆ ಮಂತ್ರಿಯಾಗಿದ್ದ ಸಮಯದಲ್ಲಿ ನವನಗರ, ಜಮಖಂಡಿ, ತೇರದಾಳ, ಬಾದಾಮಿ, ಹುನಗುಂದ, ಬಾಡಗಂಡಿ, ಹಾಗು ಯಡಹಳ್ಳಿ ನೂತನ ಬಸ್ ನಿಲ್ದಾಣಗಳ ನಿರ್ಮಾಣ ಮಾಡಲಾಗಿತ್ತು. ಬಾಗಲಕೋಟೆ ಜಿಲ್ಲೆಯಲ್ಲಿ ಅತೀ ಹೆಚ್ಚಿನ ‌ಬಸ್ ನಿಲ್ದಾಣಗಳನ್ನು ನಿರ್ಮಿಸಿದ್ದೇವೆ ಎಂದ ಅವರು, ಕಳೆದ 5 ವರ್ಷಗಳಿಂದ ‌ಹೊಸ ಬಸ್ಸುಗಳ ಖರೀದಿ ಇರಲಿಲ್ಲ. ಈಗ‌ ನಮ್ಮ‌ ಸರ್ಕಾರ ಬಂದ ಮೇಲೆ ಹೊಸ ಬಸ್ಸುಗಳನ್ನು ಖರೀದಿ ಮಾಡಿದ್ದೇವೆ ಎಂದು ತಿಳಿಸಿ...
ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ತತ್ತರ; ನೂರಕ್ಕೂ ಹೆಚ್ಚು ಮಂದಿ ಬಲಿ

ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ತತ್ತರ; ನೂರಕ್ಕೂ ಹೆಚ್ಚು ಮಂದಿ ಬಲಿ

ದೇಶ-ವಿದೇಶ, ಪ್ರಮುಖ ಸುದ್ದಿ
ಕಠ್ಮಂಡು: ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ನೇಪಾಳ ತತ್ತರಿಸಿದೆ. ನಿರಂತರ ಮಳೆಯಿಂದಾಗಿ ಪ್ರವಾಹ ಉಲ್ಬಣಗೊಂಡಿದ್ದು ನೂರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.ಮಳೆಯಿಂದಾಗಿ ಸಂಭವಿಸಿದ ವಿವಿಧ ಪ್ರಕರಣಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 112ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರವಾಹದಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ನೂರಾರು ಕುಟುಂಬಗಳು ನೆಲೆ ಕಳೆದುಕೊಂಡಿವೆ. ಅಸಂಖ್ಯ ಮಂದಿ ನಾಪತ್ತೆಯಾಗಿದ್ದಾರೆ. 3,000 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಸಿಎಂ ವಿರುದ್ಧದ ಮುಡಾ, ಬಿಜೆಪಿ ಅವಧಿಯ ಎಲ್ಲಾ ಹಗರಣಗಳ ತನಿಖೆಗಳನ್ನು CBIಗೆ ಒಪ್ಪಿಸಲು ನಿರ್ದೇಶನ ನೀಡಿ; ರಾಜ್ಯಪಾಲರಿಗೆ CRF ದೂರು

ಸಿಎಂ ವಿರುದ್ಧದ ಮುಡಾ, ಬಿಜೆಪಿ ಅವಧಿಯ ಎಲ್ಲಾ ಹಗರಣಗಳ ತನಿಖೆಗಳನ್ನು CBIಗೆ ಒಪ್ಪಿಸಲು ನಿರ್ದೇಶನ ನೀಡಿ; ರಾಜ್ಯಪಾಲರಿಗೆ CRF ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮುಡಾ ಹಗರಣ ಕುರಿತಂತೆ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಕುಟುಂಬ ವಿರುದ್ದದ ಆರೋಪಗಳು ಗಂಭೀರವಾಗಿದ್ದು ನ್ಯಾಯಾಲಯವೇ ಶಾಕ್ ಆಗಿದೆ ಎಂದು ತೀರ್ಪಿನಲ್ಲಿ ಹೇಳಿದೆ. ಹೀಗಿರುವಾಗ ಲೋಕಾಯುಕ್ತದಿಂದ ಸಮರ್ಪಕ ತನಿಖೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲು ನಿರ್ದೇಶನ ನೀಡಬೇಕೆಂದು 'ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ರಾಜ್ಯಪಾಲರಿಗೆ ದೂರು ನೀಡಿದೆ. ಮುಡಾ ಅಕ್ರಮ ಮಾತ್ರವಲ್ಲ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆಯೂ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ 'ಸಿಟಿಜನ್ ರೈಟ್ಸ್ ಫೌಂಡೇಷನ್’ ಒತ್ತಾಯಿಸಿದೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ದಲ್ಲಿ ನಿವೇಶನ ಹಂಚಿಕೆ ಅಕ್ರಮ ಮೂಲಕ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ಈ ಪ್ರಕರಣದ ಬಗ್ಗೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ಕೋರಿ 'ಸಿಟಿಜನ್ ರೈಟ್ಸ್ ಫೌಂಡೇಷನ್’ದ...
ನಿರ್ಮಲಾ ಸೀತಾರಾಮನ್‌ ಪ್ರಕರಣವೇ ಬೇರೆ ರೀತಿ, ಸಿದ್ದರಾಮಯ್ಯ ಹಗರಣವೂ ಬೇರೊಂದು ರೀತಿ..!

ನಿರ್ಮಲಾ ಸೀತಾರಾಮನ್‌ ಪ್ರಕರಣವೇ ಬೇರೆ ರೀತಿ, ಸಿದ್ದರಾಮಯ್ಯ ಹಗರಣವೂ ಬೇರೊಂದು ರೀತಿ..!

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ ಪಕ್ಷಕ್ಕೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದರು.ಎಲ್ಲ ಪಕ್ಷಗಳು ದೇಣಿ...
‘ಹಂದಿಗಳೊಂದಿಗೆ ಎಂದೂ ಜಗಳಕ್ಕೆ ಇಳಿಯಬೇಡಿ..’ ಎಂದು ಪೊಲೀಸರಿಗೆ ಕರೆ ಕೊಟ್ಟ ಎಡಿಜಿಪಿ; ಕೇಂದ್ರ ಸಚಿವ ಹೆಚ್ಡಿಕೆಗೆ ಹೀಗೊಂದು ಟಾಂಗ್ ಕೊಟ್ಟ IPS ಅಧಿಕಾರಿ

‘ಹಂದಿಗಳೊಂದಿಗೆ ಎಂದೂ ಜಗಳಕ್ಕೆ ಇಳಿಯಬೇಡಿ..’ ಎಂದು ಪೊಲೀಸರಿಗೆ ಕರೆ ಕೊಟ್ಟ ಎಡಿಜಿಪಿ; ಕೇಂದ್ರ ಸಚಿವ ಹೆಚ್ಡಿಕೆಗೆ ಹೀಗೊಂದು ಟಾಂಗ್ ಕೊಟ್ಟ IPS ಅಧಿಕಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುವ ಅಬ್ಬರದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಬಗ್ಗೆಯೂ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.ಎಸ್​ಐಟಿ ಎಡಿಜಿಪಿ ಚಂದ್ರಶೇಖರ್ ಅವರ ಭ್ರಷ್ಟಾಚಾರ ಆರೋಪ ಬಗ್ಗೆ ಪ್ರಕರಣ ದಾಖಲಾಗಿರುವ ಬಗ್ಗೆ ಪ್ರಸ್ತಾಪಿಸಿರುವ ಹೆಚ್ಡಿಕೆ, ಇಡಿ ತನಿಖೆ ಬಗ್ಗೆಯೂ ಪ್ರತಿಪಾದಿಸಿದ್ದಾರೆ.ಕುಮಾರಸ್ವಾಮಿ ಹೇಳಿಕೆಗಳಿಗೆ ಖಾರವಾಗಿ ಪ್ರತಿಕ್ರಿಯಿಸಿರುವ ಎಡಿಜಿಪಿ ಚಂದ್ರಶೇಖರ್, 'ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ' ಎಂದಿದ್ದಾರೆ.ತಮ್ಮ ಸಹೋದ್ಯೋಗಿ ಪೊಲೀಸರಿಗೆ ಬಹಿರಂಗ ಪತ್ರ ಬರೆದು ಧೈರ್ಯ ತುಂಬಿರುವ ಎಡಿಜಿಪಿ ಚಂದ್ರಶೇಖರ್, ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ ಎಂದಿದ್ದಾರೆ.ಹೆಚ್‌.ಡಿ.ಕುಮಾರಸ್ವಾಮಿ ಜಾಮೀನಿನ ಮೇಲಿರುವ ಆರೋಪಿ. ಅವರಿಂದ ನಮ್ಮನ್ನು ಕುಗ್ಗಿಸುವ ಪ್ರಯತ್ನ ನಡೆದಿದೆ. ನಮ್ಮಲ್ಲಿ ಭಯ ಹುಟ್ಟಿಸುವ ಉದ್ದೇಶ ಅವರದ್ದು. ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಅವರೊಬ್ನ ಆರೋಪಿಯಾಗಿದ್ದಾರೆ. ...
ಮಧ್ಯಪ್ರಾಚ್ಯ ಸಂಘರ್ಷ; ಹಿಜ್ಬುಲ್ಲಾ ನೆಲೆಗಳ ಮೇಲೆ ಇಸ್ರೇಲ್ ದಾಳಿ

ಮಧ್ಯಪ್ರಾಚ್ಯ ಸಂಘರ್ಷ; ಹಿಜ್ಬುಲ್ಲಾ ನೆಲೆಗಳ ಮೇಲೆ ಇಸ್ರೇಲ್ ದಾಳಿ

ದೇಶ-ವಿದೇಶ, ಪ್ರಮುಖ ಸುದ್ದಿ
ಜೆರುಸಲೆಂ: ಮಧ್ಯಪ್ರಾಚ್ಯದಲ್ಲಿ ಹಿಂಸಾಚಾರ ಮತ್ತೆ ಮುಂದುವರಿದಿದೆ. ಪೇಜರ್ ಬ್ಲಾಸ್ಟ್ ನಂತರ ಇದೀಗ ಇಸ್ರೇಲ್ ಸೇನೆ ಹಮಾಸ್ ಉಗ್ರರ ನೆಲೆಗಳ ಮೇಲೆ ಭಾರೀ ವಾಯುದಾಳಿ ನಡೆಸಿದೆ.ಹಮಾಸ್ ಉಗ್ರರನ್ನು ಬೆಂಬಲಿಸುವ ಹಿಜ್ಬುಲ್ಲಾ ಉಗ್ರರು ಹಾಗೂ ಇಸ್ರೇಲ್ ಸೇನೆಯ ನಡುವೆ ಹಲವು ದಿನಗಳಿಂದ ಸಂಘರ್ಷ ಏರ್ಪಟ್ಟಿದ್ದು, ಇಸ್ರೇಲ್ ಸೇನೆ ಶುಕ್ರವಾರ ರಾತ್ರಿ ಬೈರೂತ್ ನಲ್ಲಿ ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದೆ.ಈ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಮೊಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಹುಸೇನ್ ಅಹ್ಮದ್ ಇಸ್ಮಾಯಿಲ್ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ....
ಬಿಜೆಪಿ ಶಾಸಕ ಮುನಿರತ್ನ ನಿವಾಸಕ್ಕೆ ಎಸ್‌‍ಐಟಿ ಲಗ್ಗೆ

ಬಿಜೆಪಿ ಶಾಸಕ ಮುನಿರತ್ನ ನಿವಾಸಕ್ಕೆ ಎಸ್‌‍ಐಟಿ ಲಗ್ಗೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಆರೋಪದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಶನಿವಾರ ಎಸ್‌‍ಐಟಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ. ಶನಿವಾರ ಬೆಳಿಗ್ಗೆ ಮುನಿರತ್ನ ಮನೆಗೆ ಲಗ್ಗೆ ಹಾಕಿರುವ ವಿಶೇಷ ತನಿಖಾ ತಂಡದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಮಲ್ಲೇಶ್ವರಂ ಸಮೀಪದ ವೈಯಾಲಿ ಕಾವಲ್‌ನಲ್ಲಿರುವ ಶಾಸಕ ಮುನಿರತ್ನ ಅವರ ನಿವಾಸ ಹಾಗೂ ಕಚೇರಿಗೆ ಎಸಿಪಿ ಕವಿತಾ ನೇತೃತ್ವದ ಎಸ್‌‍ಐಟಿ ತಂಡ ದಾಳಿ ನಡೆಸಿದೆ. ಎಫ್ಎಸ್ಎಲ್​ ತಂಡದ ಉಪಸ್ಥಿತಿಯಲ್ಲಿ ಎಸ್​ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ....